ಆಂಧ್ರಪ್ರದೇಶ: ಮೀನು ತುಂಬಿಕೊಂಡು ಹೋಗುತ್ತಿದ್ದ ಟ್ರಕ್ ಪಲ್ಟಿಯಾಗಿ ನಾಲ್ವರು ಸ್ಥಳದಲ್ಲೇ ಸಾವನ್ನಪ್ಪಿದ್ದು, ಮೂರು ಮಂದಿ ಗಂಭೀರ ಗಾಯಗೊಂಡ ಘಟನೆ ಆಂದ್ರಪ್ರದೇಶದ ತಡೆಪಲ್ಲಿಗುಡೆಂನಲ್ಲಿ ಇಂದು ಸಂಭವಿಸಿದೆ.
ಇಂದು ಮುಂಜಾನೆ ಪಶ್ಚಿಮ ಗೋದಾವರಿ ಜಿಲ್ಲೆಯ ತಡೆಪಲ್ಲಿಗುಡೆಂನಲ್ಲಿ ಮೀನು ತುಂಬಿಕೊಂಡು ಹೋಗುತ್ತಿದ್ದ ಟ್ರಕ್ ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾಗಿದೆ. ಅಪಘಾತದಲ್ಲಿ ನಾಲ್ವರು ಸ್ಥಳದಲ್ಲೇ ಸಾವನ್ನಪ್ಪಿದ್ದು, ಮೂರು ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ. ಸ್ಥಳೀಯರು ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಿದ್ದಾರೆ.
ಈ ಕುರಿತು ಮಾಹಿತಿ ಪಡೆದ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡಿದ್ದು, ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗಾಗಿ ಆಸ್ಪತ್ರೆಗೆ ಕಳುಹಿಸಲಾಗಿದೆ. ಚಾಲಕನ ತೂಕಡಿಕೆ ಘಟನೆಗೆ ಕಾರಣ ಎಂದು ಪ್ರಾಥಮಿಕ ವರದಿ ತಿಳಿಸಿದೆ.