Monday, October 18, 2021

ನಿರ್ಮಾಣ ಹಂತದ ಸೇತುವೆ ಕುಸಿತ: 14 ಮಂದಿ ಕಾರ್ಮಿಕರು ಗಂಭೀರ

ಮುಂಬೈ: ಮಹಾನಗರ ಪ್ರದೇಶ ಅಭಿವೃದ್ಧಿ ಪ್ರಾಧಿಕಾರದ ಅಡಿಯಲ್ಲಿ ನಿರ್ಮಾಣವಾಗುತ್ತಿರುವ ಸೇತುವೆಯ ಒಂದು ಭಾಗ ಕುಸಿದಿದ್ದು, ಇದರ ಪರಿಣಾಮ 14 ಮಂದಿ ಕಾರ್ಮಿಕರು ಗಾಯಗೊಂಡಿದ್ದಾರೆ.

ಈ ದುರ್ಘಟನೆ ಇಂದು ಮುಂಜಾನೆ 4.41ರ ಸುಮಾರಿಗೆ ಸಂಭವಿಸಿದೆ. ಪೂರ್ವ ಬಾಂದ್ರಾದ ಟ್ರೇಡ್​ ಸೆಂಟರ್​ ಬಳಿಯ ಎಂಟಿಎನ್ಎಲ್ ಜಂಕ್ಷನ್​ ಸಮೀಪ ಈ ಸೇತುವೆ ನಿರ್ಮಾಣ ಮಾಡಲಾಗುತ್ತಿತ್ತು.

ಆದರೆ, ದುರಾದೃಷ್ಟ ಎಂಬಂತೆ ಸೇತುವೆಯ ಒಂದು ಭಾಗ ಕುಸಿದಿದೆ.

ಇನ್ನು ಗಾಯಗೊಂಡವರನ್ನು ಅನಿಲ್ ಸಿಂಗ್, ಅರವಿಂದ್ ಸಿಂಗ್, ಅಝರ್ ಅಲಿ, ಮುಸ್ತಾಫ್ ಅಲಿ, ರಿಯಾಜುದ್ದೀನ್, ಮೊಟ್ಲಾಬ್ ಅಲಿ, ರಿಯಾಜು ಅಲಿ, ಶ್ರವಣ್, ಅತೀಶ್ ಅಲಿ, ರ್ಲಿಸ್ ಅಲಿ, ಅಜೀಜ್-ಉಲ್-ಹುಕ್, ಪರ್ವೇಜ್, ಅಕ್ಬರ್ ಅಲಿ, ಶ್ರೀಮಂದ್ ಎಂದು ಗುರುತಿಸಲಾಗಿದೆ. ಗಾಯಗೊಂಡವರೆಲ್ಲರೂ ಅಪಾಯದಿಂದ ಪಾರಾಗಿದ್ದು ಆಸ್ಪತ್ರೆಯಲ್ಲಿ ಚೇತರಿಸಿಕೊಳ್ಳುತ್ತಿದ್ದಾರೆ.

Hot Topics

ಸಾಲದ ಹೊರೆ ತಾಳಲಾರದೆ ವೀಡಿಯೋ ಮೂಲಕ ಗುಡ್​ಬೈ ಹೇಳಿ ಶಿಕ್ಷಕ ದಂಪತಿ ಆತ್ಮಹತ್ಯೆ

ವಿಜಯವಾಡ: ಶಾಲೆ ನಡೆಸುತ್ತಿದ್ದ ಶಿಕ್ಷಕ ದಂಪತಿ ಸಾಲದ ಹೊರೆ ತಡೆಯಲಾರದೇ ವಿಷಸೇವಿಸಿ ಆತ್ಮಹತ್ಯೆ ಹಾದಿ ಹಿಡಿರುವ ದಾರುಣ ಘಟನೆ ಆಂಧ್ರ ಪ್ರದೇಶದ ಕರ್ನೂಲ್​ ಜಿಲ್ಲೆಯಲ್ಲಿ ನಡೆದಿದೆ. ಸಾವಿಗೂ ಮುನ್ನ ಶಿಕ್ಷಕ ದಂಪತಿ ತಮ್ಮ...

ಕಾಪುವಿನಲ್ಲಿ ಕಾರು ಅಪಘಾತ ಗಂಭೀರವಾಗಿ ಗಾಯಗೊಂಡಿದ್ದ ಯುವತಿ ಸಾವು..!

ಕಾಪುವಿನಲ್ಲಿ ಕಾರು ಅಪಘಾತ ಗಂಭೀರವಾಗಿ ಗಾಯಗೊಂಡಿದ್ದ ಯುವತಿ ಸಾವು..! ಉಡುಪಿ : ಉಡುಪಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಭಾರಿ ಮಳೆಯ ನಡುವೆ ಭೀಕರ ರಸ್ತೆ ಅಪಘಾತ ಸಂಭವಿಸಿದೆ. ಚಾಲಕನ ನಿಯಂತ್ರಣ ತಪ್ಪಿದ ಕಾರೊಂದು ಕಾಪು ಬಳಿ...

ಮಗು ಸೇರಿದಂತೆ ದಂಪತಿ ಸಾಮೂಹಿಕ ಆತ್ಮಹತ್ಯೆ ಹಳೆಯಂಗಡಿಯಲ್ಲಿ ಹೃದಯ ವಿದ್ರಾವಕ ಘಟನೆ..!

ಮಗು ಸೇರಿದಂತೆ ದಂಪತಿ ಸಾಮೂಹಿಕ ಆತ್ಮಹತ್ಯೆ ಹಳೆಯಂಗಡಿಯಲ್ಲಿ ಹೃದಯ ವಿದ್ರಾವಕ ಘಟನೆ..! ಮಂಗಳೂರು:  ಎಂಟು ವರ್ಷದ ಮಗು ಸೇರಿದಂತೆ ದಂಪತಿ ಸಾಮೂಹಿಕ ಆತ್ಮಹತ್ಯೆ ಮಾಡಿರುವ ದಾರುಣ ಘಟನೆ ಹಳೆಯಂಗಡಿ ಬಳಿಯ ಕಲ್ಲಾಪು ರೈಲ್ವೇ ಗೇಟ್...