Connect with us

LATEST NEWS

ಸೀಲ್ ಡೌನ್ ಕುಟುಂಬಗಳಿಗೆ ಮಲಬಾರ್ ಗೋಲ್ಡ್ ಅಂಡ್ ಡೈಮಂಡ್ಸ್ ವತಿಯಿಂದ ಕಿಟ್ ವಿತರಣೆ

Published

on

ಉಡುಪಿ:ಇಲ್ಲಿನ ಹಾವಂಜೆ ಗ್ರಾಮದ ಕಿಲಿಂಜೆ ವಾರ್ಡಿನಲ್ಲಿ ಕೊರೋನದಿಂದಾಗಿ ಸೀಲ್ ಡೌನ್ ಆದ ಕುಟುಂಬಗಳಿಗೆ ಉಡುಪಿ ಮಲಬಾರ್ ಗೋಲ್ಡ್ ಅಂಡ್ ಡೈಮಂಡ್ಸ್ ಸಂಸ್ಥೆಯ ವತಿಯಿಂದ ರೇಷನ್ ಕಿಟ್ ವಿತರಿಸಲಾಯಿತು.

ಜಿಲ್ಲಾದ್ಯಂತ ಈ ಸಂಸ್ಥೆಯಿಂದ ಈಗಾಗಲೇ 5,400 ಕಿಟ್ ಗಳನ್ನು ವಿತರಣೆ ಮಾಡಲಾಗಿದೆ. ಈ ಸಂದರ್ಭದಲ್ಲಿ ಸಮಾಜ ಸೇವಕ ನಿತ್ಯಾನಂದ ಒಳಕಾಡು ಮಾತನಾಡಿ ಕೊರೊನ ಪೀಡಿತರಿಗೆ  ಫುಡ್ ಕಿಟ್ ನೀಡಿದ ಮಲಬಾರ್ ಗೋಲ್ಡ್ ಸಂಸ್ಥೆಯ ಸಾಮಾಜಿಕ ಕಳಕಳಿ ಹಾಗೂ ಬಡವರಿಗೆ ನೀಡುವ ಸೌಲಭ್ಯಗಳಿಗೆ ಮೆಚ್ಚುಗೆ ವ್ಯಕ್ತಪಡಿಸಿದರು.  ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷ ಉದಯ್ ಕೋಟ್ಯಾನ್, ಸದಸ್ಯೆ ಆಶಾ, ಹೆಲ್ಪಿಂಗ್ ಹ್ಯಾಂಡ್ಸ್ ನ ಸಮಾಜ ಸೇವಕರಾದ ಹಬೀಬ್ ಉಡುಪಿ,ಅಜಯ್ ಕುಮಾರ್ ಪೂಜಾರಿ,ನಿತೇಶ್ ಶೆಟ್ಟಿ ಉಪಸ್ಥಿತರಿದ್ದರು. ಬಡ ನಿಡಿವೂರು ಗ್ರಾಮ ಪಂಚಾಯತ್ ವಠಾರದಲ್ಲಿ ದಲ್ಲಿ ನಡೆದ ಕಾರ್ಯಕ್ರಮದಲ್ಲಿ ಸಂಜೀವಿನಿ ತಂಡದ ಯಶೋಧ ಅವರ ಮನವಿ ಮೇರೆಗೆ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಇರುವ ಕೊರೊನ ವಾರಿಯರ್ಸ್ ನವರಿಗೆ ರೇಷನ್ ಕಿಟ್  ಹಸ್ತಾಂತರಿಸಲಾಯಿತು.

ಈ ಸಂದರ್ಭದಲ್ಲಿ ಗ್ರಾಮ ಪಂಚಾಯತ್ ಪಿ.ಡಿ.ಓ ಮಾಲತಿ, ಉಪಾಧ್ಯಕ್ಷೆರಾದ ತಾರಾ ಪ್ರಭಾಕರ್, ಕಾರ್ಯಕರ್ತೆಯಾದ ವತ್ಸಲಾ ಉಪಸ್ಥಿತರಿದ್ದರು. ಮಲಬಾರ್ ಗೋಲ್ಡ್ ಅಂಡ್ ಡೈಮಂಡ್ಸ್ ನ ಶಾಖಾ ಮುಖ್ಯಸ್ಥರಾದ ಹಫೀಝ್ ರೆಹಮಾನ್, ಜಿ ಆರ್.ಎಂ ರಾಘವೇಂದ್ರ ನಾಯಕ್ ಹಾಗೂ ಚಾರಿಟಿ ಉಸ್ತುವಾರಿ ತಂಝೀಮ್ ಶಿರ್ವ ಹಾಗೂ ಗ್ರಾಮಸ್ಥರು ಉಪಸ್ಥಿತರಿದ್ದರು.

DAKSHINA KANNADA

ನಾಲ್ಕು ತಿಂಗಳ ಮಗುವಿಗೆ ಹಾಲಿನಲ್ಲಿ ಆಲ್ಕೋಹಾಲ್ ಬೆರೆಸಿದ ಅಜ್ಜಿ..! ಅಜ್ಜಿ ಮಾಡಿದ ಎಡವಟ್ಟಿಗೆ ಕೋಮಾಗೆ ಜಾರಿದ ಮಗು !!

Published

on

ಮಂಗಳೂರು/ಇಟಲಿ: ಇಟಲಿಯಲ್ಲೊಂದು ಆಘಾತಕಾರಿ ಘಟನೆ ನಡೆದಿದೆ. ಅಜ್ಜಿಯೊಬ್ಬರು ನಾಲ್ಕು ತಿಂಗಳ ಮಗುವಿಗೆ ಕುಡಿಯುವ ಹಾಲಿನಲ್ಲಿ ಆಲ್ಕೋಹಾಲ್‌ ಬೆರೆಸಿರುವ ಘಟನೆ ನಡೆದಿದೆ.

feed

ಮೊಮ್ಮಗು ಕುಡಿಯುವ ಹಾಲಿಗೆ ಅಜ್ಜಿ ತಪ್ಪಾಗಿ ಆಲ್ಕೋಹಲ್ ಬೆರೆಸಿದ್ದಾರೆ. ಮಗು ಅರ್ಧ ಹಾಲು ಕುಡಿದ ಬಳಿಕ ಮಗು ಅಳಲು ಆರಂಭಿಸಿದೆ. ಅಜ್ಜಿಗೆ ಅನುಮಾನ ಬಂದು ತಾನು ಕುಡಿಸಿದ ಹಾಲಿನ ವಾಸನೆಯನ್ನು ತೆಗೆದು ಪರಿಶೀಲನೆ ಮಾಡಿದಾಗ ಅದರಲ್ಲಿ ಆಲ್ಕೋಹಾಲ್‌ ಮಿಶ್ರಣ ಹಾಕಿರುವುದು ಬೆಳಕಿಗೆ ಬಂದಿದೆ.  ಇದರಿಂದ ಆಘಾತಕ್ಕೊಳಗಾದ ವೃದ್ಧೆ ಮಗುವನ್ನು ಕೂಡಲೇ ಆಸ್ಪತ್ರೆಗೆ ದಾಖಲು ಮಾಡಿದ್ದಾರೆ.

ಮುಂದೆ ಓದಿ..; ಜೀವಾಂತ್ಯವಾದ ಕಾಂತಾಬಾರೆ-ಬೂದಬಾರೆ ಜನ್ಮಕ್ಷೇತ್ರದ ಮರ..! ಇತಿಹಾಸದ ಜೀವಂತ ಸಾಕ್ಷಿಯ ಅಂತ್ಯ..!

ಕೋಮಾಗೆ ಜಾರಿದ ಮಗು:

ಅದಾಗಲೇ ಮಗುವಿನ ಆರೋಗ್ಯದಲ್ಲಿ ಏರುಪೇರು ಉಂಟಾಗಿ ಕೋಮ ಸ್ಥಿತಿಗೆ ಜಾರಿತ್ತು. ಬಳಿಕ ವೈದ್ಯರು ಚಿಕಿತ್ಸೆ ನೀಡಿದ ಬಳಿಕ ಚೇತರಿಸಿಕೊಂಡಿದ್ದು, ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದೆ. ಮಗುವಿಗೆ ಯಾವುದೇ ಅಪಾಯವಿಲ್ಲ ಎಂದು ವೈದ್ಯರು ತಿಳಿಸಿದ್ದಾರೆ. ಆದರೆ ಮಗುವಿನ ಆರೋಗ್ಯವನ್ನು ಸಂಪೂರ್ಣ ಪರಿಶೀಲಿಸಿದ ಬಳಿಕ ಅಜ್ಜಿ ವಿರುದ್ಧ ಪ್ರಕರಣ ದಾಖಲಿಸಲು ನಿರ್ಧರಿಸಲಾಗುವುದು ಎಂದು ಪೊಲೀಸರು ತಿಳಿಸಿದ್ದಾರೆ.

 

 

Continue Reading

DAKSHINA KANNADA

ಚಲಿಸುತ್ತಿದ್ದಾಗ ಒಡೆದ ಬಸ್ಸಿನ ಗಾಜು; ಇಬ್ಬರು ಮಕ್ಕಳು, ಚಾಲಕನಿಗೆ ಗಾ*ಯ

Published

on

ವಿಟ್ಲ : ಚಲಿಸುತ್ತಿದ್ದ ಕೇರಳ ರಾಜ್ಯದ ಬಸ್ಸಿನ ಗಾಜು ಒಡೆದ ಪರಿಣಾಮ ಇಬ್ಬರು ಮಕ್ಕಳು ಮತ್ತು ಚಾಲಕ ಗಾಯಗೊಂಡ ಘಟನೆ ಉರಿಮಜಲು ಎಂಬಲ್ಲಿ ಸಂಭವಿಸಿದೆ. ಪುತ್ತೂರು ಕಡೆಯಿಂದ ವಿಟ್ಲ ಮೂಲಕ ಕಾಸರಗೋಡಿಗೆ ಹೊರಟಿದ್ದ ಕೇರಳ ರಾಜ್ಯದ ಮಲಬಾರ್ ಬಸ್ ಉರಿಮಜಲು ಸೊಸೈಟಿ ತಲುಪುತ್ತಿದ್ದಂತೆ ಅದರ ಮುಂಭಾಗ ಗಾಜು ಹೊಡೆದಿದೆ.

ಇದನ್ನೂ ಓದಿ : ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಕ್ರೇಟಾ..! ಕಾರು ಜಖಂ

ಇದರಿಂದ ಮುಂಭಾಗದಲ್ಲಿದ್ದ ಬಾಲಕ ಗಂಭೀರ ಗಾಯಗೊಂಡಿದ್ದು, ಚಾಲಕ ಮತ್ತು ಮತ್ತೊಂದು ಮಗು ಸಣ್ಣಪುಟ್ಟವಿಗೆ ಗಾಯಗಳಾಗಿವೆ. ಗಂಭೀರ ಗಾಯಗೊಂಡ ಬಾಲಕನನ್ನು ಪುತ್ತೂರು ಆಸ್ಪತ್ರೆಗೆ ದಾಖಲಿಸಲಾಗಿದೆ. ಗಂಭೀರ ಗಾಯಗೊಂಡಿರುವ ಬಾಲಕ ಕೇರಳದ ಚೆರ್ಕಳ ನೆಲ್ಲಿಕಟ್ಟೆ ನಿವಾಸಿ ಎಂದು ಸ್ಥಳೀಯರು ತಿಳಿಸಿದ್ದಾರೆ.

ಬಿಸಿಲಿನ ತಾಪಕ್ಕೆ ಈ ಘಟನೆ ಸಂಭವಿಸಿದೆ ಎಂದು ಅಂದಾಜಿಸಲಾಗಿದೆ.

 

Continue Reading

DAKSHINA KANNADA

ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಕ್ರೇಟಾ..! ಕಾರು ಜಖಂ

Published

on

ವಿಟ್ಲ: ನಿಯಂತ್ರಣ ತಪ್ಪಿ ಕ್ರೇಟಾ ಕಾರೊಂದು ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದು ಪಲ್ಟಿಯಾದ ಘಟನೆ ವಿಟ್ಲ ಪುತ್ತೂರು ರಸ್ತೆಯ ಚಂದಳಿಕೆ ಎಂಬಲ್ಲಿ ನಡೆದಿದೆ.

accident

accident

ಕಾರು ಪಲ್ಟಿಯಾದ ಪರಿಣಾಮ ಕಾರು ಸಂಪೂರ್ಣ ನುಜ್ಜು ಗುಜ್ಜಾಗಿದ್ದು ಪವಾಡ ಎಂಬಂತೆ ಎಲ್ಲಾ ಪ್ರಯಾಣಿಕರು ಸುರಕ್ಷಿತವಾಗಿದ್ದಾರೆ ಎಂದು ತಿಳಿದು ಬಂದಿದೆ.

ಮುಂದೆ ಓದಿ..; ಪ್ರಾಂಶುಪಾಲೆ, ಶಿಕ್ಷಕಿ ನಡುವೆ ಹೊಯ್‌ ಕೈ..!! ವೀಡಿಯೋ ವೈರಲ್

accident

Continue Reading

LATEST NEWS

Trending