Sunday, November 27, 2022

ಕಾಸರಗೋಡು ಸಮುದ್ರದಲ್ಲಿ ಮುಳುಗಿದ ದೋಣಿ : 5 ಮೀನುಗಾರರ ರಕ್ಷಣೆ..!

ಕಾಸರಗೋಡು ಸಮುದ್ರದಲ್ಲಿ ಮುಳುಗಿದ ದೋಣಿ : 5 ಮೀನುಗಾರರ ರಕ್ಷಣೆ..!

ಕಾಸರಗೋಡು : ಅಲೆಗಳ ಅಬ್ಬರಕ್ಕೆ ಸಿಲುಕಿದ ಮೀನುಗಾರಿಕಾ ಬೋಟ್ ಮಗುಚಿ ಐವರು ಮೀನುಗಾರರು ಸಮುದ್ರದಲ್ಲಿ ಸಿಲುಕಿದ ಘಟನೆ ಬೇಕಲದಲ್ಲಿ ನಡೆದಿದೆ.

ಈ ಬಗ್ಗೆ ಮಾಹಿತಿ ಪಡೆದ ಕರಾವಳಿ ರಕ್ಷಣಾ ಪಡೆ ಹಾಗೂ ಮೀನುಗಾರಿಕಾ ಇಲಾಖಾ ರಕ್ಷಣಾ ಪಡೆ ಸಿಬ್ಬಂದಿ ಮೀನುಗಾರರನ್ನು ರಕ್ಷಿಸಿದ್ದಾರೆ.

ನಿನ್ನೆ ರಾತ್ರಿ ಈ ಘಟನೆ ನಡೆದಿದ್ದು, ಕಾಸರಗೋಡು ತೀರದಿಂದ ಹತ್ತು ನಾಟಿಕಲ್ ಮೈಲ್ ದೂರದಲ್ಲಿ ಬೋಟ್ ಅಲೆಗಳ ಅಬ್ಬರಕ್ಕೆ ಮಗುಚಿ ಇಬ್ಭಾಗಗೊಂಡಿದ್ದು, ಬೋಟ್ ನ ಒಂದು ಭಾಗದಲ್ಲಿ ಮೀನುಗಾರರು ಸಿಲುಕಿಕೊಂಡಿದ್ದರು.

ಈ ಬಗ್ಗೆ ಕರಾವಳಿ ರಕ್ಷಣಾ ಪಡೆಗೆ ಲಭಿಸಿದ ಮಾಹಿತಿಯಂತೆ ದೌಡಾಯಿಸಿದ ಸಿಬ್ಬಂದಿ ಐವರನ್ನು ರಕ್ಷಿಸಿ ದಡಕ್ಕೆ ಕರೆ ತಂದಿದ್ದಾರೆ.

ಎರಡು ದಿನಗಳ ಹಿಂದೆ ನೀಲೇಶ್ವರ ಆಯಿತ್ತಲದಿಂದ ತೆರಳಿದ್ದ ಮರಿಯ ಎಂಬ ಈ ಬೋಟ್ ದುರಂತಕ್ಕೀಡಾಗಿದ್ದು, ಬೋಟ್ ನಲ್ಲಿದ್ದವರು ತಿರುವನಂತಪುರ ನಿವಾಸಿಗಳೆಂದು ತಿಳಿದು ಬಂದಿದೆ.

LEAVE A REPLY

Please enter your comment!
Please enter your name here

Hot Topics

ಬಂಟ್ವಾಳದಲ್ಲಿ ಪಿಕಪ್ ವಾಹನಕ್ಕೆ ಗುದ್ದಿದ ಕಾರು..

ಬಂಟ್ವಾಳ: ವಿರುದ್ಧ ದಿಕ್ಕಿನಲ್ಲಿ ಬಂದ ಕಾರೊಂದು ಚಾಲಕನ ನಿಯಂತ್ರಣ ತಪ್ಪಿ ಪಿಕಪ್ ವಾಹನಕ್ಕೆ ಡಿಕ್ಕಿಯಾಗಿ ಬಳಿಕ ಪಿಕಪ್ ವಾಹನ ರಸ್ತೆಯ ಬದಿಯಲ್ಲಿರುವ ಮನೆಗೆ ನುಗ್ಗಿ ಗೋಡೆ ಜರಿದು ಬಿದ್ದಂತಹ ಘಟನೆ ದಕ್ಷಿಣ ಕನ್ನಡ...

ಮಂಗಳೂರು: ಬೆಳ್ಮ ಬೋಲ್ದನ್‌ ಕುಟುಂಬಿಕರ ನಿವಾಸದಲ್ಲಿ ಕೋಲೋತ್ಸವ

ಮಂಗಳೂರು: ಮಂಗಳೂರು ನಗರ ಹೊರವಲಯದ ದೇರಳಕಟ್ಟೆ ಅಡ್ಕರಮಜಲು ಬೆಳ್ಮದ ಬೋಲ್ದನ್‌ ಕುಟುಂಬಿಕರ ತರವಾಡಿನ ಮನೆಯಲ್ಲಿ ಪಂಜುರ್ಲಿ, ಕಲ್ಲುರ್ಟಿ , ಗುಳಿಗ ದೈವಗಳ ನರ್ತನ ಸೇವೆ ವೈಭವದಿಂದ ಜರುಗಿತು.ನವೆಂಬರ್‌ 24ರಂದು ಬೆಳಿಗ್ಗೆ ತರವಾಡು ಮನೆಯಲ್ಲಿ...

ಉಡುಪಿ: ಹೊಟೇಲ್‌ನಲ್ಲಿ ಗ್ಯಾಸ್ ಸೋರಿಕೆಯಾಗಿ ಬೆಂಕಿ ಅನಾಹುತ….

ಉಡುಪಿ: ಹೊಟೇಲ್‌ವೊಂದರಲ್ಲಿ ಗ್ಯಾಸ್ ಸೋರಿಕೆಯಾಗಿ ಬೆಂಕಿ ಅನಾಹುತ ಸಂಭವಿಸಿದ್ದು, ಅಗ್ನಿಶಾಮಕದಳದ ಸಿಬ್ಬಂದಿ ಸಕಾಲಿಕ ಕಾರ್ಯಾಚರಣೆಯಿಂದ ಸಂಭಾವ್ಯ ಅವಘಡವೊಂದು ತಪ್ಪಿದ ಘಟನೆ ಉಡುಪಿ ಜಿಲ್ಲೆಯಲ್ಲಿ ನಡೆದಿದೆ.ಇಲ್ಲಿನ ಸಿಟಿ ಬಸ್ ನಿಲ್ದಾಣ ಸಮಿಪದಲ್ಲಿರುವ ಟಾಪ್ ಟೌನ್...