Connect with us

DAKSHINA KANNADA

ಮಾರಾಟಕ್ಕೆ ಸಮಯಾವಕಾಶ ವಿಸ್ತರಿಸುವಂತೆ  ಮೀನುಗಾರ ಮಹಿಳೆಯರ ಮನವಿ..!

Published

on

 ಉಡುಪಿ: ಕೊರೋನಾದಿಂದ  ಜನಸಾಮಾನ್ಯರ ಜೀವನ ದುಸ್ತರವಾಗಿದೆ. ಅದರಲ್ಲೂ ದುಡಿದು ತಿನ್ನುವ ವರ್ಗ ಸಂಕಷ್ಟಕ್ಕೆ ಈಡಾಗಿದೆ. ಕರಾವಳಿಯ ಆರ್ಥಿಕತೆಗೆ ಅತಿದೊಡ್ಡ ಕೊಡುಗೆ ನೀಡುತ್ತಿರುವ ಮೀನುಗಾರಿಕಾ ವಲಯವಂತೂ ತೀವ್ರ ನಷ್ಟ ಅನುಭವಿಸಿದೆ.

ಉಡುಪಿ ಜಿಲ್ಲೆಯ ಮಲ್ಪೆ ಬಂದರು ಅತಿ ದೊಡ್ಡ ಬಂದರು.ವರ್ಷದ 365 ದಿನವೂ ಇಲ್ಲಿ ಮೀನುಗಾರಿಕೆ ಸಂಬಂಧಿತ ಚಟುವಟಿಕೆಗಳು ನಡೆಯುತ್ತವೆ. 

ಆದರೆ ಲಾಕ್ಡೌನ್ ಘೋಷಣೆ ಆದನಂತರ ಮೀನುಗಾರಿಕಾ ಚಟುವಟಿಕೆ ಬಹುತೇಕ ಸ್ಥಗಿತಗೊಂಡಿದೆ. 10 ಗಂಟೆ ಹೊತ್ತಿಗೆ ಮಲ್ಪೆ ಬಂದರು ಖಾಲಿಯಾಗಿಬಿಡುತ್ತದೆ. 5:00 ರಿಂದ 10 ಗಂಟೆಯವರೆಗೆ ಮಾತ್ರ ಸದ್ಯ ಮೀನುಗಾರಿಕಾ ಚಟುವಟಿಕೆ ನಡೆಸಲಾಗುತ್ತಿದೆ ಮೀನುಗಾರಿಕೆಯನ್ನು ಕೂಡ ಕೃಷಿ ಎಂದು ಪರಿಗಣಿಸಿ ಹೆಚ್ಚಿನ ಸಮಯಾವಕಾಶ ನೀಡಬೇಕು ಎಂದು ಮೀನುಗಾರರು ಒತ್ತಾಯಿಸಿದ್ದಾರೆ.

ಮೀನು ಮಾರುಕಟ್ಟೆಗಳು 10 ಗಂಟೆಗೆ ಬಂದ್ ಆಗುತ್ತೆ ಇದರಿಂದ ಕಡಲಿನಿಂದ ತಂದ ಮೀನುಗಳು ಮಾರುಕಟ್ಟೆಯ ಮೂಲಕ ಗ್ರಾಹಕರಿಗೆ ತಲುಪಲು ಸಾಧ್ಯವಾಗುತ್ತಿಲ್ಲ.

 

ಮೀನಿನ ದರದಲ್ಲೂ ವ್ಯತ್ಯಾಸವಾಗಿದೆ ಕರಾವಳಿಯ ಆರ್ಥಿಕತೆಗೆ ಇದರಿಂದ ಭಾರೀ ಹೊಡೆತ ಬಿದ್ದಿದೆ. ಕನಿಷ್ಠಪಕ್ಷ 11 ಗಂಟೆಯವರೆಗಾದರೂ ಮೀನುಗಾರಿಕಾ ಚಟುವಟಿಕೆ ನಡೆಸಲು ಅವಕಾಶ ಕೊಡಿ ಎಂದು ಮೀನು ಮಾರಾಟಗಾರರು ಒತ್ತಾಯ ಮಾಡಿದ್ದಾರೆ…

Click to comment

Leave a Reply

Your email address will not be published. Required fields are marked *

DAKSHINA KANNADA

ಬೈಕ್-ಕಾರು ನಡುವೆ ಅಪ*ಘಾತ; ಓರ್ವ ಮೃ*ತ್ಯು

Published

on

ಅರಂತೋಡು: ಬೈಕ್ ಹಾಗೂ ಕಾರಿನ ನಡುವೆ ಸಂಭವಿಸಿದ ಭೀಕರ ರಸ್ತೆ ಅಪ*ಘಾತದಲ್ಲಿ ಬೈಕ್‌ನ ಹಿಂಬದಿ ಸವಾರ ಮೃ*ತಪಟ್ಟ ಘಟನೆ ಸಂಪಾಜೆ ಕಲ್ಲುಗುಂಡಿ ಸಮೀಪ ದೊಡ್ಡಡ್ಕ ಎಂಬಲ್ಲಿ ಗುರುವಾರ ತಡರಾತ್ರಿ ಸಂಭವಿಸಿದೆ.


ಮತದಾನ ಮಾಡಲು ಊರಿಗೆ ಬರುತ್ತಿದ್ದರು ಎಂದು ಹೇಳಲಾಗುತ್ತಿದ್ದು ಡಿ*ಕ್ಕಿಯ ರಭಸಕ್ಕೆ ಬೈಕ್‌ನ ಹಿಂಬದಿ ಸವಾರನಿಗೆ ಗಂಭೀರ ಗಾಯಗೊಂಡು ಮೃ*ತಪಟ್ಟರೆ ಇನ್ನೋರ್ವನಿಗೆ ಗಾಯವಾಗಿದ್ದು ಆತನನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.

ಮೃ*ತರ ವಿವರ ಇನ್ನಷ್ಟೇ ತಿಳಿದುಬರಬೇಕಾಗಿದೆ.

Continue Reading

DAKSHINA KANNADA

ಮಂಗಳೂರು: 30.98% ಮತದಾರರಿಂದ ಮತ ಚಲಾವಣೆ

Published

on

ಮಂಗಳೂರು: 17-ದ.ಕ ಲೋಕಸಭಾ ಕ್ಷೇತ್ರದಲ್ಲಿ ಬೆಳಿಗ್ಗೆ 9 ಗಂಟೆಯವರೆಗೆ 30.98 ಪ್ರತಿಶತ ಮತದಾರರು ಮತ ಚಲಾವಣೆ ಮಾಡಿದ್ದಾರೆ.

ಸುಳ್ಯದಲ್ಲಿ ಅತಿ ಹೆಚ್ಚು ಮತ ಚಲಾವಣೆಯಾಗಿದ್ದು, 16.46 ಪ್ರತಿಶತ ಮತದಾರರು ಮತ ಚಲಾವಣೆ ಮಾಡಿದ್ದಾರೆ. ಮೂಡುಬಿದಿರೆ ಕ್ಷೇತ್ರದಲ್ಲಿ ಅತಿ ಕನಿಷ್ಠ ಮತ ಚಲಾವಣೆಯಾಗಿದ್ದು, 12.2 ಪ್ರತಿಶತ ಮತದಾರರು ಮತ ಚಲಾಯಿಸಿದ್ದಾರೆ.

ಇನ್ನು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಬಿಸಿಲಿನ ಬೇಗೆಗೆ ಕಾರ್ ಸ್ಟ್ರೀಟ್ ಸರ್ಕಾರಿ ಬಾಲಕಿಯರ ಎಪಿಯು ಕಾಲೇಜಿನಲ್ಲಿ ಮತದಾರರು ಬಿಸಿಲಿನಿಂದ ತಪ್ಪಿಸಿಕೊಳ್ಳಲು ಛತ್ರಿ ಹಿಡಿದು ಮತದಾನ ಮಾಡಲು ಸರತಿ ಸಾಲಿನಲ್ಲಿ ನಿಂತ ದೃಶ್ಯ ಕಂಡುಬಂತು.

Continue Reading

DAKSHINA KANNADA

ಮಂಗಳೂರು: ಮತಗಟ್ಟೆಯಲ್ಲಿ ಬಿಜೆಪಿ ಕಾರ್ಯಕರ್ತರ ಗೂಂಡಾಗಿರಿ; ಪೊಲೀಸ್ ಅಧಿಕಾರಿಗಳ ಜೊತೆಯಲ್ಲೇ ಅನುಚಿತ ವರ್ತನೆ

Published

on

ಮಂಗಳೂರು: ನಗರದ ಕಪಿತಾನಿಯೋ ಮತಗಟ್ಟೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಮತ ಚಲಾಯಿಸಿದ ಬಳಿಕ ಮಾಧ್ಯಮ ಪ್ರತಿನಿಧಿ ಜೊತೆ ಪ್ರತಿಕ್ರಿಯೆ ನೀಡುತ್ತಿದ್ದ ವೇಳೆ ಬಿಜೆಪಿ ಕಾರ್ಯಕರ್ತನೊಬ್ಬ ಪೊಲೀಸ್ ಹಾಗೂ ಪತ್ರಕರ್ತರೊಂದಿಗೆ ಅನುಚಿತವಾಗಿ ವರ್ತಿಸಿ ವಾಗ್ವಾದವುಂಟಾದ ಘಟನೆ ನಡೆಯಿತು.

ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್. ಆರ್ ಪೂಜಾರಿಯವರು ಮತದಾನ ಮಾಡಿ ಹೊರಬಂದಾಗ ಮಾಧ್ಯಮದವರು ಗೇಟಿನ ಹೊರಭಾಗದಲ್ಲಿ ಅವರ ಹೇಳಿಕೆ ತೆಗೆದುಕೊಳ್ಳುತ್ತಿದ್ದರು. ಆಗ “ಎಷ್ಟು ಹೊತ್ತು ಪ್ರತಿಕ್ರಿಯೆ ಪಡೆಯುವುದು”ಎಂದು ಸಂದೀಪ್ ಎಕ್ಕೂರು ಎಂಬಾತ ಕ್ಯಾತೆ ತೆಗೆದಿದ್ದಾನೆ. ಈ ವೇಳೆ ಅಲ್ಲಿಯೇ ಇದ್ದ ಪೊಲೀಸ್ ಇನ್ಸ್ ಪೆಕ್ಟರ್ ಟಿ.ಡಿ.ನಾಗರಾಜ್ ಸೇರಿದಂತೆ ಇತರ ಪೊಲೀಸರು ಆತನನ್ನು ತಳ್ಳಿಕೊಂಡು ಒಂದಷ್ಟು ದೂರ ಹೋಗಿದ್ದಾರೆ. ಈ ವೇಳೆ ಆತನೊಂದಿಗೆ ಇದ್ದವರು ಸಮಾಧಾನ ಮಾಡಲು ಯತ್ನಿಸಿದರೂ, ಆತ ಪೊಲೀಸರೊಂದಿಗೆ ಅನುಚಿತವಾಗಿ ವರ್ತಿಸಿ, ವಾಗ್ವಾದ ನಡೆಸಿದ್ದಾನೆ. ಆಗ ಪೊಲೀಸ್ ಇನ್ಸ್ ಪೆಕ್ಟರ್ ಟಿ.ಡಿ.ನಾಗರಾಜ್ ಎಚ್ಚರಿಕೆ ನೀಡಿ ಕಳಿಸಿದ್ದಾರೆ.

ಪೊಲೀಸರು ಅಲ್ಲಿಂದ ಹಿಂದಿರುಗಿದ ಬಳಿಕ ತಂಡದಲ್ಲಿದ್ದ ಮತ್ತೊಬ್ಬ ಘಟನೆಯ ದೃಶ್ಯ ಚಿತ್ರೀಕರಿಸುತ್ತಿದ್ದ ಮಾಧ್ಯಮ ವರದಿಗಾರರ ಮೇಲೆ ಹರಿಹಾಯ್ದಿದ್ದಾನೆ. ಈ ವೇಳೆ ಪತ್ರಕರ್ತರೊಂದಿಗೂ ತಂಡದಿಂದ ವಾಗ್ವಾದ ನಡೆದಿದೆ. ಈ ವೇಳೆ ಸ್ಥಳದಲ್ಲಿ ಸ್ವಲ್ಪ ಗೊಂದಲದ ವಾತಾವರಣ ಸೃಷ್ಟಿಯಾಗಿತ್ತು. ಸಂಜೆ ವೇಳೆ ಆತನ ಮೇಲೆ ಪ್ರಕರಣ ದಾಖಲಿಸಿ ಅರೆಸ್ಟ್ ಮಾಡುತ್ತೇನೆ ಎಂದು ಪೊಲೀಸ್ ಇನ್ಸ್ ಪೆಕ್ಟರ್ ಟಿ.ಡಿ.ನಾಗರಾಜ್ ಎಚ್ಚರಿಕೆ ನೀಡಿದ ಬಳಿಕ ಪರಿಸ್ಥಿತಿ ಶಾಂತವಾಯಿತು.

Continue Reading

LATEST NEWS

Trending