Connect with us

MANGALORE

ಎ.ಜೆ ಆಸ್ಪತ್ರೆಯಲ್ಲಿ ಮೊದಲ ಬಾರಿ ನವಜಾತ ಶಿಶುವಿಗೆ ಯಶಸ್ವಿ ಹೈಬ್ರಿಡ್ ಹೃದಯ ಶಸ್ತ್ರಚಿಕಿತ್ಸೆ

Published

on

ಮಂಗಳೂರು: ಎ.ಜೆ ಆಸ್ಪತ್ರೆಯಲ್ಲಿ ನವಜಾತ ಶಿಶುವಿಗೆ ಪಿನ್ ಹೋಲ್ ಹೈಬ್ರಿಡ್ ಹೃದಯ ಶಸ್ತ್ರಚಿಕಿತ್ಸೆ ಮಾಡಲಾಗಿದ್ದು, ಈ ಮೂಲಕ ಮಂಗಳೂರಿನಲ್ಲಿ ಮೊದಲ ಬಾರಿಗೆ ಈ ಶಸ್ತ್ರಚಿಕಿತ್ಸೆ ಮಾಡಿರುವ ಹೆಗ್ಗಳಿಕೆ ಎ.ಜೆ ಆಸ್ಪತ್ರೆಯದ್ದಾಗಿದೆ.


ಶಿಶುವಿಗೆ ಹೃದಯದಲ್ಲಿ ದೋಷವಿದೆ ಎಂದು ತಿಳಿದು, ಎ.ಜೆ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಮಕ್ಕಳ ಹೃದ್ರೋಗ ತಜ್ಞ ಡಾ. ಪ್ರೇಮ್ ಆಳ್ವ, ಹಿರಿಯ ಕಾರ್ಡಿಯೋಥೊರಾಸಿಕ್ ತಜ್ಞ ಡಾ. ಜಯಶಂಕರ್ ಮಾರ್ಲಾ, ಡಾ. ಗುರುರಾಜ್ ತಂತ್ರಿ ಹಾಗೂ ಡಾ. ಸುಹಾಸ್‌ರವರ ನೇತೃತ್ವದ ತಂಡವು ಈ ಶಸ್ತ್ರಚಿಕಿತ್ಸೆಯನ್ನು ಯಶಸ್ವಿಯಾಗಿ ಪೂರೈಸಿದ್ದಾರೆ.

ನವಜಾತ ಶಿಶುತಜ್ಞ ಡಾ. ಅಶ್ವಿಜ್ ಶೆಟ್ಟಿ, ಶಸ್ತ್ರಚಿಕಿತ್ಸೆಯ ನಂತರ ಮಗುವಿನ ವಾತಯಾನದ ಮೇಲೆ ನಿಗಾ ವಹಿಸುವ ಮೂಲಕ ಪ್ರಮುಖ ಪಾತ್ರ ವಹಿಸಿದರು.

ಈ ಶಸ್ತ್ರ ಚಿಕಿತ್ಸೆಯನ್ನು ಸರ್ಕಾರಿ ಸ್ಕೀಮ್‌ನಲ್ಲಿ ಉಚಿತವಾಗಿ ಮಾಡಲಾಗಿದೆ ಎಂದು ಮೆಡಿಕಲ್ ಡೈರೆಕ್ಟರ್ ಮತ್ತು ಟ್ರಾನ್ಸ್‌ಪ್ಲಾಂಟ್ ಸರ್ಜನ್ ಡಾ. ಪ್ರಶಾಂತ್ ಮಾರ್ಲ ಕೆ.ಎಂಸ್ ತಿಳಿಸಿದ್ದಾರೆ.

 

DAKSHINA KANNADA

ಭರತನಾಟ್ಯದಂತೆ ಯಕ್ಷಗಾನಕ್ಕೂ ಪರೀಕ್ಷೆ..! ಪಟ್ಲ ಸತೀಶ್ ಶೆಟ್ಟಿ

Published

on

ಮಂಗಳೂರು: ಸಂಗೀತ, ಭರತನಾಟ್ಯದ ಮಾದರಿಯಲ್ಲಿ ಯಕ್ಷಗಾನಕ್ಕೂ ನಿರ್ದಿಷ್ಟ ಚೌಕಟ್ಟಿನಲ್ಲಿ ಪಠ್ಯ ರಚಿಸಿ ಪರೀಕ್ಷೆಗಳನ್ನು ನಡೆಸುವ ಪ್ರಯತ್ನಗಳು ನಡೆಯುತ್ತಿದೆ ಎಂದು ಯಕ್ಷಧ್ರುವ ಪಟ್ಲ ಫೌಂಡೇಶನ್ ಸ್ಥಾಪಕಾಧ್ಯಕ್ಷ ಪಟ್ಲ ಸತೀಶ್ ಶೆಟ್ಟಿ ಹೇಳಿದರು.

ಮಂಗಳೂರಿನ ಪ್ರೆಸ್ ಕ್ಲಬ್‌ ವತಿಯಿಂದ ನಡೆದ ಪ್ರೆಸ್‌ಕ್ಲಬ್ ಗೌರವ ಅತಿಥಿ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದರು.

ಯಕ್ಷಗಾನದಲ್ಲಿ ಪ್ರತಿಯೊಬ್ಬ ಗುರು ತಮ್ಮದೇ ಆದ ಶೈಲಿಯಲ್ಲಿ ನಾಟ್ಯವನ್ನು ಕಲಿಸುತ್ತಾರೆ. ಯಕ್ಷಗಾನ ಕಲಿಕೆಗೆ ಒಂದು ಚೌಕಟ್ಟು ರೂಪಿಸುವ ಮೂಲಕ ಏಕರೂಪತೆ ತರಬೇಕಾಗಿದೆ. ಯಕ್ಷಧ್ರುವ ಪಟ್ಲ ಫೌಂಡೇಶನ್‌ನ ಯಕ್ಷ ಶಿಕ್ಷಣ ಯೋಜನೆಯು ಪಠ್ಯ ರೂಪಿಸಿದ್ದು, ಫೌಂಡೇಶನ್‌ನ ಶಿಕ್ಷಕರು ಇದರ ಪ್ರಕಾರವೇ ನಾಟ್ಯ ಕಲಿಸುತ್ತಾರೆ. ಹೀಗಾಗಿ ಮುಂದಿನ ದಿನಗಳಲ್ಲಿ ಯಕ್ಷಗಾನಕ್ಕೆಂದೇ ಒಂದು ಸೀಲೆಬಸ್ ಮಾಡಿ  ಅದರ ಮುಖೇನ ಯಕ್ಷಗಾನ ನಾಟ್ಯ ಕಲಿಯುವ ವಿದ್ಯಾರ್ಥಿಗಳಿಗೆ ಪರೀಕ್ಷೆ ನಡೆಸಲಾಗುವುದು ಎಂದು ಹೇಳಿದರು.

 

Continue Reading

DAKSHINA KANNADA

ಅಡ್ಯಾರ್ ಬೊಂಡ ಪ್ಯಾಕ್ಟರಿ ಎಳನೀರು ಪ್ರಕರಣ- ಆರೋಗ್ಯ ಇಲಾಖೆಯ ಕೈ ಸೇರಿದ ಪ್ರಯೋಗಾಲಯ ಪರೀಕ್ಷಾ ವರದಿ ಬಹಿರಂಗ..!

Published

on

ಮಂಗಳೂರು : ಇತ್ತೀಚೆಗೆ ಅಡ್ಯಾರ್ ನಲ್ಲಿರುವ ಬೊಂಡಾ ಪ್ಯಾಕ್ಟರಿಯಲ್ಲಿ ಎಳ ನೀರು ಸೇವಿಸಿ ಅಸ್ವಸ್ಥಗೊಂಡ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ಪ್ರಯೋಗಾಲಯ ಪರೀಕ್ಷಾ ವರದಿ ಆರೋಗ್ಯ ಇಲಾಖೆಯ ಕೈ ಸೇರಿದ್ದು, ಸಹಜವಾಗಿತ್ತು ಎಳನೀರು ಎಂದು ವರದಿಯಲ್ಲಿ ತಿಳಿಸಲಾಗಿದೆ.

ನಗರದ ಹೊರವಲಯದ ಅಡ್ಯಾರಿನ ಬೊಂಡ ಫ್ಯಾಕ್ಟರಿಯಲ್ಲಿ ಎಪ್ರಿಲ್ 9ರಂದು ಖರೀದಿಸಿದ ಎಳನೀರು ಕುಡಿದವರಲ್ಲಿ 138 ಜನರು ವಾಂತಿ, ಬೇಧಿಯಿಂದ ಅಸ್ವಸ್ಥಗೊಂಡಿದ್ದರು. ಈ ಪ್ರಕರಣ ಗಮನಕ್ಕೆ ಬಂದ ಬೆನ್ನಲ್ಲೇ ಜಿಲ್ಲಾ ಆರೋಗ್ಯಾಧಿಕಾರಿ ಡಾ. ತಿಮ್ಮಯ್ಯ ಹಾಗೂ ಇಲಾಖೆ ಸಿಬ್ಬಂದಿ ಸ್ಥಳಕ್ಕೆ ಭೇಟಿ ನೀಡಿ ಫ್ಯಾಕ್ಟರಿಯನ್ನು ಬಂದ್ ಮಾಡಿಸಿ ಎಳನೀರು ಮಾದರಿ ಸಂಗ್ರಹಿಸಿ ಬೆಂಗಳೂರಿನ ಪ್ರಯೋಗಾಲಯಕ್ಕೆ ಕಳುಹಿಸಿದ್ದರು.ಘಟನೆ ನಡೆದ ಎರಡು ದಿನಗಳ ನಂತರ ಇದು ಗಮನಕ್ಕೆ ಬಂದಿದ್ದು, ಆ ದಿನ ಫ್ಯಾಕ್ಟರಿಯಲ್ಲಿ ಸಂಗ್ರಹಿಸಿದ್ದ ಎಳನೀರನ್ನು ಪರೀಕ್ಷೆಗೆ ಕಳುಹಿಸಲಾಗಿತ್ತು. ಪ್ರಯೋಗಾಲಯ ಪರೀಕ್ಷೆಯ ವರದಿ ಎಪ್ರಿಲ್ 22ರಂದು ಆರೋಗ್ಯ ಇಲಾಖೆಯ ಕೈ ಸೇರಿದೆ.

ಅಸ್ವಸ್ಥಗೊಂಡವರ ಮಲ ಮತ್ತು ರಕ್ತದ ಮಾದರಿ ಸಂಗ್ರಹಿಸಿ, ಪರೀಕ್ಷೆಗೆ ಕಳುಹಿಸಲಾಗಿತ್ತು. ಈ ವರದಿ ಪ್ರಕಾರ ಕೆಲವರ ದೇಹದಲ್ಲಿ ಇಕೊಲೈ ಬ್ಯಾಕ್ಟಿರಿಯಾ ಇರುವುದು ಪತ್ತೆಯಾಗಿದೆ. ಮನುಷ್ಯನ ಕರುಳಿನಲ್ಲಿ ಈ ಬ್ಯಾಕ್ಟಿರಿಯಾ ಇರುತ್ತದೆ. ಆದರೆ ಅವುಗಳ ಪ್ರಮಾಣ ಹೆಚ್ಚಾದರೆ, ಕೆಲವೊಮ್ಮೆ ಆರೋಗ್ಯ ಸಮಸ್ಯೆ ಬರುತ್ತದೆ ಎಂದು ಜಿಲ್ಲಾ ಆರೋಗ್ಯಾಧಿಕಾರಿ ಡಾ. ತಿಮ್ಮಯ್ಯ ತಿಳಿಸಿದರು.ಅಡ್ಯಾರಿನಲ್ಲಿರುವ ಎಳನೀರು ಗಂಜಿಯಿಂದ ಐಸ್‌ಕ್ರೀಮ್ ತಯಾರಿಸುವ ಘಟಕ, ಕಾರ್‌ಸ್ಪೀಟ್ ಮತ್ತು ಕದ್ರಿಯಲ್ಲಿರುವ ಎಳನೀರು ಮಳಿಗೆಗಳನ್ನು ಬಂದ್ ಮಾಡಿಸಲಾಗಿದೆ. ಈಗಲೂ ಅವು ಬಂದ್ ಆಗಿಯೇ ಇವೆ.

ಫ್ಯಾಕ್ಟರಿಯವರು ಸ್ವಯಂ ಪ್ರೇರಿತರಾಗಿ ಎಳನೀರು ನೀಡುವುದನ್ನು ನಿಲ್ಲಿಸಿದ್ದಾರೆ. ಅಡ್ಯಾರ್‌ನಲ್ಲಿ ಪಲ್ಟಿಂಗ್‌ ಘಟಕಗಳು ಮಾತ್ರ ಕಾರ್ಯಾಚರಿಸುತ್ತಿವೆ. ಗ್ರಾಹಕರಿಗೆ ಆಹಾರ ನೀಡುವಾಗ ನಿಯಮ ಪಾಲನೆ, ಶುಚಿತ್ವಕ್ಕೆ ಸಂಬಂಧಿಸಿ ಕೆಲವು ಅಂಶಗಳ ಕಟ್ಟುನಿಟ್ಟು ಪಾಲನೆಗೆ ಆಹಾರ ಸುರಕ್ಷಾ ಅಫಿದಾವಿತನ್ನು ಫ್ಯಾಕ್ಟರಿಯಿಂದ ಪಡೆಯಲು ಆಹಾರಸುರಕ್ಷಾ ಅಧಿಕಾರಿಗೆ ಸೂಚನೆ ನೀಡಲಾಗುವುದು ಎಂದು ಅವರು ಪ್ರತಿಕ್ರಿಯಿಸಿದರು.

Continue Reading

Ancient Mangaluru

ಮಂಗಳೂರು ವಿಮಾನ ನಿಲ್ದಾಣವಿನ್ನು ನಿಶ್ಶಬ್ದ ವಲಯ!

Published

on

ಮಂಗಳೂರು : ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣವು ಇನ್ನು ಮುಂದೆ ನಿಶ್ಶಬ್ದ ವಲಯವಾಗಿರಲಿದೆ. ಹೌದು, ಇನ್ನು ಮುಂದೆ ವಿಮಾನ ನಿಲ್ದಾಣದಲ್ಲಿ ಏರ್‌ಲೈನರ್‌ಗಳಿಂದ ಯಾವುದೇ ಪ್ರಯಾಣಿಕರ ಮಾಹಿತಿ ಕುರಿತ ಅನೌನ್ಸ್ ಮೆಂಟ್‌ ಇರುವುದಿಲ್ಲ. ಪ್ರಯಾಣಿಕರು ಫ್ಲೈಟ್‌ ಇನ್ಫಾರ್ಮೇಶನ್‌ ಡಿಸ್‌ಪ್ಲೇ ಸಿಸ್ಟಂ ಫಲಕಗಳನ್ನು ನೋಡಿ ಮಾಹಿತಿ ಪಡೆದುಕೊಳ್ಳ ಬೇಕಾಗಿದೆ ಎಂದು ವಿಮಾನ ನಿಲ್ದಾಣದ ವಕ್ತಾರರು ತಿಳಿಸಿದ್ದಾರೆ.

ಸಹಾಯಕ್ಕಾಗಿ ಯಾರನ್ನು ಸಂಪರ್ಕಿಸಬೇಕು?

ವಿಮಾನ ನಿಲ್ದಾಣದಲ್ಲಿರುವ ಪ್ರಯಾಣಿಕರಿಗೆ ಕಿರಿಕಿರಿಯಾಗುವುದನ್ನು ತಪ್ಪಿಸಲು ಈ ನಿರ್ಧಾರ ಕೈಗೊಳ್ಳಲಾಗಿದೆ ಎಂದು ತಿಳಿಸಲಾಗಿದೆ. ಇನ್ನು ಮುಂದೆ ವಿಮಾನಗಳ ಹಾರಾಟದ ಮಾಹಿತಿಗಳು ಫ್ಲೈಟ್‌ ಇನ್ಫಾರ್ಮೇಶನ್‌ ಡಿಸ್‌ಪ್ಲೇ ಸಿಸ್ಟಂ ಫಲಕಗಳಲ್ಲಿ ಅನಾವರಣಗೊಳ್ಳಲಿದೆ. ವಿಮಾನ ನಿಲ್ದಾಣದ ಹಲವು ಕಡೆಗಳಲ್ಲಿ ಈ ಡಿಸ್‌ಪ್ಲೇಗಳನ್ನು ಇರಿಸಲಾಗುತ್ತದೆ ಎಂದು ತಿಳಿಸಿದ್ದಾರೆ.


ಇದಲ್ಲದೆ, ವಿಮಾನ ನಿಲ್ದಾಣದ ಟರ್ಮಿನಲ್‌ನಲ್ಲಿ ‘ಮೇ ಐ ಹೆಲ್ಪ್ ಯು’ ಡೆಸ್ಕ್ ನಿರ್ವಹಿಸುವ ಸಿಬಂದಿ, ಗ್ರಾಹಕ ಸೇವೆ ಮತ್ತು ಅತಿಥಿ ಸಂಬಂಧಗಳ ಕಾರ್ಯನಿರ್ವಾಹಕರು, ಪ್ರಣಾಮ್ ಸಿಬಂದಿ ಕೂಡಾ ಮಾಹಿತಿಯೊಂದಿಗೆ ಪ್ರಯಾಣಿಕರಿಗೆ ಸಹಾಯ ಮಾಡಲು ಸಿದ್ಧರಿರುತ್ತಾರೆ.

ಇದನ್ನೂ ಓದಿ : ಕೋವಿಶೀಲ್ಡ್ ಲಸಿಕೆ ಅಡ್ಡ ಪರಿಣಾಮ ಬೀರಲಿದೆ; ಸತ್ಯ ಒಪ್ಪಿಕೊಂಡ ಆಸ್ಟ್ರಾಜೆನಿಕಾ! ಏನಿದರ ಪರಿಣಾಮ?

ಎಸ್.ಎಂ.ಎಸ್ ಮೂಲಕ ಮಾಹಿತಿ :

ಎಲ್ಲಾ ಏರ್‌ಲೈನ್ ಚೆಕ್-ಇನ್ ಕೌಂಟರ್‌ಗಳು, ಬೋರ್ಡಿಂಗ್ ಗೇಟ್‌ಗಳಲ್ಲಿ ವಿಮಾನದ ಮಾಹಿತಿಯನ್ನು ವೀಕ್ಷಿಸ ಬಹುದು. ಬೋರ್ಡಿಂಗ್ ಗೇಟ್ ಬದಲಾವಣೆಗಳು/ ವಿಮಾನ ಮರು ವೇಳಾಪಟ್ಟಿ ವಿವರಗಳನ್ನು ಎಸ್.ಎಂ.ಎಸ್. ಮೂಲಕ ಪ್ರಯಾಣಿಕರ ನೋಂದಾಯಿತ ಇಮೇಲ್ ಮತ್ತು ಮೊಬೈಲ್ ಸಂಖ್ಯೆಯಲ್ಲೂ ಕೂಡಾ ಏರ್‌ಲೈನ್ ಹಂಚಿಕೊಳ್ಳಲಿದೆ ಎಂದು ವಿವರಿಸಿದ್ದಾರೆ.

Continue Reading

LATEST NEWS

Trending