ಸಂಜಾತ ಅವರ ಮಾಲೀಕತ್ವದ ತವಕಲ್ ಎನ್ನುವ ಹೆಸರಿನ ಮೀನುಗಾರಿಕೆ ಬೋಟನ್ನು ಜ.4 ರಂದು ದುರಸ್ತಿಗೆಂದು ಮೀನುಗಾರರಾದ ರವಿ ಸಾಲ್ಯಾನ್ ಮತ್ತು ಹರೀಶ್ ಅವರು ಮಲ್ಪೆ ಬಂದರಿನಿಂದ ಗಂಗೊಳ್ಳಿಗೆ ಕೊಂಡೊಯ್ಯುತ್ತಿದ್ದರು.
ಗಂಗೊಳ್ಳಿ ಬಂದರಿನ ಅಳಿವೆಯಿಂದ ಸುಮಾರು 2 ನಾಟಿಕಲ್ ಮೈಲು ದೂರದಲ್ಲಿ ಚಲಿಸುತ್ತಿರುವಾಗ ಭಾರೀ ಗಾತ್ರದ ಮರದ ದಿಮ್ಮಿ ತೇಲಿ ಬಂದು ಬೋಟಿಗೆ ಡಿಕ್ಕಿ ಹೊಡೆದಿದೆ. ಪರಿಣಾಮ ಬೋಟಿನ ಮುಂಭಾಗದ ತಳಬದಿಯಲ್ಲಿ ಹಾನಿಯಾಗಿ ನೀರು ಒಳ ಬರಲು ಪ್ರಾರಂಭಿಸಿತ್ತು.
ನೀರಿನ ಒಳ ಹರಿವು ಜಾಸ್ತಿಯಾಗಿ ಬೋಟು ಮುಳುಗುವ ಸಂದರ್ಭದಲ್ಲಿ ಮಾಹಿತಿ ಪಡೆದ ಮೀನುಗಾರರು ಜಲರಾಣಿ ಎಂಬ ಹೆಸರಿನ ಬೋಟ್ ರವಾನಿಸಿ ಇಬ್ಬರನ್ನೂ ಬಚಾವ್ ಮಾಡಿದ್ದಾರೆ.
ಉಡುಪಿ: ವಿದ್ಯುತ್ ಬಿಲ್ ಪಾವತಿಗಾಗಿ ಮೆಸ್ಕಾಂ ಎಟಿಎಂ ಸೇವೆ ಸ್ಥಗಿತಗೊಂಡಿರುವುದರಿಂದ ಉಡುಪಿ ಮತ್ತು ಸುತ್ತಮುತ್ತಲಿನ ನಿವಾಸಿಗಳು ತೀವ್ರ ತೊಂದರೆ ಅನುಭವಿಸುತ್ತಿದ್ದಾರೆ. ಪರಿಸ್ಥಿತಿಯು ದುರುಪಯೋಗ ಮತ್ತು ಅಸಮರ್ಥತೆಯ ಬಗ್ಗೆ ಸಾರ್ವಜನಿಕ ಆಕ್ರೋಶಕ್ಕೆ ಕಾರಣವಾಗಿದೆ.
ಮಣಿಪಾಲ, ಕುಂಜಿಬೆಟ್ಟು, ಪರ್ಕಳ, ಹಿರಿಯಡ್ಕ, ಮೂಡುಬೆಳ್ಳೆ, ಉದ್ಯಾವರ, ಪುತ್ತೂರು, ಉಡುಪಿ ನಗರ ಮುಂತಾದ ಪ್ರದೇಶಗಳ ಜನರು ಈ ಅಮಾನತಿನ ಹೊರೆ ಹೊತ್ತಿದ್ದಾರೆ. ಮೆಸ್ಕಾಂ ಕಚೇರಿಗಳಲ್ಲಿ ಉದ್ದನೆಯ ಸರತಿ ಸಾಲುಗಳು ಸಾಮಾನ್ಯವಾಗಿದ್ದು, ಜನರು ತಮ್ಮ ಬಿಲ್ಲುಗಳನ್ನು ಪಾವತಿಸಲು ಗಂಟೆಗಟ್ಟಲೆ ಕಾಯಬೇಕಾಗಿದೆ. ಪಾವತಿಗಳನ್ನು ಮಾಡಲು ಅನೇಕರು ಕೆಲಸದಿಂದ ರಜೆ ತೆಗೆದುಕೊಳ್ಳುವಂತೆ ಒತ್ತಾಯಿಸಲಾಗುತ್ತದೆ, ಅವರ ದಿನಚರಿಗಳನ್ನು ಅಡ್ಡಿಪಡಿಸುತ್ತದೆ.
ಹಿರಿಯ ನಾಗರಿಕರ ಮೇಲೆ ಪರಿಸ್ಥಿತಿ ವಿಶೇಷವಾಗಿ ಕಠಿಣವಾಗಿದೆ, ಉದ್ದನೆಯ ಸಾಲಿನಲ್ಲಿ ನಿಂತಿರುವ ವ್ಯಕ್ತಿಗಳು ಅನಾರೋಗ್ಯಕ್ಕೆ ಒಳಗಾಗುವ ಘಟನೆಗಳು. ಪರ್ಯಾಯ ವ್ಯವಸ್ಥೆಗಳ ಕೊರತೆಯಿಂದಾಗಿ ಬೇರೆ ದಾರಿಯಿಲ್ಲದೆ ಸಾರ್ವಜನಿಕರ ನಿರಾಶೆ ಹೆಚ್ಚುತ್ತಿದೆ.
ಮೆಸ್ಕಾಂ ಅಧಿಕಾರಿಗಳು ಕೂಡಲೇ ಕ್ರಮ ಕೈಗೊಳ್ಳಬೇಕು ಎಂದು ಉಡುಪಿ ಜಿಲ್ಲಾ ನಾಗರಿಕ ಸಮಿತಿಯ ಸಂಚಾಲಕ ನಿತ್ಯಾನಂದ ಒಳಕಾಡು ಆಗ್ರಹಿಸಿದ್ದಾರೆ. ಸ್ಥಗಿತಗೊಂಡಿರುವ ಎಟಿಎಂ ಸೇವೆಗಳನ್ನು ಆದಷ್ಟು ಬೇಗ ಪುನರಾರಂಭಿಸಿ ಸಾರ್ವಜನಿಕರ ಸಂಕಷ್ಟಗಳನ್ನು ನಿವಾರಿಸುವಂತೆ ಒತ್ತಾಯಿಸಿದರು.
ಮಂಗಳೂರು/ಬೆಳಗಾವಿ : ನಾಗಲ್ಯಾಂಡ್ ನಲ್ಲಿ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ಸೇನಾ ವಾಹನ ಕಂದಕಕ್ಕೆ ಉರುಳಿ ಬಿದ್ದಿದೆ. ಸೇನಾ ವಾಹನದಿಂದ ಯೋಧರು ಕೆಳಗೆ ಜಿಗಿದಿದ್ದು, ಯೋಧರ ಮೇಲೆಯೇ ವಾಹನ ಪಲ್ಟಿಯಾಗಿದೆ.
ಸೇನಾ ವಾಹನದ ಈ ದುರಂತದಲ್ಲಿ ಬೆಳಗಾವಿ ಯೋಧ ರವಿಚಂದ್ರ ಯಲ್ಲಪ್ಪ ತಳವಾರ (35) ಹುತಾತ್ಮರಾಗಿದ್ದಾರೆ. ರವಿ ಯಲ್ಲಪ್ಪ ತಳವಾರ ಅವರು ಬೆಳಗಾವಿ ತಾಲೂಕಿನ ನಿಂಗ್ಯಾನಟ್ಟಿ ಗ್ರಾಮದವರು.
ರವಿಚಂದ್ರ ಯಲ್ಲಪ್ಪ ತಳವಾರ ಅವರಿದ್ದ ಸೇನಾ ವಾಹನ ರಸ್ತೆ ಮಾರ್ಗವಾಗಿ ಹೊರಟ್ಟಿದ್ದಾಗ ಈ ದುರಂತ ನಡೆದಿದೆ. ಕೆಳಗೆ ಜಿಗಿದ ಯೋಧರ ಮೇಲೆ ಸೇನಾ ವಾಹನ ಪಲ್ಟಿಯಾಗಿ ಮೂವರು ಯೋಧರು ಹುತಾತ್ಮರಾಗಿದ್ದಾರೆ.
16 ವರ್ಷಗಳಿಂದ ನಾಗಾಲ್ಯಾಂಡ್ ರೈಫಲ್ಸ್ ನಲ್ಲಿ ಸೇವೆ ಸಲ್ಲಿಸುತ್ತಿದ್ದ ರವಿಚಂದ್ರ ತಳವಾರ ಹುತಾತ್ಮರಾಗಿದ್ದು, ಇನ್ನೂ ನಾಲ್ಕು ವರ್ಷಗಳಲ್ಲಿ ನಿವೃತ್ತರಾಗಲಿದ್ದರು. ಮೃತರು ಪತ್ನಿ ಶೀತಲ್ ತಳವಾರ, 11 ವರ್ಷದ ಪುತ್ರಿ ಹಾಗೂ 8 ವರ್ಷದ ಪುತ್ರ ಸೇರಿದಂತೆ ಅಪಾರ ಬಂಧು ಬಳಗ ಅಗಲಿದ್ದಾರೆ.
ಇವರ ಇನ್ನೊಬ್ಬ ಚಿಕ್ಕ ಸಹೋದರ ಶಿವರಾಜ ತಳವಾರ ಭಾರತೀಯ ಸೇನೆಯಲ್ಲಿ ಸೇವೆ ಸಲ್ಲಿಸುತ್ತಿದ್ದಾರೆ. ಇನ್ನಿಬ್ಬರು ಸಹೋದರರು ಊರಲ್ಲಿಯೇ ಕೆಲಸ ಮಾಡುತ್ತಿದ್ದಾರೆ.
ಮಂಗಳೂರು/ಬೆಂಗಳೂರು: ಈಗಾಗಲೇ ಬಸ್ ಟಿಕೆಟ್ ದರ ಏರಿಕೆ ಮಾಡಿ ಪ್ರಯಾಣಿಕರಿಗೆ ಬಿಸಿ ಮುಟ್ಟಿಸಿದ್ದ ಸರ್ಕಾರ ಮತ್ತೆ ಮದ್ಯ ಪ್ರಿಯರಿಗೆ ಶಾಕ್ ನೀಡಿದೆ. ಪ್ರಸಕ್ತ ಆರ್ಥಿಕ ವರ್ಷದ ಮೊದಲ 9 ತಿಂಗಳಲ್ಲಿ ಅಬಕಾರಿಯಿಂದ ನಿರೀಕ್ಷಿತ ಆದಾಯ ಬಾರದ ಹಿನ್ನೆಲೆ ಕರ್ನಾಟಕ ಸರ್ಕಾರ ಬಜೆಟ್‌ಗೆ ಮುನ್ನವೇ ಬಿಯರ್ ದರ ಏರಿಕೆ ಮಾಡಿದೆ.
ಮದ್ಯದ ಬಾಟಲ್ಗೆ ಕನಿಷ್ಠ 10 ರಿಂದ 50 ರೂ.ವರೆಗೆ ಹೆಚ್ಚಳವಾಗಲಿದೆ. ಪ್ರತಿ ಬಿಯರ್ನಲ್ಲಿನ ಅಲ್ಕೋಹಾಲ್ ಅಂಶದ ಮೇಲೆ ದರ ಏರಿಕೆಯಾಗಲಿದ್ದು, ಜನವರಿ 20 ರಿಂದ ಇದು ಜಾರಿಯಾಗಲಿದೆ. ಭಾರತೀಯ ನಿರ್ಮಿತ ಮದ್ಯದ (ಐಎಂಎಲ್) ಮಾರಾಟವನ್ನು ರಾಜ್ಯದಲ್ಲಿ ಉತ್ತೇಜಿಸುವ ಸಲುವಾಗಿ ಸರ್ಕಾರ ಈ ನಿರ್ಧಾರ ಕೈಗೊಂಡಿದೆ ಎನ್ನಲಾಗಿದೆ. ಐಎಂಎಲ್ ಮದ್ಯದ ಬೆಲೆ ಶೇ 25 ರಷ್ಟು ಕಡಿಮೆಯಾಗುವ ಸಾಧ್ಯತೆ ಇದೆ. ಬಿಯರ್ ದರ ಪರಿಷ್ಕರಿಸಲು 2024 ರ ಆಗಸ್ಟ್ನಲ್ಲಿಯೇ ಕರಡು ಅಧಿಸೂಚನೆ ಹೊರಡಿಸಲಾಗಿತ್ತು. ಮುಖ್ಯಮಂತ್ರಿಗಳು ದರ ಏರಿಕೆಗೆ ಸಮ್ಮತಿಸಿರುವ ಹಿನ್ನೆಲೆಯಲ್ಲಿ ಸರ್ಕಾರ ಆದೇಶ ಹೊರಡಿಸಿದೆ.
ಪ್ರೀಮಿಯಂ ಬಿಯರ್ ಬೆಲೆ ಏರಿಕೆಗೆ ಬ್ರೂವರ್ಸ್ ಅಸೋಸಿಯೇಷನ್ ಆಫ್ ಇಂಡಿಯಾ (BAI) ತಕರಾರು ವ್ಯಕ್ತಪಡಿಸಿದೆ. ದೇಶದಲ್ಲೇ ಕರ್ನಾಟಕದಲ್ಲಿ ಅತಿ ಹೆಚ್ಚಿನ ಬೆಲೆಗೆ ಬಿಯರ್ ಮಾರಾಟವಾಗುತ್ತಿದೆ. ಬೆಲೆ ಏರಿಕೆಯಿಂದ ಬಿಯರ್ ಮಾರಾಟ ಕಡಿಮೆಯಾಗಿದೆ ಎಂದು ಹೇಳಿದೆ.
ಎರಡುಪಟ್ಟುಹೆಚ್ಚಿದ ಬಿಯರ್ ಮಾರಾಟ :
ಕರ್ನಾಟಕದಲ್ಲಿ ಕಳೆದ ಎರಡು ವರ್ಷಗಳಿಂದ ಬಿಯರ್ ಮಾರಾಟ ಎರಡು ಪಟ್ಟು ಹೆಚ್ಚಾಗಿದೆ. ಕೋವಿಡ್ ನಂತರದ ಅವಧಿಯಲ್ಲಿ ಗ್ರಾಹಕರ ನಡವಳಿಕೆಯಲ್ಲಿನ ಬದಲಾವಣೆ ಮತ್ತು ಬೇಸಿಗೆಯ ತಾಪಮಾನದಲ್ಲಿನ ಏರಿಕೆ ಕೂಡ ಬಿಯರ್ ಬೇಡಿಕೆ ಹೆಚ್ಚಲು ಕಾರಣ ಎಂದು ಮೂಲಗಳು ತಿಳಿಸಿವೆ.