Thursday, September 29, 2022

ಟಿಪ್ಪು ಸುಲ್ತಾನ್‌ ಫ್ಲೆಕ್ಸ್‌ ಹರಿದು ಹಾಕಿದ್ದ ಪುನೀತ್ ಕೆರೆಹಳ್ಳಿ ಸೇರಿ ಮೂವರ ಬಂಧನ

ಬೆಂಗಳೂರು: ಕಾಂಗ್ರೆಸ್ ಸ್ವಾತಂತ್ರ್ಯ ನಡಿಗೆ ಕಾರ್ಯಕ್ರಮದ ಅಂಗವಾಗಿ ಅಳವಡಿಸಿದ್ದ ಟಿಪ್ಪು ಸುಲ್ತಾನ್‌ ಫ್ಲೆಕ್ಸ್‌ ಹರಿದು ಹಾಕಿದ್ದ ಆರೋಪದಡಿ ರಾಷ್ಟ್ರ ರಕ್ಷಣಾ ಪಡೆಯ ಅಧ್ಯಕ್ಷ ಪುನೀತ್ ಕೆರೆಹಳ್ಳಿ ಸೇರಿದಂತೆ ಮೂವರನ್ನು ಹಲಸೂರು ಗೇಟ್ ಠಾಣೆ ಪೊಲೀಸರು ಬಂಧಿಸಿದ್ದಾರೆ.


‘ನೃಪತುಂಗ ರಸ್ತೆ ಹಾಗೂ ಹಡ್ಸನ್‌ ವೃತ್ತದಲ್ಲಿ ಟಿಪ್ಪು ಸುಲ್ತಾನ್ ಭಾವಚಿತ್ರವಿರುವ ಸ್ವಾತಂತ್ರ್ಯ ನಡಿಗೆ ಕಾರ್ಯಕ್ರಮದ ಫ್ಲೆಕ್ಸ್ ಅಳವಡಿಸಲಾಗಿತ್ತು. ಶನಿವಾರ ರಾತ್ರಿ ಸ್ಥಳಕ್ಕೆ ಹೋಗಿದ್ದ ಪುನೀತ್ ಕೆರೆಹಳ್ಳಿ ಹಾಗೂ ಇತರರು, ಫ್ಲೆಕ್ಟ್ ಹರಿದು ಹಾಕಿದ್ದಾರೆ.
ಇದರ ವಿರುದ್ಧ ರಾಜಾಜಿನಗರ ಕಾಂಗ್ರೆಸ್ ಪ್ರಚಾರ ಸಮಿತಿ ಅಧ್ಯಕ್ಷ ಮಂಜುನಾಥ್ ದೂರು ನೀಡಿದ್ದರು.
ಪ್ರಕರಣಕ್ಕೆ ಸಂಬಂಧಿಸಿದಂತೆ ಪುನೀತ್ ಕೆರೆಹಳ್ಳಿ ಸೇರಿ ಮೂವರನ್ನು ಬಂಧಿಸಲಾಗಿದೆ. ಮತ್ತಷ್ಟು ಮಂದಿ ತಲೆಮರೆಸಿಕೊಂಡಿದ್ದಾರೆ.
‘ಫ್ಲೆಕ್ಸ್ ಹರಿದು ಹಾಕುತ್ತಿರುವ ದೃಶ್ಯವನ್ನು ಆರೋಪಿಗಳೇ ವಿಡಿಯೊ ಮಾಡಿ ಸಾಮಾಜಿಕ ಮಾಧ್ಯಮಗಳಲ್ಲಿ ಹರಿಬಿಟ್ಟಿದ್ದಾರೆ. ಅದೇ ವಿಡಿಯೊವನ್ನು ಪುರಾವೆಯಾಗಿ ಪರಿಶೀಲಿಸಲಾಗಿದೆ’ ಎಂದು ಪೊಲೀಸ್‌ ಮೂಲಗಳು ಹೇಳಿವೆ.

LEAVE A REPLY

Please enter your comment!
Please enter your name here

Hot Topics

PFIನ್ನು ಕರ್ನಾಟಕದಲ್ಲಿ ಪೋಷಿಸಿದ್ದು ಕಾಂಗ್ರೆಸ್‌-ಸಚಿವ ಸುನಿಲ್ ವಾಗ್ದಾಳಿ

ಉಡುಪಿ: 'ಪಿಎಫ್‌ಐ ಸಂಘಟನೆಯ ಕಾರ್ಯಕರ್ತರನ್ನು ಕಾಂಗ್ರೆಸ್ ಪೋಷಿಸಿದ್ದೆ ಪಿಎಫ್ ಐ ಇಷ್ಟು ದೊಡ್ಡ ಪ್ರ‌ಮಾಣದಲ್ಲಿ ಕರ್ನಾಟಕದಲ್ಲಿ ಬೆಳೆಯಲು ಕಾರಣವಾಗಿತ್ತು. 175 ಜನರ ಮೇಲೆ ಇದ್ದ ಕೇಸ್ ಅನ್ನು ಸಿದ್ದರಾಮಯ್ಯ ಕಾಲದಲ್ಲಿ ವಾಪಾಸ್ ಪಡೆದಿತ್ತು....

ದೇಶದಲ್ಲಿ ಅಘೋಷಿತ ತುರ್ತು ಪರಿಸ್ಥಿತಿ: PFI ಬ್ಯಾನ್ ಬಗ್ಗೆ M.K ಪೈಝಿ ರಿಯಾಕ್ಷನ್

ಮಂಗಳೂರು: ಪಿಎಫ್‌ಐ ಮತ್ತು ಅದರ ಅಂಗಸಂಸ್ಥೆಗಳ ಮೇಲೆ ನಿಷೇಧ ಹೇರಿರುವ ಒಕ್ಕೂಟ ಸರ್ಕಾರದ ನಿರ್ಧಾರ ದೇಶದ ಸಂವಿಧಾನ ಪ್ರಜೆಗಳಿಗೆ ಖಾತರಿಪಡಿಸಿರುವ ಹಕ್ಕುಗಳಿಗೆ ನೀಡಿರುವ ಬಲವಾದ ಪೆಟ್ಟು ಎಂದು ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...

ತ್ರಿಶೂಲ ವಿತರಣೆ ಮಾಡಿ ಗಲಭೆಗೆ ಕುಮ್ಮಕ್ಕು ನೀಡುವ ಭಜರಂಗದಳ ಮಾಡುತ್ತಿರುವುದು ಸರಿಯೇ..?

ಮಂಗಳೂರು: ಇಲ್ಲಿ ಗಲಭೆಗೆ ಕಾರಣವಾಗುತ್ತಿರುವುದು ಕೇವಲ ಈ ಒಂದು ಸಂಘಟನೆ ಮಾತ್ರವೇ...? ಭಜರಂಗದಳದವರು ತ್ರಿಶೂಲ ವಿತರಣೆ ಮಾಡಿ ಗಲಭೆಗೆ ಕುಮ್ಮಕ್ಕು ನೀಡಿಲ್ಲವೇ ಎಂದು ಮುಸ್ಲಿಂ ಒಕ್ಕೂಟದ ಅಧ್ಯಕ್ಷ ಕೆ ಅಶ್ರಫ್‌ ಪ್ರಶ್ನಿಸಿದ್ದಾರೆ.ಕೇಂದ್ರ ಗೃಹ...