Connect with us

LATEST NEWS

ಪುತ್ತೂರಿನಲ್ಲಿ ಮೊದಲ ಬಾರಿಗೆ ರಂಗೇರಿದ ‘ಪಿಲಿರಂಗ್’ ಸ್ಪರ್ಧೆ-ಸಾಕ್ಷಿಯಾದ ಜನಸ್ತೋಮ

Published

on

ಪುತ್ತೂರು: ಇದೇ ಮೊದಲ ಬಾರಿಗೆ ಪುತ್ತೂರಿನಲ್ಲಿ ಪಿಲಿರಂಗ್ (ಹುಲಿ ಕುಣಿತ ಸ್ಪರ್ಧೆ)ಯನ್ನು ಮಾಜಿ ಶಾಸಕಿ ಶಕುಂತಲಾ ಶೆಟ್ಟಿ ನೇತೃತ್ವದಲ್ಲಿ ಆಯೋಜಿಸಲಾಗಿದೆ.


ಆಹ್ವಾನಿತ ಆರು ತಂಡಗಳು ಈ ಸ್ಪರ್ಧೆಯಲ್ಲಿ ಭಾಗವಹಿಸುವ ಮೂಲಕ ಹುಲಿ ಕುಣಿತ ಪ್ರಿಯರಿಗೆ ಭರ್ಜರಿ ಮನೋರಂಜನೆಯನ್ನು ನೀಡಿತು.

ಸ್ಪರ್ಧೆಯಲ್ಲಿ ಮೊದಲ ಸ್ಥಾನ ಒಡೆದ ತಂಡಕ್ಕೆ ಒಂದು ಲಕ್ಷ ರೂಪಾಯಿ ಬಹುಮಾನ ಮತ್ತು ದ್ವಿತೀಯ ಸ್ಥಾನ ಪಡೆದ ತಂಡಕ್ಕೆ 50 ಸಾವಿರ ಹಾಗೂ ಭಾಗವಹಿಸಿದ ಎಲ್ಲಾ ತಂಡಗಳಿಗೆ ತಲಾ 25 ಸಾವಿರ ರೂಪಾಯಿಗಳ ಬಹುಮಾನವನ್ನು ಈ ಸ್ಪರ್ಧೆಯಲ್ಲಿ ನೀಡಲಾಗುತ್ತಿದೆ.


ಅವಿಭಜಿತ ದಕ್ಷಿಣಕನ್ನಡ ಮತ್ತು ಉಡುಪಿ ಜಿಲ್ಲೆಯಲ್ಲಿ ನವರಾತ್ರಿಯಲ್ಲಿ ಹಾಕಲಾಗುವ ಹುಲಿ ವೇಷಕ್ಕೆ ಅದರದೇ ಆದ ಮಹತ್ವವಿದ್ದು, ಹರಿಕೆಯ ರೂಪದಲ್ಲೂ ಹುಲಿ ವೇಷವನ್ನು ಈ ಭಾಗದಲ್ಲಿ ಹಾಕಲಾಗುತ್ತದೆ.

ಇದೇ ಕಾರಣಕ್ಕಾಗಿ ಹುಲಿ ಕುಣಿತ ಸ್ವರ್ಧೆಗೆ ಅವಿಭಜಿತ ಜಿಲ್ಲೆಯಲ್ಲಿ ಜನ ಭಾರೀ‌ ಮಹತ್ವವನ್ನೂ ನೀಡುತ್ತಿದ್ದಾರೆ.

LATEST NEWS

ಉಡುಪಿಯಲ್ಲಿ ಭೀಕರ ಅಪಘಾ*ತ; ಲಾರಿಯಡಿ ಸಿಲುಕಿ ಬೈಕ್ ಸವಾರ ಸಾ*ವು

Published

on

ಉಡುಪಿ : ಲಾರಿಯಡಿ ಸಿಲುಕಿ ಬೈಕ್ ಸವಾರ ಸಾ*ವನ್ನಪ್ಪಿರುವ ಘಟನೆ ಉಡುಪಿಯ ಹೇರೂರಿನ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ನಡೆದಿದೆ. ಕೃಷ್ಣ ಗಾಣಿಗ ಮೃ*ತ ದುರ್ದೈವಿ. ಉಡುಪಿ ನಗರ ಸಭೆಯಲ್ಲಿ ಎಲೆಕ್ಟ್ರಿಷನ್ ಆಗಿ ಕೃಷ್ಣ ಕೆಲಸ ಮಾಡುತ್ತಿದ್ದರು. ಸಂತೆಕಟ್ಟೆ ಮಾರ್ಗವಾಗಿ ಬ್ರಹ್ಮಾವರದ ಕಡೆಗೆ ಸಾಗುತ್ತಿದ್ದಾಗ ಎದುರಿನಿಂದ ಬರುತ್ತಿದ್ದ ಲಾರಿ ಅಡಿಗೆ ಸಿಲುಕಿ ಸ್ಥಳದಲ್ಲೇ ಸಾ*ವನ್ನಪ್ಪಿದ್ದಾರೆ.

ಲಾರಿ ಕೃಷ್ಣ ಅವನ್ನು ಕೆಲ ದೂರ ಎಳೆದೊಯ್ದಿದೆ ಎಂದು ತಿಳಿದು ಬಂದಿದೆ. ಘಟನೆ ಬಳಿಕ ರಸ್ತೆಯಲ್ಲಿ ಕೆಲ ಕಾಲ ಸಂಚಾರ ದಟ್ಟನೆ ಉಂಟಾಗಿತ್ತು.

ಬ್ರಹ್ಮಾವರ ಠಾಣೆಯ ಪೊಲೀಸರು ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸಿದ್ದು, ಸುಗಮ ಸಂಚಾರಕ್ಕೆ ಅನುವು ಮಾಡಿಕೊಟ್ಟರು.

Continue Reading

DAKSHINA KANNADA

ಮಂಡ್ಯದಲ್ಲಿ ಅವಳಿ ಮಕ್ಕಳ ಸಾ*ವಿನ ಪ್ರಕರಣಕ್ಕೆ ಟ್ವಿಸ್ಟ್..! ತಾಯಿಯಿಂದ ಕೃತ್ಯ..!

Published

on

ಮಂಗಳೂರು,(ಮಂಡ್ಯ): ಮಂಡ್ಯದಲ್ಲಿ ಐಸ್‌ ಕ್ರೀಮ್‌ ತಿಂದು ಅವಳಿ ಮಕ್ಕಳು ಸಾವನ್ನಪ್ಪಿದ ಪ್ರಕರಣಕ್ಕೆ ಬಿಗ್ ಟ್ವಿಸ್ಟ್‌ ಸಿಕ್ಕಿದೆ. ಬುಧವಾರ ಅವಳಿ ಮಕ್ಕಳು ಸಾವನ್ನಪ್ಪಿದ್ದರು. ಐಸ್ ಕ್ರೀಂ ತಿಂದು ಮಕ್ಕಳು ಇಹಲೋಕ ತ್ಯಜಿಸಿವೆ ಎನ್ನಲಾಗಿತ್ತು. ಆದರೆ, ಮರಣೋತ್ತರ ಪರೀಕ್ಷೆ ಬಳಿಕ ಸತ್ಯಾಂಶ ಬಯಲಾಗಿದೆ. ತಾಯಿಯೇ ಮಕ್ಕಳಿಗೆ ವಿಷ ಹಾಕಿ ಸಾಯಿಸಿದ್ದಾಳೆ ಎನ್ನುವುದು ಖಚಿತವಾಗಿದೆ.

ಹೆತ್ತ ಮಕ್ಕಳಿಗೆ ವಿಷವಿಕ್ಕಿದ ತಾಯಿ!

ಮಂಡ್ಯ ಜಿಲ್ಲೆ ಶ್ರೀರಂಗಪಟ್ಟಣ ತಾಲೂಕಿನ ಬೆಟ್ಟಹಳ್ಳಿ ಗ್ರಾಮದ ಪೂಜಾ ಹಾಗೂ ಪ್ರಸನ್ನ ದಂಪತಿಗಳ ಒಂದೂವರೆ ವರ್ಷದ ಅವಳಿ ಕಂದಮ್ಮಗಳು ಸಾವನ್ನಪ್ಪಿದ್ದವು.

ಪೊಲೀಸ್‌ ತನಿಖೆಯ ಬಳಿಕ ತಾಯಿ ಪೂಜಾಳೇ ಮೂವರು ಮಕ್ಕಳಿಗೆ ವಿಷ ಹಾಕಿದ್ದಾಳೆಂಬುದು ಗೊತ್ತಾಗಿದೆ.

ತ್ರಿಶುಲ್, ತ್ರಿಶ ಅವಳಿ ಮಕ್ಕಳು ಹಾಗೂ ಮಗಳು ಬೃಂದಾಗೆ ಪೂಜಾ ಹಾಕಿದ್ದಳು. ಬಳಿಕ ಐಸ್ ಕ್ರೀಂ ತಿಂದು ಮಕ್ಕಳು ಸಾವನ್ನಪ್ಪಿದ್ದಾರೆ ಎಂದು ಬಿಂಬಿಸಲಾಗಿತ್ತು. ಇದೀಗ ಪೊಲೀಸ್ ವಿಚಾರಣೆ ವೇಳೆ ಸತ್ಯಾಂಶ ಬಯಲಾಗಿದೆ.

ಪೂಜಾ ಪತಿ ಪ್ರಸನ್ನ ಪದೇ ಪದೇ ಜಗಳವಾಡುತ್ತಿದ್ದರು. ಈ ಜಗಳದಿಂದ ಬೇಸತ್ತು ಬುಧವಾರ ಮಕ್ಕಳಿಗೆ ತಾಯಿ ವಿಷ ಉಣಿಸಿದ್ದಾಳೆ. ಬಳಿಕ ತಾನೂ ಸೇವಿಸಿದ್ದಳು. ಕೂಡಲೇ ಮಕ್ಕಳು ಹಾಗೂ ಪೂಜಾಳನ್ನು ಮಂಡ್ಯ‌ ಮಿಮ್ಸ್ ಆಸ್ಪತ್ರೆಗೆ ದಾಖಲು ಮಾಡಲಾಗಿ, ಆಸ್ಪತ್ರೆಯಲ್ಲಿ ಅವಳಿ ಜವಳಿ ಕಂದಮ್ಮಗಳು ಕೊನೆಯುಸಿರೆಳೆದಿದ್ದವು.

ಸದ್ಯ ತಾಯಿ ಹಾಗೂ ಮೊದಲ ಮಗಳು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

Continue Reading

DAKSHINA KANNADA

ಕಾರ್ಪೋರೇಟರ್ ಮಗಳ ಹ*ತ್ಯೆ..! ಒಂಬತ್ತು ಬಾರಿ ಇರಿದ ಪಾಪಿ…!

Published

on

ಮಂಗಳೂರು (ಹುಬ್ಬಳ್ಳಿ) : ಕಾರ್ಪೋರೇಟರ್ ನಿರಂಜನ್ ಹಿರೇಮಠ ಎಂಬವರ ಮಗಳನ್ನು ಬರ್ಬರವಾಗಿ ಹತ್ಯೆಗೈದಿರುವ ಘಟನೆ ಹುಬ್ಬಳ್ಳಿಯ ಬಿವಿಬಿ ಕಾಲೇಜು ಆವರಣದಲ್ಲಿ ನಡೆದಿದೆ. ನೇಹಾ ಹಿರೇಮಠ ಕೊಲೆಗೀಡಾದಾಕೆ. ಕಾಲೇಜ್ ಕ್ಯಾಂಪಸ್​ನಲ್ಲಿರುವ ಕ್ಯಾಂಟೀನ್​ನಲ್ಲಿ ಫಯಾಜ್ ಎಂಬಾತ 9 ಬಾರಿ ಚಾಕುವಿನಿಂದ ಇರಿದಿದ್ದಾನೆ. ತಕ್ಷಣ ನೇಹಾಳನ್ನು ಹುಬ್ಬಳ್ಳಿಯ ಕಿಮ್ಸ್​ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೇ ನೇಹಾ ಮೃತಪಟ್ಟಿದ್ದಾಳೆ.

ತಂದೆ ನಿರಂಜನ್ ಹಿರೇಮಠ ಜೊತೆಗೆ ನೇಹಾ

ಪ್ರೀತಿ ನಿರಾಕರಣೆಗೆ ಪಾಪಿಯಿಂದ ಹೇಯ ಕೃತ್ಯ..!

ಹುಬ್ಬಳ್ಳಿಯ ಬಿವಿಬಿ‌ ಕಾಲೇಜಿನಲ್ಲಿ ಓದುತ್ತಿರುವ ನೇಹಾ ಹಿರೇಮಠಗೆ ಆರೋಪಿ ಫಯಾಜ್ ಎಂಬಾತ ಪ್ರೀತಿಸುವಂತೆ ಪೀಡಿಸಿದ್ದಾನೆ. . ಆದರೆ, ನೇಹಾ ಇದನ್ನು ನಿರಾಕರಿಸುತ್ತಲೇ ಬಂದಿದ್ದಾಳೆ. ಇದರಿಂದ ರೊಚ್ಚಿಗೆದ್ದ ಆತ ಗುರುವಾರ ಕಾಲೇಜು ಕ್ಯಾಂಪಸ್‌ಗೆ ಬಂದಿದ್ದಾನೆ. ಪುನಃ ಆಕೆ ಬಳಿ ಪ್ರೇಮ ನಿವೇದನೆ ಮಾಡಿಕೊಂಡಿದ್ದಾನೆ. ಆದರೆ, ನೇಹಾ ಪ್ರೀತಿಸಲು‌ ನಿರಾಕರಿಸಿದ್ದಾಳೆ. ಹೀಗಾಗಿ ಮೊದಲೇ ನಿರ್ಧರಿಸಿ ಬಂದಿದ್ದ ಆರೋಪಿಯು ನೇಹಾಳಿಗೆ ಕಾಲೇಜು ಕ್ಯಾಂಟೀನ್‌ನಲ್ಲಿಯೇ ಚಾಕುವಿನಿಂದ ಇರಿದಿದ್ದಾನೆ.
ಆರೋಪಿ ಫಯಾಜ್ ಕೊಂಡಿಕೊಪ್ಪನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಹುಬ್ಬಳ್ಳಿಯ ವಿದ್ಯಾನಗರ ಠಾಣೆ‌ ಪೊಲೀಸರಿಂದ ಆರೋಪಿಯ ವಿಚಾರಣೆ ನಡೆಸಲಾಗಿದೆ.ಇನ್ನು ನೇಹಾ ಸಾವಿನಿಂದ ಪೋಷಕರ ಆಕ್ರಂದನ ಮುಗಿಲು ಮುಟ್ಟಿದೆ.

 

Continue Reading

LATEST NEWS

Trending