ಮಂಗಳೂರು : ಈ ವರ್ಷದ ಕಂಬಳ ಸೀಸನ್ ನ ಮೊದಲ ಕಂಬಳ ನವೆಂಬರ್ 22 ಮತ್ತು 23 ರಂದು ಸಿದ್ದಕಟ್ಟೆಯಲ್ಲಿ ನಡೆಯಿತು. ಇದು ಎರಡನೇ ವರ್ಷದ ಸಿದ್ಧಕಟ್ಟೆ ಕೊಡಂಗೆ ‘ವೀರ – ವಿಕ್ರಮ’ ಜೋಡುಕರೆ ಕಂಬಳ ಆಗಿದ್ದು, ಬರೋಬ್ಬರಿ 166 ಜೊತೆ ಕೋಣಗಳು ಭಾಗವಹಿಸಿದ್ದವು. ಕನೆಹಲಗೆ 6 ಜೊತೆ, ಅಡ್ಡಹಲಗೆ 6 ಜೊತೆ, ಹಗ್ಗ ಹಿರಿಯ 15 ಜೊತೆ, ನೇಗಿಲು ಹಿರಿಯ 34 ಜೊತೆ, ಹಗ್ಗ ಕಿರಿಯ 27 ಜೊತೆ, ನೇಗಿಲು ಕಿರಿಯ 78 ಜೊತೆ ಕೋಣಗಳು ಪಾಲ್ಗೊಂಡಿದ್ದವು.
ಪ್ರಶಸ್ತಿ ವಿವರ :
ಕನೆಹಲಗೆ ವಿಭಾಗದಲ್ಲಿ ಬೋಳಾರ ತ್ರಿಶಾಲ್ ಕೆ. ಪೂಜಾರಿ ಪ್ರಥಮ, ವಾಮಂಜೂರು ತಿರುವೈಲು ಗುತ್ತು ಅಭಿಷೇಕ್ ನವೀನ್ ಚಂದ್ರ ಆಳ್ವ ದ್ವಿತೀಯ ಸ್ಥಾನ ಪಡೆದರು. ಅಡ್ಡ ಹಲಗೆ ವಿಭಾಗದಲ್ಲಿ ನಾರಾವಿ ಯುವರಾಜ್ ಜೈನ್ ಪ್ರಥಮ ಹಾಗೂ ಆಲದ ಪದವು ಮೇಗಿನ ಮನೆ ಅಜ್ಜಾಡಿ ಬಾಬು ರಾಜೇಂದ್ರ ಶೆಟ್ಟಿ ‘ಬಿ’ ಅವರು ದ್ವಿತೀಯ ಸ್ಥಾನಿಯಾದರು.
ಹಗ್ಗ ಹಿರಿಯ ವಿಭಾಗದಲ್ಲಿ ನಂದಳಿಕೆ ಶ್ರೀಕಾಂತ್ ಭಟ್ ‘ಎ’ ಕೋಣಗಳು ಪ್ರಥಮ ಹಾಗೂ ಕೊಳಕೆ ಇರ್ವತ್ತೂರು ಭಾಸ್ಕರ ಎಸ್ ಕೋಟ್ಯಾನ್ ದ್ವಿತೀಯ ಸ್ಥಾನ ಪಡೆದರು. ಹಗ್ಗ ಕಿರಿಯ ವಿಭಾಗದಲ್ಲಿ ಬೆಳುವಾಯಿ ಪೆರೋಡಿ ಪುತ್ತಿಗೆ ಗುತ್ತು ಕೌಶಿಕ್ ದಿನಕರ ಬಿ. ಶೆಟ್ಟಿ ಪ್ರಥಮ, ಸುರತ್ಕಲ್ ಪಾಂಚಜನ್ಯ ಯೋಗೀಶ್ ಪೂಜಾರಿ ‘ಎ’ ಕೋಣಗಳು ದ್ವಿತೀಯ ಸ್ಥಾನ ಪಡೆದಿವೆ.
ಇದನ್ನೂ ಓದಿ: WATCH : ಚಲಿಸುತ್ತಿದ್ದ ರೈಲಿನಿಂದ ಹಾರಿದ ಮಹಿಳೆಯ ರಕ್ಷಿಸಿದ ರೈಲ್ವೇ ಸಿಬ್ಬಂದಿ
ನೇಗಿಲು ಹಿರಿಯ ವಿಭಾಗದಲ್ಲಿ ಹೊಸ್ಮಾರು ಸೂರ್ಯ ಶ್ರೀ ರತ್ನ ಸದಾಶಿವ ಶೆಟ್ಟಿ ಪ್ರಥಮ ಹಾಗೂ ಕಕ್ಕೆಪದವು ಪೆಂರ್ಗಾಲು ಬಾಬು ತನಿಯಪ್ಪ ಗೌಡ ದ್ವಿತೀಯ ಸ್ಥಾನ ಗೆದ್ದಿದ್ದಾರೆ. ನೇಗಿಲು ಕಿರಿಯ ವಿಭಾಗದಲ್ಲಿ ಮುನಿಯಾಲು ಉದಯ ಕುಮಾರ್ ಶೆಟ್ಟಿ ಪ್ರಥಮ ಹಾಗೂ ಎರ್ಮಾಳ್ ಪುಚ್ಚೊಟ್ಟು ಬೀಡು ಬಾಲಚಂದ್ರ ಲೋಕಯ್ಯ ಶೆಟ್ಟಿ ‘ಎ’ ಕೋಣಗಳು ದ್ವಿತೀಯ ಸ್ಥಾನ ಪಡೆದಿವೆ.