Thursday, August 11, 2022

ವಿಟ್ಲ: ಮೀನಿನ ವ್ಯಾಪಾರಿ ಅಪಹರಣ-ದೂರು ದಾಖಲು

ವಿಟ್ಲ: ಮೀನಿನ ವ್ಯಾಪಾರಿಯೊಬ್ಬರನ್ನು ಅಪರಿಚಿತರ ತಂಡಯೊಂದು ಅಪಹರಣ ಮಾಡಿರುವ ಬಗ್ಗೆ ವಿಟ್ಲ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.


ಕೊಳ್ನಾಡು ಗ್ರಾಮದ ಕೆ ಪಿ ಬೈಲು ನಾರ್ಶ ನಿವಾಸಿ ಮಹಮ್ಮದ್ ಅನ್ಸಾರ್(34) ಅಪಹರಣಗೊಳಗಾದ ವ್ಯಕ್ತಿಯಾಗಿದ್ದು, ಈ ಬಗ್ಗೆ ಅವರ ಪತ್ನಿ ಅಪ್ಸ ಅವರು ವಿಟ್ಲ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.
ಮೊಹಮ್ಮದ್‌ ಅನ್ಸಾರ್‌ ಮೀನಿನ ವ್ಯಾಪಾರದಲ್ಲಿ ನಷ್ಟ ಉಂಟಾಗಿ ಬೇರೆ ವ್ಯವಹಾರ ಮಾಡುತ್ತೇನೆಂದು 2 ತಿಂಗಳ ಹಿಂದೆ ಕೇರಳಕ್ಕೆ ಹೋಗುವುದಾಗಿ ತಿಳಿಸಿ ಹೋದವರು

ಕೆಲ ದಿನ ಒಂದು ಬಾರಿ ಪತ್ನಿಗೆ ಕರೆ ಮಾಡುತ್ತಿದ್ದರು. ಬಳಿಕ ಮರಳಿ ಮನೆಗೆ ಮರಳಿದ್ದರು.

ಮನೆಗೆ ಬಂದ ಮೇಲೆ ಪತ್ನಿ ಮನೆಯಲ್ಲಿ ಇಲ್ಲದಿದ್ದಾಗ ಮೊಹಮ್ಮದ್‌ ಅನ್ಸಾರ್ ಅವರನ್ನು ಅಪರಿಚಿತರು ಬಲವಂತವಾಗಿ ಕರೆದುಕೊಂಡು ಕಾರಿನಲ್ಲಿ ಕುಳ್ಳಿರಿಸಿ ಅಪಹರಿಸಿಕೊಂಡು ಹೋಗಿರುವುದಾಗಿ ದೂರಿನಲ್ಲಿ ತಿಳಿಸಲಾಗಿದೆ.

ಈ ಬಗ್ಗೆ ಪ್ರಕರಣ ದಾಖಲಿಸಿಕೊಂಡ ವಿಟ್ಲ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

LEAVE A REPLY

Please enter your comment!
Please enter your name here

Hot Topics

ACBಯನ್ನು ಕಿತ್ತೆಸೆದ ಹೈಕೋರ್ಟ್‌

ಬೆಂಗಳೂರು: ಸಿದ್ಧರಾಮಯ್ಯ ಅವರ ಅವಧಿಯಲ್ಲಿ ಸರ್ಕಾರ ಹುಟ್ಟುಹಾಕಿದ್ದ ಕರ್ನಾಟಕ ಭ್ರಷ್ಟಾಚಾರ ನಿಗ್ರಹ ದಳವನ್ನು (ಎಸಿಬಿ) ಕರ್ನಾಟಕ ಹೈಕೋರ್ಟ್‌ ರದ್ದುಪಡಿಸಿ ಆದೇಶ ಹೊರಡಿಸಿದೆ.ಅಲ್ಲದೇ ಎಸಿಬಿಯಲ್ಲಿ ಬಾಕಿ ಉಳಿದಿರುವ ಎಲ್ಲಾ ಪ್ರಕರಣಗಳನ್ನು ಕರ್ನಾಟಕ ಲೋಕಾಯುಕ್ತ ಪೊಲೀಸ್...

ಬೆಳ್ತಂಗಡಿ: ಸಾರ್ವಜನಿಕ ಗಣೇಶೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

ಬೆಳ್ತಂಗಡಿ: ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ಬಳಂಜ, ನಾಲ್ಕೂರು,ತೆಂಕಕಾರಂದೂರು ಇದರ ವತಿಯಿಂದ ನಡೆಯುವ 35 ನೇ ವರ್ಷದ ಗಣೇಶೋತ್ಸವದ ಆಮಂತ್ರಣ ಪತ್ರಿಕೆಯನ್ನು ಉಭಯ ಜಿಲ್ಲಾ ಜನಜಾಗೃತಿ ವೇದಿಕೆಯ ಸ್ಥಾಪಕಾಧ್ಯಕ್ಷ ಕೆ.ವಸಂತ ಸಾಲಿಯಾನ್  ಬಳಂಜದಲ್ಲಿ ...

ಸ್ವಾತಂತ್ರ್ಯ ಸಂಭ್ರಮಕ್ಕೆ ಅಹಿತಕರ ಘಟನೆ ಆಗದಂತೆ ದ.ಕದಲ್ಲಿ ಟೈಟ್ ಸೆಕ್ಯೂರಿಟಿ

ಮಂಗಳೂರು: ಸ್ವಾತಂತ್ರ್ಯೋತ್ಸವದ ಅಮೃತೋತ್ಸವಕ್ಕೆ ದಕ್ಷಿಣ ಕನ್ನಡ ಜಿಲ್ಲಾಡಳಿತದಿಂದ ಸಿದ್ಧತೆಗಳು ಭರದಿಂದ ನಡೆಯುತ್ತಿದ್ದು, ಇನ್ನೊಂದೆಡೆ ಪೊಲೀಸರು ಬಂದೋಬಸ್ತು ಬಿಗಿಗೊಳಿಸಿದ್ದಾರೆ.ಯಾವುದೇ ಸಂಭಾವ್ಯ ಅಹಿತಕರ ಘಟನೆಗಳನ್ನು ನಿಯಂತ್ರಿಸುವ ನಿಟ್ಟಿನಲ್ಲಿ ಪೊಲೀಸರು ಬಿಗಿ ಕಣ್ಗಾವಲು ಇರಿಸಿದ್ದಾರೆ. ಜಿಲ್ಲಾದ್ಯಂತ ಪ್ರಮುಖ...