LATEST NEWS
ಕರ್ನಾಟಕದಲ್ಲೇ ಮೊದಲ ಬಾರಿಗೆ ಮೂಳೆ ದಾನ ಮಾಡಿದ ಯುವಕ
Published
5 hours agoon
By
NEWS DESK2ಮಡಿಕೇರಿ: ಕರ್ನಾಟಕ ರಾಜ್ಯದ ಆರೋಗ್ಯ ಕ್ಷೇತ್ರದಲ್ಲೇ ಮೊಟ್ಟ ಮೊದಲ ಬಾರಿಗೆ ಮೃತದೇಹದ ಮೂಳೆ ದಾನ ಮಾಡಲಾಗಿದೆ. ಸೋಮವಾರಪೇಟೆಯ ಜಂಬೂರು ಗ್ರಾಮದ ನಿವಾಸಿ ಈಶ್ವರ ಎನ್. (32) ಎಂಬವರೇ ಸಾವಿನಲ್ಲೂ ಸಾರ್ಥಕತೆ ಮೆರೆದವರು.
ಡಿ.21ರಂದು ರಾತ್ರಿ ಅವರು ಚಲಾಯಿಸುತ್ತಿದ್ದ ಪಿಕ್‌ಅಪ್ ವಾಹನ ಗರಗಂದೂರು ಬಳಿ ನಿಯಂತ್ರಣ ಕಳೆದುಕೊಂಡು ಮಗುಚಿ ಬಿದ್ದ ಪರಿಣಾಮ ಈಶ್ವರ್ ಎನ್. ಅವರ ತಲೆಯ ಭಾಗಕ್ಕೆ ಗಂಭೀರ ಗಾಯವಾಗಿತ್ತು. ಚಿಂತಾಜನಕ ಸ್ಥಿತಿಯಲ್ಲಿದ್ದ ಅವರನ್ನು ಮಂಗಳೂರಿನ ನಿಟ್ಟೆ ಕೆ.ಎಸ್.ಹೆಗ್ಡೆ ಆಸ್ಪತ್ರೆಗೆ ದಾಖಲಿಸಲಾಯಿತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಅವರು ಮೃತಪಟ್ಟರು.
ಈಶ್ವರ ಅವರು ಗಂಭೀರ ಸ್ಥಿತಿಯಲ್ಲಿದ್ದ ವಿಚಾರವನ್ನು ವೈದ್ಯರು ಅವರ ಸಹೋದರಿ ಸೌಮ್ಯಾ ಬಳಿ ತಿಳಿಸಿದಾಗ ಸ್ವಯಂಪ್ರೇರಿತರಾಗಿ ಅಂಗಾಂಗ ದಾನದ ಕುರಿತು ಆಸಕ್ತಿ ತೋರಿದರು. ಕಸಿ ಸಂಯೋಜಕರಾದ ಅಕ್ಷತಾ ಶೆಟ್ಟಿ ಹಾಗೂ ನರಶಸ್ತ್ರ ಚಿಕಿತ್ಸಕರು ಸೇರಿದಂತೆ ವೈದ್ಯಕೀಯ ತಂಡ ಸಮಾಲೋಚನೆ ನಡೆಸಿತು. ನಂತರ ಸಹೋದರಿ ಸೌಮ್ಯಾ ಹಾಗೂ ಕುಟುಂಬ ವರ್ಗ ಈಶ್ವರ ಅವರ ಮೂಳೆಗಳನ್ನು ಕಸಿ ಮಾಡಲು ದಾನ ನೀಡುವುದಾಗಿ ಒಪ್ಪಿಕೊಂಡರು ಎನ್ನಲಾಗಿದೆ.
ಕೌನ್ಸಿಲಿಂಗ್ ಪ್ರಕ್ರಿಯೆಯ ಮೂಲಕ ದಾನದ ಪ್ರಯೋಜನಗಳು ಮತ್ತು ಸ್ವೀಕರಿಸುವವರ ಮೇಲೆ ಅದು ಬೀರಬಹುದಾದ ಪ್ರಭಾವವನ್ನು ಕುಟುಂಬವು ಅರ್ಥಮಾಡಿಕೊಂಡಿದೆ ಎಂದು ವೈದ್ಯರ ತಂಡ ಖಚಿತ ಪಡಿಸಿಕೊಂಡಿತು. ಇದು ಮೆಡಿಕೋ-ಲೀಗಲ್ ಪ್ರಕರಣವಾಗಿರುವುದರಿಂದ, ದಾನ ನೀಡುವ ಮೊದಲು ಪೊಲೀಸರು ಮತ್ತು ಈಶ್ವರ ಅವರ ಹತ್ತಿರದ ಸಂಬಂಧಿಕರಿಂದ ಅಗತ್ಯ ಅನುಮತಿಯನ್ನು ಪಡೆಯಲಾಯಿತು.
ಆರ್ಥೋಪೆಡಿಕ್ಸ್ ವಿಭಾಗದ ಪ್ರಾಧ್ಯಾಪಕ ಮತ್ತು ಮುಖ್ಯಸ್ಥ ಡಾ.ವಿಕ್ರಂ ಶೆಟ್ಟಿ ನೇತೃತ್ವದಲ್ಲಿ ಪ್ರೊ.ಎಂ.ಶಾಂತರಾಮ ಶೆಟ್ಟಿ ಹಾಗೂ ಶಸ್ತ್ರಚಿಕಿತ್ಸಾ ತಂಡ ಮೂಳೆಯನ್ನು ಬೇರ್ಪಡಿಸಿತು. ಮೃತದೇಹದ ಮೂಳೆಗಳ ಸ್ಥಳದಲ್ಲಿ ಪ್ಲಾಸ್ಟಿಕ್ ಮೂಳೆಗಳನ್ನು ಸೇರಿಸಲಾಯಿತು. ಈ ಮೂಳೆ ದಾನದಿಂದ ಭವಿಷ್ಯದಲ್ಲಿ ಕ್ಯಾನ್ಸರ್ ಪೀಡಿತ ಆರು ಮಕ್ಕಳ ಕೈಕಾಲುಗಳನ್ನು ಸಮರ್ಥವಾಗಿ ಉಳಿಸಬಹುದು. ಮೂಳೆಗಳನ್ನು ಅಂಗ ಉಳಿಸುವ ಶಸ್ತ್ರಚಿಕಿತ್ಸೆಗಳಿಗೆ ಬಳಸಲಾಗುತ್ತದೆ. ಯುವ ಕ್ಯಾನ್ಸರ್ ರೋಗಿಗಳಿಗೆ ಹೊಸ ಭರವಸೆಯನ್ನು ನೀಡುತ್ತದೆ ಎಂದು ಡಾ.ವರುಣ್ ಶೆಟ್ಟಿ ಹೇಳಿದ್ದಾರೆ.
ವೈದ್ಯಕೀಯ ಅಧೀಕ್ಷಕಿ ಡಾ.ಸುಮಲತಾ ಶೆಟ್ಟಿ ಅವರು ಕುಟುಂಬದ ಬೆಂಬಲ, ಸಹಕಾರ ಮತ್ತು ವೈದ್ಯಕೀಯ ತಂಡದ ಪರಿಶ್ರಮಕ್ಕೆ ಕೃತಜ್ಞತೆ ಸಲ್ಲಿಸಿದ್ದಾರೆ.
DAKSHINA KANNADA
ಸಂಪಾಜೆ ಬಳಿ ಭೀಕರ ಅಪಘಾತ : ಇಬ್ಬರನ್ನು ಬಲಿ ಪಡೆದ ಕಂಟೈನರ್..!
Published
2 hours agoon
24/12/2024By
NEWS DESKಮಂಗಳೂರು : ಸಂಪಾಜೆಯ ಚೆಡಾವು ಎಂಬಲ್ಲಿ ಭೀಕರ ರಸ್ತೆ ಅಪಘಾತಕ್ಕೆ ಸ್ಕೂಟಿಯಲ್ಲಿ ಪ್ರಯಾಣಿಸುತ್ತಿದ್ದ ಇಬ್ಬರು ಬಲಿಯಾಗಿದ್ದಾರೆ. ಸುಳ್ಯದಿಂದ ಮಡಿಕೇರಿ ಕಡೆ ಹೋಗುತ್ತಿದ್ದ ಕಂಟೈನರ್ ಹಾಗೂ ಸುಳ್ಯಕ್ಕೆ ಮಡಿಕೇರಿ ಕಡೆಯಿಂದ ಬರುತ್ತಿದ್ದ ಸ್ಕೂಟಿ ನಡುವೆ ಈ ಅಪಘಾತ ಸಂಭವಿಸಿದೆ. ಈ ಭೀಕರ ಅಪಘಾತದಲ್ಲಿ ಸ್ಕೂಟರ್ ಚಲಾಯಿಸುತ್ತಿದ್ದ ಎಂ. ಚಿದಾನಂದ ಆಚಾರ್ಯ ಎಂಬವರು ಸ್ಥಳದಲ್ಲೇ ಮೃತ ಪಟ್ಟಿದ್ದಾರೆ.
ಅವರ ಜೊತೆಗೆ ಸಹ ಸವಾರೆಯಾಗಿ ಹಿಂಬದಿಯಲ್ಲಿ ಕುಳಿತಿದ್ದ ಮಹಿಳೆ ಗಂಭೀರ ಗಾಯಗೊಂಡು ಸುಳ್ಯ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತಾದ್ರೂ ಚಿಕಿತ್ಸೆ ಫಲಕಾರಿಯಾಗದೆ ಅವರೂ ಕೂಡಾ ಮೃತ ಪಟ್ಟಿದ್ದಾರೆ. ಮೃತರು ಕೊಡಗು ಜಿಲ್ಲೆಯ ಸಿದ್ದಾಪುರದ ನೆಲ್ಲಿಹುದುಕೇರಿ ನಿವಾಸಿಗಳು ಎಂಬ ಮಾಹಿತಿ ಲಭ್ಯವಾಗಿದೆ. ಸ್ಕೂಟಿಗೆ ಡಿಕ್ಕಿ ಹೊಡೆದ ಕಂಟೈನರ್ ರಸ್ತೆ ಬಿಟ್ಟು ಕೆಲ ಮೀಟರ್ ಗಳಷ್ಟು ದೂರ ಕಾಡಿನ ಒಳಗೆ ಚಲಿಸಿದೆ. ರಸ್ತೆಯ ಬದಿಯಲ್ಲಿ ಅಳವಡಿಸಿದ್ದ ಕಬ್ಬಿಣದ ತಡೆ ಬೇಲಿ ಕೂಡಾ ಮುರಿದು ಬಿದ್ದಿದ್ದು, ಸ್ಕೂಟಿ ಸಂಪೂರ್ಣ ನುಜ್ಜುಗುಜ್ಜಾಗಿದೆ. ದಕ್ಷಿಣ ಕನ್ನಡ ಹಾಗೂ ಕೊಡಗು ಜಿಲ್ಲೆಯ ಗಡಿಭಾಗದಲ್ಲಿ ಈ ಅಪಘಾತ ನಡೆದಿದ್ದು, ಮಡಿಕೇರಿ ಪೊಲೀಸ್ ಠಾಣೆಯಲ್ಲಿ ಅಪಘಾತದ ಪ್ರಕರಣ ದಾಖಲಾಗಿದೆ.
LATEST NEWS
ಮಾಜಿ ಕ್ರಿಕೆಟಿಗನಿಗೆ ಜೀವನ ಪರ್ಯಂತ ಉಚಿತ ಚಿಕಿತ್ಸೆ ಘೋಷಿಸಿದ ಆಸ್ಪತ್ರೆ!
Published
4 hours agoon
24/12/2024By
NEWS DESK4ಮಂಗಳೂರು/ ಮುಂಬೈ : ಮಾಜಿ ಕ್ರಿಕೆಟಿಗ ವಿನೋದ್ ಕಾಂಬ್ಳಿ ಅನಾರೋಗ್ಯದಿಂದ ಬಳಲುತ್ತಿದ್ದಾರೆ. ತೀವ್ರ ಮೂತ್ರ ಸೋಂಕು ಸೇರಿದಂತೆ ವಿವಿಧ ಆರೋಗ್ಯ ಸಮಸ್ಯೆಯಿಂದ ಅವರು ಥಾಣೆಯ ಆಕೃತಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಇದೀಗ ಮೆದುಳಿನಲ್ಲಿ ರಕ್ತ ಹೆಪ್ಪುಗಟ್ಟುವಿಕೆಯ ಸಮಸ್ಯೆಗೂ ಒಳಗಾಗಿದ್ದಾರೆ.
ಈ ಬಗ್ಗೆ ಮಾಹಿತಿ ನೀಡಿರುವ ಆಕೃತಿ ಆಸ್ಪತ್ರೆಯ ಡಾ. ವಿವೇಕ್ ತ್ರಿವೇದಿ, ಕಾಂಬ್ಳಿ ಅವರಿಗೆ ಜೀವನ ಪರ್ಯಂತ ಚಿಕಿತ್ಸೆ ಉಚಿತವಾಗಿರುತ್ತದೆ ಎಂದು ಘೋಷಿಸಿದ್ದಾರೆ. ಆಸ್ಪತ್ರೆಯ ಉಸ್ತುವಾರಿ ಎಸ್.ಸಿಂಗ್ ಉಚಿತ ಚಿಕಿತ್ಸೆ ನೀಡುವ ಬಗ್ಗೆ ನಿರ್ಧಾರ ಮಾಡಿದ್ದಾರೆ. ಕಾಂಬ್ಳಿ ಚಿಕಿತ್ಸೆ ಬಗ್ಗೆ ಯಾರೂ ಯೋಚಿಸುವಂತಿಲ್ಲ ಎಂದಿದ್ದಾರೆ.
ಇದನ್ನೂ ಓದಿ : ಒಂದು ಮೊಟ್ಟೆಯ ಕಥೆ ; 1 ತತ್ತಿಯಿಂದ 2 ಕೋಳಿಮರಿ ಜನನ
ಮೂತ್ರದ ಸೋಂಕು ಮತ್ತು ಕಾಲು ಸೆಳೆತದಿಂದ ಕಾಂಬ್ಳಿ ಆಸ್ಪತ್ರೆಗೆ ದಾಖಲಾದ ನಂತರ, ಆಸ್ಪತ್ರೆಯ ಸಿಬ್ಬಂದಿ ಹಲವಾರು ವೈದ್ಯಕೀಯ ಪರೀಕ್ಷೆಗಳನ್ನು ನಡೆಸಿದ್ದಾರೆ. ಅವರ ಆರೋಗ್ಯವನ್ನು ನಿರಂತರವಾಗಿ ಗಮನಿಸುತ್ತಿದ್ದೇವೆ. ಇಂದು ಹೆಚ್ಚಿನ ಪರೀಕ್ಷೆಗಳನ್ನು ನಡೆಸಲಾಗುವುದು ಎಂದು ಡಾ. ವಿವೇಕ್ ತ್ರಿವೇದಿ ತಿಳಿಸಿದ್ದಾರೆ. ಸದ್ಯ ಕಾಂಬ್ಳಿ ಆರೋಗ್ಯ ಸ್ಥಿರವಾಗಿದೆ. ಆದರೆ, ಕಾಂಬ್ಳಿ ಅವರು ಐಸಿಯುನಲ್ಲಿ ಮೇಲ್ವಿಚಾರಣೆಯಲ್ಲಿರಬೇಕು ಎಂದು ಡಾ. ವಿವೇಕ್ ತ್ರಿವೇದಿ ತಿಳಿಸಿರುವ ಬಗ್ಗೆ ವರದಿಯಾಗಿದೆ.
ಮಂಗಳೂರು/ತೆಲಂಗಾಣ : ಮಹಿಳೆಯೊಬ್ಬಳು ಒಂದು ಕೋಳಿಯನ್ನು ಪ್ರೀತಿಯಿಂದ ಸಾಕಿದ್ದು, ಇತ್ತೀಚೆಗೆ ಅದರ ಮೊಟ್ಟೆ ಒಡೆದಿದೆ. ಆದರೆ ಅಚ್ಚರಿ ಏನೆಂದರೆ, ನಿನ್ನೆ (ಡಿ23) ಒಂದು ಮೊಟ್ಟೆಯಿಂದ ಎರಡು ಕೋಳಿ ಜನ್ಮ ಪಡೆದ ಘಟನೆ ತೆಲಂಗಾಣದ ಆದಿಲಾಬಾದ್ ಜಿಲ್ಲೆಯ ಬೋತ್ ಮಂಡಲದಲ್ಲಿ ನಡೆದಿದೆ. ಇದು ಎಲ್ಲರಲ್ಲೂ ಆಶ್ಚರ್ಯ ಮೂಡಿಸಿದ್ದು, ಏನು ವಿಷಯ ಎಂಬ ಪೂರ್ತಿ ಮಾಹಿತಿ ಇಲ್ಲಿದೆ.
ಊಹೆಗೂ ಮೀರಿದಂತೆ ಪ್ರಕೃತಿಯಲ್ಲಿ ಹಲವಾರು ರೀತಿಯಲ್ಲಿ ಹೊಸ ವಿಷಯಗಳು ನಡೆಯುತ್ತಿರುತ್ತವೆ. ಅಂತೆಯೇ ಒಂದು ಮೊಟ್ಟೆಯಿಂದ ಎರಡು ಮರಿಗಳು ಬಂದ ಘಟನೆ ತೋಫಿಕ್ ಎನ್ನುವ ಮಹಿಳೆಯ ಮನೆಯಲ್ಲಿ ನಡೆದಿದೆ. ಈಕೆಗೆ ಕೋಳಿ ಸಾಕುವುದು ಎಂದರೆ ತುಂಬಾ ಇಷ್ಟ. ಹಾಗಾಗಿ ಹಲವು ಕೋಳಿಯನ್ನು ಸಾಕುತ್ತಿದ್ದರು. ಅವುಗಳಲ್ಲಿ ಒಂದು ಇತ್ತೀಚೆಗೆ ಮೊಟ್ಟೆಯೊಡೆದಿದೆ. ಆ ಮೊಟ್ಟೆಯಿಂದ ಒಂದಲ್ಲ, ಎರಡು ಮರಿಗಳು ಹೊರಬಂದಿರುವುದು ಗಮನಕ್ಕೆ ಬಂದಿದೆ.
ಇದೀಗ ಆ ಅವಳಿ ಮರಿಗಳನ್ನು ನೋಡಲು ಜನರು ಬರುತ್ತಿದ್ದಾರೆ. ‘ಇಂತಹ ಘಟನೆಯನ್ನು ನಾವು ಕೇಳಿಲ್ಲ ಅಥವಾ ನೋಡಿಲ್ಲ’ ಎಂದು ಬಂದವರು ಹೇಳುತ್ತಿದ್ದಾರೆ. ಈ ಫೋಟೋಗಳನ್ನು ವಾಟ್ಸಾಪ್ ಮತ್ತು ಇತರ ಸಾಮಾಜಿಕ ಮಾಧ್ಯಮಗಳಲ್ಲಿ ಹಂಚಿಕೊಳ್ಳಲಾಗುತ್ತಿದೆ. ಈ ವಿಚಿತ್ರ ಕುರಿತು ಸ್ಥಳೀಯ ಪಶುವೈದ್ಯಾಧಿಕಾರಿ ಸುಶೀಲ್ ಕುಮಾರ್ ಮಾತನಾಡಿ, ‘ಆನುವಂಶಿಕ ದೋಷದಿಂದ ಒಂದು ಮೊಟ್ಟೆಯಿಂದ 2 ಶಿಶುಗಳು ಜನಿಸುವ ಸಾಧ್ಯತೆ ಇದೆ. ಇಂತಹವುಗಳು ಬಹಳ ಅಪರೂಪ’ ಎಂದಿದ್ದಾರೆ.
LATEST NEWS
ಹೊಸ ವರ್ಷಾಚರಣೆಗೆ ತಡರಾತ್ರಿವರೆಗೆ ಪಬ್, ಬಾರ್, ಹೊಟೇಲ್ ತೆರೆಯಲು ಅವಕಾಶ ನೀಡುವಂತೆ ಮನವಿ
ಸಂಭಾವನೆಯಲ್ಲಿ ದಾಖಲೆ ಬರೆದ ಯಶ್ !
ಕರ್ನಾಟಕದಲ್ಲೇ ಮೊದಲ ಬಾರಿಗೆ ಮೂಳೆ ದಾನ ಮಾಡಿದ ಯುವಕ
ಕರಾವಳಿ ಉತ್ಸವ : ತುಳು ಸಂಸ್ಕೃತಿ ಅನಾವರಣದ ಮೂಲಕ ಪ್ರೇಕ್ಷಕರಿಗೆ ರಸದೌತಣ
ಆ ಒಂದು ದೃಶ್ಯದಿಂದ ಪುಷ್ಪ 2 ಚಿತ್ರಕ್ಕೆ ಮತ್ತೆ ಸಂಕಷ್ಟ!
ಡಿಕೆ ಸುರೇಶ್ ತಂಗಿ ಎಂದು ಹೇಳಿಕೊಂಡು ಚಿನ್ನ ಖರೀದಿಸಿ ವಂಚನೆ; ನಟ ಧಮೇಂದ್ರ ವಿರುದ್ದ ಎಫ್ ಐ ಆರ್ ದಾಖಲು !
Trending
- LATEST NEWS6 days ago
ದಹಿ ಪುರಿ ಚಾಟ್ಸ್ ಬದಲು ಪೂರಿ, ಮೊಸರು ಕಳುಹಿಸಿಕೊಟ್ಟ ರೆಸ್ಟೋರೆಂಟ್
- BIG BOSS4 days ago
ಚೈತ್ರಾ ಕುಂದಾಪುರಗೆ ಮತ್ತೆ ಜೈಲು.. ಮುಂದಿನ ವಾರಕ್ಕೆ ಕ್ಯಾಪ್ಟನ್ ಯಾರೆಂದು ರಿವೀಲ್..!
- FILM5 hours ago
ಆ ಒಂದು ದೃಶ್ಯದಿಂದ ಪುಷ್ಪ 2 ಚಿತ್ರಕ್ಕೆ ಮತ್ತೆ ಸಂಕಷ್ಟ!
- BIG BOSS4 days ago
ಬಿಗ್ಬಾಸ್ನಲ್ಲಿ ಶಾಕಿಂಗ್ ಟ್ವಿಸ್ಟ್; ಮನೆಯಿಂದ ಆಚೆ ಹೋಗಲು ಸ್ಟ್ರಾಂಗ್ ಸ್ಪರ್ಧಿಗಳು ನಾಮಿನೇಟ್