Saturday, October 1, 2022

ಉಡುಪಿ: ಮೀನಿನ ಟೆಂಪೋ ಪಲ್ಟಿ-ಚಾಲಕನಿಗೆ ಗಾಯ

ಉಡುಪಿ: ಚಾಲಕನ ನಿಯಂತ್ರಣ ತಪ್ಪಿದ ಮೀನಿನ ಟೆಂಪೋ ರಸ್ತೆಯಲ್ಲಿ ಮಗುಚಿ ಬಿದ್ದ ಘಟನೆ ಉಡುಪಿಯ ಪಡುಬಿದ್ರಿ ರಾಷ್ಟ್ರಿಯ ಹೆದ್ದಾರಿ 66ರ ಪೆಟ್ರೋಲ್ ಪಂಪ್ ಎದುರು ಇಂದು ಬೆಳಿಗ್ಗೆ ಸಂಭವಿಸಿದೆ.


ಮಲ್ಪೆಯಿಂದ ಮಂಗಳೂರು ಕಡೆ ಗೊಬ್ಬರದ ಮೀನನ್ನು ಹೇರಿಕೊಂಡು ಸಾಗುತ್ತಿದ್ದ ಟೆಂಪೋ ಚಾಲಕನ ನಿಯಂತ್ರಣ ತಪ್ಪಿ ಹೆದ್ದಾರಿಯಲ್ಲಿ ಮಗುಚಿ ಬಿದ್ದಿದೆ.


ಟೆಂಪೋ ಚಾಲಕನಿಗೆ ಸಣ್ಣ ಪ್ರಮಾಣದ ಗಾಯವಾಗಿದೆ. ಹೆಜಮಾಡಿ ಟೋಲ್ ಸಿಬ್ಬಂದಿ ಸ್ಥಳಕ್ಕೆ ಆಗಮಿಸಿ, ಹೆದ್ದಾರಿಯಿಂದ ವಾಹನವನ್ನು ತೆರವುಗೊಳಿಸಿ ಸುಗಮ ಸಂಚಾರಕ್ಕೆ ಆನುವು ಮಾಡಿದ್ದಾರೆ.


ಸ್ಥಳಕ್ಕೆ ಪಡುಬಿದ್ರಿ ಠಾಣಾಧಿಕಾರಿ ಪುರುಷೋತ್ತಮ ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.

LEAVE A REPLY

Please enter your comment!
Please enter your name here

Hot Topics

ಬಂಟ್ವಾಳ: ಬಸ್ & ಸ್ಕೂಟರ್ ಢಿಕ್ಕಿ-ಸವಾರನಿಗೆ ಗಂಭೀರ ಗಾಯ

ಬಂಟ್ವಾಳ: ಬಸ್ಸು ಮತ್ತು ಸ್ಕೂಟರ್ ನಡುವೆ ಭೀಕರ ಅಪಘಾತ ಸಂಭವಿಸಿ ಗಂಭೀರ ಗಾಯಗೊಂಡ ಬೈಕ್ ಸವಾರ ಆಸ್ಪತ್ರೆಗೆ ದಾಖಲಾದ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಜಕ್ರಿಬೆಟ್ಟು ಎಂಬಲ್ಲಿ ನಡೆದಿದೆ.ಅಪಘಾತದಲ್ಲಿ ಬೈಕ್...

ಗಂಗೊಳ್ಳಿ ಮೀನುಗಾರಿಕಾ ಜೆಟ್ಟಿ ಕುಸಿತ ಪ್ರದೇಶಕ್ಕೆ ಸಚಿವ ಅಂಗಾರ ಭೇಟಿ

ಬೈಂದೂರು: ಉಡುಪಿ ಜಿಲ್ಲೆ ಗಂಗೊಳ್ಳಿ ಮೀನುಗಾರಿಕಾ ಬಂದರಿನ ನಿರ್ಮಾಣ ಹಂತದ ಜೆಟ್ಟಿ ಕುಸಿತವಾದ ಪ್ರದೇಶಕ್ಕೆ ಮೀನುಗಾರಿಕಾ ಸಚಿವ ಎಸ್. ಅಂಗಾರ ಅವರು ಭೇಟಿ ನೀಡಿ ಪರಿಶೀಲಿಸಿದರು.ನಂತರ ಮಾತನಾಡಿದ ಅವರು 'ಜೆಟ್ಟಿಯ 150 ಮೀಟರಿಗೂ...

ಮಂಗಳೂರು ತಹಶೀಲ್ದಾರ್ ಕಚೇರಿಯಲ್ಲಿ ಲೋಕಾಯುಕ್ತ ರೈಡ್ : ಪಕ್ಕದ RTO ಆಫಿಸ್ ಫುಲ್ ಖಾಲಿ..!  

ಮಂಗಳೂರು : ಮಂಗಳೂರಿನಲ್ಲಿ ಇಂದು ಲೋಕಾಯುಕ್ತ ಪೊಲೀಸರು ದಾಳಿ ನಡೆಸಿ ಅಧಿಕಾರಿಯ ಸಹಾಯಕನನ್ನು ರೆಡ್ ಹ್ಯಾಂಡಾಗಿ ಹಿಡಿದಿದ್ದಾರೆ.   ಇತ್ತ ತಹಶೀಲ್ದಾರ್ ಕಚೇರಿಯಲ್ಲಿ ಲೋಕಾಯುಕ್ತ ರೈಡ್ ಆಗಿ ಸಹಾಯಕ ಶಿವಾನಂದ ರೆಡ್ ಹ್ಯಾಂಡಾಗಿ ಸಿಕ್ಕಿ...