LATEST NEWS
ಕಾಲುಬಾಯಿ ಜ್ವರ: ಕೇರಳದಿಂದ ದಕ್ಷಿಣ ಕನ್ನಡಕ್ಕೆ ಜಾನುವಾರು ಸಾಗಾಟ ನಿಷೇಧ- ಡಿಸಿ. ಮುಲ್ಲೈ ಮುಗಿಲನ್
ಕಾಲುಬಾಯಿ ಜ್ವರ ಜಿಲ್ಲೆಗೆ ಹರಡದಂತೆ ಅಗತ್ಯ ಮುನ್ನೆಚ್ಚರಿಕೆ ತೆಗೆದು ಕೊಳ್ಳುವ ಹಿನ್ನಲೆಯಲ್ಲಿ ಕೇರಳದಿಂದ ದಕ್ಷಿಣ ಕನ್ನಡಕ್ಕೆ ಬರುವ ಹಾಗೂ ಜಿಲ್ಲೆಯಿಂದ ಸಾಗಾಟ ಮಾಡುವುದನ್ನು ನಿಷೇಧಿಸಿ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಆದೇಶ ಹೊರಡಿಸಿದ್ದಾರೆ.
ಮಂಗಳೂರು: ಕಾಲುಬಾಯಿ ಜ್ವರ ಜಿಲ್ಲೆಗೆ ಹರಡದಂತೆ ಅಗತ್ಯ ಮುನ್ನೆಚ್ಚರಿಕೆ ತೆಗೆದು ಕೊಳ್ಳುವ ಅಗತ್ಯವಿರುವುದರಿಂದ ಕೇರಳ ದಲ್ಲಿ ರೋಗ ಹತೋಟಿಗೆ ಬರುವವರೆಗೆ ಕೇರಳ ರಾಜ್ಯದಿಂದ ಜಿಲ್ಲೆಗೆ ಬರುವ ಹಾಗೂ ಜಿಲ್ಲೆಯಿಂದ ಕೇರಳಗಳನ್ನು ಸಾಗಾಟ ರಾಜ್ಯಕ್ಕೆ ಜಾನುವಾರು ಮಾಡುವುದನ್ನು ನಿಷೇಧಿಸಿ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಆದೇಶ ಹೊರಡಿಸಿದ್ದಾರೆ.
ಕೇರಳ ರಾಜ್ಯದಲ್ಲಿ ಜಾನುವಾರುಗಳಿಗೆ ಕಾಲುಬಾಯಿ ಜ್ವರ ರೋಗ ಹೆಚ್ಚಾಗಿ ಕಂಡು ಬಂದಿದ್ದು, ಅದು ವೈರಸ್ನಿಂದ ಬಹುಬೇಗ ಆರೋಗ್ಯವಂತ ಜಾನುವಾರುಗಳಿಗೆ ಹರಡುತ್ತದೆ.
ಈ ರೋಗ ಜಾನುವಾರುಗಳಿಗೆ ಮಾರಣಾಂತಿಕವಾಗಿರುವುದರಿಂದ ಕೇರಳ ರಾಜ್ಯಕ್ಕೆ ಜಾನುವಾರು ಸಾಗಾಟ ಮಾಡು ವುದನ್ನು ಮುಂದಿನ ಆದೇಶದವರೆಗೆ ನಿಷೇಧಿಸಲಾಗಿದೆ ಎಂದು ತಿಳಿಸಿದ್ದಾರೆ.
LATEST NEWS
ಡ್ರಗ್ ನೀಡಿ ಸಂಸದೆ ಮೇಲೆ ಲೈಂಗಿಕ ದೌರ್ಜನ್ಯ..! ಜಾಲತಾಣದಲ್ಲಿ ಹರಿಬಿಟ್ಟ ಆ ವೀಡಿಯೋ..!
ಆಸ್ಟ್ರೇಲಿಯಾ/ಮಂಗಳೂರು: ದಿನೇ ದಿನೇ ದೇಶ ವಿದೇಶಗಳಲ್ಲಿ ಹೆಣ್ಣು ಮಕ್ಕಳ ಮೇಲೆ ಲೈಂಗಿಕ ದೌರ್ಜನ್ಯ ಹೆಚ್ಚಾಗುತ್ತಿರುವುದು ವಿಪರ್ಯಾಸವೇ ಹೌದು. ಈಗಾಗಲೇ ದೇಶದೆಲ್ಲೆಡೆ ಪ್ರಜ್ವಲ್ ರೇವಣ್ಣ ಪೆಂಡ್ರೈವ್ ಪ್ರಕರಣ ದೊಡ್ಡ ಮಟ್ಟದಲ್ಲಿ ಸಂಚಲನ ಮೂಡಿಸಿದೆ. ಈ ಕ್ರೂರ ಕೃತ್ಯಕ್ಕೆ ಜನ ಛೀಮಾರಿ ಹಾಕುತ್ತಿದ್ದಾರೆ. ಇದರ ಬೆನ್ನಲ್ಲೇ ಆಸ್ಟ್ರೇಲಿಯಾದ ಸಂಸದೆಗೆ ಲೈಂಗಿಕ ದೌರ್ಜನ್ಯ ಎಸಗಿರುವ ದುರಂತ ಘಟನೆ ನಡೆದಿದೆ.
ಸಂಸದೆ ಮೇಲೆ ಲೈಂಗಿಕ ದೌರ್ಜನ್ಯ:
ಆಸ್ಟ್ರೇಲಿಯಾ ಸಂಸದೆ ಬ್ರಿಟ್ಟಾನಿ ಲೌಗಾ ಮೇಲೆ ಲೈಂಗಿಕ ದೌರ್ಜನ್ಯ ಎಸಗಿರುವ ಬಗ್ಗೆ ಖುದ್ದು ಸಂಸದೆ ಪೊಲೀಸ್ ಮೆಟ್ಟಿಲೇರಿದ್ದಾರೆ. ಸಂಸದೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿರುವುದರ ವೀಡಿಯೋ ಕೂಡಾ ಹರಿದಾಡ್ತಾ ಇದೆ. ಕ್ವೀನ್ಸ್ಲ್ಯಾಂಡ್ ನಗರದ ಲೇಬರ್ ಪಾರ್ಟಿ ಸಂಸದೆ ಬ್ರಿಟ್ಟಾನಿ ಲೌಗಾ ಸೇರಿದಂತೆ ಹಲವು ಮಹಿಳೆಯರು ನೈಟ್ಔಟ್ ಪಾರ್ಟಿಗೆ ತೆರಳಿದ್ದರು. ಅಲ್ಲಿ ಅವರ ಅರಿವಿಗೆ ಬಾರದೇ ಮಾದಕ ವಸ್ತುಗಳನ್ನು ನೀಡಿ ಲೈಂಗಿಕ ದೌರ್ಜನ್ಯ ಎಸಗಲಾಗಿದೆ. ಅಲ್ಲದೆ ಸಂಸದೆ ಬ್ರಿಟ್ಟಾನಿ ಮೇಲಿನ ಲೈಂಗಿಕ ದೌರ್ಜನ್ಯ ವೀಡಿಯೋ ಸಾಮಾಜಿಕ ಜಾಲತಾಣದಲ್ಲಿ ಹರಿದಾಡತೊಡಗಿದೆ. ಇನ್ನು ಈ ಪಾರ್ಟಿಯಲ್ಲಿದ್ದ ಇತರ ಮಹಿಳೆಯರ ಮೇಲೂ ಇದೇ ರೀತಿ ಲೈಂಗಿಕ ದೌರ್ಜನ್ಯ ಎಸಗಿರುವುದಾಗಿ ವರದಿಯಾಗಿದೆ.
ಮುಂದೆ ಓದಿ..; ಬರ್ಬರ ಹತ್ಯೆಯಾದ ಬ್ಯೂಟಿ ಕ್ವೀನ್.!! ಮುಳುವಾಯಿತಾ ಇನ್ಸ್ಟಾಗ್ರಾಮ್ ಪೋಸ್ಟ್..! ಸಿಸಿಟಿವಿಯಲ್ಲಿ ಸೆರೆಯಾದ ಭಯಾನಕ ದೃಶ್ಯ
ವೈದ್ಯಕೀಯ ತಪಾಸಣೆಗೆ ಒಳಗಾದ ಸಂಸದೆ ಬ್ರಿಟ್ಟಾನಿ:
ತತ್ಕ್ಷಣ ಸಂಸದೆ ಯೆಪ್ಪೂನ್ ವೈದ್ಯಕೀಯ ಕಾಲೇಜು ಆಸ್ಪತ್ರೆಗೆ ಭೇಟಿ ನೀಡಿ ತಪಾಸಣೆಗೆ ಒಳಗಾಗಿದ್ದಾರೆ.ಈ ವೇಳೆ ಅವರ ದೇಹದಲ್ಲಿ ಡ್ರಗ್ಸ್ ಇರುವುದು ಕಂಡುಬಂದಿದೆ. ಡ್ರಗ್ಸ್ ಸೇವನೆ ಮಾಡದಿದ್ದರೂ ದೇಹದಲ್ಲಿ ಡ್ರಗ್ ಅಂಶ ಕಂಡುಬಂದಿರುವುದು ಹೇಗೆ? ನೈಟ್ ಔಟ್ ನಲ್ಲಿ ಸೇರಿದ್ದ ಎಲ್ಲರಿಗೂ ಮಾದಕ ವಸ್ತುಗನ್ನು ನೀಡಿ ಅವರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿ ಮಹಿಳೆಯರನ್ನು ಮನಬಂದಂತೆ ಬಳಸಿಕೊಳ್ಳುತ್ತಿದ್ದಾರೆ ಎಂದು ಸಂಸದೆ ಆರೋಪಿಸಿದ್ದಾರೆ. ಇದೇ ರೀತಿ ನೈಟ್ಔಟ್ನಲ್ಲಿ ಸೇರಿದ್ದ ಮಹಿಳೆಯರೂ ಕೂಡಾ ಆರೋಪ ಮಾಡಿದ್ದು ಪೊಲೀಸರು ಪ್ರಕರಣ ದಾಖಲು ಮಾಡಿದ್ದಾರೆ.
ಮಹಿಳೆಯರಿಗೆ ಅರಿವಿಲ್ಲದೆ ಡ್ರಗ್ಸ್ ನೀಡಿ ಲೈಂಗಿಕ ದೌರ್ಜನ್ಯ ಎಸಗಿರುವ ಘಟನೆ ಬೆಳಕಿಗೆ ಬಂದ ಕೂಡಲೇ ಕ್ವೀನ್ಸ್ಲ್ಯಾಂಡ್ ಪಟ್ಟಣದಲ್ಲಿ ಕೋಲಾಹಲ ಸೃಷ್ಟಿಯಾಗಿದೆ. ಪೊಲೀಸರು ಪ್ರಕರಣ ದಾಖಲಿಸಿಕೊಂಡು ತೀವ್ರ ತನಿಖೆ ನಡೆಸುತ್ತಿದ್ದಾರೆ. ಇನ್ನೂ ಈ ಕುರಿತಾಗಿ ಆಸ್ಟ್ರೇಲಿಯಾ ಕೆಲ ನಾಯಕರು ಸಂಸದೆ ಬ್ರಿಟ್ಟಾನಿಗೆ ಬೆಂಬಲ ನೀಡಿದ್ದಾರೆ.
LATEST NEWS
ಅಮೇಥಿಯಲ್ಲಿ ಕಾಂಗ್ರೆಸ್ ಕಚೇರಿ ಮೇಲೆ ದಾಳಿ.! ಕಾರುಗಳು ಪುಡಿ ಪುಡಿ, ಕಾರ್ಯಕರ್ತರಿಂದ ಪ್ರತಿಭಟನೆ
ಅಮೇಥಿ: ಉತ್ತರ ಪ್ರದೇಶದ ಅಮೇಥಿಯಲ್ಲಿರುವ ಕಾಂಗ್ರೆಸ್ ಪಕ್ಷದ ಕಚೇರಿ ಮೇಲೆ ಭಾನುವಾರ ತಡರಾತ್ರಿ ಅಪರಿಚಿತ ದುಷ್ಕರ್ಮಿಗಳ ತಂಡವೊಂದು ದಾಳಿ ನಡೆಸಿದ್ದು ಕಾಂಗ್ರೆಸ್ ಕಚೇರಿ ಹೊರಗಡೆ ನಿಲ್ಲಿಸಿದ್ದ ಹಲವಾರು ವಾಹನಗಳನ್ನು ಧ್ವಂಸಗೊಳಿಸಿ ಗದ್ದಲ ಸೃಷ್ಟಿಸಿದೆ.
ಸುದ್ದಿ ವಿಚಾರ ತಿಳಿಯುತ್ತಿದ್ದಂತೆ ಘಟನಾ ಸ್ಥಳಕ್ಕೆ ಕಾಂಗ್ರೆಸ್ ಜಿಲ್ಲಾಧ್ಯಕ್ಷ ಪ್ರದೀಪ್ ಸಿಂಗಲ್ ಪಕ್ಷದ ಕಚೇರಿಗೆ ದೌಡಾಯಿಸಿ ಬಳಿಕ ಪಕ್ಷದ ಕಾರ್ಯಕರ್ತರ ಜತೆಗೂಡಿ ಘಟನೆಯನ್ನು ಖಂಡಿಸಿ ಪ್ರತಿಭಟನೆ ನಡೆಸಿದ್ದಾರೆ. ವಿಡಿಯೋ ಅನ್ನು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಪ್ರತಿಭಟನೆ ಕಾವು ಹೆಚ್ಚುತ್ತಿದ್ದಂತೆ ಹಿರಿಯ ಪೊಲೀಸ್ ಅಧಿಕಾರಿಗಳು ಭಾರೀ ಪೊಲೀಸ್ ಪಡೆಯೊಂದಿಗೆ ಸ್ಥಳಕ್ಕೆ ಆಗಮಿಸಿ ಪ್ರತಿಭಟನಾನಿರತರನ್ನು ಸಮಾಧಾನ ಪಡಿಸಲು ಪ್ರಯತ್ನಿಸಿದರು.
ಈ ವೇಳೆ ಪ್ರತಿಭಟನಾಕಾರರು ಪೊಲೀಸರ ವಿರುದ್ಧ ಘೋಷಣೆಗಳನ್ನು ಕೂಗತೊಡಗಿದ್ದಾರೆ. ಪ್ರತಿಭಟನಾಕಾರರನ್ನು ಸಮಾಧಾನ ಪಡಿಸಿ ಆದಷ್ಟು ಬೇಗ ದುಷ್ಕರ್ಮಿಗಳನ್ನು ಬಂಧಿಸುವ ಭರವಸೆಯನ್ನು ಹಿರಿಯ ಪೊಲೀಸ್ ಅಧಿಕಾರಿ ನೀಡಿದ್ದಾರೆ. ದುಷ್ಕರ್ಮಿಗಳು ದಾಳಿ ನಡೆಸಿದ ವಿಡಿಯೋ ಅನ್ನು ಸಾಮಾಜಿಕ ಜಾಲತಾಣ x ನಲ್ಲಿ ಹಂಚಿಕೊಂಡ ಕಾಂಗ್ರೆಸ್ ಅಮೇಠಿಯಲ್ಲಿ ಕಾಂಗ್ರೆಸ್ ನಾಯಕ ರಾಹುಲ್ ವಿರುದ್ಧ ಸೋಲಿನ ಭೀತಿಯಿಂದ ಬಿಜೆಪಿ ಹಿಂಸಾಚಾರ ನಡೆಸುತ್ತಿದೆ ಎಂದು ಬಿಜೆಪಿ ಅಭ್ಯರ್ಥಿ ಸ್ಮೃತಿ ಇರಾನಿ ಅವರನ್ನು ಉಲ್ಲೇಖಿಸಿ ಆರೋಪ ಮಾಡಿದೆ.
DAKSHINA KANNADA
ನೇತ್ರಾವತಿ ನದಿಯಲ್ಲಿ ಮುಳುಗಿ ಇಬ್ಬರು ಬಾಲಕಿಯರು ಸಾವು..!
ಬಂಟ್ವಾಳ : ನೇತ್ರಾವತಿ ನದಿಯಲ್ಲಿ ಮುಳುಗಿ ಇಬ್ಬರು ಬಾಲಕಿಯರು ಮೃತಪಟ್ಟ ಘಟನೆ ಬಂಟ್ವಾಳದ ನಾವೂರು ಎಂಬಲ್ಲಿ ಭಾನುವಾರ(ಎ.5) ಸಂಜೆ ನಡೆದಿದೆ. ಉಳ್ಳಾಲ ನಿವಾಸಿಗಳಾದ ಅನ್ಸಾರ್ ಅವರ ಪುತ್ರಿ ಅಶ್ರಾ (11) ಮತ್ತು ಇಲಿಯಾಸ್ ಅವರ ಪುತ್ರಿ ಮರಿಯಮ್ ನಾಶೀಯಾ (14 )ಮೃತಪಟ್ಟ ಬಾಲಕಿಯರು.
ಮುಂದೆ ಓದಿ..; ಬರ್ಬರ ಹತ್ಯೆಯಾದ ಬ್ಯೂಟಿ ಕ್ವೀನ್.!! ಮುಳುವಾಯಿತಾ ಇನ್ಸ್ಟಾಗ್ರಾಮ್ ಪೋಸ್ಟ್..! ಸಿಸಿಟಿವಿಯಲ್ಲಿ ಸೆರೆಯಾದ ಭಯಾನಕ ದೃಶ್ಯ
ಮೂಲತಃ ನಾವೂರ ನಿವಾಸಿಯಾದ ಇಲಿಯಾಸ್ ಅವರು ಇತ್ತೀಚಿಗೆ ಉಳ್ಳಾಲದಲ್ಲಿ ಮನೆ ಕಟ್ಟಿಸಿದ್ದರು. ನಿನ್ನೆ ನಾವೂರು ಮೈಂದಾಳದಲ್ಲಿರುವ ಸಂಬಂಧಿಕರ ಮನೆಗೆ ತೆರಳಿದ್ದರು. ಸಂಜೆ ವೇಳೆ ಮನೆಯವರ ಜತೆಗೆ ನಾವೂರಿನ ನೀರಕಟ್ಟೆ ಎಂಬಲ್ಲಿ ನೇತ್ರಾವತಿ ನದಿಗೆ ತೆರಳಿದ್ದರು. ಈ ವೇಳೆ ಮನೆ ಮಂದಿ ಇರುವಾಗಲೇ ಮಕ್ಕಳು ನೀರಿನಲ್ಲಿ ಆಟ ಆಡುತ್ತಾ ಇದ್ದರು. ಈ ಸಂದರ್ಭದಲ್ಲಿ ಇಬ್ಬರು ಮಕ್ಕಳು ಏಕಾ ಏಕಿ ನೀರಿನಲ್ಲಿ ಮುಳುಗಿದ್ದಾರೆ. ನೀರಿನಲ್ಲಿ ಮುಳುಗುವುದನ್ನು ಕಣ್ಣಾರೆ ಕಂಡರೂ ಈಜು ಬಾರದ ಕಾರಣ ಮಕ್ಕಳನ್ನು ರಕ್ಷಣೆ ಮಾಡಲು ಸಾಧ್ಯವಾಗಲಿಲ್ಲ ಎನ್ನಲಾಗಿದೆ. ಘಟನಾ ಸ್ಥಳಕ್ಕೆ ಬಂಟ್ವಾಳ ಗ್ರಾಮಾಂತರ ಪೊಲೀಸರು ಭೇಟಿ ನೀಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.
- DAKSHINA KANNADA3 days ago
ಸುಬ್ರಹ್ಮಣ್ಯ: ಕೆಎಸ್ಸಾರ್ಟಿಸಿ ಬಸ್ಗಳ ಹಗಲು ದರೋಡೆ..! ಏನಿದು ಘಟನೆ?
- FILM5 days ago
ಬಿಗ್ ಬಾಸ್ ಬಗ್ಗೆ ಅಚ್ಚರಿ ಹೇಳಿಕೆ ಕೊಟ್ಟ ನಮ್ರತಾ ಗೌಡ!
- dehali4 days ago
ನಾಯಿಗಳಿಗೂ ಬಂತು ಆಧಾರ್ ಕಾರ್ಡ್.!! ಇನ್ಮುಂದೆ ನಾಯಿಗೂ ಸ್ಕ್ಯಾನ್ ಕಾರ್ಡ್..! ಏನಿದು?
- BELTHANGADY4 days ago
ವೇಷ ಕಳಚುವ ಮುನ್ನ ಇಹಲೋಕ ತ್ಯಜಿಸಿದ ಯಕ್ಷಗಾನ ಕಲಾವಿದ ಗಂಗಾಧರ ಪುತ್ತೂರು