Tuesday, October 19, 2021

ಉಡುಪಿ: ದೋಣಿ ದುರಂತದಲ್ಲಿ ನಾಪತ್ತೆಯಾಗಿದ್ದ ಇಬ್ಬರು ಮೀನುಗಾರರ ಶವ ಪತ್ತೆ

ಉಡುಪಿ: ಜಿಲ್ಲೆಯ ಬೈಂದೂರಿನಲ್ಲಿ ನಿನ್ನೆ ನಡೆದ ದೋಣಿ ದುರಂತದಲ್ಲಿ ನಾಪತ್ತೆಯಾಗಿದ್ದ ಇಬ್ಬರು ಮೀನುಗಾರರ ಶವ ಇಂದು ಪತ್ತೆಯಾಗಿದೆ.


ಚರಣ್ ಹಾಗೂ ಅಣ್ಣಪ್ಪ ದುರಂತದಲ್ಲಿ ಮೃತಪಟ್ಟ ಮೀನುಗಾರರು.

ನಿನ್ನೆ ಬೈಂದೂರು ತಾಲೂಕಿನ ತಾರಾಪತಿಯ ಚರಣ್ ಖಾರ್ವಿ ಎಂಬುವವರಿಗೆ ಸೇರಿದ ಜಯಗುರೂಜಿ ಎಂಬ ಹೆಸರಿನ ದೋಣಿಯಲ್ಲಿ ದೋಣಿ ಮಾಲಿಕ ಚರಣ್ ಸಹಿತ ಒಟ್ಟು ಎಳು ಮಂದಿ ಮೀನುಗಾರಿಕೆಗೆ ತೆರಳಿದ್ದರು.

ಮೀನುಗಾರಿಕೆ ಮುಗಿಸಿ ಸಂಜೆ ದಡಕ್ಕೆ ಹಿಂದಿರುಗುತ್ತಿದ್ದಾಗ ಅಲೆಗಳ ರಭಸಕ್ಕೆ ಸಿಕ್ಕಿ ದೋಣಿ ಮಗುಚಿ ಬಿದಿದ್ದು,

ಈ ವೇಳೆ ದೋಣಿಯಲ್ಲಿದ್ದ ವಿಜೇತ್, ಪ್ರವೀಣ, ಸಚಿನ್, ಸುಮಂತ, ವಾಸುದೇವ ಖಾರ್ವಿ ಈಜಿ ದಡ ಸೇರಿದ್ದು, ಚರಣ್ ಹಾಗೂ ಅಣ್ಣಪ್ಪ ನಾಪತ್ತೆ ಆಗಿದ್ದರು.

ರಾತ್ರಿಯಿಂದ ಹುಡುಕಾಟ ನಡೆಸಿದ, ಕರಾವಳಿ ಕಾವಲು ಪಡೆಯವರು ಇಬ್ಬರು ಮೀನುಗಾರರ ಶವವನ್ನು ಇಂದು ಮೇಲಕ್ಕೆ ಎತ್ತಿದ್ದಾರೆ.

ಸ್ಥಳಕ್ಕೆ ಭೇಟಿ ನೀಡಿದ ಬೈಂದೂರು ಶಾಸಕ ಸುಕುಮಾರ್ ಶೆಟ್ಟಿ, ಮೃತ ಮೀನುಗಾರರ ಕುಟುಂಬಕ್ಕೆ ಆರು ಲಕ್ಷ ಸರ್ಕಾರದ ಹಾಗೂ ವೈಯಕ್ತಿಕ ಪರಿಹಾರದ ಭರವಸೆ ನೀಡಿದರು. ಬೈಂದೂರು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Hot Topics

ಸಾಲದ ಹೊರೆ ತಾಳಲಾರದೆ ವೀಡಿಯೋ ಮೂಲಕ ಗುಡ್​ಬೈ ಹೇಳಿ ಶಿಕ್ಷಕ ದಂಪತಿ ಆತ್ಮಹತ್ಯೆ

ವಿಜಯವಾಡ: ಶಾಲೆ ನಡೆಸುತ್ತಿದ್ದ ಶಿಕ್ಷಕ ದಂಪತಿ ಸಾಲದ ಹೊರೆ ತಡೆಯಲಾರದೇ ವಿಷಸೇವಿಸಿ ಆತ್ಮಹತ್ಯೆ ಹಾದಿ ಹಿಡಿರುವ ದಾರುಣ ಘಟನೆ ಆಂಧ್ರ ಪ್ರದೇಶದ ಕರ್ನೂಲ್​ ಜಿಲ್ಲೆಯಲ್ಲಿ ನಡೆದಿದೆ. ಸಾವಿಗೂ ಮುನ್ನ ಶಿಕ್ಷಕ ದಂಪತಿ ತಮ್ಮ...

ಕಾಪುವಿನಲ್ಲಿ ಕಾರು ಅಪಘಾತ ಗಂಭೀರವಾಗಿ ಗಾಯಗೊಂಡಿದ್ದ ಯುವತಿ ಸಾವು..!

ಕಾಪುವಿನಲ್ಲಿ ಕಾರು ಅಪಘಾತ ಗಂಭೀರವಾಗಿ ಗಾಯಗೊಂಡಿದ್ದ ಯುವತಿ ಸಾವು..! ಉಡುಪಿ : ಉಡುಪಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಭಾರಿ ಮಳೆಯ ನಡುವೆ ಭೀಕರ ರಸ್ತೆ ಅಪಘಾತ ಸಂಭವಿಸಿದೆ. ಚಾಲಕನ ನಿಯಂತ್ರಣ ತಪ್ಪಿದ ಕಾರೊಂದು ಕಾಪು ಬಳಿ...

ಮಗು ಸೇರಿದಂತೆ ದಂಪತಿ ಸಾಮೂಹಿಕ ಆತ್ಮಹತ್ಯೆ ಹಳೆಯಂಗಡಿಯಲ್ಲಿ ಹೃದಯ ವಿದ್ರಾವಕ ಘಟನೆ..!

ಮಗು ಸೇರಿದಂತೆ ದಂಪತಿ ಸಾಮೂಹಿಕ ಆತ್ಮಹತ್ಯೆ ಹಳೆಯಂಗಡಿಯಲ್ಲಿ ಹೃದಯ ವಿದ್ರಾವಕ ಘಟನೆ..! ಮಂಗಳೂರು:  ಎಂಟು ವರ್ಷದ ಮಗು ಸೇರಿದಂತೆ ದಂಪತಿ ಸಾಮೂಹಿಕ ಆತ್ಮಹತ್ಯೆ ಮಾಡಿರುವ ದಾರುಣ ಘಟನೆ ಹಳೆಯಂಗಡಿ ಬಳಿಯ ಕಲ್ಲಾಪು ರೈಲ್ವೇ ಗೇಟ್...