Connect with us

LATEST NEWS

ಫುಟ್‌ಬಾಲ್ ಆಟಗಾರ್ತಿಯನ್ನು ಬಲಿ ತೆಗೆದುಕೊಂಡ ವೈದ್ಯರ ‘ಅರೆಬರೆ ಕಾಲಿನ ಸರ್ಜರಿ’-ಡಾಕ್ಟರ್ ಸಸ್ಪೆಂಡ್

Published

on

ಚೆನ್ನೈ: ಪ್ರತಿಭಾವಂತ ಫುಟ್ಬಾಲ್ ಆಟಗಾರ್ತಿಯೊಬ್ಬಳ ಕಾಲಿನಲ್ಲಿ ಆಗಿದ್ದ ಸಣ್ಣ ಗಾಯಕ್ಕೆ ವೈದ್ಯರು ನಡೆಸಿದ ಅರೆಬರೆ ಸರ್ಜರಿಗೆ ಆಕೆಯ ಬಹು ಅಂಗಾಂಗ ವೈಫಲ್ಯಕ್ಕೆ ಕಾರಣವಾಗಿ ಪ್ರಾಣವನ್ನೇ ಬಲಿಪಡೆದುಕೊಂಡ ಹೃದಯ ವಿದ್ರಾವಕ ಘಟನೆ ಚೆನ್ನೈಯಲ್ಲಿ ನಡೆದಿದೆ.


ಪ್ರಿಯಾ ಆರ್ (17) ಅವರಿಗೆ ಬಲಗಾಲಿನ ಅಸ್ಥಿರಜ್ಜು (ಲಿಗಮೆಂಟ್) ನೋವು ಪ್ರಾರಂಭವಾಗಿತ್ತು. ತಮಿಳುನಾಡಿನ ಪೆರಿಯಾರ್ ನಗರದಲ್ಲಿನ ಸರ್ಕಾರಿ ಪೆರಿಫೆರಲ್ ಆಸ್ಪತ್ರೆಯಲ್ಲಿ ನವೆಂಬರ್ 7ರಂದು ಪ್ರಿಯಾ, ಕಾಲಿನ ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದಳು.

ಅದು ಮೊಣಕಾಲಿನ ಕೆಳಗಿನ ಆಕೆಯ ಬಲಗಾಲನ್ನು ಕತ್ತರಿಸುವುದು ಸೇರಿದಂತೆ ಮತ್ತೆರಡು ಆಘಾತಕಾರಿ ಆಪರೇಷನ್‌ಗಳಿಗೆ ಎಡೆಮಾಡಿಕೊಟ್ಟಿತ್ತು. ವೈದ್ಯರು ಮಾಡಿದ್ದ ಎಡವಟ್ಟಿನಿಂದಾಗಿ ಸಾವು ಬದುಕಿನ ಮಧ್ಯೆ ಹೋರಾಟ ನಡೆಸುತ್ತಿದ್ದ ಪ್ರಿಯಾ ಸಾವನ್ನಪ್ಪಿದ್ದಾಳೆ.

ಆರ್ಥ್ರೋಸ್ಕೋಪಿಕ್ ಲಿಗಮೆಂಟ್ ಸರಿಪಡಿಸುವ ಶಸ್ತ್ರಚಿಕಿತ್ಸೆ ನಡೆಸಿದ್ದ ಸರ್ಕಾರಿ ಆಸ್ಪತ್ರೆಯ ಇಬ್ಬರು ವೈದ್ಯರನ್ನು, ವೈದ್ಯಕೀಯ ನಿರ್ಲಕ್ಷ್ಯದ ಆರೋಪದಡಿ ಅಮಾನತು ಮಾಡಲಾಗಿದೆ.

ಇವಳ ಸಾವಿನ ಬಗ್ಗೆ ಸಂತಾಪ ವ್ಯಕ್ತಪಡಿಸಿ ಮಾತನಾಡಿದ ಕ್ವೀನ್ ಮೇರಿಸ್ ಕಾಲೇಜಿನ ದೈಹಿಕ ತರಬೇತಿ ಶಿಕ್ಷಕಿ ವಸಂತ ಕುಮಾರಿ ‘ಕ್ರೀಡಾ ಕೋಟಾದಡಿ ಪ್ರಿಯಾ ಕಾಲೇಜು ಪ್ರವೇಶಾತಿಗೆ ಅರ್ಜಿ ಸಲ್ಲಿಸಿದ್ದಳು. ಆದರೆ ಆಕೆಗೆ ಅದು ಸಾಧ್ಯವಾಗಿರಲಿಲ್ಲ. ಹಾಗಿದ್ದೂ, ಆಕೆಯಲ್ಲಿನ ಆಸಕ್ತಿ ಕಂಡ ಕಾಲೇಜು ಬಿಎಸ್ಸಿ ದೈಹಿಕ ಶಿಕ್ಷಣ ಕೋರ್ಸ್‌ಗೆ ಸೀಟು ನೀಡಿತ್ತು.

“ಆಕೆ ಫಾರ್ವರ್ಡ್‌ನಲ್ಲಿ ಫುಟ್ಬಾಲ್ ಆಡುತ್ತಿದ್ದಳು. ನಮ್ಮ ಜತೆ ಒಂದು ತಿಂಗಳು ಅಭ್ಯಾಸ ನಡೆಸಿದ್ದಳು. ಆಗಸ್ಟ್‌ನಲ್ಲಿ ಪ್ರವೇಶ ಪ್ರಕ್ರಿಯೆ ಮುಗಿದಿತ್ತು. ಸೆಪ್ಟೆಂಬರ್‌ನಲ್ಲಿ ಕೋಚ್ ಬಳಿ ಬಂದ ಆಕೆ, ಕಾಲಿನಲ್ಲಿ ನೋವು ಇರುವುದಾಗಿ ತಿಳಿಸಿದ್ದಳು. ಅದು ಆಕೆಯ ಶಾಲಾ ದಿನಗಳಿಂದಲೂ ಕಾಡುತ್ತಿತ್ತು.

ಆಕೆಯ ಬಲಗಾಲನ್ನು ಕತ್ತರಿಸಬೇಕು ಎನ್ನುವ ಸುದ್ದಿ ಮಾಧ್ಯಮಗಳ ಮೂಲಕ ನಮಗೆ ಗೊತ್ತಾದಾಗ, ಆಕೆಗೆ ಗರಿಷ್ಠ ಪ್ರಮಾಣದ ಬೆಂಬಲ ನೀಡಬೇಕು ಎಂದು ನಿರ್ಧರಿಸಿದ್ದೆವು. ಆದರೆ ಆಕೆಯ ಸಾವಿನ ಸುದ್ದಿ ಬಂದಾಗ, ಆಘಾತ ಉಂಟಾಯಿತು” ಎಂದು ಹೇಳಿದ್ದಾರೆ.

 

 

DAKSHINA KANNADA

ದೊಡ್ಡವರ ಜಗಳದಲ್ಲಿ ಇಹಲೋಕ ತಜ್ಯಿಸಿದ 3 ರ ಕಂದಮ್ಮ…

Published

on

ಮಂಗಳೂರು (ಬೆಳಗಾವಿ): ಅದು ಎರಡು ಕುಟುಂಬಗಳ ನಡುವೆ ನಡೆದಿರೋ ಜಗಳ . ಆದ್ರೆ ಆ ಜಗಳಕ್ಕೆ ಏನೂ ಅರಿಯದ ಮೂರು ವರ್ಷದ ಪುಟ್ಟ ಮಗು ಬಲಿಯಾಗಿದೆ. ಪಾಪಿಯೊಬ್ಬ ಮಗುವಿನ ಎದೆಗೆ ಕಾಲಿಟ್ಟು ಮಗುವಿನ ಉಸಿರು ನಿಲ್ಲಿಸಿದ್ದಾನೆ.

ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನ ಬುರ್ಲಟ್ಟಿ ಎಂಬ ಗ್ರಾಮದಲ್ಲಿ ಈ ಹೃದಯ ವಿದ್ರಾವಕ ಘಟನೆ ನಡೆದಿದೆ. ದೊಡ್ಡವರ ಜಗಳದಲ್ಲಿ ಶ್ರೀನಿಧಿ ಕಾಡಪ್ಪ ಕಾಳಾಪಾಟೀಲ್ ಎಂಬ ಮೂರು ವರ್ಷದ ಮಗು ಹತವಾಗಿದೆ. ಜೋತಿಭಾ ತುಕಾರಾಮ ಬಾಬಬರ ಎಂಬಾತ ಮಗುವಿನ ಜೀವಕ್ಕೆ ಕುತ್ತು ತಂದ ಆರೋಪಿಯಾಗಿದ್ದಾನೆ.
ಹಣಕಾಸಿನ ವಿಚಾರದಲ್ಲಿ ಎರಡು ಕುಟುಂಬಗಳ ನಡುವೆ ಜಗಳ ನಡೆದಿತ್ತು. ಈ ವೇಳೆ ಜಗಳ ತಾರಕ್ಕೇರಿದಾಗ ಸಿಟ್ಟಿನಲ್ಲಿ ಜೋತಿಬಾ ತುಕಾರಾಮ ಬಾಬಾಬರ ಮಗುವಿನ ಎದೆ ಮೇಲೆ ಕಾಲಿಟ್ಟು ನಿಂತಿದ್ದಾನೆ. ಈ ವೇಳೆ ಮಗುವನ್ನು ಆತನ ಕಾಲಿನ ಅಡಿಯಿಂದ ತೆಗೆಯಲು ಮಗುವಿನ ತಾಯಿ ಯತ್ನಿಸಿದ್ದಾಳೆ . ಆ ವೇಳಗೆ ಇನ್ನಷ್ಟು ಗಟ್ಟಿಯಾಗಿ ಕಾಲಿನಿಂದ ಮಗುವಿನ ಎದೆಗೆ ಕಾಲಿನಿಂದ ಒತ್ತಿದ ಕಾರಣ ಮಗು ಉಸಿರು ನಿಲ್ಲಿಸಿದೆ. ವಿಷಯ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಐಗಳಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮಗುವಿನ ದೇಹವನ್ನು ಆಸ್ಪತ್ರೆಗೆ ರವಾನಿಸಿದ್ದಾರೆ. ಘಟನೆ ನಡೆಯುತ್ತಿದ್ದಂತೆ ಆರೋಪಿ ಸ್ಥಳದಿಂದ ಎಸ್ಕೇಪ್ ಆಗಿದ್ದು, ಪೊಲೀಸರು ಹುಡುಕಾಟ ನಡೆಸಿದ್ದಾರೆ.

Continue Reading

DAKSHINA KANNADA

ಅಮೇರಿಕಾದಲ್ಲಿ ಕಾರು ಅಪಘಾತ…! ಮೂವರು ಭಾರತೀಯ ಮಹಿಳೆಯರ ಸಾ*ವು…!

Published

on

ನ್ಯೂಯಾರ್ಕ್‌ : ಅಮೇರಿಕಾದಲ್ಲಿ ನಡೆದ ಕಾರು ಅಪಘಾತದಲ್ಲಿ ಭಾರತೀಯ ಮೂಲದ ಮೂವರು ಮಹಿಳೆಯರು ಇಹಲೋಕ ತ್ಯಜಿಸಿದ್ದಾರೆ. ಕೌಂಟಿಯ ಹೆದ್ದಾರಿಯ ಸೇತುವೆಯೊಂದರ ಮೇಲೆ ವೇಗವಾಗಿ ಕಾರು ಚಲಾಯಿಸಿದ ಕಾರಣ ಈ ಅಪಘಾತ ಸಂಭವಿಸಿದೆ. ಹೆದ್ದಾರಿಯಲ್ಲಿ ಉತ್ತರದ ಕಡೆಗೆ ಕಾರು ಪ್ರಯಾಣಿಸುತ್ತಿದ್ದು, ಎಲ್ಲಾ ಲೇನ್‌ಗಳನ್ನು ದಾಟಿ, ಹಂಪ್‌ ಮೇಲೆ ವೇಗವಾಗಿ ಏರಿತ್ತು. ಈ ಕಾರಣದಿಂದ ಕನಿಷ್ಟ 20 ಅಡಿಗಳಷ್ಟು ಮೇಲಕ್ಕೆ ಹಾರಿ ಸೇತುವೆಯ ಮುಂದೆ ಇದ್ದ ಮರಗಳಿಗೆ ಕಾರು ಅಪ್ಪಳಿಸಿದೆ. ಗುಜಾರಾತ್ ಮೂಲದ ಮೂವರು ಮಹಿಳೆಯರು ಈ ಕಾರಿನಲ್ಲಿ ಪ್ರಯಾಣಿಸುತ್ತಿದ್ದರು. ಗುಜರಾತ್‌ನ ಆನಂದ್ ಜಿಲ್ಲೆಯ ರೇಖಾಬೆನ್‌ ಪಟೇಲ್ , ಸಂಗೀತಾಬೆನ್ ಪಟೇಲ್ ಹಾಗೂ ಮನೀಶಾಬೆನ್ ಪಟೇಲ್‌ ಅವರು ಇಹಲೋಕ ತ್ಯಜಿಸಿದವರಾಗಿದ್ದಾರೆ.

 

ಕಾರು ನಿಗದಿಪಡಿಸಿದ ವೇಗದ ಮಿತಿಗಿಂತ ಹೆಚ್ಚು ವೇಗದಲ್ಲಿತ್ತು ಎಂದು ಅಲ್ಲಿನ ಅಧಿಕಾರಿಗಳು ಸ್ಪಷ್ಟಪಡಿಸಿದ್ದಾರೆ. ಅಪಘಾತದ ಪ್ರಮಾಣ ಎಷ್ಟಿತ್ತು ಮತ್ತು ಕಾರು ಎಷ್ಟು ಎತ್ತರಕ್ಕೆ ಹಾರಿತ್ತು ಅನ್ನೋದಿಕ್ಕೆ ಮರದ ಮೇಲಿರುವ ಕಾರಿನ ಅವಶೇಷಗಳು ಸಾಕ್ಷಿ ಎಂದು ಅವರು ಹೇಳಿದ್ದಾರೆ. ಮರದ ಮೇಲೆ ಬಿದ್ದ ಕಾರು ಛಿದ್ರಗೊಂಡು ಕಾರಿನ ಅವಶೇಷಗಳು ಚೆಲ್ಲಾಪಿಲ್ಲಿಯಾಗಿತ್ತು.


ದಕ್ಷಿಣ ಕೆರೊಲಿನಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದ್ದು, ತಕ್ಷಣ ಸ್ಥಳಕ್ಕೆ ರಕ್ಷಣಾ ತಂಡಗಳು, ಪೊಲೀಸರು ಆಗಮಿಸಿದ್ದಾರೆ. ಅಪಘಾತದಲ್ಲಿ ಓರ್ವ ಬದುಕಿ ಉಳಿದಿದ್ದು, ಆತನ ಸ್ಥಿತಿ ಗಂಭೀರವಾಗಿದ್ದು ಈಗಲೇ ಏನೂ ಹೇಳಲು ಆಗದ ಪರಿಸ್ಥಿತಿಯಲ್ಲಿದ್ದಾನೆ. ವಾಹನ ಅಪಘಾತವಾದ ತಕ್ಷಣ ಅದರಲ್ಲಿದ್ದ ತಾಂತ್ರಿಕ ವ್ಯವಸ್ಥೆಯ ಕಾರಣ ತಕ್ಷಣ ಕುಟುಂಬ ಸದಸ್ಯರಿಗೆ ಅಲರ್ಟ್‌ ಮೆಸೆಜ್ ರವಾನೆಯಾಗಿತ್ತು. ಹೀಗಾಗಿ ತಕ್ಷಣ ಕುಟುಂಬಸ್ಥರು ಕೂಡಾ ತಕ್ಷಣ ಸ್ಥಳಕ್ಕೆ ಆಗಮಿಸಿದ್ದಾರೆ.

Continue Reading

FILM

PHOTOS : ಗೀತಾ ‘ವಿಜಯ್’ ಅದ್ದೂರಿ ಮದುವೆ; ಮೆಚ್ಚುಗೆ ಪಡೆದ ಧನುಷ್ ಮಾಡಿದ ಆ ಒಂದು ಕಾರ್ಯ!

Published

on

ಬೆಂಗಳೂರು : ಸಿಕ್ಕಾಪಟ್ಟೆ ಫೇಮಸ್ ಆಗಿದ್ದ ಧಾರಾವಾಹಿ ‘ಗೀತಾ’. ಈ ಧಾರಾವಾಹಿಯ ನಾಯಕ ‘ವಿಜಯ್’ ಅಂದ್ರೆ ಧನುಷ್ ಗೌಡ ದಾಂಪತ್ಯ ಜೀವನಕ್ಕೆ ಪದಾರ್ಪಣೆ ಮಾಡಿದ್ದಾರೆ. ಅವರ ವಿವಾಹ ಶುಕ್ರವಾರ ಅದ್ದೂರಿಯಾಗಿ ನೆರವೇರಿತು.


ಧನುಷ್ ಗೌಡ ಅವರು ಸಂಜನಾ ಎಂಬವರ ಜೊತೆಗೆ ಸಪ್ತಪದಿ ತುಳಿದಿದ್ದಾರೆ. ಸಂಜನಾ ಧನುಷ್ ಅತ್ತೆಯ ಮಗಳಾಗಿದ್ದು, ಇದು ಅರೆಂಜ್ಡ್ ಮ್ಯಾರೇಜ್ ಆಗಿದೆ.


ಇನ್ನು ಮದುವೆಯಲ್ಲಿ ಕುಟುಂಬದವರು, ಆಪ್ತರು, ಸ್ನೇಹಿತರು ಉಪಸ್ಥಿತರಿದ್ದರು.

ಧನುಷ್ ಅವರು ಆರತಕ್ಷತೆ ಕಾರ್ಯಕ್ರಮವೂ ಅದ್ದೂರಿಯಾಗಿ ನಡೆದಿದೆ.

ಧನುಷ್ ಅವರ ಮದುವೆ, ಆರತಕ್ಷತೆ ಕಾರ್ಯಕ್ರಮದಲ್ಲಿ ಅನೇಕ ಗಣ್ಯರು ಪಾಲ್ಗೊಂಡಿದ್ದರು. 

ಇದನ್ನೂ ಓದಿ : ಮೇಕಪ್ ರೂಂನಲ್ಲಿ ಕೂಡಿ ಹಾಕಿದ್ರು…ಆಮೇಲೆ…ನಿರ್ಮಾಪಕನಿಂದಾದ ಕರಾಳ ಅನುಭವ ಬಿಚ್ಚಿಟ್ಟ ಖ್ಯಾತ ಕಿರುತೆರೆ ನಟಿ!

ಭವ್ಯಾ ಗೌಡ, ಮೌನ ಗುಡ್ಡೇಮನೆ, ರಿತ್ವಿಕ್ ಕೃಪಾಕರ್, ಸೇರಿ ಅನೇಕ ಕಿರುತೆರೆ ಹಿರಿತೆರೆ ತಾರೆಯರು ಆಗಮಿಸಿದ್ದರು.

 

ಮದುವೆ ಸಂಭ್ರಮದ ನಡುವೆಯೂ ಧನುಷ್ ವೋಟ್ ಮಾಡುವ ಮೂಲಕ ಅಭಿಮಾನಿಗಳಿಗೆ ಮಾದರಿಯಾಗಿದ್ದಾರೆ. ಧನುಷ್ ನಡೆಗೆ ಅಭಿಮಾನಿಗಳು ಮೆಚ್ಚಿಕೊಂಡಿದ್ದಾರೆ.

 

 

Continue Reading

LATEST NEWS

Trending