Connect with us

    bangalore

    ಅಯೋಧ್ಯೆಗೆ ಹೊರಟ ವಿಮಾನ ದರ ಏರಿಕೆ- ವಾಪಸ್ಸಾದ್ರಾ ರಾಮಭಕ್ತರು..?

    Published

    on

    ಬೆಂಗಳೂರು: ಅಯೋಧ್ಯೆ ರಾಮಮಂದಿರ ಲೋಕಾರ್ಪಣೆಗೆ ಇನ್ನು ಕೆಲವು ದಿನಗಳಷ್ಟೇ ಬಾಕಿ ಇರುವುದು. ಅದೆಷ್ಟೋ ಜನರು ಅಯೋಧ್ಯೆಗೆ ಹೊರಡಲು ಸಿದ್ಧರಾಗಿದ್ದಾರೆ. ಆದರೆ ಇದೀಗ ಅಯೋಧ್ಯೆಗೆ ಹೊರಡಲಿರುವ ರಾಮಭಕ್ತರಿಗೆ ವಿಮಾನ ದರ ಕೇಳಿ ಶಾಕ್ ಆಗಿದೆ.

    ಬೆಂಗಳೂರಿನಿಂದ ಅಯೋಧ್ಯೆಗೆ ವಿಮಾನದ ಮೂಲಕ ಪ್ರಯಾಣಿಸಬೇಕು ಎಂದರೆ ಈ ಮೊದಲು ಕೇವಲ 6 ಸಾವಿರ ರೂಪಾಯಿ ಇತ್ತು. ಆದರೆ ಇದೀಗ ಒಂದೇ ಬಾರಿಗೆ ರೂ.6000 ರಿಂದ ರೂ.21,500ಗೆ ಹೆಚ್ಚಳ ಮಾಡಲಾಗಿದೆ. ಬೇಡಿಕೆಗೆ ಅನುಗುಣವಾಗಿ ವಿಮಾನ ಪ್ರಯಾಣದ ಟಿಕೆಟ್ ದರವನ್ನು ವಿಮಾನಯಾನ ಸಂಸ್ಥೆಗಳು ಹೆಚ್ಚಳ ಮಾಡಿವೆ. ಇದು ರಾಮಭಕ್ತರಿಗೆ ಬೇಸರ ತರಿಸಿದೆ. ಯಾಕೆಂದರೆ ಅದೆಷ್ಟೋ ಜನ ಹೋಗಬೇಕು ಎಂದು ನಿರ್ಧಾರ ಮಾಡಿರುತ್ತಾರೆ. ಆದರೆ ಕೆಲವರಿಗೆ ಹಣದ ಸಮಸ್ಯೆ ಇರುವರಿಗೆ ತುಂಬಾ ಕಷ್ಟವಾಗಿದ್ದು, ಈ ಸಂಗತಿ ಬೇಸರ ತಂದಿದೆ. ಜನವರಿಗೆ 19ರ ವರೆಗೆ ರೂ.21,500 ಇರುವ ವಿಮಾನದ ಟಿಕೆಟ್​ ಅನ್ನು ಜನವರಿ 20 ರಂದು ಮಧ್ಯಾಹ್ನ ಹೊರಡುವ ವಿಮಾನದ ಟಿಕೆಟ್‌ ದರ ರೂ.29,700ಕ್ಕೆ ಹೆಚ್ಚಳ ಮಾಡಲಾಗಿದೆ. ಮಾಮೂಲಿ ದಿನಕ್ಕೆ ಹೋಲಿಸಿದರೆ ಟಿಕೆಟ್‌ ದರದಲ್ಲಿ ಶೇ.395 ಏರಿಕೆ ಕಂಡಿದೆ. ಈಗಾಗಲೇ ಜ.20ಕ್ಕೂ ಮೊದಲೇ ಅಯೋಧ್ಯೆಗೆ ತೆರಳುವ ವಿಮಾನಗಳ ಟಿಕೆಟ್‌ ಎಲ್ಲ ಸೋಲ್ಡ್​ ಔಟ್ ಆಗಿವೆ. ಕೆಲವೇ ಟಿಕೆಟ್‌ಗಳು ಲಭ್ಯವಿದ್ದರೂ ಕೂಡ ಆ ಬೆಲೆ ಕೈಗೆಟುಕದ ಬೆಲೆಯಾಗಿದೆ. ಜನವರಿ 22 ರಂದು ಭಾನುವಾರ ರಜೆ ಇರುವುದರಿಂದ ಜನರು ಅಯೋಧ್ಯೆಯತ್ತ ಪ್ರಯಾಣಿಸುತ್ತಿದ್ದಾರೆ. ರಾಮ ಮಂದಿರ ಉದ್ಘಾಟನೆಗೂ ಮುನ್ನವೇ ಭಕ್ತರು ಅಯೋಧ್ಯೆ ಕಡೆಗೆ ಮುಖ ಮಾಡಿದ್ದಾರೆ. ಭಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಹೋಗುತ್ತಿರುವ ಕಾರಣ ವಿಮಾನ ದರವನ್ನು ಶೇಕಡಾ 400ರಷ್ಟು ಹೆಚ್ಚಿಸಲಾಗಿದೆ.

    bangalore

    ವರದಕ್ಷಿಣೆ ಕಿರುಕುಳ; ನೇ*ಣಿಗೆ ಶರಣಾದ ಟೆಕ್ಕಿ

    Published

    on

    ಮಂಗಳೂರು/ಬೆಂಗಳೂರು : ವರದಕ್ಷಿಣೆ ಕಿರುಕುಳದಿಂದ ಬೇಸತ್ತ ಟೆಕ್ಕಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡ ಘಟನೆ ಬೆಂಗಳೂರಿನ ಗಂಗಮ್ಮನ ಗುಡಿಯಲ್ಲಿ ನಡೆದಿದೆ. ಪೂಜಾ (22) ಜೀವಾಂತ್ಯಗೊಳಿಸಿದ ವಿವಾಹಿತೆ. ಪೂಜಾ ಮನೆಯಲ್ಲೇ ನೇಣಿಗೆ ಶರಣಾಗಿದ್ದಾರೆ.

    ಕಳೆದ ಎರಡು ವರ್ಷಗಳ ಹಿಂದೆ ಸುನೀಲ್ ಎಂಬಾತನನ್ನು ಪೂಜಾ ಮದುವೆಯಾಗಿದ್ದರು. ಮದುವೆಯಾದ ಬಳಿಕ ವರದಕ್ಷಿಣೆಗಾಗಿ ಪತಿ ಪೀಡಿಸುತ್ತಿದ್ದ. ಇದರಿಂದ ಮನನೊಂದು ಮಗಳು ಆತ್ಮಹತ್ಯೆಗೆ ಶರಣಾಗಿದ್ದಾಳೆ.

    ಇದನ್ನೂ ಓದಿ : ಸೀಲ್ಡ್​ ತಂಪು ಪಾನೀಯ ಬಾಟಲ್ ಒಳಗಿತ್ತು ಜೇಡರ ಹುಳ!
    ಮಗಳ ಸಾವಿಗೆ ಪತಿ ಸುನೀಲ್ ಹಾಗೂ ಮೈದುನ ಅನಿಲ್ ಕಾರಣ ಎಂದು ಪೂಜಾ ಪೋಷಕರು ಆರೋಪಿಸಿದ್ದಾರೆ. ಈ ಬಗ್ಗೆ ಗಂಗಮ್ಮನಗುಜಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

    Continue Reading

    bangalore

    ಈ ಪುಣ್ಯಕ್ಷೇತ್ರಕ್ಕೆ ಹೋಗಲು ರಾಜ್ಯ ಸರ್ಕಾರದಿಂದ ಸಹಾಯಧನ ಸಿಗಲಿದೆ..!

    Published

    on

    ಬೆಂಗಳೂರು : ಕರ್ನಾಟಕ ರಾಜ್ಯದಿಂದ ಕೈಲಾಸ ಮಾನಸ ಸರೋವರ ಹಾಘೂ ಚಾರ್‌ಧಾಮ್‌ ಯಾತ್ರಿಗಳಿಗೆ ಅನುದಾನ ನೀಡುವ ಕುರಿತು ಮುಜರಾಯಿ ಇಲಾಖೆ ಮಾರ್ಗಸೂಚಿ ಹೊರಡಿಸಿದೆ. ಮಾನಸ ಸರೋವರ ಯಾತ್ರಿಗಳಿಗೆ ರೂ.30 ಸಾವಿರ, ಚಾರ್‌ಧಾಮ್‌ ಯಾತ್ರಿಗಳಿಗೆ ರೂ.20 ಸಾವಿರ , ಹಾಗೂ ಈಗಾಗಲೇ ಕಾಶಿ ಯಾತ್ರೆ ಕೈಗೊಂಡ 30 ಸಾವಿರ ಯಾತ್ರಿಗಳಿಗೆ ತಲಾ ರೂ.5 ಸಾವಿರ ಸಹಾಯಧನ ನೀಡಲಾಗುತ್ತದೆ.
    ಕೇವಲ ಕರ್ನಾಟಕ ರಾಜ್ಯದ ಖಾಯಂ ನಿವಾಸಿಗಳು ಮಾತ್ರ ಈ ಸಹಾಯಧನ ಪಡೆಯಲು ಅರ್ಹರಾಗಿದ್ದಾರೆ. ಈಗಾಗಲೇ ಈ ತೀರ್ಥ ಕ್ಷೇತ್ರಗಳಿಗೆ ಹೋಗಿ ಬಂದಿರುವವರು ಸಹಾಯಧನವನ್ನು ಪಡೆಯಲು ಅರ್ಹರಾಗಿದ್ದಾರೆ. ಇದಕ್ಕಾಗಿ ರೂ.25 ಪಾವತಿಸಿ ಸಂಬಂಧಿಸಿದ ವೆಬ್‌ಸೈಟ್ ಅಥವಾ ಮೊಬೈಲ್ ಆಪ್ ಮೂಲಕ ಆನ್‌ಲೈನ್ ಅರ್ಜಿ ಸಲ್ಲಿಸಬಹುದಾಗಿದೆ.

    ಚಾರ್‌ಧಾಮ್ ಯಾತ್ರೆಯ ಮಾರ್ಗಸೂಚಿಗಳು

    • ಕರ್ನಾಟಕದ ಖಾಯಂ ನಿವಾಸಿಯಾಗಿದ್ದು, ಚುನಾವಣಾ ಗುರುತಿನ ಚೀಟಿ ಹಾಗೂ ಆಧಾರ್ ಕಾರ್ಡ್ ಅನ್ನು ಅಪ್‌ಲೋಡ್ ಮಾಡುವುದು.
    • 45 ವರ್ಷ ಮೇಲ್ಪಟ್ಟ ಯಾತ್ರಾರ್ಥಿಗಳು ಮಾತ್ರ ಈ ಯೋಜನೆಯಡಿ ಸಹಾಯಧನವನ್ನು ಪಡೆಯಲು ಅರ್ಹರಾಗಿರುತ್ತಾರೆ. ಇದಕ್ಕೆ ವಯಸ್ಸಿಗೆ ಸಂಬಂಧಿಸಿದ ಸೂಕ್ತ ದಾಖಲೆಯನ್ನು ಅಪ್‌ಲೋಡ್ ಮಾಡಬೇಕು.
    • ಯಾತ್ರಾರ್ಥಿಗಳು ಸಹಾಯಧನವನ್ನು ಒಂದು ಬಾರಿ ಪಡೆದ ನಂತರದಲ್ಲಿ ಅದೇ ವ್ಯಕ್ತಿಗೆ ಮತ್ತೊಮ್ಮೆ ಅನುದಾನ ನೀಡಲಾಗುವುದಿಲ್ಲ.

    ಕಾಶಿ ಯಾತ್ರೆಯ ಮಾರ್ಗಸೂಚಿಗಳು

    • ಕರ್ನಾಟಕ ರಾಜ್ಯದಿಂದ ಕಾಶಿ ಯಾತ್ರೆ ಕೈಗೊಳ್ಳುವ ಯಾತ್ರಾರ್ಥಿಗಳು ಆಯಾ ಆರ್ಥಿಕ ವರ್ಷದ ಮೊದಲ ದಿನಕ್ಕೆ ಅನ್ವಯಿಸುವಂತೆ ಏಪ್ರಿಲ್ 1ಕ್ಕೆ 18 ವರ್ಷಗಳ ಮೇಲ್ಪಟ್ಟವರಾಗಿರತಕ್ಕದ್ದು.
    • 18 ವಯಸ್ಸಿನ ಕೆಳಗಿನವರ ಅರ್ಜಿಗಳನ್ನು ಪರಿಗಣಿಸಲಾಗುವುದಿಲ್ಲ. 18 ವರ್ಷ ಮೇಲ್ಪಟ್ಟ ಯಾತ್ರಾರ್ಥಿಗಳು ವಯಸ್ಸಿಗೆ ಸಂಬಂಧಿಸಿದ ಸೂಕ್ತ ದಾಖಲೆಯನ್ನು ಹಾಜರುಪಡಿಸಬೇಕು.

     

    ಯಾತ್ರಾರ್ಥಿಗಳ ಅನುಕೂಲಕ್ಕಾಗಿ ಮಾರ್ಗಸೂಚಿಯನ್ನು ಇಲಾಖೆಯ ಅಧಿಕೃತ ವೆಬ್​ಸೈಟ್​ನಲ್ಲಿ ಪ್ರಕಟಿಸಲಾಗುತ್ತದೆ

    Continue Reading

    bangalore

    ಗೋಬಿ ಮಂಚೂರಿ ಆಯ್ತು..! ಈಗ ಚಿಕನ್‌ ಕಬಾಬ್‌, ಫಿಶ್‌ ಫುಡ್‌ ಮೇಲೆ ಕಣ್ಣು…!

    Published

    on

    ಮಂಗಳೂರು : ಫಿಶ್ ಸೇರಿದಂತೆ ಚಿಕನ್ ಕಬಾಬ್ ಆಹಾರದಲ್ಲಿ ಕೃತಕ ಬಣ್ಣ ಬೆರಸುವುದನ್ನ ನಿಷೇಧಿಸಿ ಆಹಾರ ಸುರಕ್ಷತಾ ಇಲಾಖೆ ಆದೇಶ ಹೊರಡಿಸಿದೆ. ಕೆಲವು ಆಹಾರಗಳಲ್ಲಿ ಕೃತಕ ಬಣ್ಣದ ಬಳಕೆ ಆರೋಗ್ಯದ ಮೇಲೆ ದುಷ್ಪರಿಣಾಮ ಬೀರುತ್ತಿರುವ ಹಿನ್ನೆಲೆಯಲ್ಲಿ ಈ ಹಿಂದೆ ಗೋಬಿ ಮಂಚೂರಿ ಹಾಗೂ ಕಾಟನ್ ಕ್ಯಾಂಡಿಗಳಲ್ಲಿ ಕೃತಕ ಬಣ್ಣಗಳ ಬಳಕೆಯನ್ನ ನಿಷೇಧಿಸಲಾಗಿತ್ತು.


    ಇದೀಗ ಆರೋಗ್ಯ ಸಚಿವರ ಸೂಚನೆಯಂತೆ ಪರಿಶೀಲನೆ ನಡೆಸಿದ ಅಧಿಕಾರಿಗಳು ಚಿಕನ್ ಕಬಾಬ್ ಮತ್ತು ಫಿಶ್ ಫುಡ್ ನಲ್ಲಿ ಕಲರಿಂಗ್ ಇರುವುದು ಪತ್ತೆಯಾಗಿದೆ. ಕೃತಕ ಬಣ್ಣ ಬೆರಸುವಿಕೆಯಿಂದಾಗಿ ಚಿಕನ್ ಕಬಾಬ್ ಕಳಪೆಯಾಗಿದ್ದು, ಇದರಿಂದ ಸಾರ್ವಜನಿಕರ ಆರೋಗ್ಯದ ಮೇಲೆ ದುಷ್ಪರಿಣಾಮ ಉಂಟಾಗುತ್ತಿರುವುದು ಕಂಡುಬಂದಿದೆ. ಈ ಹಿನ್ನಲೆಯಲ್ಲಿ ಹಿನ್ನೆಲೆಯಲ್ಲಿ ಚಿಕನ್ ಕಬಾಬ್, ಫಿಶ್ ಆಹಾರಗಳಲ್ಲಿ ಕೃತಕ ಬಣ್ಣ ಬೆರಸುವಿಕೆಯನ್ನ ನಿಷೇಧಿಸಿ ಆಹಾರ ಸುರಕ್ಷತಾ ಆಯುಕ್ತರು ಆದೇಶ ಹೊರಡಿಸಿದ್ದಾರೆ. ಕಾನೂನು ಉಲ್ಲಂಘಿಸಿದ್ರೆ 7 ವರ್ಷದಿಂದ ಜೀವಾವಧಿ ಶಿಕ್ಷೆ ಹಾಗೂ 10 ಲಕ್ಷ ವರೆಗಿನ ದಂಡ ವಿಧಿಸಲು ನ್ಯಾಯಾಲಯದಲ್ಲಿ ಮೊಕದ್ದಮೆ ಹೂಡಲಾಗುವುದು ಎಂದು ಎಚ್ಚರಿಸಲಾಗಿದೆ.

    ರಾಜ್ಯಾದ್ಯಂತ ಮಾರಾಟ ಮಾಡಲಾಗುತ್ತಿರುವ 39 ಕಬಾಬ್‌ಗಳ ಮಾದರಿಗಳನ್ನು ಸಂಗ್ರಹಿಸಿ ರಾಜ್ಯ ಪ್ರಯೋಗಾಲಯಗಳಲ್ಲಿ ಪರೀಕ್ಷಿಸಲಾಗಿದೆ. 08 ಕಬಾಬ್‌ನ ಮಾದರಿಗಳು ಕೃತಕ ಬಣ್ಣದಿಂದ ಕೂಡಿರುವುದರಿಂದ ಅಸುರಕ್ಷಿತ ಎಂದು ವಿಶ್ಲೇಷಣಾ ವರದಿಗಳಲ್ಲಿ ಕಂಡುಬಂದಿದೆ.

    Continue Reading

    LATEST NEWS

    Trending