ಸಮುದ್ರದಲ್ಲಿ 30 ಗಂಟೆಗಳ ಕಾಲ ಪಾತಿ ದೋಣಿಯಲ್ಲಿ ಜೀವ ಉಳಿಸಿಕೊಂಡ ಮೀನುಗಾರ..!
ಉಡುಪಿ ಸೆಪ್ಟೆಂಬರ್ 8: ಮೀನುಗಾರಿಕೆಗೆ ತೆರಳಿದ್ದ ಬೋಟ್ ನಿಂದ ನಾಪತ್ತೆಯಾಗಿದ್ದ ಮೀನುಗಾರ 30 ಗಂಟೆಗಳ ನಂತರ ಇಂದು ಮಲ್ಪೆಯಲ್ಲಿ ಪತ್ತೆಯಾಗಿದ್ದಾರೆ.
ನಿನ್ನೆ ರಾತ್ರಿ ನಾಪತ್ತೆಯಾಗಿದ್ದ ಉಳ್ಳಾಲ ಹೊಗೆ ನಿವಾಸಿ ಆರ್ಥರ್ ಸುನಿಲ್ ಕುವೆಲ್ಲೋ (45) ಇಂದು ಮಲ್ಪೆ ಬಳಿ ಪತ್ತೆಯಾಗಿದ್ದಾರೆ. ಪರ್ಸಿನ್ ಬೋಟ್‌ನಲ್ಲಿ ಉಳ್ಳಾಲ ಉಳಿಯದ 29 ಮಂದಿ ಮೀನುಗಾರಿಕೆಗೆ ತೆರಳಿದ್ದರು.
ಬೆಳಗ್ಗೆ ಸುಮಾರು 11.30ಕ್ಕೆ ಬೋಟ್‌ನ ಬೆಲ್ಟ್ ತುಂಡಾಗಿದ್ದು, ಈ ಸಂದರ್ಭದಲ್ಲಿ ಸಮುದ್ರಕ್ಕೆ ಬೀಸಿದ್ದ ಬಲೆ ಸಂಪೂರ್ಣ ಮುದ್ದೆಯಾಗಿತ್ತು. ಮೀನುಗಾರರು ರಾತ್ರಿವರೆಗೆ ಬಲೆಯನ್ನು ಬಿಡಿಸುವ ಕಾಯಕದಲ್ಲಿ ತೊಡಗಿದ್ದರು
ರಾತ್ರಿ 12 ಗಂಟೆ ಸುಮಾರಿಗೆ ಗಾಳಿ ಮಳೆ ಹೆಚ್ಚಾಗಿ ಬೋಟ್ ಗೆ ಕಟ್ಟಿದ್ದ ಪಾತಿ ಹಗ್ಗ ತುಂಡಾಗಿ ಸಮುದ್ರ ಪಾಲಾಯಿತು.
ಸುನಿಲ್ ಅವರು ಬಲೆ ಎಳೆಯಲೆಂದು ಪಾತಿಯಲ್ಲಿ ಕುಳಿತಿದ್ದರು. ಬೋಟ್‌ನ ತಾಂತ್ರಿಕ ತೊಂದರೆಯಿಂದಾಗಿ ರಕ್ಷಿಸಲು ಸಾಧ್ಯವಾಗಿಲ್ಲ. ಸೋಮವಾರ ಹಗಲಿಡೀ ಸಮುದ್ರದಲ್ಲಿ ಹುಡುಕಾಡಿದ್ದು ರಾತ್ರಿ ಉಳ್ಳಾಲ ನಾಪತ್ತೆ ಪ್ರಕರಣ ದಾಖಲಿಸಲಾಗಿದೆ.
ಪರ್ಸೀನ್ ಬೋಟ್ ನಿಂದ ತಪ್ಪಿಸಿಕೊಂಡಿದ್ದ ಸುನಿಲ್ ಸತತ 30 ಗಂಟೆಗಳ ನಂತರ ಸಮುದ್ರದಲ್ಲಿ ಏಕಾಂಗಿ ಹೋರಾಟ ನಡೆಸಿ ಮಲ್ಪೆಗೆ ಬಂದು ಸೇರಿದ್ದರು. ಅಲ್ಲಿ ಅವರನ್ನು ರಕ್ಷಿಸಲಾಗಿದೆ.
ಮಂಗಳೂರು/ನ್ಯೂಯಾರ್ಕ್ : ಲಾಸ್ ಏಂಜಲೀಸ್‌ನ ಪೆಸಿಫಿಕ್ ಪ್ಯಾಲಿಸೈಡ್ಸ್ ಮತ್ತು ಪ್ಯಾಸಡೀನಾದ ಈಟನ್ ಕೆಯಾನ್ ಪ್ರದೇಶದಲ್ಲಿ ಹಬ್ಬಿರುವ ಕಾಳ್ಗಿಚ್ಚಿನಿಂದಾಗಿ ಅಪಾರ ಹಾ*ನಿ ಸಂಭವಿಸಿದೆ. ಕಾಡ್ಗಿಚ್ಚಿನ ಜ್ವಾಲೆ ನೆರೆಯ ಪ್ರದೇಶಗಳಿಗೂ ವ್ಯಾಪಿಸುತ್ತಿದೆ. ಸುತ್ತಲಿನ ಹಾಲಿವುಡ್ ಪ್ರದೇಶದಿಂದ ಜನರನ್ನು ಸ್ಥಳಾಂತರಿಸುವ ಕಾರ್ಯದಲ್ಲಿ ರಕ್ಷಣಾ ಸಿಬ್ಬಂದಿ ತೊಡಗಿದ್ದಾರೆ.
ಸುತ್ತಲಿನ ಹಾಲಿವುಡ್ ಪ್ರದೇಶದಿಂದ ಜನರನ್ನು ಸ್ಥಳಾಂತರಿಸುವ ಕಾರ್ಯವನ್ನು ರಕ್ಷಣಾ ಸಿಬ್ಬಂದಿ ಮಾಡುತ್ತಿದ್ದಾರೆ. ಯವರು ಸಜೀವ ದಹನವಾಗಿದ್ದಾರೆ. 1 ಲಕ್ಷ ಜನರ ಸ್ಥಳಾಂತರಕ್ಕೆ ಆದೇಶಿಸಲಾಗಿದೆ. ಒಂದು ಸಾವಿರಕ್ಕೂ ಅಧಿಕ ಮನೆಗಳು ಸುಟ್ಟು ಭಸ್ಮವಾಗಿವೆ ಎಂದು ವರದಿಯಾಗಿದೆ.
ಸನ್‌ಸೆಟ್ ಫೈರ್ ಎಂದು ಕರೆಯಲ್ಪಡುವ ಹೊಸ ಜ್ವಾಲೆಯು ಹಾಲಿವುಡ್ ಹಿಲ್ಸ್ ಕಾಣಿಸಿಕೊಂಡಿದೆ. ಕೆಲವು ಪ್ರದೇಶಗಳಲ್ಲಿ ಗಂಟೆಗೆ 112 ಕಿಲೋ ಮೀಟರ್ ವೇಗದಲ್ಲಿ ಬೀಸುತ್ತಿರುವ ‘ಸಾಂಟಾ ಅನಾ’ ಚಂಡಮಾರುತದಿಂದ ಪರಿಸ್ಥಿತಿ ತೀರ ಹದಗೆಟ್ಟಿದ್ದು, ರನ್ಯಾನ್ ಕ್ಯಾನ್ಯನ್ ಮತ್ತು ವಾಟಲ್ಸ್ ಪಾರ್ಕ್ ಬೆಂಕಿಗಾಹುತಿಯಾಗಿದೆ.
ಒರೆಗಾನ್, ವಾಷಿಂಗ್ಟನ್ ಮತ್ತು ಉತಾಹ್ ಸೇರಿದಂತೆ ಹಲವು ರಾಜ್ಯಗಳಿಂದ ಸಾವಿರಾರು ಅ*ಗ್ನಿಶಾಮಕ ದಳದ ಸಿಬ್ಬಂದಿ ಕಾಡ್ಗಿ*ಚ್ಚು ನಿಯಂತ್ರಿಸಲು ಹರಸಾಹಸ ಪಡುತ್ತಿದ್ದಾರೆ. ನೀರಿನ ಅಭಾವದಿಂದಾಗಿ ಬೆಂ*ಕಿ ನಂದಿಸುವ ಕಾರ್ಯಾಚರಣೆ ದೊಡ್ಡ ಸವಾಲಾಗಿ ಪರಿಣಮಿಸಿದ್ದು, ಈಜುಕೊಳಗಳು, ಕೊಳಗಳಿಂದ ನೀರು ಸಂಗ್ರಹಿಸಿ ಕಾರ್ಯಾಚರಣೆ ನಡೆಸಲಾಗುತ್ತಿದೆ.
ಮಂಗಳೂರು/ಮುಂಬೈ : ಜನಪ್ರಿಯ ರಿಯಾಲಿಟಿ ಶೋಗಳಲ್ಲಿ ಒಂದಾಗಿರುವ ಹಿಂದಿ ಬಿಗ್ ಬಾಸ್ ಸೀಸನ್ 18 ಗ್ರ್ಯಾಂಡ್ ಫಿನಾಲೆ ಹತ್ತಿರ ಬಂದಿದೆ. ಅದಕ್ಕೂ ಮುನ್ನ ಬಿಗ್ ಬಾಸ್ ನಲ್ಲಿ ಶ್ರೇಯಸ್ ಅಯ್ಯರ್, ಯಜುವೇಂದ್ರ ಚಹಲ್ ಸೇರಿದಂತೆ ದೊಡ್ಡ ದೊಡ್ಡ ಸೆಲೆಬ್ರಿಟಿಗಳು ಕಾಣಿಸಿಕೊಳ್ಳಲಿದ್ದಾರೆ.
ಈ ವಾರ ನಡೆಯಲಿರುವ ‘ವೀಕೆಂಡ್ ಕಾ ವಾರ್’ ಎಪಿಸೋಡ್ ನಲ್ಲಿ ಅನೇಕ ಸೆಲೆಬ್ರೆಟಿಗಳು ಭಾಗವಹಿಸಲಿದ್ದಾರೆ.
ಕೆಲವು ಮಾಹಿತಿಗಳ ಪ್ರಕಾರ, ಸಲ್ಮಾನ್ ಖಾನ್ ಆಪ್ತ ಸ್ನೇಹಿತೆ ರವಿನಾ ಟಂಡನ್, ಅವರ ಮಗಳು ರಾಶಾ ಹಾಗೂ ಅಜಯ್ ದೇವಗನ್ ಸಹೋದರಳಿಯ ಅಮನ್ ಕೂಡ ಬಿಗ್ ಬಾಸ್ ಮನೆಗೆ ಪ್ರವೇಶ ಮಾಡಲಿದ್ದಾರೆ. ಅದರ ಜೊತೆಗೆ ಕ್ರಿಕೆಟಿಗ ಯಜುವೇಂದ್ರ ಚಹಲ್ ಹಾಗೂ ಶ್ರೇಯಸ್ ಅಯ್ಯರ್ ಕೂಡ ಬಿಗ್ ಬಾಸ್ ಶೋನಲ್ಲಿ ಕಾಣಿಸಿಕೊಳ್ಳಲಿದ್ದಾರೆ ಎಂದು ವರದಿಯಾಗಿದೆ.
ರವಿನಾ ಟಂಡನ್ ಮತ್ತು ಇತರರು ಸಿನಿಮಾ ಪ್ರಮೋಷನ್ ಸಂಬಂಧ ಶನಿವಾರ ಬಿಗ್ ಬಾಸ್ ಮನೆಗೆ ಬರಲಿದ್ದಾರೆ. ಭಾನುವಾರದ ಎಪಿಸೋಡ್ ನಲ್ಲಿ ಶ್ರೇಯಸ್ ಅಯ್ಯರ್, ಯಜುವೇಂದ್ರ ಚಹಲ್ ಮತ್ತು ಶಶಾಂಕ್ ಸಿಂಗ್ ಬರಬಹುದು ಎನ್ನಲಾಗುತ್ತಿದೆ. ಈ ಮೂವರು ಐಪಿಎಲ್ ನಲ್ಲಿ ಪಂಜಾಬ್ ಕಿಂಗ್ಸ್ ತಂಡದ ಪರವಾಗಿ ಆಡುತ್ತಿದ್ದಾರೆ.
ಕಳೆದ ಕೆಲವು ದಿನಗಳಿಂದ ಸ್ಪೀನ್ನರ್ ಯಜುವೇಂದ್ರ ಚಾಹಲ್ ಮತ್ತು ಅವರ ಪತ್ನಿ ಧನಶ್ರೀ ವರ್ಮಾ ಭಾರಿ ಸುದ್ದಿಯಲ್ಲಿದ್ದಾರೆ. ಸೆಲೆಬ್ರಿಟಿ ದಂಪತಿಗಳು ಬೇರೆಯಾಗುತ್ತಿದ್ದಾರೆ ಎಂಬ ಸುದ್ದಿ ಹುಟ್ಟಿಕೊಂಡಿದೆ. ಇದೇ ವದಂತಿಯಲ್ಲಿ ಶ್ರೇಯಸ್ ಅಯ್ಯರ್ ಹೆಸರು ಕೂಡ ಸಿಲುಕಿಕೊಂಡಿದೆ. ಹೀಗಾಗಿ ಶ್ರೇಯಸ್ ಅಯ್ಯರ್, ಚಹಲ್ ಒಟ್ಟಿಗೆ ಶೋನಲ್ಲಿ ಕಾಣಿಸಿಕೊಳ್ಳುತ್ತಿರೋದು ವೀಕ್ಷಕರಿಗೆ ಭಾರೀ ಕುತೂಹಲ ಮೂಡಿಸಿದೆ.
ಪಡುಬಿದ್ರಿ: ಸಾಲಬಾಧೆಗೆ ಮನನೊಂದು ಯುವಕನೋರ್ವ ಆತ್ಮಹತ್ಯೆ ಮಾಡಿಕೊಂಡ ಘಟನೆ ಪಡುಬಿದ್ರಿಯಲ್ಲಿ ನಡೆದಿದೆ.
ಆತ್ಮಹತ್ಯೆ ಶರಣಾದ ವ್ಯಕ್ತಿಯನ್ನು ಪಡುಬಿದ್ರಿ ಬೇಂಗ್ರೆ ರಸ್ತೆಯ ಕೌಸರ್ ಮಂಜಿಲ್‌ನ ನಸ್ರುಲ್ಲಾ(29) ಎಂದು ಗುರುತಿಸಲಾಗಿದೆ. ವಿದೇಶದಲ್ಲಿ ಉದ್ಯೋಗದಲ್ಲಿದ್ದ ನಸ್ರುಲ್ಲಾ ಅವರು 3 ತಿಂಗಳ ಹಿಂದೆ ಊರಿಗೆ ಮರಳಿದ್ದರು. ನಸ್ರುಲ್ಲಾ ಅವರು ಪಡೆದಿದ್ದ ಮನೆ ಸಾಲ, ವೈಯಕ್ತಿಕ ಸಾಲಗಳನ್ನು ಹಿಂತಿರುಗಿಸಲು ಬ್ಯಾಂಕ್ ನವರು, ಸಾಲದವರು ಆತನ ಮನೆಗೆ ಬಂದು ಹೋಗುತ್ತಿದ್ದರು. ಇದರಿಂದ ಅವರು ಮಾನಸಿಕವಾಗಿ ನೊಂದಿದ್ದರು ಎನ್ನಲಾಗಿದೆ.
ತಮ್ಮ ಪತ್ನಿಯ ಆಭರಣಗಳನ್ನೂ ಅಡವಿಟ್ಟಿದ್ದ ನಸ್ರುಲ್ಲಾ ಬುಧವಾರ ಕೆಲ ಚಿನ್ನಾಭರಣಗಳನ್ನು ಬಿಡಿಸಿಕೊಂಡು ಬಂದಿದ್ದರು. ಬುಧವಾರ ಸಂಜೆಯ ವೇಳೆ ಪತ್ನಿಯೊಂದಿಗೆ ಜಗಳವಾಡಿ, ತನ್ನ ಮೊಬೈಲನ್ನು ಪುಡಿ ಮಾಡಿ ನೇರ ತಮ್ಮ ಬೆಡ್ ರೂಂಗೆ ತೆರಳಿ ಫ್ಯಾನಿಗೆ ಚೂಡಿದಾರದ ವೇಲಿನಿಂದ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ. ಈ ಬಗ್ಗೆ ಪಡುಬಿದ್ರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.