LATEST NEWS
ಅಣ್ಣನ ಪ್ರೀತಿಗೆ ತಮ್ಮ ಬ*ಲಿ; ತಾಯಿಯ ಮುಂದೆಯೇ ಮಗನ ಕೊ*ಲೆ
ಮಂಗಳೂರು/ಕಲಬುರಗಿ: ಯುವ ಸಮಾಜದ ಪ್ರೀತಿಗೆ ಮನೆಯಲ್ಲಿ ವಿರೋಧ ಬರುವುದು ಸಹಜ. ಅದರಲ್ಲೂ ಹುಡುಗಿಯ ವಿಚಾರದಲ್ಲಿ ಇದು ಹೆಚ್ಚಾಗಿಯೇ ಕಾಣಬಹುದು. ವಿಪರ್ಯಾಸವೆಂದರೆ ಅಣ್ಣನ ಪ್ರೇಮದ ವಿಚಾರದಲ್ಲಿ ತಮ್ಮ ಬಲಿ*ಯಾದ ಘಟನೆ ನಡೆದಿದೆ.
ಕಲಬುರಗಿ ನಗರದ ಹೊರವಲಯದಲ್ಲಿರುವ ನಾಗನಹಳ್ಳಿ ಗ್ರಾಮದಲ್ಲಿ ಸುಮಿತ್ ಮಲ್ಲಾಬಾದ್ ಎಂಬ 19 ವರ್ಷದ ಯುವಕನನ್ನು ಭೀಕ*ರವಾಗಿ ಕೊ*ಲೆ ಮಾಡಲಾಗಿದೆ. ತಂದೆ-ತಾಯಿಯೊಂದಿಗೆ ಮುಂಬೈನಲ್ಲಿ ವಾಸವಾಗಿದ್ದ ಸುಮಿತ್, ಮುಂಬೈನಲ್ಲಿ ಪದವಿ ವಿದ್ಯಾಭ್ಯಾಸ ಮಾಡುತ್ತಿದ್ದ. ಕಳೆದ ವಾರವಷ್ಟೇ ತಾಯಿಯೊಂದಿಗೆ ಕಲಬುರಗಿಗೆ ಆಗಮಿಸಿದ್ದ. ಊರಲ್ಲಿ ಸುಮಿತ್ ಸಹೋದರ ಸಚಿನ್ ಮನೆಯಲ್ಲಿ ವಾಸವಾಗಿದ್ದ. ಸಚಿನ್ ನಾಗನಹಳ್ಳಿ ಗ್ರಾಮದ ತನ್ನದೆ ಏರಿಯಾದ ಯುವತಿಯನ್ನು ಪ್ರೀತಿಸುತ್ತಿದ್ದನಂತೆ. ಈ ವಿಚಾರ ಯುವತಿಯ ಮನೆಯವರಿಗೆ ಗೊತ್ತಾಗಿ ಸಾಕಷ್ಟು ಭಾರಿ ನ್ಯಾಯ ಪಂಚಾಯಿತಿ ಮಾಡಿದ್ದರಂತೆ. ಆದರೆ ಅದು ಬಗೆಹರೆದಿರಲಿಲ್ಲ. ನಿನ್ನೆ ಸಂಜೆ (ಸೆ.21) ಸಚಿನ್ ಮನೆಗೆ ಯುವತಿಯ ಸಹೋದರ ಮತ್ತು ಆತನ ಕೆಲ ಸ್ನೇಹಿತರು ಬಂದಿದ್ದಾಗ ಸಚಿನ್ ಮನೆಯಲ್ಲಿರದ ಕಾರಣ ಆತನ ತಾಯಿ ಮತ್ತು ಸಹೋದರನ ಜೊತೆ ಗಲಾಟೆ ತೆಗೆದಿದ್ದಾರೆ. ಬಳಿಕ ಗಲಾಟೆ ವಿಕೋಪಕ್ಕೆ ತೆರಳಿ ಸುಮಿತ್ನನ್ನ ಚಾ*ಕುವಿನಿಂದ ಚು*ಚ್ಚಿ ಎಸ್ಕೇಪ್ ಆಗಿದ್ದಾರೆ.
ಇತ್ತ ಸುಮಿತ್‌ಗೆ ಚಾ*ಕು ಚುಚ್ಚಿ*ದ್ದನ್ನು ಕಂಡ ತಾಯಿ, ಮಗನನ್ನ ಉಳಿಸಿಕೊಳ್ಳಲು ಕಲಬುರಗಿ ನಗರದ ಜಿಮ್ಸ್ ಆಸ್ಪತ್ರೆಗೆ ದಾಖಲಿಸಿದ್ದಾರೆ. ಹನ್ನೆರೆಡು ಗಂಟೆಗಳ ಕಾಲ ನಡೆದ ಚಿಕಿತ್ಸೆ ಫಲಕಾರಿಯಾಗಿದೆ ಇಂದು ಬೆಳಗ್ಗೆ (ಸೆ.22) ಸಾವನ್ನ*ಪ್ಪಿದ್ದಾನೆ.
ಈ ಸಂಬಂಧ ವಿಶ್ವವಿದ್ಯಾಲಯ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಆರೋಪಿಗಳಿಗಾಗಿ ಹುಡುಕಾಟ ನಡೆಸಿದ್ದಾರೆ. ಅದೇನೆ ಆಗಲಿ ಯುವತಿಯ ವಿಚಾರದಲ್ಲಿ ಏನು ಮಾಡದ ಅಮಾಯಕ ಯುವಕ ಬಲಿಯಾಗಿರೋದು ನಿಜಕ್ಕೂ ದುರಂತವೆ ಸರಿ.
LATEST NEWS
SHOCKING NEWS : ಮತ್ತೆ ಮೂವರು ಪಾಕಿಸ್ತಾನಿ ಪ್ರಜೆಗಳ ಬಂಧನ
ಬೆಂಗಳೂರು: ರಾಜಧಾನಿ ಬೆಂಗಳೂರಿನಲ್ಲಿ ಅಕ್ರಮವಾಗಿ ನೆಲೆಸಿರುವ ಪಾಕಿಸ್ತಾನಿ ಪ್ರಜೆಗಳ ಹಾವಳಿ ಹೆಚ್ಚಾಗುತ್ತಿದ್ದು, ಪೀಣ್ಯದಲ್ಲಿ ವಾಸವಿದ್ದ ಮೂವರು ಪಾಕಿಸ್ತಾನಿ ಪ್ರಜೆಗಳನ್ನು ಗುರುವಾರ ವಶಕ್ಕೆ ತೆಗೆದುಕೊಳ್ಳಲಾಗಿದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.
ಕೆಲವು ದಿನಗಳ ಹಿಂದೆ ಬೆಂಗಳೂರು ಹೊರವಲಯದ ಜಿಗಣಿಯಲ್ಲಿ ನಾಲ್ವರನ್ನು ಬಂಧಿಸಿಲಾಗಿತ್ತು. ಇದೀಗ ಪೀಣ್ಯದಲ್ಲಿ ಗಂಡ, ಹೆಂಡತಿ ಮತ್ತು ಅವರ ಮಗಳನ್ನು ವಶಕ್ಕೆ ಪಡೆಯಲಾಗಿದೆ. ಇವರು ಕೂಡಾ ಜಿಗಣಿಯಲ್ಲಿದ್ದಂತೆ ನಕಲಿ ಗುರುತಿನ ಚೀಟಿ ಬಳಸುತ್ತಿದ್ದರು ಎಂದು ತಿಳಿದು ಬಂದಿದೆ.
ರಾಜ್ಯ ಹಾಗೂ ದೇಶದ ವಿವಿಧ ಭಾಗಗಳಲ್ಲಿ ನೆಲೆಸಿರುವ ಇತರರನ್ನು ಗುರುತಿಸಲು ತನಿಖೆ ನಡೆಯುತ್ತಿದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.
DAKSHINA KANNADA
ಮಂಗಳೂರಿಗೆ ಬಂದ ಕರ್ನಾಟಕ ಸುವರ್ಣ ರಥ
ಮಂಗಳೂರು: ರಾಜ್ಯಕ್ಕೆ ಕರ್ನಾಟಕ ಎಂದು ನಾಮಕರಣವಾಗಿ 50 ವರ್ಷ ಪೂರೈಸಿದ ಹಿನ್ನೆಯಲ್ಲಿ ರಾಜ್ಯದಾದ್ಯಂತ ಸಂಚರಿಸುತ್ತಿರುವ ಸುವರ್ಣ ಕರ್ನಾಟಕ ರಥ ಮಂಗಳೂರಿಗೆ ಆಗಮಿಸಿದೆ.
ರಾಜ್ಯದ ಪ್ರತಿ ಜಿಲ್ಲೆ, ತಾಲೂಕಿನಲ್ಲಿ ಸಂಚರಿಸುವ ಈ ರಥವನ್ನು ದಕ್ಷಿಣ ಕನ್ನಡ ಜಿಲ್ಲೆಗೆ ಸ್ವಾಗತಿಸುವ ಕಾರ್ಯಕ್ರಮ ಸರಳ ರೀತಿಯುಲ್ಲಿ ನಡೆಯಿತು. ಚುನಾವಣಾ ನೀತಿ ಸಂಹಿತೆ ಜಾರಿಯಲ್ಲಿ ಇರುವ ಕಾರಣ ಆಧಿಕಾರಿಗಳು ರಥವನ್ನು ಸ್ವಾಗತಿಸಿದ್ದಾರೆ. ಕುದ್ಮುಲ್ ರಂಗರಾವ್ ಸಭಾಂಗಣದಲ್ಲಿ ರಥಕ್ಕೆ ಸ್ವಾಗತ ಕೋರಲಾಗಿದ್ದು, ಅಧಿಕಾರಿಗಳಿಂದಲೇ ಸರಳ ಕಾರ್ಯಕ್ರಮ ಕೂಡಾ ಆಯೋಜಿಸಲಾಗಿದೆ.
ಮಂಗಳೂರು ಮಹಾನಗರ ಪಾಲಿಕೆ ಆಯುಕ್ತ ಸಿ.ಎಲ್. ಆನಂದ್ ಅವರ ನೇತೃತ್ವದಲ್ಲಿ ರಥವನ್ನು ಸ್ವಾಗತಿಸಲಾಗಿದ್ದು, ಜಿಲ್ಲೆಯ ಪ್ರಮುಖ ಅಧಿಕಾರಿಗಳು ಉಪಸ್ಥಿತರಿದ್ದರು. ಕಳೆದ ವರ್ಷ ನವೆಂಬರ್ 1 ರಿಂದ ಈ ರಥ ರಾಜ್ಯದಾದ್ಯಂತ ಸಂಚರಿಸಿ ಕರ್ನಾಟಕ ಸುವರ್ಣ ಸಂಭ್ರಮದ ಸಂದೇಶ ಸಾರುತ್ತಿದೆ.
LATEST NEWS
ಮನೆಯಲ್ಲಿ ಒಂದಕ್ಕಿಂತ ಹೆಚ್ಚು ವಾಶ್ ರೂಮ್ ಇದ್ರೆ ಹೆಚ್ಚುವರಿ ಶುಲ್ಕ..!
ಮಂಗಳೂರು : ಮನೆಯಲ್ಲಿ ಒಂದಕ್ಕಿಂತ ಹೆಚ್ಚು ವಾಶ್ ರೂಮ್ ಹೊಂದಿದವರಿಗೆ ತೆರಿಗೆ ರೂಪದಲ್ಲಿ ಹೆಚ್ಚುವರಿ ಶುಲ್ಕ ವಸೂಲಿಗೆ ಸರ್ಕಾರ ತೀರ್ಮಾನಿಸಿದೆ. ಈ ಕುರಿತಾಗಿ ಸರಕಾರ ಅಧಿಸೂಚನೆ ಹೊರಡಿಸಿದ್ದು, ಇನ್ನು ಮುಂದೆ ನಗರ ಪ್ರದೇಶದಲ್ಲಿ ವಾಸವಾಗಿರುವವರು ಮನೆಯಲ್ಲಿ ಒಂದಕ್ಕಿಂತ ಹೆಚ್ಚು ವಾಶ್ ರೂಮ್ ಹೊಂದಿದ್ದರೆ, ತಲಾ ರೂ.25 ರಂತೆ ತೆರಿಗೆ ನೀಡಬೇಕಾಗುತ್ತದೆ.
ನಗರವಾಸಿಗಳು ಬಳಸುವ ನೀರಿನ ಬಿಲ್ಲಿನ ಶೇಖಡಾ 30 ರಷ್ಟು ಒಳಚರಂಡಿ ತೆರಿಗೆ ಹಾಗೂ ಪ್ರತಿ ಹೆಚ್ಚುವರಿ ವಾಶ್‌ರೂಮ್‌ಗೆ ರೂ.25 ತೆರಿಗೆ ನೀಡುವಂತೆ ಅಧಿಸೂಚನೆಯಲ್ಲಿ ತಿಳಿಸಲಾಗಿದೆ. ಇಂತಹ ಒಂದು ವಾಶ್ ರೂಮ್ ಟ್ಯಾಕ್ಸ್ ಹಿಮಾಚಲ ಪ್ರದೇಶದ ಸರ್ಕಾರ ಜಾರಿಗೆ ತಂದಿದೆ.
ಹಿಮಾಚಲ ಪ್ರದೇಶದ ಸರ್ಕಾರ ಆರ್ಥಿಕ ಬಿಕ್ಕಟ್ಟು ಎದುರಿಸುತ್ತಿದ್ದು, ಅಧಿಕಾರದಲ್ಲಿರುವ ಕಾಂಗ್ರೆಸ್ ಸರ್ಕಾರ ಇಂತಹ ಒಂದು ಅಧಿಸೂಚನೆ ಹೊರಡಿಸಿದೆ. ಮುಖ್ಯಮಂತ್ರಿ ಸುಖವಿಂದರ್ ಸಿಂಗ್ ಸುಖು ಅವರು ಆರ್ಥಿಕ ಸಂಕಷ್ಟದಿಂದ ಪಾರಾಗಲು ವಾಶ್‌ರೂಮ್ ಟ್ಯಾಕ್ಸ್ ಜಾರಿ ಮಾಡಿದ್ದಾರೆ. ಒಳಚರಂಡಿ ಬಿಲ್ ಜೊತೆಗೆ ಈ ಹೆಚ್ಚುವರಿ ಶುಲ್ಕವನ್ನು ಜಲಶಕ್ತಿ ಇಲಾಖೆ ಸಂಗ್ರಹಿಸಲಿದ್ದು ಇದು ಜಲಶಕ್ತಿ ಇಲಾಖೆಯ ಖಾತೆಗೆ ಜಮೆ ಆಗಲಿದೆ.
ಇದರಿಂದ ಹಿಮಾಚಲ ಪ್ರದೇಶದ 5 ಮುನ್ಸಿಪಲ್ ಕಾರ್ಪೋರೇಶನ್, 29 ಪುರಸಭೆಗಳ ಮತ್ತು 17 ನಗರ ಪಂಚಾಯತ್ ನ ಸುಮಾರು 10 ಲಕ್ಷ ಜನರಿಗೆ ಹೊರೆಯಾಗಲಿದೆ.
- DAKSHINA KANNADA7 days ago
ಕೆಬಿಬಿಯಲ್ಲಿ ಮಿಂಚಿದ ಮಂಗಳೂರು ಬೆಡಗಿ; ಕೊನೆಗೂ ನನಸಾದ ಅಪೂರ್ವ ಶೆಟ್ಟಿ ಕನಸು
- BIG BOSS4 days ago
BBK11 ವೇದಿಕೆಗೆ ಬರುತ್ತಿದ್ದಂತೆ ರೀಲ್ಸ್ ಸ್ಟಾರ್ ಮೇಲೆ ಕೋಪಗೊಂಡ ಕಿಚ್ಚ: ಇಂತವರನ್ನ ಏಕೆ ಕರೆಸಿದ್ರಿ ಎಂದು ಗರಂ?
- BIG BOSS4 days ago
ಚೈತ್ರಾ ಕುಂದಾಪುರಗೆ ಮೊದಲ ದಿನವೇ ಹೊಸ ಬಿರುದು ಕೊಟ್ಟ ಲಾಯರ್ ಜಗದೀಶ್
- BIG BOSS4 days ago
ಭ್ರಷ್ಟರ ವಿರುದ್ಧ ಗುಡುಗಿದ ಸ್ಪರ್ಧಿ ಲಾಯರ್ ಜಗದೀಶ್ಗೆ ಕಿಚ್ಚ ವಾರ್ನಿಂಗ್..!