Connect with us

BANTWAL

ಕರಾವಳಿಗೂ ವಕ್ಕರಿಸಿದ ಭಯಾನಕ ಚರ್ಮಗಂಟು ರೋಗ : ದಕ್ಷಿಣ ಕನ್ನಡದಲ್ಲೂ ಒಂದು ಪ್ರಕರಣ ದಾಖಲು- ಆತಂಕದಲ್ಲಿ ಹೈನುಗಾರರು..!

Published

on

ಮಂಗಳೂರು :  ರಾಜ್ಯಾದ್ಯಂತ  ಕಾಡುತ್ತಿದ್ದು ಈಗಾಗಾಗಲೇ ಸಾವಿರಕ್ಕೂ ಅಧಿಕ ಜಾನುವಾರುಗಳನ್ನು ಬಲಿ ಪಡೆದ ಕಿಲ್ಲರ್ ಗಂಟು ರೋಗ ರಾಜ್ಯದ ಕರಾವಳಿಗೂ ವಕ್ಕರಿಸಿದ್ದು ದಕ್ಷಿಣ ಕನ್ನಡದ ಜಿಲ್ಲೆಯಲ್ಲೂ ಒಂದು ಪ್ರಕರಣ ದಾಖಲಾಗಿದೆ. ಈ ಹಿನ್ನಲೆಯಲ್ಲಿ ಜಿಲ್ಲೆಯ ಹೈನುಗಾರರಲ್ಲಿ ಆತಂಕ ಮೂಡಿಸಿದೆ.

ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಜಾನುವಾರುಗಳಲ್ಲಿ ಚರ್ಮ ಗಂಟು ರೋಗ ಇನ್ನಿಲ್ಲದಂತೆ ಕಾಡುತ್ತಿದೆ. ಈವರೆಗೆ  ರಾಸುಗಳು ಚರ್ಮ ಗಂಟು ರೋಗದಿಂದ ಬಳಲುತ್ತಿರುವುದು ವರದಿಯಾಗಿದೆ.

15 ಸಾವಿರದಷ್ಟು ರಾಸುಗಳು ಚೇತರಿಸಿಕೊಂಡರೆ ಸಾವಿಕ್ಕೂ ಅಧಿಕ ಜಾನುವಾರುಗಳು ರೋಗ ಉಲ್ಭಣಿಸಿ ಮೃತಪಟ್ಟಿವೆ. ಸರ್ಕಾರದಿಂದ ಈಗಾಗಲೇ 3 ಲಕ್ಷ ಜಾನುವಾರುಗಳಿಗೆ ಲಸಿಕೆ ನೀಡಲು ಕ್ರಮ ಕೈಗೊಳ್ಳಲಾಗಿದ್ದು  ಪರಿಹಾರ ಮತ್ತು ಚಿಕಿತ್ಸೆಗಾಗಿ 2 ಕೋಟಿ ರೂಪಾಯಿಗಳನ್ನು ತುರ್ತಾಗಿ ಬಿಡುಗಡೆ ಮಾಡಲಾಗಿದೆ ಜೊತೆಗೆ ಈ ರೋಗ ಅಧ್ಯಾಯನಕ್ಕಾಗಿ  ತಜ್ಞರ ತಂಡ ಕಳುಹಿಸಿ ಕೊಡಲು ಕೇಂದ್ರಕ್ಕೆ ರಾಜ್ಯ ಮನವಿ ಮಾಡಿದೆ.

ಆಗಸ್ಟ್‌ 1ರಿಂದ ಈಚೆಗೆ ಚರ್ಮ ಗಂಟು ರೋಗದಿಂದ ಮೃತಪಟ್ಟಿರುವ ಪ್ರತಿ ರಾಸುಗಳಿಗೆ ತಲಾ  20,000, ಎತ್ತುಗಳಿಗೆ ತಲಾ  30,000 ಮತ್ತು ಕರುಗಳಿಗೆ ತಲಾ  5,000 ಪರಿಹಾರ ನೀಡಲು ಸರ್ಕಾರ ಸೂಚಿಸಿದೆ.

ಈ ಮಧ್ಯೆ ದಕ್ಷಿಣ ಕನ್ನಡ ಜಿಲ್ಲೆಯಲ್ಲೂ ಈ ಭಯಾನಕ ರೋಗ ಕಾಣಿಸಿಕೊಂಡಿದ್ದು ಒಂದು ಪ್ರಕರಣ ದಾಖಲಾಗಿದೆ. ಇದನ್ನು ಪಶು ಸಂಗೋಪನ ಇಲಾಖಾಧಿಕಾರಿಗಳು ಧೃಡಪಡಿಸಿದ್ದಾರೆ.

ಈ ನಿಟ್ಟಿನಲ್ಲಿ ರೈತರಲ್ಲಿ ಜಾಗೃತಿ ಮೂಡಿಲು ಪಶು ಸಂಗೋಪನ ಇಲಾಖೆ ಕಾರ್ಯೋನ್ಮಖವಾಗಿದ್ದು ಮುಖ್ಯವಾಗಿ ಹೈನುಗಾರಿಕೆ ನಡೆಸುವ ಕೃಷಿಕರು ಎಚ್ಚರಿಕೆ ಮತ್ತು ಮುಂಜಾಗೃತ ಕ್ರಮಗಳನ್ನು ಕೈಗೊಳ್ಳಲು ಸೂಚಿಸಿದೆ.

ಮುಂಜಾಗ್ರತೆ ಕ್ರಮಗಳೇನು?

ರೋಗ ಬಾಧಿತ ಹಸುಗಳಿಂದ ಉಳಿದ ಹಸುಗಳ ಬೇರ್ಪಡಿಸುವುದು

ರೋಗ ಕಂಡುಬಂದ ಗ್ರಾಮ ಐದು ಕಿ.ಮೀ. ಸುತ್ತಲಿನ ಗ್ರಾಮಗಳಿಗೆ ಲಸಿಕೆ

ರೋಗ ಲಕ್ಷಣದ ಹಸುಗಳ ಪ್ರತ್ಯೇಕತೆ ಉತ್ತಮ

ರಾಸುಗಳ ಮಾರಾಟ, ಸಾಗಣೆ ಸಂಪೂರ್ಣ ನಿಷೇಧಿಸುವುದು

ಕೊಟ್ಟಿಗೆಯ ಶುಚಿತ್ವ ಕಾಪಾಡುವುದು

ಉಣ್ಣೆ ನಿವಾರಣೆಗೆ ಒತ್ತು ನೀಡುವುದು

ಗಾಯಕ್ಕೆ ಬೇವು, ಕೊಬ್ಬರಿ ಎಣ್ಣೆ ಬಳಕೆ ಉತ್ತಮ

BANTWAL

ಪುತ್ತೂರು ಜಾತ್ರೆಯಿಂದ ಹಿಂದಿರುಗುವ ವೇಳೆ ಜವರಾಯನ ಅಟ್ಟಹಾಸ; ಜೀಪ್ ಡಿಕ್ಕಿ; ಬೈಕ್ ಸವಾರ ಸಾ*ವು

Published

on

ಪುತ್ತೂರು : ಜೀಪೊಂದು ಬೈಕ್ ಗೆ ಡಿ*ಕ್ಕಿಯಾಗಿ ಬೈಕ್ ಸವಾರ ಸ್ಥಳದಲ್ಲೇ ಮೃ*ತಪಟ್ಟು, ಅವರ ಇಬ್ಬರು ಮಕ್ಕಳು ಗಂಭೀ*ರ ಗಾ*ಯಗೊಂಡ ಘಟನೆ ಬುಧವಾರ ರಾತ್ರಿ ಪುತ್ತೂರು ಸುಬ್ರಹ್ಮಣ್ಯ ರಸ್ತೆಯಲ್ಲಿನ ನರಿಮೊಗರು ಗ್ರಾಮದ ಪಾಪೆತ್ತಡ್ಕ ಎಂಬಲ್ಲಿ ನಡೆದಿದೆ. ಪುತ್ತೂರು ತಾಲೂಕಿನ ಬಡಕ್ಕೋಡಿ ಕಡ್ಯ ನಿವಾಸಿ ಪ್ರಸ್ತುತ ಮಂಗಳೂರಿನಲ್ಲಿ ಲಾರಿ ಚಾಲಕರಾಗಿರುವ ಲೋಕೇಶ್ (48) ಮೃ*ತಪಟ್ಟವರು. ಅವರ ಇಬ್ಬರು ಮಕ್ಕಳು ಗಂಭೀ*ರ ಗಾಯಗೊಂಡಿದ್ದು, ಗಾ*ಯಾಳುಗಳನ್ನು ಪುತ್ತೂರಿನ ಆಸ್ಪತ್ರೆಗೆ ದಾಖಲಿಸಲಾಗಿದೆ.

 

ಲೋಕೇಶ್ ಅವರು  ಮಕ್ಕಳೊಂದಿಗೆ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಾಲಯದಲ್ಲಿ ನಡೆಯುತ್ತಿರುವ ಜಾತ್ರೆಗೆ ಆಗಮಿಸಿ ಹಿಂದಿರುಗುತ್ತಿದ್ದ ವೇಳೆಯಲ್ಲಿ ಮುಂಭಾಗದಿಂದ ಆಗಮಿಸಿದ ಜೀಪು ಅವರು ಚಲಾಯಿಸುತ್ತಿದ್ದ ಬೈಕ್ ಗೆ ಡಿ*ಕ್ಕಿಯಾಗಿತ್ತು.

ಇದನ್ನೂ ಓದಿ : ಕರಡಿಗೂ ಕ್ಯಾಪ್ಟನ್ ಗೂ ಫೈಟ್; ಮನೆಯಂಗಳದಲ್ಲೇ ಕಾದಾಟ! ವೀಡಿಯೋ ವೈರಲ್

ಡಿ*ಕ್ಕಿಯ ರಭಸಕ್ಕೆ ಬೈಕ್ ಎರಡು ತುಂಡಾಗಿದೆ. ಸುಮಾರು 50 ಮೀಟರ್ ದೂರದ ತನಕ ಬೈಕನ್ನು ಜೀಪ್‌ ಎಳೆದುಕೊಂಡು ಹೋಗಿದೆ. ಈ ಸಂದರ್ಭದಲ್ಲಿ ರಸ್ತೆಗೆ ಎಸೆಯಲ್ಪಟ್ಟ ಲೋಕೇಶ್ ಅವರು ಸ್ಥಳದಲ್ಲಿಯೇ ಸಾ*ವನ್ನಪ್ಪಿದ್ದಾರೆ. ಪುತ್ತೂರು ಸಂಚಾರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Continue Reading

BANTWAL

ಗಂಡ ಹೆಂಡತಿಗೆ ನಾಲ್ವರಿಂದ ಹಲ್ಲೆ..!!

Published

on

ಬಂಟ್ವಾಳ; ಅಪಘಾತದ ವಿಚಾರದಲ್ಲಿ ಗಂಡ ಹೆಂಡತಿಗೆ ನಾಲ್ವರು ಹಲ್ಲೆ ಮಾಡಿರುವ ಘಟನೆ ಕಲ್ಲಡ್ಕದ ಕರಿಂಗಾನ ಕ್ರಾಸ್ ಎಂಬಲ್ಲಿ ಎ.15ರಂದು ಸಂಜೆ ವೇಳೆ ನಡೆದಿದೆ. ಪುತ್ತೂರು ಏರ್ಮುಂಜ ಪಲ್ಲ ನಿವಾಸಿಗಳಾದ ಮಂಜುನಾಥ್ ಮತ್ತು ಅವರ ಪತ್ನಿ ಪೂರ್ಣಿಮಾ ಹಲ್ಲೆಗೊಳಗಾದವರು. ಹಲ್ಲೆಗೊಳಗಾದವರು ಬಂಟ್ವಾಳ ನಗರ ಪೋಲೀಸ್‌ ಠಾಣೆಗೆ ದೂರು ನೀಡಿದ್ದಾರೆ.

ಮಂಜುನಾಥ್ ಅವರು ಮಂಗಳೂರಿನಿಂದ ಪುತ್ತೂರು ಕಡೆಗೆ ತೆರಳುತ್ತಿದ್ದ ವೇಳೆ ಕಲ್ಲಡ್ಕ ಸಮೀಪದ ನರಹರಿ ಎಂಬಲ್ಲಿ ಇವರ ಕಾರಿಗೆ ಹರಿಯಾಣ ಮೂಲದ ಕಾರೊಂದ ಓವರ್ ಟೇಕ್ ಮಾಡುವ ಭರದಲ್ಲಿ ಡಿಕ್ಕಿಯಾಗಿದೆ. ಈ ಸಂದರ್ಭದಲ್ಲಿ ಕೈ ಸನ್ನೆಯ ಮೂಲಕ ಪ್ರಶ್ನಿಸಿದಕ್ಕೆ ಅಪಘಾತ ಎಸಗಿದ ಕಾರು ಮುಂದೆ ಹೋಗಿ ಕರಿಂಗಾಣ ಕ್ರಾಸ್ ಎಂಬಲ್ಲಿ ಅಡ್ಡವಾಗಿ ಇರಿಸಿ ಮಂಜುನಾಥ್ ಹಾಗೂ ಅವರ ಪತ್ನಿ ಪೂರ್ಣಿಮಾ ಅವರ ಮೇಲೆ ಹಲ್ಲೆ ನಡೆಸಿದ್ದಾರೆ.

ಇದೇ ಸಂದರ್ಭದಲ್ಲಿ ಪೂರ್ಣಿಮಾ ಅವರ ಕುತ್ತಿಗೆಯಲ್ಲಿದ್ದ ಬಂಗಾರದ ಚೈನ್ ನಾಪತ್ತೆಯಾಗಿದೆ ಎಂದು ದೂರಿನಲ್ಲಿ ತಿಳಿಸಿದ್ದಾರೆ.ಹಲ್ಲೆಯಿಂದ ಮಂಜುನಾಥ್ ಅವರ ಕಣ್ಣಿಗೆ ಏಟಾಗಿದ್ದು, ಅವರು ಬಂಟ್ವಾಳ ನಗರ ಪೋಲೀಸ್‌ ಠಾಣೆಗೆ ದೂರು ನೀಡಿದ್ದಾರೆ. ಘಟನೆ ನಡೆದ ಕೂಡಲೇ ಸಂಚಾರ ಪೊಲೀಸರು ಭೇಟಿ ನೀಡಿ ವಾಹನವನ್ನು ಹಾಗೂ ಸ್ಥಳದಲ್ಲಿದ್ದವರನ್ನು ವಶಕ್ಕೆ ಪಡೆದುಕೊಂಡಿದ್ದಾರೆ. ಬಂಟ್ವಾಳ ನಗರ ಪೊಲೀಸ್‌ ಇನ್ಸ್ ಪೆಕ್ಟರ್ ಅನಂತ ಪದ್ಮನಾಭ ಅವರು ವಿಚಾರಣೆ ನಡೆಸುತ್ತಿದ್ದಾರೆ. ಘಟನೆಗೆ ಭಜರಂಗದಳ, ವಿಶ್ವಹಿಂದೂಪರಿಷತ್ ಕಲ್ಲಡ್ಕ ಪ್ರಖಂಡ ಖಂಡನೆ ವ್ಯಕ್ತಪಡಿಸಿದ್ದಾರೆ.

Continue Reading

BANTWAL

ಹಿಂದೂ ಸಂಘಟನೆಯ ಮುಖಂಡನಿಗೆ ಸ್ನೇಹಿತನಿಂದಲೆ ಚೂ*ರಿ ಇರಿತ

Published

on

ಬಂಟ್ವಾಳ : ಹಿಂದೂ ಸಂಘಟನೆಯ ಮುಖಂಡನೋರ್ವನಿಗೆ ಸ್ನೇಹಿತನೇ ಚೂ*ರಿಯಿಂದ ಇರಿದ ಘಟನೆ ಬಂಟ್ವಾಳದಲ್ಲಿ ಭಾನುವಾರ(ಎ.14) ರಾತ್ರಿ ನಡೆದಿದೆ.

ಹಿಂದೂ ಯುವಸೇನೆಯ ಮುಖಂಡ ಉದ್ಯಮಿಯಾಗಿರುವ ಪುಷ್ಪರಾಜ್ ಎಂಬವರಿಗೆ ಜಕ್ರಿಬೆಟ್ಟು ಎಂಬಲ್ಲಿ ಚೂ*ರಿ ಇರಿತವಾಗಿದೆ. ಇರಿತಕ್ಕೆ ಸ್ಪಷ್ಟವಾದ ಕಾರಣ ತಿಳಿದುಬಂದಿಲ್ಲ. ರಿಕ್ಷಾದಲ್ಲಿ ಜತೆಯಾಗಿ ತೆರಳುತ್ತಿದ್ದಾಗಲೇ ಸ್ನೇಹಿತ ರವಿ ಎಂಬಾತ ಚೂ*ರಿಯಿಂದ ಕುತ್ತಿಗೆಗೆ ಇರಿದಿದ್ದಾನೆ ಎಂದು ಹೇಳಲಾಗಿದೆ. ಗಂಭೀರವಾಗಿ ಗಾಯಗೊಂಡಿರುವ ಪುಷ್ಪರಾಜ್ ರನ್ನು ಮಂಗಳೂರು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಮೂಲಗಳು ತಿಳಿಸಿವೆ.

ಆರೋಪಿ ರವಿ ಚೂ*ರಿ ಇರಿದು ಪರಾರಿಯಾಗಿದ್ದಾನೆ. ಬಂಟ್ವಾಳ ನಗರ ಠಾಣಾ ಪೋಲೀಸರು ಸ್ಥಳಕ್ಕೆ ‌ಭೇಟಿ ನೀಡಿದ್ದು, ಪ್ರಕರಣ ದಾಖಲಿಸಿಕೊಂಡಿದ್ದಾರೆ.

Continue Reading

LATEST NEWS

Trending