Connect with us

bengaluru

ಇಟ್ಕೊಂಡವನೊಂದಿಗೆ ಚಕ್ಕಂದವಾಡಲು ಅಡ್ಡಿಯಾದ ಕಟ್ಕೊಂಡವನನ್ನು ಮುಗಿಸಿದ ಡಿಲ್ಲಿರಾಣಿ..!

Published

on

ಬೆಂಗಳೂರು: ಪ್ರಿಯಕರನ ಜೊತೆ ರೊಮ್ಯಾನ್ಸ್ ಮಾಡಲು ಅಡ್ಡಿಯಾಗುತ್ತಾನೆಂಬ ಕಾರಣಕ್ಕಾಗಿ ಹೆಂಡತಿ ತನ್ನ ಗಂಡನನ್ನೇ ಕೊಂದು ಜೈಲು ಸೇರಿದ ಘಟನೆ ಬೆಂಗಳೂರಿನಲ್ಲಿ ನಡೆದಿದೆ.

ಶಂಕರ್ ರೆಡ್ಡಿ ತನ್ನ ಪತ್ನಿಯಿಂದಲೇ ಮೃತಪಟ್ಟ ದುರ್ದೈವಿ.

ಅಕೌಂಟೆಂಟ್ ಉದ್ಯೋಗಿ ಆಗಿದ್ದ ಶಂಕರ್ ರೆಡ್ಡಿ ತನ್ನ ಹೆಂಡತಿಯೊಂದಿಗೆ ಯಶವಂತಪುರದಲ್ಲಿ ವಾಸವಿದ್ದರು. ಆದರೆ ತನ್ನ ಪತ್ನಿ ಡಿಲ್ಲಿರಾಣಿಗೆ ಅಕ್ರಮ ಸಂಬಂಧವಿತ್ತು. ಪ್ರಿಯಕರನೊಂದಿಗೆ ಸಂಬಂಧ ಮುಂದುವರೆಸಲು ಪತಿ ಅಡ್ಡಿಯಾಗುತ್ತಿದ್ದ. ಈ ಕಾರಣಕ್ಕಾಗಿಯೇ ಗಂಡನನ್ನು ಮರ್ಡರ್ ಮಾಡಲು ಬಿಗ್ ಪ್ಲಾನ್ ಕೂಡಾ ಮಾಡಿದ್ದಳು.

ಈಕೆ ಗಂಡನನ್ನು ಕೊಂದು ಪಕ್ಕದಲ್ಲೇ ಮಲಗಿ ಸತ್ತು ಹೋದವಳಂತೆ ನಾಟಕ ಮಾಡಿದ್ದು ಕೊಲೆಯ ಬಗ್ಗೆ ಮಾಹಿತಿ ಪಡೆದ ಪೊಲೀಸರು ಸ್ಥಳಕ್ಕೆ ಆಗಮಿಸಿ ಡಿಲ್ಲಿರಾಣಿಯನ್ನು ಆಸ್ಪತ್ರೆಗೆ ಕೊಂಡೊಯ್ದು ಚಿಕಿತ್ಸೆ ಕೊಡಿಸಿದ್ದಾರೆ.

ತದನಂತರ ಆಕೆಯ ಪತಿ ಶಂಕರ್ ರೆಡ್ಡಿ ಸಾವಿನ ಬಗ್ಗೆ ತನಿಖೆದ ಮುಂದುವರೆಸಿದ ಪೊಲೀಸರು ಈಕೆಯನ್ನು ವಿಚಾರಿಸಿದಾಗ “ಯಾರೋ ದುಷ್ಕರ್ಮಿಗಳು ಮನೆಗೆ ಬಂದು ದರೋಡೆ ಮಾಡಿ ನನ್ನ ಗಂಡನನ್ನು ಕೊಂದು ಹಾಕಿದ್ದಾರೆ. ಜೊತೆಗೆ ನನ್ನ ಚಿನ್ನದ ಸರವನ್ನು ಕೂಡ ಎಗರಿಸಿಕೊಂಡು ಓಡಿದ್ದಾರೆ” ಎಂದು ಕಥೆ ಕಟ್ಟಿದ್ದಾಳೆ.

ಆದರೆ ಡಿಲ್ಲಿ ರಾಣಿಯ ದೇಹದ ಮೇಲೆ ಯಾವುದೇ ಗಾಯವಾಗದ ಕಾರಣ ಅನುಮಾನಗೊಂಡ ಪೊಲೀಸರು ಶ್ವಾನದಳವನ್ನು ಕರೆತಂದು ತನಿಖೆ ನಡೆಸಿದರು. ಆದರೆ ಶ್ವಾನಗಳು ಘಟನಾ ಸ್ಥಳದಿಂದ ಅ್ಯಂಬುಲೆನ್ಸ್‌ ಬಂದಿದ್ದ ಸ್ಥಳದವರೆಗೂ ಮಾತ್ರ ಹಿಂಬಾಲಿಸಿದ್ದವು.

ಇನ್ನೂ ಸಂಶಯಗೊಂಡ ಪೊಲೀಸರು ಡಿಲ್ಲಿರಾಣಿಯನ್ನು ಹೆಚ್ಚಿನ ವಿಚಾರಣೆಗೆ ಒಳಪಡಿಸಿದಾಗ ಪ್ರಿಯಕರನೊಂದಿಗೆ ಸಂಬಂಧ ಮುಂದುವರೆಸಲು ಪತಿ ಅಡ್ಡ ಬರುತ್ತಿದ್ದ ಕಾರಣಕ್ಕೆ ಕೊಲೆ ಮಾಡಿರುವುದಾಗಿ ಸತ್ಯವನ್ನು ಒಪ್ಪಿಕೊಂಡಿದ್ದಾಳೆ.

ಆರೋಪಿ ಡಿಲ್ಲಿರಾಣಿ ಪತಿ ಶಂಕರ್ ರೆಡ್ಡಿಯನ್ನು ಕತ್ತು ಕೊಯ್ದು ಕೊಲೆ ಮಾಡಿ ನಂತರ ತನ್ನ ಪ್ರಿಯಕರನಿಗೆ ಕಾಲ್ ಮಾಡಿ ಕಥೆ ಮುಗೀತು ಅಂತ ಹೇಳಿದ್ದಾಳೆ. ಡೌಟ್ ಬಾರದಿರಲು ಆತನ ನಂಬರ್ ಡಿಲೀಟ್ ಮಾಡಿದ್ದಾಳೆ.

ಅಲ್ಲದೆ ವಿಚಾರಣೆಯಲ್ಲಿ ತನ್ನ ಚಿನ್ನದ ಸರವನ್ನು ತನ್ನ ಒಳ ಉಡುಪಿನಲ್ಲಿ ಬಚ್ಚಿಟ್ಟುಕೊಂಡಿರುವುದಾಗಿ ಬಾಯಿ ಬಿಟ್ಟಿದ್ದಾಳೆ.

ಪೊಲೀಸರು ಪ್ರಕರಣ ದಾಖಲಿಸಿಕೊಂಡು ಆರೋಪಿಯನ್ನು ಬಂಧಿಸಿದ್ದಾರೆ.

bangalore

ಇವ್ರು ಯಾರಂತ ಗೊತ್ತಾಯ್ತ ಫ್ರೆಂಡ್ಸ್? ನ್ಯೂ ಕಪಲ್ಸ್ ಫಾರಿನ್ ಟ್ರಿಪ್ ಅಂತೆ..!

Published

on

Film: ತೆಲುಗು ನಟ ನರೇಶ್ ಈಗಾಗಲೇ ಮೂರನೇ ಪತ್ನಿ ರಮ್ಯಾ ರಘುಪತಿಯವರಿಂದ ಡಿವೋರ್ಸ್ ಕೋರಿ ಕೋರ್ಟ್ ಮೆಟ್ಟಿಲೇರಿದ್ದಾರೆ. ಆದ್ರೆ ರಮ್ಯಾ ಡಿವೋರ್ಸ್ ನೀಡಲು ಒಪ್ಪುತ್ತಿಲ್ಲ. ಹೀಗಿರುವಾಗಲೇ ಪವಿತ್ರಾ ಲೋಕೇಶ್ ಜೊತೆ ನರೇಶ್ ಸಹಜೀವನ ನಡೆಸುತ್ತಿದ್ದಾರೆ.


ಬಹುದಿನಗಳ ನಂತರ ನರೇಶ್ ಚಿತ್ರರಂಗದಲ್ಲಿ 50 ವರ್ಷ ಪೂರೈಸಿರುವ ಹಿನ್ನೆಲೆ ಸೋಶಿಯಲ್ ಮೀಡಿಯಾದಲ್ಲಿ ಎಮೋಷನಲ್ ಪೋಸ್ಟ್ ಮಾಡಿದ್ದಾರೆ. “ನಾನು ನನ್ನ ಜೀವನದಲ್ಲಿ ಸಂಕಷ್ಟದಲ್ಲಿದ್ದಾಗ, ಈ ಒಂದು ಹಾಡು ನನಗೆ ಸ್ಫೂರ್ತಿ ನೀಡಿತು. ಆ ಸಮಯದಲ್ಲಿ ನಾನು ನನ್ನ ಕರಿಯರ್ ಕಳೆದುಕೊಂಡೆ. ನಾನು ಆರ್ಥಿಕ ಸಮಸ್ಯೆ ಎದುರಿಸಿದೆ. ನನ್ನ ಆತ್ಮೀಯರು ನನ್ನನ್ನು ಅಗಲಿದ್ದರು. ಕ್ಷುಲ್ಲಕ ಪ್ರಕರಣದಲ್ಲಿ ಸಂಬಂಧಿಕರಿಂದ ಕಿರಿಕಿರಿ, ಜೋಕರ್‌ನಿಂದ ತೊಂದರೆ ಎದುರಾದರೂ ನನ್ನ ಬೆಂಬಲಕ್ಕೆ ನಿಂತಿದ್ದು ನನ್ನ ತಾಯಿ ಮತ್ತು ಸ್ನೇಹಿತ ವಿಜಯ್ ವಾಧ್ವಾ ಮಾತ್ರ.ಈಗ ಈ ರೀತಿ ಬದಲಾಗಿದ್ದೇನೆ. ಈ ಹಾಡು ನನಗೆ ಸ್ಫೂರ್ತಿ ನೀಡಿದ್ದು ಮಾತ್ರವಲ್ಲ. ಮತ್ತೆ ಬಲವಾಗಿ ಎದ್ದು ನಿಲ್ಲುವಂತೆ ಮಾಡಿದೆ. ಈಗಲೂ ಪ್ರೇರೇಪಿಸುತ್ತದೆ. ಈಗ ನಾನು ನನ್ನ ವೃತ್ತಿಜೀವನದ 50ನೇ ವರ್ಷದಲ್ಲಿದ್ದೇನೆ. ಈ ಮಹತ್ತರವಾದ ಮೈಲಿಗಲ್ಲನ್ನು ಸಾಧಿಸಲು ನನಗೆ ತುಂಬಾ ಸಹಾಯ ಮಾಡಿದ ಎಲ್ಲರಿಗೂ ನನ್ನ ಪ್ರಾಮಾಣಿಕ ಕೃತಜ್ಞತೆಯನ್ನು ವ್ಯಕ್ತಪಡಿಸಲು ನಾನು ಬಯಸುತ್ತೇನೆ” ಎಂದು ನರೇಶ್ ಇನ್‌ಸ್ಟಾಗ್ರಾಂ ಪೋಸ್ಟ್‌ನಲ್ಲಿ ತಿಳಿಸಿದ್ದಾರೆ.

Continue Reading

bengaluru

41ನೇ ವರ್ಷದ ಹುಟ್ಟು ಹಬ್ಬ ಆಚರಿಸಿಕೊಂಡ ಕ್ವೀನ್ ರಮ್ಯಾ

Published

on

ಬೆಂಗಳೂರು : ಇಂದು ಸ್ಯಾಂಡಲ್‌ವುಡ್‌ ಕ್ವೀನ್‌.. ಮೋಹಕತಾರೆ ರಮ್ಯಾ ಜನ್ಮದಿನ.. ಸೋಷಿಯಲ್‌ ಮಿಡಿಯಾದಲ್ಲಿ ಅವರ ಅಭಿಮಾನಿಗಳು ವಿಶ್‌ ಮಾಡುತ್ತಿದ್ದಾರೆ.
ಈ ಹುಟ್ಟುಹಬ್ಬಕ್ಕೆ ಅವರ ಹೊಸ ಸಿನಿಮಾದ ಅಪ್​ಡೇಟ್ ನೀಡಲಿದ್ದಾರೆ ಎಂಬ ಕುತೂಹಲ ಅಭಿಮಾನಿಗಳಿಗಿತ್ತು. ಈವರೆಗೆ ರಮ್ಯಾರ ಹೊಸ ಸಿನಿಮಾಗಳ ಯಾವುದೇ ಅಪ್​ಡೇಟ್​ಗಳು ಹೊರಬಿದ್ದಿಲ್ಲ. ಆದರೆ ರಮ್ಯಾ ಈ ಹುಟ್ಟುಹಬ್ಬವನ್ನು ಸರಳವಾಗಿ, ತಮಗೆ ಇಷ್ಟವಾದವರೊಟ್ಟಿಗೆ ಸಮಯ ಕಳೆಯುತ್ತಾ ದಿನವನ್ನು ಎಂಜಾಯ್ ಮಾಡುತ್ತಿದ್ದಾರೆ. ಇದಕ್ಕೆ ಸಾಕ್ಷಿಯಾಗಿ ವಿಡಿಯೋ ಒಂದನ್ನು ಸಹ ಹಂಚಿಕೊಂಡಿದ್ದಾರೆ.


ನಟಿ ರಮ್ಯಾ ತಮ್ಮದೇ ಆದ ದೊಡ್ಡ ಅಭಿಮಾನಿ ಬಳಗ ಹೊಂದಿದ್ದಾರೆ.. ಈ ಚೆಲುವೆ 2003ರಲ್ಲಿ ‘ಅಭಿ’ ಚಿತ್ರದ ಮೂಲಕ ಚಂದನವನ ಪ್ರವೇಶಿಸಿದರು.. ಇವರು ಮೊದಲು ನಾಯಕಿಯಾಗಿ ನಟಿಸಿದ್ದು ಡಾ. ರಾಜ್‌ ಪುತ್ರ ಅಪ್ಪು ಅಲಿಯಾಸ್‌ ಪುನೀತ್‌ ರಾಜ್‌ಕುಮಾರ್‌ ಅವರ ಜೊತೆ.. ಇದೇ ಚಿತ್ರದ ಅಪಾರ ಅಭಿಮಾನಿಗಳ ಜೊತೆಗೆ ಜನಪ್ರಿಯತೆ ಗಳಿಸಿದ ರಮ್ಯಾ ‘ಎಕ್ಸ್​​ಕ್ಯೂಸ್​ ಮಿ’ ಸಿನಿಮಾದಿಂದ ಮತ್ತೊಂದು ದೊಡ್ಡ ಯಶಸ್ಸು ಗಳಿಸಿದರು.. ನಂತರ ಹಲವಾರು ಸ್ಟಾರ್‌ ನಟರ ಜೊತೆಯಲ್ಲಿ ತೆರೆಹಂಚಿಕೊಂಡಿದ್ದಾರೆ.


ಪುಟ್ಟ-ಪುಟ್ಟ ನಾಯಿ ಮರಿಗಳೊಟ್ಟಿಗೆ ಆಟವಾಡುತ್ತಿರುವ ವಿಡಿಯೋ ಒಂದನ್ನು ರಮ್ಯಾ ತಮ್ಮ ಇನ್​ಸ್ಟಾಗ್ರಾಂನಲ್ಲಿ ಹಂಚಿಕೊಂಡಿದ್ದಾರೆ. ‘‘ನಿಮ್ಮ ಹುಟ್ಟುಹಬ್ಬದ ಶುಭಾಶಯಗಳು ನನ್ನ ಮನಸ್ಸಿಗೆ ಮುದ ನೀಡಿದಂತೆ ಈ ಪುಟ್ಟ ವಿಡಿಯೋ ನಿಮ್ಮ ಮನಸ್ಸಿಗೆ ಮುದ ನೀಡುವ ವಿಶ್ವಾಸವಿದೆ’’ ಎಂದು ವಿಡಿಯೋಕ್ಕೆ ಕ್ಯಾಪ್ಷನ್ ಬರೆದಿದ್ದಾರೆ ನಟಿ ರಮ್ಯಾ.
ಮತ್ತೊಮ್ಮೆ ಸ್ಯಾಂಡಲ್ ವುಡ್ ಕ್ವೀನ್ ರಮ್ಯಾ ಅವರಿಗೆ ಹುಟ್ಟು ಹಬ್ಬದ ಹಾರ್ಧಿಕ ಶುಭಾಶಯಗಳು.

 

Continue Reading

bengaluru

ಮನ್ಸಿಂದ ಯಾರೂನು ಕೆಟ್ಟೋರಲ್ಲ..ಬಿಗ್ ಬಾಸ್ ವಿನಯ್ ಕಣ್ಣೀರು

Published

on

ಬೆಂಗಳೂರು : ಬಿಗ್​ಬಾಸ್ ಮನೆಯಲ್ಲಿ ವಿನಯ್ ಅತ್ಯಂತ ಗಟ್ಟಿ ಸ್ಪರ್ಧಿ ಎಂದು ಕರೆಸಿಕೊಳ್ಳುವ ವಿನಯ್ ಗೌಡ ಬಿಕ್ಕಿ ಬಿಕ್ಕಿ ಅತ್ತಿದ್ದಾರೆ.ಮಂಗಳವಾರ ಪ್ರಸಾರವಾದ ಎಪಿಸೋಡ್​ನಲ್ಲಿ ಮಾತ್ರ ವಿನಯ್ ಕಣ್ಣೀರು ಹಾಕಿದ್ದಾರೆ.

ಮನೆಗೆ ಇಬ್ಬರು ಹೊಸ ಸ್ಪರ್ಧಿಗಳು ವೈಲ್ಡ್ ಕಾರ್ಡ್ ಎಂಟ್ರಿ ಪಡೆದು ಬಂದಿದ್ದಾರೆ. ಅವರಲ್ಲಿ ಒಬ್ಬರಾದ ಪವಿ ಪೂವಪ್ಪ ಅವರು ಸ್ನೇಹಿತ್, ವಿನಯ್ ಜೊತೆ ಮಾತನಾಡುತ್ತಿದ್ದಾಗ ಸ್ನೇಹಿತ್ ಬಿಗ್​ಬಾಸ್ ಮನೆಯ ಸ್ಪರ್ಧಿಗಳ ಬಗ್ಗೆ ಹೊರಗಿರುವ ಅಭಿಪ್ರಯಾದ ಬಗ್ಗೆ ತಿಳಿಸುವಂತೆ ಹೇಳ್ತಾರೆ.ಆಗ ಪವಿ ಬಳೆಯ ಎಪಿಸೋಡ್ ಭಾರಿ ಸದ್ದು ಮಾಡಿತು ಎಂದರು.ಆ ವಿಷಯ ಸೋಷಿಯಲ್ ಮೀಡಿಯಾಗಳಲ್ಲಿ ಬಹಳ ಚರ್ಚೆಯಾಯಿತು ಎಂದು ಸಹ ಹೇಳಿದರು.

ಇದರಿಂದಾಗಿ ವಿನಯ್‌ ತೀರಾ ಡಲ್‌ ಆಗ್ಬಿಟ್ಟರು. ಬಾತ್‌ರೂಮ್‌ ಒಳಗೆ ಹೋಗಿ ವಿನಯ್ ಗಳಗಳನೆ ಅತ್ತುಬಿಟ್ಟರು. ಬಳಿಕ ‘ಬಿಗ್ ಬಾಸ್‌’ ಬಳಿ ಮಾತನಾಡಿದ್ಮೇಲೆ ವಿನಯ್ ಸಮಾಧಾನಗೊಂಡರು.

Continue Reading

LATEST NEWS

Trending