ಕಾಬೂಲ್: ಅಫ್ಘಾನಿಸ್ತಾನದಿಂದ ಭಾನುವಾರ ಜನರನ್ನು ಸ್ಥಳಾಂತರಿಸುತ್ತಿದ್ದ ಉಕ್ರೇನಿಯನ್ ವಿಮಾನವನ್ನು ಸಶಸ್ತ್ರ ಅಪಹರಣಕಾರರು ಅಪಹರಿಸಿದ್ದಾರೆ.
ಇದನ್ನು ಇರಾನ್‌ಗೆ ಹಾರಾಟ ನಡೆಸಿದ್ದಾರೆ ಎಂದು ಉಕ್ರೇನ್‌ನ ಉಪ ವಿದೇಶಾಂಗ ಸಚಿವ ಯೆವ್ಗೆನಿ ಯೆನಿನ್ ಮಂಗಳವಾರ ರಷ್ಯಾದ ಟಿಎಎಸ್ಎಸ್ ಮಾಧ್ಯಮಕ್ಕೆ ತಿಳಿಸಿದ್ದಾರೆ.
ಕಾಬೂಲ್‌ನಿಂದ ಪ್ರಯಾಣಿಕರೊಂದಿಗೆ ಹಾರುತ್ತಿದ್ದ ಉಕ್ರೇನಿಯನ್ ವಿಮಾನವನ್ನು ಅಪಹರಿಸಿ ಇರಾನ್‌ಗೆ ಕರೆದೊಯ್ಯಲಾಗಿದೆ ಎಂದು ಪತ್ರಕರ್ತ ವಜಾಹತ್ ಕಾಜ್ಮಿ ಟ್ವೀಟ್ ಮಾಡಿದ್ದಾರೆ.
ಕಾಬೂಲ್ ವಿಮಾನ ನಿಲ್ದಾಣದಲ್ಲಿ ಎಲ್ಲಾ ವಿಮಾನ ಕಾರ್ಯಾಚರಣೆಗಳನ್ನು ಸ್ಥಗಿತಗೊಳಿಸಲಾಗಿದೆ ಎಂದು ಅವರು ಹೇಳಿದ್ದಾರೆ.