Connect with us

    DAKSHINA KANNADA

    ಉಳ್ಳಾಲದಲ್ಲಿ ದಡಕ್ಕೆ ಅಪ್ಪಳಿಸಿದ ಮೀನುಗಾರಿಕಾ ಬೋಟ್ : 10 ಮಂದಿಯ ರಕ್ಷಣೆ- ಕುಡಿತವೇ ಕಾರಣವಾಯ್ತಾ ಅಪಘಾತಕ್ಕೆ..!?

    Published

    on

    ಮಂಗಳೂರು : ಮಂಗಳೂರು ಧಕ್ಕೆಯಿಂದ ಆಳಸಮುದ್ರ ಮೀನುಗಾರಿಕೆಗೆ ತೆರಳಿದ್ದ  ಮೀನುಗಾರಿಕಾ ಬೋಟ್ ದಡಕ್ಕೆ ಬಂದು ಅಪ್ಪಳಿಸಿದ  ಘಟನೆ ಇಂದು ಭಾನುವಾರ ನಸುಕಿನ ಜಾವ ಮಂಗಳೂರು ಹೊರ ವಲಯದ ಉಳ್ಳಾಲದ ಕೋಡಿಯಲ್ಲಿ ನಡೆದಿದೆ.

    ಉಳ್ಳಾಲದ ಅಶ್ರಫ್ ಎಂಬುವವರಿಗೆ ಸೇರಿದ ಅಝಾನ್ ಎಂಬ ಹೆಸರಿನ ಬೋಟ್ ಇದಾಗಿದೆ.ಅಪಘಾತದ ಸಂದರ್ಭ ದೋಣಿಯಲ್ಲಿ 10 ಮಂದಿ ಮೀನುಗಾರರಿದ್ದು ಎಲದ್ಲರನ್ನು ಸ್ಥಳಿಯ ಮೀನುಗಾರರು ರಕ್ಷಣೆ ಮಾಡಿದ್ದಾರೆ.

    ಇದರಲ್ಲಿದ್ದ ಕನ್ಯಾಕುಮಾರಿ ಮೂಲದ ಐವರು ಮೀನುಗಾರರು ಕುಡಿತದ ಮತ್ತಿನಲ್ಲಿದ್ರು ಎಂದು ತಿಳಿದುಬಂದಿದೆ.

    ಬೋಟಿನ ಚಾಲಕ ಮತ್ತೋರ್ವನ ಕೈಯಲ್ಲಿ ದೋಣಿ ಚಲಾವಣೆಗೆ ನೀಡಿದ್ದರಿಂದ ಈ ಅವಗಢ ಸಂಭವಿಸಿದೆ ಎಂದು  ಹೇಳಲಾಗಿದೆ.  ಉಳ್ಳಾಲ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

    Click to comment

    Leave a Reply

    Your email address will not be published. Required fields are marked *

    DAKSHINA KANNADA

    ಮೇ 26 ರಂದು ಅಡ್ಯಾರ್ ಗಾರ್ಡನ್ ನಲ್ಲಿ “ಯಕ್ಷಧ್ರುವ ಪಟ್ಲ ಸಂಭ್ರಮ 2024”

    Published

    on

    ಕಾರ್ಯಕ್ರಮಕ್ಕೆ ಕಿಚ್ಚ ಸುದೀಪ್ ಮೆರುಗು, ಕಲಾವಿದರಿಗೆ ವಿವಿಧ ಯೋಜನೆ

    ಮಂಗಳೂರು: ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ (ರಿ) ಮಂಗಳೂರು ಇದರ ಆಶ್ರಯದಲ್ಲಿ ಮೇ 26 ರಂದು ಭಾನುವಾರ ಅಡ್ಯಾರ್ ಗಾರ್ಡನ್ ನಲ್ಲಿ “ಯಕ್ಷಧ್ರುವ ಪಟ್ಲ ಸಂಭ್ರಮ 2024” ಕಾರ್ಯಕ್ರಮ ನಡೆಯಲಿದೆ. ವಿಶೇಷ ಅತಿಥಿಯಾಗಿ ಚಲನಚಿತ್ರ ನಟ ಕಿಚ್ಚ ಸುದೀಪ್ ಭಾಗವಹಿಸಲಿದ್ದಾರೆ ಎಂದು ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ನ ಸ್ಥಾಪಕಾಧ್ಯಕ್ಷ ಪಟ್ಲ ಸತೀಶ್ ಶೆಟ್ಟಿ ಹೇಳಿದರು.

     

    ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ ಈ ಸಮಾರಂಭವು ಬೆಳಿಗ್ಗೆ 7.45 ಕ್ಕೆ ಚೌಕಿಪೂಜೆ ನಡೆದು ಬಳಿಕ ಅಬ್ಬರತಾಳ, ಮಹಿಳಾ ಯಕ್ಷಗಾನ ನಡೆಯಲಿದೆ. 9 ಗಂಟೆಗೆ ಕಾರ್ಯಕ್ರಮವನ್ನು ಮುಂಬೈ ಹೇರಂಭ ಕೆಮಿಕಲ್ಸ್ ಇಂಡಸ್ಟ್ರೀಸ್ ಸಂಸ್ಥೆಯ ಸಿಎಂಡಿ ಕುಳೂರು ಕನ್ಯಾನ ಸದಾಶಿವ ಶೆಟ್ಟಿ ಉದ್ಘಾಟಿಸಲಿದ್ದಾರೆ. ಎಡನೀರು ಮಠದ ಶ್ರೀ ಸಚ್ಚಿದಾನಂದ ಭಾರತೀ ಸ್ವಾಮೀಜಿಗಳ ದಿವ್ಯ ಉಪಸ್ಥಿತಿಯನ್ನು ಪಡೆಯಲಿದ್ದಾರೆ. ಶ್ರೀ ಕ್ಷೇತ್ರ ಕಟೀಲಿನ ವೆಂಕಟ್ರಮಣ ಆಸ್ರಣ್ಣ, ಆರ್ಶೀರ್ವಚನ ಮಾಡಲಿದ್ದಾರೆ ಎಂದರು.

    ಅಧ್ಯಕ್ಷತೆಯನ್ನು ಜಾಗತಿಕ ಬಂಟರ ಸಂಘಗಳ ಒಕ್ಕೂಟದ ಅಧ್ಯಕ್ಷ ಐಕಳ ಹರೀಶ್ ಶೆಟ್ಟಿ ವಹಿಸಲಿದ್ದಾರೆ. ಪಾವಂಜೆ ಕ್ಷೇತ್ರದ ಆಡಳಿತ ಮೊಕ್ತೇಸರ ಶಶೀಂದ್ರ ಕುಮಾರ್ ಶುಭಶಂಸನೆಗೈಯಲಿದ್ದಾರೆ.

    ಆರೋಗ್ಯ ಶಿಬಿರದ ಉದ್ಘಾಟನೆಯನ್ನು ಡಾ ರವೀಶ್ ತುಂಗಾ ನೆರವೇರಿಸಲಿದ್ದಾರೆ. ರಕ್ತದಾನ ಶಿಬಿರವನ್ನು ಡಾ ಶ್ರೀಧರ್ ಉದ್ಘಾಟಿಸಲಿದ್ದಾರೆ. ಉಚಿತ ಕಣ್ಣು ಪರೀಕ್ಷೆ, ಕನ್ನಡ ವಿತರಣೆಯೂ ಇದೆ.
    ಬೆಳಿಗ್ಗೆ 11 ಗಂಟೆಗೆ ಯುವ ಭಾಗವತರಿಂದ “ಗಾನ ವೈಭವ” ನಡೆಯಲಿದೆ. ಮಧ್ಯಾಹ್ನ 1 ಗಂಟೆಗೆ ನಡೆಯುವ ಸಭಾ ಕಾರ್ಯಕ್ರಮದಲ್ಲಿ ಕನ್ಯಾಡಿ ಶ್ರೀ ರಾಮ ಕ್ಷೇತ್ರದ ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿ ಭಾಗವಹಿಸಲಿದ್ದಾರೆ. ಸಭಾಧ್ಯಕ್ಷತೆಯನ್ನು ಶಶಿ ಕ್ಯಾಟರರ್ಸ್ ಸಂಸ್ಥೆ, ಉಜಿರೆ ಕಾಶಿ ವ್ಯಾಲೇಸ್ ಸಂಸ್ಥೆಯ ಮಾಲಕ ಶಶಿಧರ್ ಬಿ ಶೆಟ್ಟಿ ಬರೋಡಾ ವಹಿಸಲಿದ್ದಾರೆ. ಅತಿಥಿಗಳಾಗಿ ಜಮ್ಮು ಕಾಶ್ಮೀರ ಸರಕಾರದ ಪ್ರಿನ್ಸಿಪಾಲ್ ಸೆಕ್ರೆಟರಿ ಐಎಎಸ್ ಅಧಿಕಾರಿ ರಾಜೇಶ್ ಪ್ರಸಾದ್, ಮುಂಬಯಿ ಭವಾನಿ ಶಿಪ್ಪಿಂಗ್ ಮಾಲಕ ಕೆ.ಡಿ ಶೆಟ್ಟಿ ಮುಂಬಯಿ ಮಕಯ್ ಸಂಸ್ಥೆಯ ಅಧ್ಯಕ್ಷ ಕೆ ಎಂ ಶೆಟ್ಟಿ ಮಧ್ಯಗುತ್ತು ಮೊದಲಾದವರು ಭಾಗವಹಿಸಲಿದ್ದಾರೆ. ಮಧ್ಯಾಹ್ನ 2.30 ಕ್ಕೆ ಯಕ್ಷಧ್ರುವ ಯಕ್ಷಶಿಕ್ಷಣ ವಿದ್ಯಾರ್ಥಿಗಳಿಂದ ಯಕ್ಷಗಾನ ಪ್ರದರ್ಶನ ನಡೆಯಲಿದೆ. ಸಂಜೆ 3.30 ಕ್ಕೆ, ಪಾರಂಪರಿಕ ಯಕ್ಷಗಾನ “ಕಿರಾತಾರ್ಜುನ” ಪ್ರದರ್ಶನಗೊಳ್ಳಲಿದೆ.

    ಸಂಜೆ 5.15 ಕ್ಕೆ ಶ್ರೀ ಕ್ಷೇತ್ರ ಒಡಿಯೂರಿನ ಗುರುದೇವಾನಂದ ಸ್ವಾಮೀಜಿಯವರ ಗೌರವ ಉಪಸ್ಥಿತಿಯಲ್ಲಿ ಸಭಾ ಕಾರ್ಯಕ್ರಮ ನಡೆಯಲಿದೆ. ಪಟ್ಲ ಫೌಂಡೇಶನ್ ನ ಟ್ರಸ್ಟಿ ಮಹಾದಾನಿ ಕನ್ಯಾನ ಸದಾಶಿವ ಶೆಟ್ಟಿ ಸಭಾಧ್ಯಕ್ಷತೆ ವಹಿಸಲಿದ್ದಾರೆ. ಅತಿಥಿಗಳಾಗಿ ಎಂಆರ್ ಜಿ ಗ್ರೂಪ್ ನ ಚೇರ್‌ಮೆನ್ ಕೆ. ಪ್ರಕಾಶ್ ಶೆಟ್ಟಿ, ಉದ್ಯಮಿ ತೋನ್ನೆ ಆನಂದ ಶೆಟ್ಟಿ, ಡಾ ಎಚ್ ಎಸ್ ಬಲ್ಲಾಳ್, ಕೆ ಕೆ ಶೆಟ್ಟಿ ವಕ್ಕಾಡಿ ಪ್ರವೀಣ್ ಶೆಟ್ಟಿ, ಕನ್ಯಾನ ರಘುರಾಮ ಶೆಟ್ಟಿ, ಡಾ.ಎಂ. ಮೋಹನ್ ಆಳ್ವ ಮೊದಲಾದವರು ಭಾಗವಹಿದಲಿದ್ದಾರೆ.

    ಯಕ್ಷಧ್ರುವ ಪಟ್ಲ ಪ್ರಶಸ್ತಿ:

    ಸಮಾರಂಭದಲ್ಲಿ ರಾಮಚಂದ್ರ ಹೆಗಡೆ ಕೊಂಡದಕುಳಿ ಅವರನ್ನು 2024 ರ ಸಾಲಿನ ಯಕ್ಷಧ್ರುವ ಪಟ್ಲ ಪ್ರಶಸ್ತಿ ನೀಡಿ ಗೌರವಿಸಲಾಗುವುದು. 2024 ರ ಸಾಲಿನ ಯಕ್ಷಧ್ರುವ ಮಹಾಪೋಷಕ ಪ್ರಶಸ್ತಿಯನ್ನು CA ದಿವಾಕರ್ ರಾವ್ ಮತ್ತು ಶ್ರೀಮತಿ ಶೈಲಾ ದಿವಾಕರ್ ಪಡೆಯಲಿದ್ದಾರೆ. ಅದೇ ರೀತಿ ವಿವಿಧ ಕ್ಷೇತ್ರಗಳಲ್ಲಿ ಸಲ್ಲಿಸಿದ ಗಣನೀಯ ಸೇವೆಯನ್ನು ಗುರುತಿಸಿ 18 ಮಂದಿ ಕಲಾ ಗೌರವವನ್ನು ಸ್ವೀಕರಿಸಲಿದ್ದಾರೆ.

     

    2024 ರ ಸೇವಾ ಯೋಜನೆ :

    ಪಟ್ಲ ಪ್ರಶಸ್ತಿ ರೂ.1 ಲಕ್ಷ ಗೌರವ ಧನ, 3,500 ಕಲಾವಿದರಿಗೆ (ಯಕ್ಷಗಾನ, ನಾಟಕ -ರಂಗಭೂಮಿ, ದೈವಾರಾಧನೆ) ಅವಘಾತ ವಿಮಾ ಯೋಜನೆ, 20 ಸಾವಿರ ನಗದಿನೊಂದಿಗೆ ಯಕ್ಷಗಾನ ಸಹಿತ ವಿವಿಧ ಕ್ಷೇತ್ರಗಳ ಹಿರಿಯ ಸಾಧಕರಿಗೆ ಯಕ್ಷಧ್ರುವ ಕಲಾ ಗೌರವ, ವೈದ್ಯಕೀಯ, ಆರ್ಥಿಕ ನೆರವು, ಉಚಿತ ವೈದ್ಯಕೀಯ ತಪಾಸಣೆ, ಕಣ್ಣಿನ ತಪಾಸಣೆ, ಕನ್ನಡಕ ಹಾಗೂ ಔಷಧ ವಿತರಣೆ, ಆಶಕ್ತರಿಗೆ ಧನಸಹಾಯ, ಗೃಹ ನಿರ್ಮಾಣಕ್ಕೆ ಸಹಾಯ ಧನ, ಸರಕಾರಿ ಪ್ರೌಢಶಾಲಾ ವಿದ್ಯಾರ್ಥಿಗಳಿಗೆ ಯಕ್ಷಶಿಕ್ಷಣ ಯೋಜನೆ.

    11.5 ಕೋಟಿ ಮೊತ್ತದ ಸೇವಾ ಯೋಜನೆ ಅನುಷ್ಠಾನ:

    ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ಎಂಟು ವರ್ಷಗಳಲ್ಲಿ ಸುಮಾರು 11.5 ಕೋಟಿ ರೂಪಾಯಿ ಮೊತ್ತದ ಸೇವಾ ಯೋಜನೆಯನ್ನು ಅನುಷ್ಠಾನಗೊಳಿಸಿದೆ.
    ಪಟ್ಲ ಯಕ್ಷಾಶ್ರಯದ ಮೂಲಕ 26 ಮನೆಗಳನ್ನು ನಿರ್ಮಿಸಿ ಕಲಾವಿದರಿಗೆ ಹಸ್ತಾಂತರಿಸಲಾಗಿದೆ. 12 ಮನೆಗಳು ನಿರ್ಮಾಣ ಹಂತದ ಕೊನೆಯ ಹಂತದಲ್ಲಿದೆ. ಗೃಹ ನಿರ್ಮಾಣ ಯೋಜನೆಯಲ್ಲಿ 162 ಕಲಾವಿದರಿಗೆ ತಲಾ 25 ಸಾವಿರ ಮನೆ ರಿಪೇರಿಗೆ ಸಹಾಯ ಧನ ವಿತರಿಸಲಾಗಿದೆ. 160 ಮಂದಿ ತೀರಾ ಅಶಕ್ತ ಕಲಾವಿದರಿಗೆ 50 ಸಾವಿರ ವಿತರಿಸಲಾಗಿದೆ. ಪ್ರಖ್ಯಾತ ಆರು ಮಂದಿ ಕಲಾವಿದರಿಗೆ ತಲಾ ಒಂದು ಲಕ್ಷ ರೂಪಾಯಿಯೊಂದಿಗೆ ಪಟ್ಲ ಪ್ರಶಸ್ತಿ ನೀಡಲಾಗಿದೆ. ಪ್ರಾದೇಶಿಕ ಘಟಕಗಳ ವ್ಯಾಪ್ತಿಯಲ್ಲಿ ಸುಮಾರು 410 ಮಂದಿ ಕಲಾವಿದರು ಸಂಮಾನ ಮತ್ತು ಗೌರವ ಧನ ಪಡೆದಿರುತ್ತಾರೆ.

    ಯಕ್ಷಗಾನದಲ್ಲಿ ದಾಖಲೆ ಬರೆದ ಯಕ್ಷಧ್ರುವ ವಿದ್ಯಾರ್ಥಿ ಸಮ್ಮಿಲನ:

    ಯಕ್ಷಧ್ರುವ ಯಕ್ಷ ಶಿಕ್ಷಣ ಅಡಿಯಲ್ಲಿ ತರಬೇತಿ ಪಡೆಯುತ್ತಿರುವ ವಿದ್ಯಾರ್ಥಿಗಳಿಗೆ ವೇದಿಕೆ ಕಲ್ಪಿಸುವ ನಿಟ್ಟಿನಲ್ಲಿ ಆಳ್ವಾಸ್ ಶಿಕ್ಷಣ ಸಂಸ್ಥೆಯ ಸಹಯೋಗದೊಂದಿಗೆ ಸುಮಾರು 3,500 ವಿದ್ಯಾರ್ಥಿಗಳಿಗೆ ಯಕ್ಷಗಾನ ಕಲೆಯ ಬೇರೆ ಬೇರೆ ಆಯಾಮಗಳ ಸ್ಪರ್ಧೆ, ಇದರಲ್ಲಿ 1,700 ವಿದ್ಯಾರ್ಥಿಗಳು ವೇಷಭೂಷಣಗಳೊಂದಿಗೆ ಒಂದೇ ದಿನ ರಂಗ ಪ್ರವೇಶ ಮಾಡಿರುವುದು ಯಕ್ಷಗಾನದಲ್ಲಿ ದಾಖಲೆಯಾಗಿದೆ.

    ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ (ರಿ) ಸಂಸ್ಥೆಯೊಂದಿಗೆ ಮಹಿಳಾ ಘಟಕ ಮತ್ತು ವಿದೇಶದಲ್ಲಿರುವ ಘಟಕಗಳು ಸೇರಿದಂತೆ ಒಟ್ಟು 40 ಪ್ರಾದೇಶಿಕ ಘಟಕಗಳು ಕೆಲಸ ಮಾಡುತ್ತಿದೆ.

    2024 ನೇ ಸಾಲಿನ ವಿದ್ಯಾರ್ಥಿ ಪ್ರತಿಭಾ ಪುರಸ್ಕಾರ:

    ಈ ಬಾರಿ ವೃತ್ತಿಪರ ಕಲಾವಿದರ ಮಕ್ಕಳಿಗೆ ಎಸ್ ಎಸ್ ಎಲ್ ಸಿ ಹಾಗೂ ದ್ವಿತೀಯ ಪಿಯುಸಿ (ಕಲಾ, ವಾಣಿಜ್ಯ ಹಾಗೂ ವಿಜ್ಞಾನ ಹೀಗೆ ಒಟ್ಟು 4 ವಿಭಾಗಗಳಲ್ಲಿ) ಯಲ್ಲಿ 90% ಕ್ಕಿಂತ ಮೇಲ್ಪಟ್ಟು ಗರಿಷ್ಠ ಅಂಕ ಗಳಿಸಿದ ತಲಾ ಒಬ್ಬ ವಿದ್ಯಾರ್ಥಿಗೆ ಪ್ರತಿಭಾ ಪುರಸ್ಕಾರವನ್ನು 2024ರ ಪಟ್ಲ ಸಂಭ್ರಮದಂದು ನೀಡಲಾಗುವುದು.

    ಪತ್ರಿಕಾಗೋಷ್ಠಿಯಲ್ಲಿ ಪ್ರಧಾನ ಕಾರ್ಯದರ್ಶಿ ಪುರುಷೋತ್ತಮ ಕೆ ಭಂಡಾರಿ, ಕೋಶಾಧಿಕಾರಿ CA ಸುದೇಶ್ ಕುಮಾರ್ ರೈ, ಸಂಘಟನಾ ಕಾರ್ಯದರ್ಶಿ ಕದ್ರಿ ನವನೀತ ಶೆಟ್ಟಿ ಬಾಳ ಜಗನ್ನಾಥ ಶೆಟ್ಟಿ, ಪ್ರದೀಪ್ ಆಳ್ವ ಕದ್ರಿ, ಜೊತೆ ಕಾರ್ಯದರ್ಶಿ ರವಿ ಶೆಟ್ಟಿ, ಆಶೋಕನಗರ, ಉಪಾಧ್ಯಕ್ಷ ಡಾ.ಮನು ರಾವ್, ಜೊತೆ ಕಾರ್ಯದರ್ಶಿ ರಾಜೀವ್ ಪೂಜಾರಿ ಕೈಕಂಬ ಉಪಸ್ಥಿತರಿದ್ದರು.

     

    Continue Reading

    DAKSHINA KANNADA

    ಹರೇಕಳ ಹಾಜಬ್ಬ ಶಾಲೆಯ ಕಂಪೌಂಡ್ ಕುಸಿತ..! ವಿದ್ಯಾರ್ಥಿನಿ ಸಾ*ವು..!

    Published

    on

    ಮಂಗಳೂರು : ಪದ್ಮಶ್ರೀ ಪುರಸ್ಕೃತ ಹರೇಕಳ ಹಾಜಬ್ಬರ ನ್ಯೂಪಡ್ಪು ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ಕಂಪೌಂಡ್‌ ವಾಲ್ ಕುಸಿತಗೊಂಡಿದೆ. ಕುಸಿತಗೊಂಡ ವಾಲ್‌ ಅಡಿಗೆ ಸಿಲುಕಿದ 3 ನೇ ತರಗತಿ ವಿದ್ಯಾರ್ಥಿನಿ ಅಸುನೀಗಿದ್ದಾಳೆ. ಹರೇಕಳ ಗ್ರಾ.ಪಂ ವ್ಯಾಪ್ತಿಯ ನ್ಯೂಪಡ್ಪುವಿನಲ್ಲಿ ಮೇ 20ರ ಸಂಜೆ ವೇಳೆ ಈ ದುರ್ಘಟನೆ ಸಂಭವಿಸಿದೆ. ಸಂಜೆ ವೇಳೆ ಸುರಿದ ಧಾರಕಾರ ಮಳೆಯಿಂದಾಗಿ ದುರ್ಘಟನೆ ಸಂಭವಿಸಿದೆ.


    ನ್ಯೂಪಡ್ಪು ನಿವಾಸಿ ಸಿದ್ದೀಖ್ – ಜಮೀಲಾ ದಂಪತಿ ಪುತ್ರಿ ಶಾಝಿಯಾ ಬಾನು (7) ಮೃತ ಬಾಲಕಿ. ಹರೇಕಳ ಹಾಜಬ್ಬರ ಶಾಲೆಯಲ್ಲಿ ಕಳೆದ ಎರಡು ದಿನಗಳಿಂದ ಮುಡಿಪು ಪದವಿಪೂರ್ವ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆ ವಿದ್ಯಾರ್ಥಿಗಳ ಶಿಬಿರ ನಡೆಯುತ್ತಿದೆ. ಶಾಲೆಯ ವಿದ್ಯಾರ್ಥಿಗಳಿಗೆ ವಿವಿಧ ಚಟುವಟಿಕೆಗಳು ಇದ್ದ ಹಿನ್ನೆಲೆಯಲ್ಲಿ ಶಾಲೆಯ ಸಮೀಪದಲ್ಲೇ ಇರುವ ವಿದ್ಯಾರ್ಥಿನಿ ಶಾಝಿಯಾ ಭಾನು ಭಾಗವಹಿಸಿದ್ದಳು.

    ಸಂಜೆ ವೇಳೆ ಮನೆಗೆ ಹಿಂತಿರುಗುವ ಸಂದರ್ಭ ಶಾಲಾ ಕಂಪೌಂಡ್ ಗೇಟಿನಲ್ಲಿ ಆಟವಾಡುವ ಸಂದರ್ಭ ಕಂಪೌಂಡ್ ಬಾಲಕಿ ಶಾಝಿಯಾ ಮೇಲೆ ಕುಸಿದುಬಿದ್ದಿದೆ. ತಕ್ಷಣ ಸ್ಥಳೀಯರು ರಕ್ಷಣೆಗೆ ಧಾವಿಸಿದರೂ, ಬಾಲಕಿ ಪ್ರಾಣಪಕ್ಷಿ ಹಾರಿಹೋಗಿತ್ತು. ಬೆಳಿಗ್ಗೆಯಿಂದ ಉಳ್ಳಾಲ ತಾಲೂಕು ವ್ಯಾಪ್ತಿಯಲ್ಲಿ ಆಗಾಗ್ಗ ಮಳೆಯಾಗುತ್ತಿದ್ದು, ಇದರಿಂದಾಗಿ ಕಂಪೌಂಡ್ ಶಿಥಿಲಗೊಂಡು ಬಿದ್ದಿದೆ. ಘಟನಾ ಸ್ಥಳಕ್ಕೆ ಹರೇಕಳ ಗ್ರಾ.ಪಂ ಅಧಿಕಾರಿಗಳು, ಕೊಣಾಜೆ ಠಾಣಾ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

    Continue Reading

    DAKSHINA KANNADA

    ಪಡೀಲ್‌ ಕಣ್ಣೂರು ಬಳಿ ಭೀಕರ ವಾಹನ ಅಪಘಾ*ತ; ಕೇಬಲ್ ಟೆಕ್ನಿಷಿಯನ್ ವಿಧಿವ*ಶ

    Published

    on

    ಮಂಗಳೂರು : ಪಡೀಲ್‌ ಕಣ್ಣೂರು ಬಳಿ ನಡೆದ ರಸ್ತೆ ಅಪಘಾ*ತದಲ್ಲಿ ನಮ್ಮ ಕುಡ್ಲ ವಾಹಿನಿಯ ಸಹಸಂಸ್ಥೆ ವಿಝಾರ್ಡ್‌ ಕೇಬಲ್‌ ನೆಟ್ ವರ್ಕ್‌ನ ಸಿಬಂದಿ ಹರೀಶ್ (45) ವಿಧಿವ*ಶರಾಗಿದ್ದಾರೆ. ಕರ್ತವ್ಯ ನಿಮಿತ್ತ ಫರಂಗಿಪೇಟೆಗೆ ತೆರಳಿದ್ದ ಹರೀಶ್ ಪಡೀಲ್‌ ಕಣ್ಣೂರು ಬಳಿ ಬೈಕ್ ನಿಲ್ಲಿಸಿದ್ದ ವೇಳೆ ವೇಗವಾಗಿ ಬಂದ ಡಸ್ಟರ್‌ ಕಾರೊಂದು ಬೈಕ್‌ಗೆ ಡಿ*ಕ್ಕಿ ಹೊಡೆದಿದೆ.


    ಮಹಿಳೆಯೊಬ್ಬರು ಕಾರು ಚಲಾಯಿಸುತ್ತಿದ್ದು, ಬೈಕ್‌ಗೆ ಡಿ*ಕ್ಕಿ ಹೊಡೆದ ಬಳಿಕ ಅಲ್ಪ ದೂರ ಚಲಿಸಿದ ಕಾರಣ ಬೈಕ್ ಸಹಿತ ಹರೀಶ್ ಕಾರಿನ ಅಡಿಗೆ ಸಿಲುಕಿಕೊಂಡಿದ್ದರು. ಈ ಭೀಕರ ಅಪಘಾ*ತದಲ್ಲಿ ಗಂಭೀರ ಗಾಯಗೊಂಡಿದ್ದ ಹರೀಶ್ ಅವರನ್ನು ತಕ್ಷಣ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಅದರೆ, ಚಿಕಿತ್ಸೆ ಫಲಕಾರಿಯಾಗದೆ ಆಸ್ಪತ್ರೆಯಲ್ಲಿ ಅಸುನೀಗಿದ್ದಾರೆ.

    ಹರೀಶ್ ಕಲ್ಲಾಪು ಅವರು ಹಲವಾರು ವರ್ಷಗಳಿಂದ ವಿಝಾರ್ಡ್‌ ಕೆಬಲ್ ನೆಟ್‌ವರ್ಕ್‌ನಲ್ಲಿ ಸೇವೆ ಸಲ್ಲಿಸುತ್ತಿದ್ದರು. ಮಂಗಳೂರು ದಕ್ಷಿಣ ಸಂಚಾರಿ ಪೊಲೀಸರು ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸಿದ್ದು, ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.

    ಇದನ್ನೂ ಓದಿ : ಕಾರ್ಕಳ : ಟಿಪ್ಪರ್ ಹಾಗೂ ಬೈಕ್ ನಡುವೆ ಮುಖಾಮುಖಿ ಡಿ*ಕ್ಕಿ; ಬೈಕ್ ಸವಾರ ಸ್ಥಳದಲ್ಲೇ ಸಾ*ವು

    ಅಗಲಿದ ಸಿಬ್ಬಂದಿಗೆ ನಮ್ಮ ಕುಡ್ಲ ವಾಹಿನಿಯ ನಿರ್ದೇಶಕರು ಹಾಗೂ ಸಿಬಂದಿ ಸಂತಾಪ ಸೂಚಿಸಿ ಕುಟುಂಬಸ್ಥರಿಗೆ ಸಾಂತ್ವನ ಹೇಳಿದ್ದಾರೆ. ಮೃ*ತ ಹರೀಶ್‌ ಅವರು ಪತ್ನಿ ಮತ್ತು ಇಬ್ಬರು ಪುತ್ರರನ್ನು ಅಗಲಿದ್ದಾರೆ.

    Continue Reading

    LATEST NEWS

    Trending