DAKSHINA KANNADA
ರಸ್ತೆ ಅಪಘಾತದಲ್ಲಿ ಇಂದ್ರಮ್ಮಾ ಮೃತ್ಯು – ಅಂಗಾಂಗಳ ದಾನದಿಂದ ಐದು ರೋಗಿಗಳ ಬಾಳಿಗೆ ಬೆಳಕು..!!
ಉಡುಪಿ : ರಸ್ತೆ ಅಪಘಾತದಲ್ಲಿ ಮೃತಪಟ್ಟ ದಾವಣಗೆರೆಯ ಇಂದ್ರಮ್ಮಾ ಅವರು ಸಾವಲ್ಲೂ ಅಂಗಾಗ ದಾನ ಮಾಡಿ ಐವರ ಬಾಳಿಗೆ ಬೆಳಕಾಗಿದ್ದಾರೆ.
ರಸ್ತೆ ಅಪಘಾತದಲ್ಲಿ ತೀವ್ರಗಾಯಗೊಂಡಿದ್ದ ದಾವಣಗೆರೆಯ ಇಂದ್ರಮ್ಮಾ ಉಡುಪಿ ಮಣಿಪಾಲ ಆಸ್ಪತ್ರೆಗೆ ದಾಖಲಾಗಿದ್ದರು,
ಆದರೆ ಅವರು ಮೆದುಳ ನಿಷ್ಕ್ರಿಯವಾಗಿತ್ತು, ಚಿಕಿತ್ಸೆಗೆ ಸ್ಪಂದಿಸದೇ ಅವರು ಇಂದು ಆಸ್ಪತ್ರೆಯಲ್ಲಿ ಮೃತಪಟ್ಟಿದ್ದರ ಹಿನ್ನೆಲೆಯಲ್ಲಿ ಅವರ ಕುಟುಂಬದವರು ಅವರ ದೇಹದ ಅಂಗಾಂಗಳನ್ನು ದಾನ ಮಾಡಿದ್ದಾರೆ.
ಮಣಿಪಾಲ ವೈದ್ಯರ ಸಹಾಯದಿಂದ ಅವರ ಅಂಗಾಂಗಳಾದ ಹೃದಯ,ಮೂತ್ರಪಿಂಡ ಹಾಗೂ ಇನ್ನಿತರ ದೇಹದ ಅಂಗಾಂಗಳನ್ನು ತೆಗೆದು ಚೈನೈ ಆಸ್ಪತ್ರೆಗೆ ಹಸ್ತಾಂತರ ಮಾಡಿದ್ದಾರೆ.
ಅಲ್ಲಿ ಐದು ಜನ ರೋಗಿಗಳಿಗೆ ಇವರ ಅಂಗಾಂಗಳನ್ನು ದಾನ ಮಾಡುವುದಾಗಿ ಮಣಿಪಾಲ ವೈದ್ಯರು ತಿಳಿಸಿದ್ದಾರೆ.
ಮಣಿಪಾಲ ಠಾಣೆಯ ಸರ್ಕಲ್ ಇನ್ಸ್ಪೆಕ್ಟರ್ ಮಂಜುನಾಥ್ ಗೌಡ ಹಾಗೂ ಸಬ್ ಇನ್ಸ್ಪೆಕ್ಟರ್ ರಾಜ್ ಶೇಖರ್ ಅವರ ಸಹಾಯದೊಂದಿಗೆ ಎರಡು ಆಂಬ್ಯುಲೆನ್ಸ್ ನಲ್ಲಿ ಅಂಗಾಂಗಳನ್ನು ಮಂಗಳೂರು ವಿಮಾನ ನಿಲ್ದಾಣಕ್ಕೆ ತೆರಳಿ ಅಲ್ಲಿಂದ ಚೈನೈ ಆಸ್ಪತ್ರೆಗೆ ತೆರಳಿವೆ. ಇಂದ್ರಮ್ಮಾ ಅವರ ಅಂಗಾಂಗಳ ದಾನದಿಂದ ಐದು ರೋಗಿಗಳ ಬಾಳಿಗೆ ಬೆಳಕಾಗಲಿದೆ.
DAKSHINA KANNADA
ಕಡಬ: ಬಿಳಿನೆಲೆ ಕಾಡಿನಲ್ಲಿ ಅಸ್ಥಿಪಂಜರ ಪತ್ತೆ ..!
ಕಡಬ: ಬಿಳಿನೆಲೆ ಗ್ರಾಮದ ಹಳೆ ನರ್ಸರಿ ಬಳಿಯಿರುವ ಕಾಡಿನಲ್ಲಿ ಅಸ್ಥಿಪಂಜರ ಪತ್ತೆಯಾಗಿರುವ ಬಗ್ಗೆ ಎ.19ರಂದು ವರದಿಯಾಗಿದೆ. ಸುಬ್ರಹ್ಮಣ್ಯ-ಉಪ್ಪಿನಂಗಡಿ ರಾಜ್ಯ ಹೆದ್ದಾರಿಯ ಪಕ್ಕದಲ್ಲಿರುವ ರಕ್ಷಿತಾರಣ್ಯದ ಪಕ್ಕದಲ್ಲಿ ಅಸ್ಥಿಪಂಜರ ದೊರಕಿದೆ.
ಬಿಳಿನೆಲೆಯ ಚಂದ್ರಶೇಖರ್ ಎಂವರು ಕಾಡಿಗೆ ಸೌದೆ ತರಲು ಹೋಗಿದ್ದಾಗ ಕೊಳೆತ ವಾಸನೆ ಬಂದಿದೆ. ಈ ಬಗ್ಗೆ ಹುಡುಕಾಡಿದಾಗ ಮೃತ ವ್ಯಕ್ತಿಯ ಅಸ್ಥಿಪಂಜರ ಕಂಡುಬಂದಿದೆ. ದೂರದದಲ್ಲಿದ್ದ ಮರದ ಕೊಂಬೆಯಲ್ಲಿ ಬಟ್ಟೆಯೊಂದು ನೇತಾಡುವುದು ಕಂಡು ಬಂದಿದೆ.
Read More..;ಸೈಕಲ್ ರಿಪೇರಿ ವಿಚಾರಕ್ಕೆ ಜೀ*ವಾಂತ್ಯಗೊಳಿಸಿದ ಬಾಲಕ..!
ಈ ಬಗ್ಗೆ ಕಡಬ ಪೊಲೀಸ್ ಠಾಣೆಯಲ್ಲಿ ಯುಡಿ ಆರ್:12/2024 ಕಲಂ:174(3),(iv) CrPC ರಂತೆ ಪ್ರಕರಣ ದಾಖಲಾಗಿದ್ದು, ಪೊಲೀಸರು ಪರಿಶೀಲನೆ ನಡೆಸುತ್ತಿದ್ದಾರೆ.
DAKSHINA KANNADA
ಕಾಂಗ್ರೆಸ್ ತೊರೆದು ಬಿಜೆಪಿ ಸೇರಿದ ಮಂಗಳೂರು ಮಾಜಿ ಮೇಯರ್ ಕವಿತಾ ಸನಿಲ್
ಬಂಟ್ವಾಳ : ಅನೇಕ ವರ್ಷಗಳಿಂದ ಕಾಂಗ್ರೆಸ್ ಪಕ್ಷದಲ್ಲಿ ಕಾರ್ಪೋರೇಟರ್ ಆಗಿ ಮೇಯರ್ ಆಗಿದ್ದ ಕವಿತಾ ಸನಿಲ್ ಇದೀಗ ಬಿಜೆಪಿ ಸೇರ್ಪಡೆಯಾಗಿದ್ದಾರೆ. ಕಾಂಗ್ರೆಸ್ ಪಕ್ಷದಲ್ಲಿ ಮುಂಚೂಣಿಯಲ್ಲಿದ್ದ ಕವಿತಾ ಸನಿಲ್ ವಿಧಾನ ಸಭಾ ಚುನಾವಣೆಯಲ್ಲೂ ಸಾಕಷ್ಟು ಪ್ರಚಾರ ಮಾಡಿದ್ರು. ಸಿಎಂ ಸಿದ್ದರಾಮಯ್ಯ ಅವರಿಗೂ ಉತ್ತಮ ಒಡನಾಟ ಇಟ್ಟುಕೊಂಡಿದ್ದ ಕವಿತಾ ಸನಿಲ್ ಸದ್ಯ ಪಕ್ಷದ ನಾಯಕರ ಬಗ್ಗೆ ಅಸಮಾಧಾನಗೊಂಡಿದ್ದಾರೆ.
ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ್ರೂ ತನಗೆ ಸೂಕ್ತ ಸ್ಥಾನಮಾನ ನೀಡಿಲ್ಲ ಎಂದು ಪಕ್ಷ ಚಟುವಟಿಕೆಯಿಂದ ದೂರ ಉಳಿದಿದ್ದರು. ಯಾವುದಾದರು ಒಂದು ನಿಗಮ ಸಿಗಬಹುದು ಎಂಬ ಅವರ ನಿರೀಕ್ಷೆ ಹುಸಿಯಾದ ಹಿನ್ನಲೆಯಲ್ಲಿ ಇದೀಗ ಬಿಜೆಪಿ ಪಕ್ಷಕ್ಕೆ ಸೇರ್ಪಡೆಯಾಗಿದ್ದಾರೆ. ಬಂಟ್ವಾಳಕ್ಕೆ ಆಗಮಿಸಿದ್ದ ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಅವರಿಂದ ಬಿಜೆಪಿ ಬಾವುಟ ಪಡೆದು ಪಕ್ಷಕ್ಕೆ ಸೇರ್ಪಡೆಯಾಗಿದ್ದಾರೆ.
ಇದನ್ನೂ ಓದಿ : ಸೂಪರ್ ಹಿಟ್ ಚಿತ್ರ ‘ಮಂಜುಮ್ಮೆಲ್ ಬಾಯ್ಸ್’ ಓಟಿಟಿ ರಿಲೀಸ್ ಡೇಟ್ ಫಿಕ್ಸ್!
DAKSHINA KANNADA
‘ಕೇಸರಿಕರಣ’ವಾದ ಡಿಡಿ ನ್ಯೂಸ್..! ಚರ್ಚೆಗೆ ಕಾರಣವಾದ ಹೊಸ ಲೋಗೋ..!
ಮಂಗಳೂರು : ಚುನಾವಣಾ ಸಮಯದಲ್ಲೇ ದೇಶದ ಸರ್ಕಾರಿ ಚಾನೆಲ್ ದೂರದರ್ಶನ ತನ್ನ ಲೋಗೋದ ಬಣ್ಣವನ್ನು ಬದಲಾಯಿಸಿದೆ. ಡಿಡಿ ನ್ಯೂಸ್ ತನ್ನ ಲೋಗೋ ಬಣ್ಣವನ್ನು ಕೇಸರಿ ಬಣ್ಣಕ್ಕೆ ಬದಲಾಯಿಸಿರುವುದು ಈಗ ಚರ್ಚೆಗೆ ಕಾರಣವಾಗಿದೆ. 1959 ರಲ್ಲಿ ಆರಂಭವಾಗಿದ್ದ ದೂರದರ್ಶನದ ಲೋಗೋ ನೀಲಿ ಬಣ್ಣದಾಗಿದ್ದು, ಇದೀಗ ಚುನಾವಣೆಯ ಹೊಸ್ತಿಲಲ್ಲಿ ಕೇಸರಿ ಬಣ್ಣಕ್ಕೆ ಬದಲಾಯಿಸಿದ ಬಗ್ಗೆ ಸಾಕಷ್ಟು ಟೀಕೆಗಳು ವ್ಯಕ್ತವಾಗಿದೆ. ದೇಶದಲ್ಲಿ ಎಲ್ಲವನ್ನೂ ಕೇಸರಿಕರಣ ಮಾಡುವ ಭಾಗವಾಗಿ ಈ ಬದಲಾವಣೆ ಮಾಡಲಾಗಿದೆ ಎಂದು ವಿರೋಧ ಪಕ್ಷಗಳು ಆರೋಪಿಸಿದೆ.
ಕೇಂದ್ರ ಸರ್ಕಾರದ ಪ್ರಸಾರಭಾರತಿ ಅಡಿಯಲ್ಲಿ ಬರುವ ದೂರದರ್ಶನ ಏಕಾಏಕಿ ತನ್ನ ಲೋಗೋವನ್ನು ಕೇಸರಿ ಬಣ್ಣಕ್ಕೆ ಬದಲಾಯಿಸಿದೆ. ಇದನ್ನು ದೂರದರ್ಶನ ತನ್ನ ಅಧಿಕೃತ ‘X’ ಖಾತೆಯಲ್ಲಿ ಹಂಚಿಕೊಂಡಿದ್ದು, ಲೋಗೋ ಕೇವಲ ದೃಶ್ಯ ಸೌಂದರ್ಯದ ಬದಲಾವಣೆಯನ್ನು ಪ್ರತಿಬಿಂಬಿಸುತ್ತದೆ ಎಂದು ಹೇಳಿದ್ದಾರೆ.
While our values remain the same, we are now available in a new avatar. Get ready for a news journey like never before.. Experience the all-new DD News!
We have the courage to put:
Accuracy over speed
Facts over claims
Truth over sensationalismBecause if it is on DD News, it… pic.twitter.com/YH230pGBKs
— DD News (@DDNewslive) April 16, 2024
“ನಮ್ಮ ಮೌಲ್ಯಗಳು ಒಂದೇ ಆಗಿರುವಾಗ, ನಾವು ಈಗ ಹೊಸ ಅವತಾರದಲ್ಲಿ ಸಿಗಲಿದ್ದೇವೆ. ಹಿಂದೆಂದಿಗಿಂತಲೂ ಉತ್ತಮ ಸುದ್ದಿ ಪ್ರಯಾಣಕ್ಕೆ ಸಿದ್ಧರಾಗಿ. ಎಲ್ಲಾ ಹೊಸ ಡಿಡಿ ನ್ಯೂಸ್ ಅನ್ನು ಅನುಭವಿಸಿ! ” ಎಂದು DD News ತನ್ನ ಅಧಿಕೃತ ‘X’ ಹ್ಯಾಂಡಲ್ನಲ್ಲಿ ಅದರ ಹೊಸ ಲೋಗೋದ ವೀಡಿಯೊದೊಂದಿಗೆ ಪೋಸ್ಟ್ ಮಾಡಿದೆ. ಜೊತೆಗೆ “ಕೇವಲ ಧೈರ್ಯದ ಬರವಸೆಯಲ್ಲ..ವೇಗದ ಮತ್ತು ನಿಖರತೆಯ ಬರವಸೆ ; ಹಕ್ಕುಗಳ ಮತ್ತು ಸತ್ಯದ ಬರವಸೆ ; ಸಂವೇದನೆಯ ಹಾಗೂ ಸತ್ಯದ ಬರವಸೆ ; ಯಾಕೆಂದರೆ ಡಿಡಿ ನ್ಯೂಸ್ ನಲ್ಲಿ ಬಂದರೆ ಅದು ಸತ್ಯ! ಡಿಡಿ ನ್ಯೂಸ್ – ಭರೋಸಾ ಸಚ್ ಕಾ..” ಎಂದು ಹೇಳಿಕೊಂಡಿದ್ದಾರೆ.
2012 ಮತ್ತು 2014 ರ ನಡುವೆ ಪ್ರಸಾರ ಭಾರತಿಯ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಯಾಗಿ (CEO) ಸೇವೆ ಸಲ್ಲಿಸಿದ ಅಖಿಲ ಭಾರತ ತೃಣಮೂಲ ಕಾಂಗ್ರೆಸ್ (AITC) ರಾಜ್ಯಸಭಾ ಸಂಸದ ಜವಾಹರ್ ಸಿರ್ಕಾರ್ ಈ ಬೆಳವಣಿಗೆಯನ್ನು ಟೀಕಿಸಿದ್ದಾರೆ. ಪ್ರಸಾರ ಭಾರತಿ ದೂರದರ್ಶನ ಮತ್ತು ಆಲ್ ಇಂಡಿಯಾ ರೇಡಿಯೊ (AIR) ಮೇಲ್ವಿಚಾರಣೆ ಮಾಡುವ ಶಾಸನಬದ್ಧ ಸಂಸ್ಥೆಯಾಗಿದೆ.”ರಾಷ್ಟ್ರೀಯ ಬ್ರಾಡ್ಕಾಸ್ಟರ್ ತನ್ನ ಬ್ರ್ಯಾಂಡಿಂಗ್ಗಾಗಿ ಕೇಸರಿ ಬಣ್ಣವನ್ನು ಆಯ್ಕೆ ಮಾಡಿರುವುದು ಸರಿಯಲ್ಲ” ಎಂದು ಸಿರ್ಕಾರ್ ಸಾಮಾಜಿಕ ಮಾಧ್ಯಮ ಸೈಟ್ ‘X’ ನಲ್ಲಿ ಪೋಸ್ಟ್ ಮಾಡಿದ ವೀಡಿಯೊದಲ್ಲಿ ಹೇಳಿದ್ದಾರೆ “ಇದು ಮಾದರಿ ನೀತಿ ಸಂಹಿತೆಯ ಉಲ್ಲಂಘನೆ ಎಂದು ನಾನು ಪರಿಗಣಿಸುತ್ತೇನೆ” ಎಂದು ಸಿರ್ಕಾರ್ ಹೇಳಿದ್ದಾರೆ, ಲೋಗೋ ಬದಲಾವಣೆ ಮಾಡಿರುವ ಸಮಯವನ್ನು ಪ್ರಶ್ನಿಸಿದ ಅವರು. “ಇದು ರಾಜ್ಯಗಳಲ್ಲಿ ಪ್ರಭಾವ ಬೀರುತ್ತದೆ ಎಂದು ಹೇಳಿದ್ದಾರೆ. ಕೇಸರಿ ಒಂದು ನಿರ್ಧಿಷ್ಟ ಧರ್ಮವನ್ನು ಸೂಚಿಸುವ ಬಣ್ಣವಾಗಿದ್ದು ಅದನ್ನು ದೂರದರ್ಶನ ಬಳಸಿಕೊಂಡಿದ್ದು ತಪ್ಪು” ಎಂದಿದ್ದಾರೆ.
As ex CEO of Prasar Bharati it hurts to see the saffronisation of Doordarshan’s logo
— just before elections!
It will influence voters, by overlaying the colour one religion and Sangh parivar colour with a ‘neutral’ Public Broadcaster and a biassed Govt/Regime! pic.twitter.com/g7m0PH9nMf— Jawhar Sircar (@jawharsircar) April 20, 2024
ದೂರದರ್ಶನದ ಈ ಬೆಳವಣಿಗೆಯ ಬಗ್ಗೆ ವಿರೋಧ ಪಕ್ಷಗಳು ಸಾಕಷ್ಟು ಟೀಕೆ ವ್ಯಕ್ತಪಡಿಸಿದ್ದು, ಹೊಸ ಸಂಸತ್ನಲ್ಲಿ ಒಳಗೆ ಎಲ್ಲಾ ಕಡೆ ಕೇಸರಿಕರಣ ಮಾಡಲಾಗಿದೆ. ಇದೀಗ ದೇಶದ ಜನರನ್ನು ದೂರದರ್ಶನದ ಮೂಲಕ ಕೇಸರಿಕರಣ ಮಾಡಲು ಸರ್ಕಾರ ಮುಂದಾಗಿದೆ ಎಂದು ಆರೋಪಿಸಿದ್ದಾರೆ.