LATEST NEWS
ಉಡುಪಿ: ಮೀನುಗಾರಿಕಾ ಜೆಟ್ಟಿ ಕುಸಿತ-ಅವೈಜ್ಞಾನಿಕ ಕಾಮಗಾರಿ ವಿರುದ್ಧ ಮೀನುಗಾರರ ಆರೋಪ
ಉಡುಪಿ: ಮೀನುಗಾರಿಕಾ ಬಂದರು ಪ್ರದೇಶದಲ್ಲಿ ನೂತನ ಜೆಟ್ಟಿ ನಿರ್ಮಾಣವಾಗುತ್ತಿರುವ ತಾಣದಲ್ಲಿ 150 ಮೀಟರಿಗೂ ಅಧಿಕ ಉದ್ಧದ ಮೀನುಗಾರಿಕಾ ಜೆಟ್ಟಿ ಕುಸಿತವಾದ ಘಟನೆ ಉಡುಪಿ ಜಿಲ್ಲೆಯ ಗಂಗೊಳ್ಳಿಯಲ್ಲಿ ಇಂದು ನಡೆದಿದೆ.
ಇದರಿಂದ ಮೀನುಗಾರರು ಸಂಕಷ್ಟ ಎದುರಿಸುವಂತಾಗಿದೆ. ಗಂಗೊಳ್ಳಿ ಮೀನುಗಾರಿಕಾ ಬಂದರು ಪ್ರದೇಶದಲ್ಲಿ ಹಳೆ ಜೆಟ್ಟಿ ಇರುವಲ್ಲಿ ಸುಮಾರು 12 ಕೋಟಿ ರೂಪಾಯಿ ವೆಚ್ಷದಲ್ಲಿ ನೂತನ ಜೆಟ್ಟಿ ನಿರ್ಮಾಣ ಕಾಮಗಾರಿ ನಡೆಯುತ್ತಿದ್ದು, ಇಂದು ಕೆಲಸ ನಡೆಯುತ್ತಿರುವಾಗಲೇ ಇಲ್ಲಿ ಕುಸಿತ ಸಂಭವಿಸಿದೆ.
ಹಳೆ ಜೆಟ್ಟಿಗೆ ಆಧಾರವಾಗಿದ್ದ ರಾಡ್ ತುಂಡಾಗಿ ನೂತನ ಜೆಟ್ಟಿಗಾಗಿ ನಿರ್ಮಾಣ ಮಾಡಿದ್ದ ಪಿಲ್ಲರ್ ಮೇಲೆ ಮಣ್ಣು ಕುಸಿದು ಬಿದ್ದು ಹಲವು ಪಿಲ್ಲರ್ಗಳಿಗೆ ಹಾನಿಯಾಗಿದೆ.
ಹಳೆಯ ಜೆಟ್ಟಿ 13 ವರ್ಷಗಳ ನಿರ್ಮಾಣವಾಗಿದ್ದು ಇದೀಗ ಆದರ ಸನಿಹದಲ್ಲಿಯೇ ಹೊಸ ಜೆಟ್ಟಿ ನಿರ್ಮಾಣ ಕೆಲಸ ನಡೆಯುತ್ತಿತ್ತು.
ಜೆಟ್ಟಿ ಕುಸಿತದಿಂದಾಗಿ ಮೀನುಗಾರರಿಗೆ ಸಂಕಷ್ಟ ಎದುರಾಗಿದೆ. ಸದ್ಯದ ಪರಿಸ್ಥಿತಿಯಲ್ಲಿ ಮೀನುಗಾರರು ತಾವು ಹಿಡಿದ ಮೀನನ್ನು ಖಾಲಿ ಮಾಡಲು ಬೋಟ್ಗಳನ್ನು ದೂರದ ಭಟ್ಕಳ ಅಥವಾ ಮಲ್ಪೆಗೆ ಕೊಂಡೊಯ್ಯಬೇಕಾದ ಅನಿವಾರ್ಯತೆ ಇದೆ.
ಈ ಜೆಟ್ಟಿಯಲ್ಲಿ 40 ದೊಡ್ಡ ಬೋಟುಗಳು, 100ಕ್ಕೂ ಅಧಿಕ ಟ್ರಾಲ್ ಬೋಟುಗಳು, ಸಿಂಗಲ್ ಬೋಟುಗಳು, 300ಕ್ಕೂ ಅಧಿಕ ನಾಡ ದೋಣಿಗಳು ಲಂಗರು ಹಾಕುತ್ತವೆ.
ಅಧಿಕಾರಿಗಳ ಬೇಜವಬ್ದಾರಿತನ ಹಾಗೂ ಗುತ್ತಿಗೆದಾರರ ನಿರ್ಲಕ್ಷ್ಯ ಈ ಘಟನೆಗೆ ಕಾರಣ ಎಂದು ಮೀನುಗಾರರು ಆರೋಪಿಸಿ ಆಕ್ರೋಶ ವ್ಯಕ್ತ ಪಡಿಸಿದ್ದಾರೆ.
DAKSHINA KANNADA
ಪತ್ನಿ ಮಗಳೊಂದಿಗೆ ಸರತಿ ಸಾಲಿನಲ್ಲಿ ನಿಂತು ಮತ ಚಲಾಯಿಸಿದ ಪದ್ಮರಾಜ್ ಪೂಜಾರಿ
ಮಂಗಳೂರು: ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಪೂಜಾರಿ ಮಂಗಳೂರಿನಲ್ಲಿ ತಮ್ಮ ಮತ ಚಲಾಯಿಸಿದ್ದಾರೆ. ಮಂಗಳೂರಿನ ಕಪಿತಾನಿಯೋ ಶಾಲೆಯ ಮತಗಟ್ಟೆಗೆ ತನ್ನ ಪತ್ನಿ ಹಾಗೂ ಮಗಳ ಜೊತೆ ಆಗಮಿಸಿ ಮತ ಚಲಾಯಿಸಿದ್ದಾರೆ.
ಮುಂಜಾನೆ ಏಳುಗಂಟೆಗೆ ಮತಗಟ್ಟೆಗೆ ಆಗಮಿಸಿದ ಪದ್ಮರಾಜ್ ಅವರು ಬರುವ ವೇಳೆಗೆ ಜನರು ಮತದಾನಕ್ಕೆ ಸರತಿ ಸಾಲಿನಲ್ಲಿ ನಿಂತಿದ್ದರು. ಹೀಗಾಗಿ ಪದ್ಮರಾಜ್ ಹಾಗೂ ಅವರ ಪತ್ನಿ ಮತ್ತು ಮಗಳು ಸರತಿ ಸಾಲಿನಲ್ಲಿ ನಿಂತೇ ಮತ ಚಲಾಯಿಸಿದ್ದಾರೆ. ಪದ್ಮರಾಜ್ ಆಗಮಿಸುವ ವೇಳೆ ಅವರ ಸಾಕಷ್ಟು ಅಭಿಮಾನಿಗಳು ಮತಗಟ್ಟೆಯ ಹೊರಗೆ ನಿಂತು ಅವರಿಗೆ ಶುಭ ಕೋರಿದ್ದಾರೆ.
ಮತದಾನ ಮಾಡಿದ ಪದ್ಮರಾಜ್ ಬಳಿಕ ಕ್ಷೇತ್ರದಲ್ಲಿ ಮತದಾನ ಪ್ರಕ್ರಿಯೆ ವೀಕ್ಷಣೆಗೆ ತೆರಳಿದ್ದಾರೆ.
DAKSHINA KANNADA
ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ
ಬೆಂಗಳೂರು: ರಾಜ್ಯದ 14 ಲೋಕಸಭಾ ಕ್ಷೇತ್ರಗಳ ಮೊದಲನೇ ಹಂತದ ಮತದಾನ ಇಂದು ಬೆಳಗ್ಗೆ 7 ಗಂಟೆಯಿಂದಲೇ ಆರಂಭಗೊಂಡಿದೆ.
ಲೋಕಸಭಾ ಚುನಾವಣೆಯ ಎರಡನೇ ಹಂತದ ಮತದಾನ ಇದಾಗಿದ್ದು, ಕರ್ನಾಟಕದಲ್ಲಿ ಇಂದು ಮೊದಲ ಹಂತದ ಮತದಾನವಾಗಿದೆ. ಮತದಾರರು ತಮ್ಮ ತಮ್ಮ ಮತ ಕ್ಷೇತ್ರಗಳಲ್ಲಿ ಬೆಳಿಗ್ಗೆಯಿಂದಲೇ ಸರತಿ ಸಾಲಿನಲ್ಲಿ ನಿಂತು ಶಾಂತಿಯುತವಾಗಿ ಮತದಾನ ಮಾಡುತ್ತಿದ್ದಾರೆ.
ಅದರಂತೆ ಬೆಂಗಳೂರು ಉತ್ತರ, ಬೆಂಗಳೂರು ದಕ್ಷಿಣ, ಬೆಂಗಳೂರು ಸೆಂಟ್ರಲ್, ಬೆಂಗಳೂರು ಗ್ರಾಮಾಂತರ, ಮೈಸೂರು-ಕೊಡಗು, ಚಾಮರಾಜನಗರ, ಮಂಡ್ಯ, ತುಮಕೂರು, ಕೋಲಾರ, ಹಾಸನ, ಉಡುಪಿ-ಚಿಕ್ಕಮಗಳೂರು, ಚಿಕ್ಕಬಳ್ಳಾಪುರ, ದಕ್ಷಿಣ ಕನ್ನಡ, ಚಿತ್ರದುರ್ಗ ಕ್ಷೇತ್ರಗಳಲ್ಲಿ ಬೆಳಿಗ್ಗೆಯಿಂದಲೇ ಮತದಾನ ಆರಂಭವಾಗಿದ್ದು ಸಂಜೆ 6 ಗಂಟೆಯವರೆಗೆ ಮತದಾನ ಪ್ರಕ್ರಿಯೆ ನಡೆಯಲಿದೆ.
DAKSHINA KANNADA
ನರ್ಸ್ಗೆ ಶಾಕ್ ನೀಡಿದ ಅಂಬ್ಯುಲೆನ್ಸ್..! ಇದು ಮನಕಲಕುವ ಘಟನೆ..!
ನಿರಂಜಿನಿ… ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ತಾಲೂಕಿನ ಕೆವಿಜಿ ಮೆಡಿಕಲ್ ಕಾಲೇಜಿನಲ್ಲಿರೋ ಆಸ್ಪತ್ರೆಯ ತುರ್ತು ಸೇವಾ ವಿಭಾಗದಲ್ಲಿ ಕೆಲಸ ಮಾಡುತ್ತಿರುವ ಯುವತಿ. ಮುಂಜಾನೆ ಆಸ್ಪತ್ರೆಗೆ ಬಂದ್ರೆ ಡ್ಯೂಟಿ ಮುಗಿಸಿ ಮತ್ತೆ ಮನೆಗೆ ವಾಪಾಸಾಗೋದು ಸಂಜೆಯ ವೇಳೆಗೆ. ಆಸ್ಪತ್ರೆಯಲ್ಲಿರೋ ಆಕೆಗೆ ಸಾವು ನೋವು ಎಲ್ಲವನ್ನೂ ನೋಡಿ ಅಭ್ಯಾಸ ಆಗಿದೆ. ಆದ್ರೆ ಇಂದು ಮಾತ್ರ ಅಂಬ್ಯುಲೆನ್ಸ್ನಲ್ಲಿ ಬಂದಿರೋ ಮೃತ ದೇಹ ನೋಡಿ ಆಕೆಯ ಆಕ್ರಂದನ ಮುಗಿಲು ಮುಟ್ಟಿದೆ. ಆಕೆಯ ಆಕ್ರಂದನ ನೋಡಿ ಶಾಕ್ ಆದ ಇತರ ಸಿಬ್ಬಂದಿ ವಿಚಾರ ತಿಳಿದ ಬಳಿಕ ತಾವೂ ಕಂಬನಿ ಮಿಡಿದಿದ್ದಾರೆ.
ಇಂದು ನಿರಂಜಿನಿ ಆಸ್ಪತ್ರೆಗೆ ಬಂದು ತುರ್ತು ಚಿಕಿತ್ಸಾ ವಿಭಾಗದಲ್ಲಿ ಡ್ಯೂಟಿಯಲ್ಲಿದ್ದ ವೇಳೆ ಅಂಬ್ಯುಲೆನ್ಸ್ ಒಂದು ವೇಗವಾಗಿ ಬಂದು ಗಂಭೀರವಾಗಿದ್ದ ಇಬ್ಬರನ್ನು ತುರ್ತು ಚಿಕಿತ್ಸಾ ವಿಭಾಗಕ್ಕೆ ಶಿಫ್ಟ್ ಮಾಡಿದೆ. ದೇಹ ಜರ್ಜರಿತವಾಗಿದ್ದ ಒಂದು ದೇಹವನ್ನು ಅಂಬ್ಯುಲೆನ್ಸ್ನಿಂದ ಇಳಿಸಿದಾಗ ಅದಾಗಲೇ ಆ ವ್ಯಕ್ತಿಯ ಪ್ರಾಣ ಪಕ್ಷಿ ಹಾರಿ ಹೋಗಿತ್ತು. ಮತ್ತೊಂದು ಮಹಿಳೆಯೂ ಗಂಭೀರವಾಗಿದ್ದು ತಕ್ಷಣ ಅವರನ್ನು ತುರ್ತು ಚಿಕಿತ್ಸೆಗೆ ದಾಖಲಿಸಲಾಗಿತ್ತು. ಈ ವೇಳೆ ಮೃತ ದೇಹವನ್ನು ನೋಡಿದ ನಿರಂಜನಿ ಇದ್ದಕ್ಕಿದ್ದಂತೆ ಜೋರಾಗಿ ಅಳಲು ಆರಂಭಿಸಿದ್ದಾಳೆ. ಆಕೆಯ ಅಳುವಿಗೆ ಕಾರಣವಾಗಿದ್ದು ಅಲ್ಲಿದ್ದ ಮೃತ ದೇಹ ಆಕೆಯ ತಂದೆಯದೇ ಆಗಿದ್ದು.
ಮುಂಜಾನೆ ತಂದೆ ತಾಯಿ ಇಬ್ಬರೂ ಅಜ್ಜಾವರ ಗ್ರಾಮದಲ್ಲಿನ ಕೆಎಫ್ಡಿಸಿಗೆ ಕೆಲಸಕ್ಕೆ ಹೋಗಿ ವಾಪಾಸಾಗುವಾಗ ಜೀಪ್ ಒಂದು ಇವರ ಬೈಕ್ಗೆ ಡಿಕ್ಕಿ ಹೊಡೆದಿದೆ. ಜೀಪ್ ಅಡಿಗೆ ಬಿದ್ದಿದ್ದ ತಂದೆ ವಿನಾಯಕ ಮೂರ್ತಿ ಮೃ*ತ ಪಟ್ಟಿದ್ದರೆ, ತಾಯಿ ಮಂಜುಳ ಕೂಡಾ ಗಂಭೀರವಾಗಿ ಗಾಯಗೊಂಡಿದ್ದಾರೆ. ಆದ್ರೆ ಇದ್ಯಾವುದು ವಿಚಾರ ಗೊತ್ತಿಲ್ಲದ ನಿರಂಜಿನಿ ಎಂದಿನಂತೆ ಇದೂ ಒಂದು ಅಕ್ಸಿಡೆಂಟ್ ಕೇಸ್ ಅಂತ ಅಟೆಂಡ್ ಮಾಡಲು ಹೋಗಿದ್ದಾಳೆ. ಅಂಬ್ಯುಲೆನ್ಸ್ನಲ್ಲಿ ತಂದೆಯ ಮೃತ ದೇಹ ಹಾಗೂ ಪ್ರಜ್ಞಾ ಹೀನ ಸ್ಥಿತಿಯಲ್ಲಿ ತಾಯಿಯನ್ನ ನೋಡಿದ್ರೆ ಮಗಳ ಪರಿಸ್ಥಿತಿ ಹೇಗಿರಬಹುದು ಅನ್ನೋದು ಊಹಿಸಲೂ ಅಸಾದ್ಯ. ತಾಯಿ ಮಂಜುಳ ಪರಿಸ್ಥಿತಿ ಕೂಡಾ ಗಂಭೀರವಾಗಿದ್ದು, ಬೆನ್ನು ಮೂಳೆಗೆ ಗಾಯವಾದ ಮಾಹಿತಿ ಇದೆ. ಹೀಗಾಗಿ ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರು ಆಸ್ಪತ್ರೆಗೆ ದಾಖಲಿಸಲಾಗಿದೆ.