ದೇಶದ ಇತಿಹಾಸದಲ್ಲಿ ಇದೇ ಮೊದಲ ಬಾರಿಗೆ ಲೋಕಸಭಾ ಸ್ಪೀಕರ್ ಹುದ್ದೆಗೆ ಚುನಾವಣೆ ನಡೆಯುವುದು ಬಹುತೇಕ ಖಚಿತವಾಗಿದೆ. ಡೆಪ್ಯುಟಿ ಸ್ಪೀಕರ್ ಹುದ್ದೆಯನ್ನು ವಿರೋಧ ಪಕ್ಷಗಳಿಗೆ ಬಿಟ್ಟುಕೊಡಲು ಎನ್‌ಡಿಎ ಹಿಂದೇಟು ಹಾಕಿದ ಕಾರಣ ಈ ಪರಿಸ್ಥಿತಿ ನಿರ್ಮಾಣವಾಗಿದೆ.
ಹದಿನೆಂಟನೇ ಲೋಕಸಭೆಯಲ್ಲಿ ಹತ್ತು ವರ್ಷಗಳ ಬಳಿಕ ಇಂಡಿಯಾ ಮೈತ್ರಿಕೂಟ ಪ್ರಬಲ ವಿರೋಧ ಪಕ್ಷವಾಗಿ ಮೂಡಿಬಂದಿದೆ. ಇದೇ ಕಾರಣದಿಂದ ಮೊದಲ ಅಧಿವೇಶನ ಆರಂಭವಾಗುತ್ತಿದ್ದಂತೆ ವಿರೋಧ ಪಕ್ಷಗಳು ಸರ್ಕಾರದ ಪ್ರತಿಯೊಂದು ನಡೆಯನ್ನು ಪ್ರಶ್ನೆ ಮಾಡಲು ಆರಂಭಿಸಿವೆ. ಅಧಿವೇಶನದ ಆರಂಭದಲ್ಲಿ ಹಂಗಾಮಿ ಸ್ಪೀಕರ್ ಆಯ್ಕೆಯಲ್ಲಿ ಹಿರಿಯ ಕಾಂಗ್ರೆಸ್ ಸಂಸದರನ್ನು ಕಡೆಗಣಿಸಿ ಭರ್ತೃಹರಿ ಅವರನ್ನು ನೇಮಿಸಲಾಗಿತ್ತು. ಇದೀಗ 18 ನೇ ಲೋಕಸಭೆಯ ಸ್ಪೀಕರ್ ಆಗಿ ಎನ್‌ಡಿಎ ನಿಂದ ಓಂ ಬಿರ್ಲಾ ಅವರ ಹೆಸರು ಮತ್ತೆ ಮುಂದಿಡಲಾಗಿದೆ. ಒಮ್ಮತದ ಸ್ಪೀಕರ್ ಆಯ್ಕೆಯ ವಿಚಾರವಾಗಿ ಆಡಳಿತ ಪಕ್ಷ ಮತ್ತು ವಿರೊಧ ಪಕ್ಷದ ನಡುವೆ ನಡೆದ ಮಾತುಕತೆ ವಿಫಲವಾಗಿದೆ.
ಓಂ ಬಿರ್ಲಾ ಅವರನ್ನು ಒಮ್ಮತದ ಆಯ್ಕೆಯಾಗಿ ಪರಿಗಣಿಸಲು ಡೆಪ್ಯುಟಿ ಸ್ಪೀಕರ್ ಹುದ್ದೆಯನ್ನು ಕಾನೂನುಬದ್ಧವಾಗಿ ವಿರೋಧ ಪಕ್ಷಕ್ಕೆ ಬಿಟ್ಟು ಕೊಡಲು ಕಾಂಗ್ರೆಸ್ ನೇತೃತ್ವದ ಇಂಡಿ ಒಕ್ಕೂಟ ಮನವಿ ಮಾಡಿತ್ತು. ಇದೇ ವಿಚಾರವಾಗಿ ರಕ್ಷಣಾ ಸಚಿವ ರಾಜ್‌ನಾಥ್ ಸಿಂಗ್ ಅವರ ನೇತೃತ್ವದಲ್ಲಿ ಸರ್ವ ಪಕ್ಷ ಸಭೆ ಕೂಡ ನಡೆದಿತ್ತು. ಆದರೆ ವಿರೋಧ ಪಕ್ಷದ ಮನವಿಗೆ ಎನ್‌ಡಿಎನಿಂದ ಸಕಾರಾತ್ಮಕ ಉತ್ತರ ಬಾರದ ಹಿನ್ನೆಲೆಯಲ್ಲಿ ವಿರೋಧ ಪಕ್ಷದಿಂದ ಹಿರಿಯ ಕಾಂಗ್ರೆಸ್ ನಾಯಕ ಕೆ. ಸುರೇಶ್ ಅವರನ್ನು ಸ್ಪೀಕರ್ ಅಭ್ಯರ್ಥಿಯಾಗಿ ಕಣಕ್ಕಿಳಿಸಲಾಗಿದೆ. ಹೀಗಾಗಿ ಲೋಕಸಭಾ ಸ್ಪೀಕರ್ ಹುದ್ದೆಗೆ ಚುನಾವಣೆ ನಡೆಸುವುದು ಅನಿವಾರ್ಯವಾಗಿದೆ.
ಎನ್‌ಡಿಎ ಒಕ್ಕೂಟಕ್ಕೆ ಸ್ಪಷ್ಟ ಬಹುಮತ ಇರುವ ಕಾರಣ ಓ ಬಿರ್ಲಾ ಅವರು ಸ್ಪೀಕರ್ ಆಗಿ ಆಯ್ಕೆಯಾಗಲು ಯಾವುದೇ ತೊಂದರೆ ಇಲ್ಲ. ಆದ್ರೆ ಸರ್ಕಾರಕ್ಕೆ ಸಹಕರಿಸುವಂತೆ ಮನವಿ ಮಾಡಿದ್ದ ಪ್ರಧಾನಿ ಮೋದಿ ಅವರು ವಿರೋಧ ಪಕ್ಷದ ಜೊತೆ ಸರಿಯಾಗಿ ವರ್ತಿಸುತ್ತಿಲ್ಲ . ಹೀಗಾಗಿ ಅಸಹಕಾರದ ಹೆಜ್ಜೆಯನ್ನು ವಿರೋಧ ಪಕ್ಷ ಇಡಲು ಅವರೇ ಪ್ರೇರೇಪಿಸಿದ್ದಾರೆ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಹೇಳಿದ್ದಾರೆ.
ಮಂಗಳೂರು: ಭಾರತೀಯ ದೂರ ಸಂಪರ್ಕ ನಿಯಂತ್ರಣ ಪ್ರಾಧಿಕಾರದಿಂದ ಕರೆ ಮಾಡುವುದಾಗಿ ತಿಳಿಸಿ, ಮೊಬೈಲ್ ಸಿಮ್ ಖರೀದಿಸಿ ಕಾನೂನು ಬಾಹಿರ ಚಟುವಟಿಕೆ ಕುರಿತು ಆರೋಪಿಸಿ 1.71 ಕೋ.ರೂ ವಂಚಿಸಿರುವ ಕುರಿತು ಸೆನ್ ಠಾಣೆಯಲ್ಲಿ ಪ್ರಕರಣ ದಾಖಲಾಗದೆ.
ನ.11 ರಂದು ಅಪರಿಚಿತ ವ್ಯಕ್ತಿಯೋರ್ವರು ಟ್ರಾಯ್ ಪ್ರತಿನಿಧಿ ಎಂದು ಕರೆ ಮಾಡಿದ್ದು, ‘ನಿಮ್ಮ ಹೆಸರಿನಲ್ಲಿ ಇನ್ನೊಂದು ಮೊಬೈಲ್ ನಂಬರ್ ರಿಜಿಸ್ಟರ್ ಆಗಿದೆ, ಮುಂಬೈನ ಅಂಧೇರಿ ಯ ಮೂಲಕ ಕಾನೂನು ಬಾಹಿರ ಚಟುವಟಿಕೆ ನಡೆದಿದೆ . ಮಾರ್ಕೆಟಿಂಗ್ ನೆಪದಲ್ಲಿ ಈ ನಂಬರ್ ಮೂಲಕ ಕರೆ ಮಾಡಿ ಕಿರುಕುಳ ನೀಡುತ್ತಿರುವ ಕುರಿತು ಎಫ್‌ಐಆರ್ ದಾಖಲಾಗಿದೆ. ಈಗಲೇ ನೀವು ಅಂಧೇರಿ ಠಾಣೆಯನ್ನು ಸಂಪರ್ಕ ಮಾಡಬೇಕು. ಇಲ್ಲದಿದ್ದರೆ ನಿಮ್ಮ ಎರಡು ಮೊಬೈಲ್ ಸೇವೆಯನ್ನು ಕೊನೆಗಳಿಸಲಾಗುವುದು’ ಎಂದು ಹೇಳಿದ್ದಾರೆ.
ಅನಂತರ ವಾಟ್ಸಪ್ ಮೂಲಕ ವೀಡಿಯೋ ಕರೆ ಮಾಡಿದ್ದು, ನ.13 ರಿಂದ 19 ರ ನಡುವೆ 53 ಲಕ್ಷ, 74 ಲಕ್ಷ ರೂ, 44 ಲಕ್ಷ ರೂ, ಹೀಗೆ ಒಟ್ಟು 1.71 ಕೋ.ರೂ ವರ್ಗಾಯಿಸಿಕೊಂಡು ಮೋಸ ಮಾಡಿದ್ದಾನೆ. ದೂರುದಾರರು ಅಮೆರಿಕಾದ ಐಟಿ ಸಂಸ್ಥೆಯಲ್ಲಿ ಕೆಲಸ ಮಾಡುತ್ತಿದ್ದು, ವಾಪಾಸಾದ ಬಳಿಕ ಮಂಗಳೂರಿನಲ್ಲಿ ಫ್ಲ್ಯಾಟ್ ಒಂದನ್ನು ಖರೀದಿ ಮಾಡಿದ್ದರು. ಅವರು ಅವಿವಾಹಿತರಾಗಿದ್ದು, ಒಬ್ಬರೇ ವಾಸ ಮಾಡುತ್ತಿದ್ದರು. ಉದ್ಯೋಗದ ಮೂಲಕ ಉಳಿತಾಯ ಮಾಡಿದ ಸಂಪಾದನೆಯನ್ನು ಈ ಮೂಲಕ ಕಳೆದುಕೊಂಡಿದ್ದಾರೆ.
ಮಂಗಳೂರು/ದೆಹಲಿ: ಇತ್ತೀಚೆಗೆ ಆತ್ಮ*ಹತ್ಯೆ ಪ್ರಕರಣಗಳು ಹೆಚ್ಚಾಗುತ್ತಿದ್ದು, ವಿದ್ಯಾರ್ಥಿಗಳು ಸಾ*ವಿಗೆ ಶರಣಾಗುವುದನ್ನು ಹೆಚ್ಚಾಗಿ ಕಾಣುತ್ತಿದ್ದೇವೆ. ಇದೀಗ 19 ವರ್ಷದ ವಿದ್ಯಾರ್ಥಿನಿ ಕಟ್ಟಡದ 5ನೇ ಮಹಡಿಯಿಂದ ಹಾ*ರಿ ಆ*ತ್ಮಹತ್ಯೆ ಮಾಡಿಕೊಂಡಿರುವ ಘಟನೆ ದಕ್ಷಿಣ ದೆಹಲಿಯ ಸಂಗಮ್ ವಿಹಾರ್ ಪ್ರದೇಶದಲ್ಲಿ ನಿನ್ನೆ (ಸೆ.28) ಮಧ್ಯಾಹ್ನ ನಡೆದಿದೆ.
ಅವಳ ಯಾವುದೇ ಸೂ*ಸೈಡ್ ನೋಟ್ ಪತ್ತೆಯಾಗಿಲ್ಲ. ಕೇವಲ ಸಿಸಿಟಿವಿ ದೃಶ್ಯಾವಳಿಯಲ್ಲಿ ಆಕೆ ಆರು ಅಂತಸ್ತಿನ ಕಟ್ಟಡದ ಐದನೇ ಮಹಡಿಯಲ್ಲಿ ನಿಂತಿರುವುದು ಕಂಡುಬಂದಿದೆ.
ಪ್ರಥಮ ವರ್ಷದ ಬಿಡಿಎಸ್ ವಿದ್ಯಾರ್ಥಿನಿಯನ್ನು ಬಾತ್ರಾ ಆಸ್ಪತ್ರೆಗೆ ಕರೆದೊಯ್ದು ನಂತರ ಮಜೀದಿಯಾ ಆಸ್ಪತ್ರೆಗೆ ರವಾನಿಸಲಾಗಿದ್ದು, ಚಿಕಿತ್ಸೆ ವೇಳೆ ಆಕೆ ಸಾವ*ನ್ನಪ್ಪಿದ್ದಾಳೆ.ಘಟನಾ ಸ್ಥಳದಲ್ಲಿ ಕ್ರೈಂ ತಂಡ ಪರಿಶೀಲನೆ ನಡೆಸಿದ್ದು, ಮೃ*ತದೇಹವನ್ನು ಮರ*ಣೋತ್ತರ ಪರೀಕ್ಷೆಗಾಗಿ ಏಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿದೆ.
ಪ್ರ*ಕರಣ ಕುರಿತು ತನಿಖೆ ನಡೆಸಲಾಗುತ್ತಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.
ಮಂಗಳೂರು/ನವದೆಹಲಿ: ಮುಂಜಾನೆಯೇ ನವದೆಹಲಿಯಲ್ಲಿ ದು*ರ್ಘನೆಯೊಂದು ಸಂಭವಿಸಿದೆ. ಬಾಡಿಗೆ ಮನೆಯಲ್ಲಿದ್ದ ತಂದೆ ಹಾಗೂ ನಾಲ್ಕು ಹೆಣ್ಣು ಮಕ್ಕಳ ಶ*ವ ಪತ್ತೆಯಾಗಿರುವ ಘಟನೆ ನಿನ್ನೆ (ಸೆ.27) ಬೆಳಕಿಗೆ ಬಂದಿದೆ.
ರಂಗಪುರಿ ಎಂಬ ಪ್ರದೇಶದಲ್ಲಿ ಈ ಘಟನೆ ಸಂಭವಿಸಿದ್ದು, ತಂದೆ ಹೀರಾ ಲಾಲ್ (50) ಹಾಗೂ ಪುತ್ರಿಯರಾದ ನೀತು (18), ನಿಶಿ (15), ನೀರು (10), ನಿಧಿ (8) ಎಂಬುವುದಾಗಿ ಗುರುತಿಸಲಾಗಿದೆ.
ಕಾರ್ಪೆಂಡರ್ ವೃತ್ತಿ ಮಾಡುತ್ತಿದ್ದ ಹೀರಾ ಲಾಲ್ ಅವರ ಹೆಂಡತಿ ಕಳೆದ ಒಂದು ವರ್ಷದ ಹಿಂದೆ ಮರ*ಣಹೊಂದಿದ್ದು, ಬಳಕ 4 ಹೆಣ್ಣು ಮಕ್ಕಳೊಂದಿಗೆ ಜೀವನ ಸಾಗಿಸುತ್ತಿದ್ದರು. ನಾಲ್ವರೂ ಅಂಗವೈಕಲ್ಯದಿಂದ ಬಳಲುತ್ತಿದ್ದರು ಎಂಬ ಮಾಹಿತಿ ಲಭ್ಯವಾಗಿದೆ.
ಸೆ.24 ರಂದು ಹೀರಾ ಲಾಲ್ ಮನೆಗೆ ಪ್ರವೇಶಿಸಿರಿವುದು ಸಿಸಿ ಟಿವಿ ದೃಶ್ಯಾವಳಿಯಲ್ಲಿ ಸೆರೆಯಾಗಿದೆ. ಅದಾದ ಬಳಿಕ ಯಾರೂ ಒಳಗೆ ಪ್ರವೇಶಿಸಲಿಲ್ಲ ಹಾಗೂ ಯಾರೂ ಹೊರಗೆ ಹೊಗಿರಲಿಲ್ಲ ಎಂಬುವುದು ತನಿಖೆಯಲ್ಲಿ ತಿಳಿದು ಬಂದಿದೆ.
ದುರ್ವಾಸನೆ ಬರುತ್ತಿದ್ದ ಹಿನ್ನಲೆಯಲ್ಲಿ ನೆರೆಮನೆಯವರು ದೂರು ನೀಡಿದ್ದು, ಪೊಲೀಸರು ತಪಾಸಣೆ ನಡೆಸಿದ ವೇಳೆ ನಾಲ್ವರು ಪುತ್ರಿಯರ ಜೊತೆ ತಂದೆ ಮೃತ*ಪಟ್ಟಿರುವ ಪ್ರಕರಣ ಬೆಳಕಿಗೆ ಬಂದಿದೆ.