Thursday, October 21, 2021

ಮಾಸ್ಕೋ: ವಿಮಾನ ಪತನ-16 ಜನ ಸಾವು 7 ಜನರಿಗೆ ಗಾಯ

ಮಾಸ್ಕೋ: ರಷ್ಯಾದ ಮೆನ್ಜೆಲಿನ್ಸ್ಕ್ ನಗರದ ಟಾಟರ್ಸ್ತಾನ್​ ಎಂಬಲ್ಲಿ ಲೆಟ್​ ಎಲ್​​-410 ಟರ್ಬೋಲೆಟ್​ ವಿಮಾನ ಪತನಗೊಂಡು ಸುಮಾರು 16 ಪ್ರಯಾಣಿಕರು ಸಾವನ್ನಪ್ಪಿದ್ದಾರೆ.

23 ಪ್ರಯಾಣಿಕರಿದ್ದ ಈ ವಿಮಾನ ಇಂದು ಮುಂಜಾನೆ 9.11 ಪತನಗೊಂಡಿದೆ. ವಿಮಾನದಲ್ಲಿದ್ದ 23 ಮಂದಿಯಲ್ಲಿ 21 ಜನರು ಪ್ಯಾರಾಚೂಟ್​ ಡೈವರ್​ಗಳಾಗಿದ್ದಾರೆ. ಈ ವಿಮಾನ ದುರಂತದಲ್ಲಿ ಸದ್ಯ 7 ಮಂದಿ ಬದುಕುಳಿದಿದ್ದಾರೆ.
ರಷ್ಯಾದ ತುರ್ತು ಪರಿಸ್ಥಿತಿ ಸಚಿವಾಲಯ ಪತನಗೊಂಡ ವಿಮಾನದ ಫೋಟೋಗಳನ್ನು ಬಿಡುಗಡೆ ಮಾಡಿದೆ. ಕೆಳಗೆ ಬಿದ್ದ ವಿಮಾನ ಸಂಪೂರ್ಣ ಜಖಂಗೊಂಡಿದೆ. ಇನ್ನು ಬದುಕುಳಿದ ಏಳು ಜನರನ್ನೂ ಆಸ್ಪತ್ರೆಗೆ ದಾಖಲಿಸಲಾಗಿದೆ. ಅವರಲ್ಲೂ ಒಬ್ಬರ ಪರಿಸ್ಥಿತಿ ತುಂಬ ಗಂಭೀರವಾಗಿದೆ ಎಂದು ರಷ್ಯಾ ಆರೋಗ್ಯ ಸಚಿವಾಲಯ ಮಾಹಿತಿ ನೀಡಿದೆ.
ಈ ವಿಮಾನ ರಷ್ಯಾದ ಸೇನೆ, ನಾಗರಿಕ ಯಾನ ಮತ್ತು ನೌಕಾಪಡೆಗೆ ಸಹಾಯ ಮಾಡಲು ಇರುವ ಒಂದು ಸ್ವಯಂಸೇವಕ ಸಂಸ್ಥೆಗೆ ಸೇರಿದ್ದಾಗಿದೆ ಎಂದು ಅಲ್ಲಿನ ಮಾಧ್ಯಮವೊಂದು ವರದಿ ಮಾಡಿದೆ. ಈ ವರ್ಷದ ಆರಂಭದಲ್ಲಿಯೂ ಕೂಡ ರಷ್ಯಾದಲ್ಲಿ ಎರಡು ಎಲ್ -410 ವಿಮಾನಗಳು ಅಪಘಾತಕ್ಕೀಡಾಗಿವೆ.

Hot Topics

ಸಾಲದ ಹೊರೆ ತಾಳಲಾರದೆ ವೀಡಿಯೋ ಮೂಲಕ ಗುಡ್​ಬೈ ಹೇಳಿ ಶಿಕ್ಷಕ ದಂಪತಿ ಆತ್ಮಹತ್ಯೆ

ವಿಜಯವಾಡ: ಶಾಲೆ ನಡೆಸುತ್ತಿದ್ದ ಶಿಕ್ಷಕ ದಂಪತಿ ಸಾಲದ ಹೊರೆ ತಡೆಯಲಾರದೇ ವಿಷಸೇವಿಸಿ ಆತ್ಮಹತ್ಯೆ ಹಾದಿ ಹಿಡಿರುವ ದಾರುಣ ಘಟನೆ ಆಂಧ್ರ ಪ್ರದೇಶದ ಕರ್ನೂಲ್​ ಜಿಲ್ಲೆಯಲ್ಲಿ ನಡೆದಿದೆ. ಸಾವಿಗೂ ಮುನ್ನ ಶಿಕ್ಷಕ ದಂಪತಿ ತಮ್ಮ...

ಕಾಪುವಿನಲ್ಲಿ ಕಾರು ಅಪಘಾತ ಗಂಭೀರವಾಗಿ ಗಾಯಗೊಂಡಿದ್ದ ಯುವತಿ ಸಾವು..!

ಕಾಪುವಿನಲ್ಲಿ ಕಾರು ಅಪಘಾತ ಗಂಭೀರವಾಗಿ ಗಾಯಗೊಂಡಿದ್ದ ಯುವತಿ ಸಾವು..! ಉಡುಪಿ : ಉಡುಪಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಭಾರಿ ಮಳೆಯ ನಡುವೆ ಭೀಕರ ರಸ್ತೆ ಅಪಘಾತ ಸಂಭವಿಸಿದೆ. ಚಾಲಕನ ನಿಯಂತ್ರಣ ತಪ್ಪಿದ ಕಾರೊಂದು ಕಾಪು ಬಳಿ...

ಮಗು ಸೇರಿದಂತೆ ದಂಪತಿ ಸಾಮೂಹಿಕ ಆತ್ಮಹತ್ಯೆ ಹಳೆಯಂಗಡಿಯಲ್ಲಿ ಹೃದಯ ವಿದ್ರಾವಕ ಘಟನೆ..!

ಮಗು ಸೇರಿದಂತೆ ದಂಪತಿ ಸಾಮೂಹಿಕ ಆತ್ಮಹತ್ಯೆ ಹಳೆಯಂಗಡಿಯಲ್ಲಿ ಹೃದಯ ವಿದ್ರಾವಕ ಘಟನೆ..! ಮಂಗಳೂರು:  ಎಂಟು ವರ್ಷದ ಮಗು ಸೇರಿದಂತೆ ದಂಪತಿ ಸಾಮೂಹಿಕ ಆತ್ಮಹತ್ಯೆ ಮಾಡಿರುವ ದಾರುಣ ಘಟನೆ ಹಳೆಯಂಗಡಿ ಬಳಿಯ ಕಲ್ಲಾಪು ರೈಲ್ವೇ ಗೇಟ್...