ಮೇ.12ಕ್ಕೆ ಕಣ್ಣೂರು ಮತ್ತು ಮೇ.14ರಂದು ಮಂಗಳೂರಿಗೆ ವಿದೇಶದಿಂದ ವಿಮಾನಗಳ ಆಗಮನ
ಮೇ.12ಕ್ಕೆ ಕಣ್ಣೂರು ಮತ್ತು ಮೇ.14ರಂದು ಮಂಗಳೂರಿಗೆ ವಿದೇಶದಿಂದ ವಿಮಾನಗಳ ಆಗಮನ
ಮಂಗಳೂರು: ಮೇ.12ಕ್ಕೆ ಕಣ್ಣೂರು ವಿಮಾನ ನಿಲ್ದಾಣ ಮತ್ತು ಮೇ.14ರಂದು ಮಂಗಳೂರು ವಿಮಾನ ನಿಲ್ದಾಣಕ್ಕೆ ವಿದೇಶದಿಂದ ವಿಮಾನಗಳು ಆಗಮಿಸಲಿದೆ.
ಕರಾವಳಿ ಭಾಗದ ಜವಾಬ್ದಾರಿ ವಹಿಸಿಕೊಂಡಿರುವ ಕೇಂದ್ರ ಸಚಿವ ಡಿ.ವಿ ಸದಾನಂದ ಗೌಡರ ಜೊತೆಗೆ ಈಗಾಗಲೇ ಮಾತುಕತೆ ನಡೆಸಿದ್ದೇನೆ ಎಂದು ಶಾಸಕ ಯು.ಟಿ ಖಾದರ್ ಹೇಳಿದ್ದಾರೆ.
ಗಲ್ಫ್, ಮಸ್ಕತ್, ಕತಾರ್, ಸೌದಿ ಅರೆಬಿಯಾ, ಮಧ್ಯಪೂರ್ವ ದೇಶಗಳಲ್ಲಿ ಹೆಚ್ಚಿನ ಕರಾವಳಿಗರು ನೆಲೆಸಿದ್ದಾರೆ.
ಇವರಲ್ಲಿ ಅಸೌಖ್ಯದಿಂದ ಇರುವ ಹಿರಿಯ ನಾಗರಿಕರು, ಗರ್ಭಿಣಿಯರು, ವೀಸಾ ಮುಗಿದವರು, ಪ್ರವಾಸಕ್ಕೆ ತೆರಳಿದವರು ಇದ್ದಾರೆ.
ಅವರನ್ನು ತುರ್ತಾಗಿ ವಾಪಸ್ ಕರೆ ತರಲು ಕೇಂದ್ರ ಸಚಿವ ಡಿ.ವಿ ಸದಾನಂದ ಗೌಡ ಜವಾಬ್ದಾರಿ ವಹಿಸಿಕೊಂಡಿದ್ದಾರೆ.
ಅವರ ಶ್ರಮದಿಂದ ಮಾ.14 ರಂದು ಮಂಗಳೂರು ವಿಮಾನ ನಿಲ್ದಾಣಕ್ಕೂ ವಿಮಾನಗಳು ಬರಲಿವೆ.
ಬರುವ ಮಂದಿಯನ್ನು ಎ,ಬಿ, ಸಿ ಕ್ಯಾಟಗರಿಯಡಿ ವಿಂಗಡಿಸಿ, 14 ದಿನಗಳ ಕಾಲ ಹೋಂ ಕ್ವಾರಂಟೈನ್ ಮತ್ತು ಅಸೌಖ್ಯದಿಂದ ಇರುವವರಿಗೆ ಕೆಲ ಹೊಟೇಲುಗಳಲ್ಲಿ ವ್ಯವಸ್ಥೆ ಮಾಡಲಾಗಿದೆ.
ಅಲ್ಲಿ ಅವರ ಇಚ್ಛೆಯಂತೆ ಉಳಿದುಕೊಳ್ಳಬಹುದು. ಎನ್.ಜಿ.ಓಗಳು ಸಹಕಾರ ನೀಡಲಿದ್ದು, ರಂಝಾನ್ ಉಪವಾಸದ ಸಂದರ್ಭವೂ ಆಗಿರುವುದರಿಂದ ಜಿಲ್ಲಾಡಳಿತಕ್ಕೆ ಬೇಕಾದ ಎಲ್ಲಾ ರೀತಿಯ ಸಹಕಾರ ನೀಡಲು ಸಿದ್ಧ.
ಕಣ್ಣೂರು ವಿಮಾನ ನಿಲ್ದಾಣಕ್ಕೆ ಬರುವ ಕರಾವಳಿಗರಿಗೆ ಜಿಲ್ಲಾಡಳಿತ ಬಸ್ಸು ಕಳುಹಿಸಬೇಕಾಗಿದೆ ಎಂದರು.
ಒಟ್ಟು 15,000 ವಿದೇಶಿಗರು ಕರ್ನಾಟಕಕ್ಕೆ ಆಗಮಿಸಲಿರುವಾಗ ಜಿಲ್ಲೆಯವರು 3 ರಿಂದ 4 ಸಾವಿರ ಮಂದಿ ಇರುವ ಸಾಧ್ಯತೆಗಳಿವೆ ಎಂದು ಖಾದರ್ ಅಭಿಪ್ರಾಯಪಟ್ಟಿದ್ದಾರೆ. .
DAKSHINA KANNADA
ಬೈಕ್-ಕಾರು ನಡುವೆ ಅಪ*ಘಾತ; ಓರ್ವ ಮೃ*ತ್ಯು
ಅರಂತೋಡು: ಬೈಕ್ ಹಾಗೂ ಕಾರಿನ ನಡುವೆ ಸಂಭವಿಸಿದ ಭೀಕರ ರಸ್ತೆ ಅಪ*ಘಾತದಲ್ಲಿ ಬೈಕ್ನ ಹಿಂಬದಿ ಸವಾರ ಮೃ*ತಪಟ್ಟ ಘಟನೆ ಸಂಪಾಜೆ ಕಲ್ಲುಗುಂಡಿ ಸಮೀಪ ದೊಡ್ಡಡ್ಕ ಎಂಬಲ್ಲಿ ಗುರುವಾರ ತಡರಾತ್ರಿ ಸಂಭವಿಸಿದೆ.
ಮತದಾನ ಮಾಡಲು ಊರಿಗೆ ಬರುತ್ತಿದ್ದರು ಎಂದು ಹೇಳಲಾಗುತ್ತಿದ್ದು ಡಿ*ಕ್ಕಿಯ ರಭಸಕ್ಕೆ ಬೈಕ್ನ ಹಿಂಬದಿ ಸವಾರನಿಗೆ ಗಂಭೀರ ಗಾಯಗೊಂಡು ಮೃ*ತಪಟ್ಟರೆ ಇನ್ನೋರ್ವನಿಗೆ ಗಾಯವಾಗಿದ್ದು ಆತನನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.
ಮೃ*ತರ ವಿವರ ಇನ್ನಷ್ಟೇ ತಿಳಿದುಬರಬೇಕಾಗಿದೆ.
LATEST NEWS
ಅಯೋಧ್ಯೆಯ ಅಂಗಳದಲ್ಲಿ ಶೂಟಿಂಗ್ ಮಾಡಿದ ಮೊಟ್ಟ ಮೊದಲ ಕನ್ನಡ ಸೀರಿಯಲ್ ಇದು?
ಮಹಿಳೆಯರಿಗೆ ಸೀರಿಯಲ್ ನೋಡುವುದಂದರೆ ಒಂತಾರ ಹುಚ್ಚು. ಮನೆಯಲ್ಲೇ ಇರುವ ಮಹಿಳೆಯರು ಕೆಲವೊಮ್ಮೆ ಬೆಳಗ್ಗೆಯಿಂದ ಸಂಜೆಯವರೆಗೆ ಟಿವಿಯಲ್ಲಿ ಸೀರಿಯಲ್ ನೋಡುತ್ತಾ ಇರುತ್ತಾರೆ. ಸೀರಿಯಲ್ ನೋಡೊದು ಮಾತ್ರ ಅಲ್ಲ ಅದರ ಬಗ್ಗೆ ಸಂವಾದ ಕೂಡ ಮನೆಯವರಲ್ಲಿ ಮಾಡುತ್ತಾ ಇರುತ್ತಾರೆ.
ಈ ನಡುವೆ ಅಯೋಧ್ಯೆ ರಾಮಮಂದಿರ ನಿರ್ಮಾಣದ ನಂತರ ದೇಶದ ಜನರು ತುಂಬಾ ಸಂತೋಷದಲ್ಲಿದ್ದಾರೆ. ಅದೆಷ್ಟೋ ಜನ ಹಿಂದೂಗಳ ಕನಸು ನನಸಾದ ಕ್ಷಣ ಎಂದು ಹೇಳಬಹುದು. ಒಮ್ಮೆಯಾದ್ರೂ ಅಯೋಧ್ಯೆಗೆ ಹೋಗಿಬರಬೇಕು ಅಂತಾ ಪ್ಲಾನ್ ಅಂತೂ ಮಾಡ್ತಾ ಇರೋದು ಕಂಡಿತ. ಕೆಲವರು ಹೋಗಿ ಬಂದಿದ್ದಾರೆ ಕೂಡ ಆದರೆ ಇನ್ನು ಕೆಲವರು ಇನ್ನು ಹೋಗಬೇಕು. ಇದುವರೆಗೆ ಅಯೋಧ್ಯೆ ರಾಮಮಂದಿರದಲ್ಲಿ ಯಾವೂದೇ ರೀತಿದ ಫಿಲ್ಮ್ ಶೂಟಿಂಗ್, ಸೀರಿಯಲ್, ಕಿರುಚಿತ್ರ ಯಾವೂದು ಶೂಟಿಂಗ್ ಆಗಲಿಲ್ಲ. ಆದರೇ ಇದೇ ಮೊದಲ ಬಾರಿಗೇ ಕನ್ನಡ ಸೀರಿಯಲ್ ಇಂಡಸ್ಟ್ರಿಯಲ್ಲಿ ಕನ್ಯಾದಾನ ಸೀರಿಯಲ್ ಹೊಸ ದಾಖಲೆ ಬರೆದಿದೆ.
ಉದಯ ಟಿವಿಯಲ್ಲಿ ಪ್ರಸಾರವಾಗೋ ಕನ್ಯಾದಾನ ಧಾರಾವಾಹಿ ಈಗ ಹೊಸ ದಾಖಲೆ ಬರೆದಿದ್ದಾರೆ. ಕನ್ನಡ ಟೆಲಿವಿಷನ್ ಇತಿಹಾಸದಲ್ಲಿ ಪ್ರಪ್ರಥಮ ಬಾರಿಗೆ ಅಯೋಧ್ಯೆಯಲ್ಲಿ ಚಿತ್ರೀಕರಣಗೊಂಡ ಮೊಟ್ಟ ಮೊದಲ ಸೀರಿಯಲ್ ಎಂಬ ಹೆಗ್ಗಳಿಕೆಗೆ ಕನ್ಯಾದಾನ ಧಾರಾವಾಹಿ ಪಾತ್ರವಾಗಿದೆ.
ಜನವರಿ 22ರಂದು ಅಂದ್ರೆ ರಾಮಮಂದಿರದಲ್ಲಿ ಪ್ರಾಣ ಪ್ರತಿಷ್ಠಾಪನೆಯಾದ ನಂತರ ಇಲ್ಲಿಯವೆರೆಗೂ ಯಾವುದೇ ಸಿನಿಮಾವಾಗ್ಲಿ, ಅಥವಾ ಸೀರಿಯಲ್ ಆಗ್ಲಿ ಶೂಟ್ ಮಾಡಿರಲಿಲ್ಲ. ಆದ್ರೆ, ಕನ್ಯಾದಾನ ಧಾರವಾಹಿ ತಂಡ ಫಸ್ಟ್ಟೈಮ್ ಅಯೋಧ್ಯೆಗೆ ಹೋಗಿ ಚಿತ್ರೀಕರಣ ಮಾಡಿದೆ.
ಈ ಸೀರಿಯಲ್ನಲ್ಲಿ ಬಹುತೇಕ ಪಾತ್ರಗಳು ಒಂದಲ್ಲ ಒಂದು ಸಮಸ್ಯೆ ಎದುರಿಸ್ತಿವೆ. ಹಾಗಾಗಿ ರಾಮನ ದರ್ಶನ ಪಡೆದು ಆ ಕಷ್ಟಗಳಿಂದ ಹೊರಬರಬೇಕು ಎಂದು ನಿರ್ಧರಿಸಿ, ರಾಮಮಂದಿರಕ್ಕೆ ಹೋಗಿ ಬಾಲರಾಮನ ದರ್ಶನ ಪಡೆದಿದ್ದಾರೆ. ಅಯೋಧ್ಯೆಯಲ್ಲಿ ಶೂಟಿಂಗ್ ಮಾಡಿರೋ ಬಗ್ಗೆ ಸೀರಿಯಲ್ ತಂಡ ಸಂತಸ ಹಂಚಿಕೊಂಡಿದೆ.
LATEST NEWS
ಕೊಡಗು: ಮದುವೆ ಊಟ ಸೇವಿಸಿ ಅಸ್ವಸ್ಥ.. ಆಸ್ಪತ್ರೆ ಸೇರಿದ 150ಕ್ಕೂ ಹೆಚ್ಚು ಜನರು
ಕೊಡಗು: ಮದುವೆಯಲ್ಲಿ ಊಟ ಮಾಡಿದ ನೂರಾರು ಜನತೆ ಅಸ್ವಸ್ಥಗೊಂಡ ಘಟನೆ ಪಿರಿಯಾಪಟ್ಟಣ ತಾಲೂಕಿನ ಕೊಪ್ಪ ಗ್ರಾಮದಲ್ಲಿ ನಡೆದಿದೆ. ಪರಿಣಾಮ ಸುಮಾರು 150 ಕ್ಕೂ ಹೆಚ್ಚು ಜನರು ಆಸ್ಪತ್ರೆ ಸೇರಿದ್ದಾರೆ.
ನಿನ್ನೆ ಮಧ್ಯಾಹ್ನ ಕೊಪ್ಪ ಗ್ರಾಮದಲ್ಲಿ ನಡೆದ ಮದುವೆಯಲ್ಲಿ ಊಟ ಜನರು ಸೇವಿಸಿದ್ದಾರೆ. ಊಟ ಸೇವಿಸಿದ ಬಳಿಕ ಸಂಜೆಯ ವೇಳೆಗೆ ಹಲವರಲ್ಲಿ ವಾಂತಿ ಕಾಣಿಸಿಕೊಂಡಿದೆ. ಅಸ್ವಸ್ಥಗೊಂಡ ಜನರು ಕೊಡಗಿನ ಕುಶಾಲನಗರ ಆಸ್ಪತ್ರೆಗೆ ದೌಡಾಯಿಸಿದ್ದಾರೆ. ಕುಶಾಲನಗರ ಸರಕಾರಿ ಆಸ್ಪತ್ರೆಯಲ್ಲಿ ಸುಮಾರು 150 ಕ್ಕೂ ಹೆಚ್ಚು ಜನರಿಗೆ ಚಿಕಿತ್ಸೆ ನೀಡಲಾಗುತ್ತಿದೆ. ಇನ್ನು ಕೆಲವರು ಕುಶಾಲನಗರ ಖಾಸಗಿ ಆಸ್ಪತ್ರೆಯಲ್ಲೂ ಚಿಕಿತ್ಸೆ ಪಡೆಯುತ್ತಿದ್ದಾರೆ.
ಪಿರಿಯಾಪಟ್ಟಣ ಆಸ್ಪತ್ರೆಯಲ್ಲೂ ಹಲವರಿಗೆ ಚಿಕಿತ್ಸೆ ನೀಡಲಾಗುತ್ತಿದೆ. ಕೊಡಗು ಆರೋಗ್ಯಾಧಿಕಾರಿ ಕುಶಾಲನಗರ ಆಸ್ಪತ್ರೆಗೆ ಭೇಟಿ ಪರಿಶೀಲನೆ ನಡೆಸಿದ್ದಾರೆ. ಸದ್ಯ ಮದುವೆ ಊಟದಿಂದಾಗಿ ಕುಶಾಲನಗರದ ಆಸ್ಪತ್ರೆ ಕ್ಲೀನಿಕ್ ಗಳು ಫುಲ್ ಆಗಿವೆ. ಅತ್ತ ರೋಗಿಗಳಿಗೆ ಸರಿಯಾದ ಚಿಕಿತ್ಸೆ ಸಿಗದೆ ಮಡಿಕೇರಿಯ ಜಿಲ್ಲಾ ಆಸ್ಪತ್ರೆಗೂ ಹೊಗಿದ್ದಾರೆ. ಆಸ್ಪತ್ರೆಗೆ ಮಡಿಕೇರಿ ಕ್ಷೇತ್ರದ ಶಾಸಕ ಮಂತರ್ ಗೌಡ ಭೇಟಿ ನೀಡಿ ಜನರ ಆರೋಗ್ಯ ವಿಚಾರಿಸಿದ್ದಾರೆ.