Monday, July 4, 2022

ಅನ್ಯಧರ್ಮೀಯ ಕಲಾವಿದೆ ನೃತ್ಯ ಪ್ರದರ್ಶನಕ್ಕೆ ನಕಾರ: ಪ್ರತಿಭೆಗೂ ಬೇಲಿಯಾಯ್ತ ಧರ್ಮದ ಅಮಲು..?

ತಿರುವನಂತಪುರ: ಕರ್ನಾಟಕದಲ್ಲಿ ಜಾತ್ರೆ, ಹಬ್ಬ ಮತ್ತು ದೇವಸ್ಥಾನಗಳ ಸುತ್ತಮುತ್ತ ಮುಸ್ಲಿಂ ವ್ಯಾಪಾರಿಗಳಿಗೆ ಅವಕಾಶ ನೀಡಬಾರದು ಎಂಬ ಒತ್ತಾಯಗಳ ಬೆನ್ನಲ್ಲೇ, ಕೇರಳದಲ್ಲಿ ಹಿಂದೂ ಅಲ್ಲ ಎಂಬ ಕಾರಣಕ್ಕೆ ದೇವಸ್ಥಾನದ ಉತ್ಸವವೊಂದರಲ್ಲಿ ಶಾಸ್ತ್ರೀಯ ನೃತ್ಯಗಾರ್ತಿಯೊಬ್ಬರ ಪ್ರದರ್ಶನಕ್ಕೆ ಅವಕಾಶ ನಿರಾಕರಿಸಲಾಗಿದೆ.


ಮದ್ರಾಸ್ ವಿ.ವಿಯಿಂದ ಎಂ.ಎ ಭರತನಾಟ್ಯಂ ಕೋರ್ಸ್‌ನಲ್ಲಿ ಮೊದಲ ರ‍್ಯಾಂಕ್ ಪಡೆದ ಶಾಸ್ತ್ರೀಯ ನೃತ್ಯಗಾರ್ತಿ ಮಾನ್ಸಿಯಾ ವಿ.ಪಿ ಅವರು ಹಿಂದೂ ಅಲ್ಲ ಎಂಬ ಕಾರಣಕ್ಕೆ ತ್ರಿಶ್ಶೂರು ಜಿಲ್ಲೆಯ ಇರಿಂಜಲಕುಡ್ಡದಲ್ಲಿರುವ ಕೂಡಲ್‌ಮಾಣಿಕ್ಯಂ ದೇವಸ್ಥಾನದಲ್ಲಿ ನೃತ್ಯ ಪ್ರದರ್ಶನಕ್ಕೆ ಅವಕಾಶ ನಿರಾಕರಿಸಲಾಗಿದೆ.

ಈ ವಿಚಾರದ ಬಗ್ಗೆ ಅವರು ಸಾಮಾಜಿಕ ಮಾಧ್ಯಮಗಳಲ್ಲಿ ಹಂಚಿಕೊಂಡಿದ್ದು, ದೇವಸ್ಥಾನದ ಈ ನಿರ್ಧಾರಕ್ಕೆ ಕೇರಳದ ಮಾಜಿ ಆರೋಗ್ಯ ಸಚಿವೆ ಹಾಗೂ ಸಿಪಿಎಂ ಹಿರಿಯ ನಾಯಕಿ ಕೆ.ಕೆ ಶೈಲಜಾ ಅವರು ಸೇರಿದಂತೆ ಸಾಮಾಜಿಕ ಮತ್ತು ರಾಜಕೀಯ ಕಾರ್ಯಕರ್ತರು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಹಬ್ಬದ ಉತ್ಸವದ ಭಾಗವಾಗಿ ಏಪ್ರಿಲ್ 21ರಂದು ಮಾನ್ಸಿಯ ಅವರ ನೃತ್ಯ ಪ್ರದರ್ಶನ ನಿಗದಿಯಾಗಿತ್ತು. ಈ ಕುರಿತು ಜಾಹೀರಾತನ್ನು ದೇವಸ್ಥಾನ ಪ್ರಕಟಿಸಿತ್ತು.

ಆದರೆ ಕೆಲ ದಿನಗಳ ಬಳಿಕ ಹಿಂದೂ ಧರ್ಮಕ್ಕೆ ಸೇರಿದವರು ಅಲ್ಲ ಎಂಬ ಕಾರಣಕ್ಕೆ ದೇವಸ್ಥಾನದಲ್ಲಿ ನೃತ್ಯಕ್ಕೆ ಅವಕಾಶ ನೀಡಲಾಗದು ಎಂದು ಮಾನ್ಸಿಯಾ ಅವರಿಗೆ ದೇವಸ್ಥಾನದ ಅಧಿಕಾರಿಗಳು ತಿಳಿಸಿದ್ದಾರೆ.

ದೇವಸ್ಥಾನದ ಸಂಪ್ರದಾಯದ ಪ್ರಕಾರ ಹಿಂದೂ ಧರ್ಮದ ನಂಬಿಕಸ್ತರಿಗೆ ಮಾತ್ರ ದೇವಸ್ಥಾನದ ಒಳಗೆ ಪ್ರವೇಶ ನೀಡಲಾಗುತ್ತದೆ. ನೃತ್ಯದ ವೇದಿಕೆ ದೇವಸ್ಥಾನದ ಒಳಗಿರುವ ಕಾರಣ ಮಾನ್ಸಿಯಾ ಅವರ ನೃತ್ಯಕ್ಕೆ ಅವಕಾಶ ನೀಡಲಾಗದು ಎಂದು ಕೆಲ ಮಾಧ್ಯಮ ಪ್ರತಿನಿಧಿಗಳಿಗೆ ದೇವಸ್ಥಾನದ ಅಧಿಕಾರಿಗಳು ತಿಳಿಸಿದ್ದಾರೆ.

ಪ್ರಸಿದ್ಧ ಗುರುವಾಯೂರು ಶ್ರೀ ಕೃಷ್ಣ ದೇವಸ್ಥಾನದ ಹಬ್ಬದ ಉತ್ಸವದಲ್ಲೂ ಇದೇ ಕಾರಣಕ್ಕೆ ನನ್ನ ಪ್ರದರ್ಶನಕ್ಕೆ ಅವಕಾಶ ನಿರಾಕರಿಸಲಾಗಿತ್ತು ಎಂದು ಮಾನ್ಸಿಯಾ ಅವರು ಸಾಮಾಜಿಕ ಜಾಲತಾಣದಲ್ಲಿ ಖೇದ ವ್ಯಕ್ತಪಡಿಸಿದ್ದಾರೆ.

LEAVE A REPLY

Please enter your comment!
Please enter your name here

Hot Topics

ಕಣಿವೆಗೆ ಉರುಳಿದ ಶಾಲಾ ಬಸ್‌: 16 ವಿದ್ಯಾರ್ಥಿಗಳು ಕೊನೆಯುಸಿರು

ಕುಲು: ಶಾಲೆಗೆ ಮಕ್ಕಳನ್ನು ಕರೆದೊಯ್ಯುತ್ತಿದ್ದ ಬಸ್‌ ಕಣಿವೆಗೆ ಉರುಳಿ ಬಿದ್ದ ಪರಿಣಾಮ 16 ವಿದ್ಯಾರ್ಥಿಗಳು ಸಾವನ್ನಪ್ಪಿದ ಘಟನೆ ಹಿಮಾಚಲ ಪ್ರದೇಶದ ಕುಲು ಜಿಲ್ಲೆಯಲ್ಲಿ ಇಂದು ಬೆಳಿಗ್ಗೆ ಸಂಭವಿಸಿದೆ.‘ಸಾಯಿಂಜ್‌ಗೆ ತೆರಳುತ್ತಿದ್ದ ಬಸ್ ಬೆಳಿಗ್ಗೆ 8.30ರ...

ಬಂಟ್ವಾಳದ ವಿಶ್ವ ಹಿಂದು ಪರಿಷತ್ ವತಿಯಿಂದ ರಕ್ತದಾನ ಶಿಬಿರ

ಬಂಟ್ವಾಳ: ವಿಶ್ವಹಿಂದುಪರಿಷತ್ ಬಜರಂಗದಳ ಪರಶುರಾಮ ಶಾಖೆ ಬಂಟ್ವಾಳ ಪ್ರಖಂಡದ ವತಿಯಿಂದ ಕೆಎಮ್‌ಸಿ ಮಂಗಳೂರು ಮತ್ತು ವೆನ್ಲಾಕ್ ಆಸ್ಪತ್ರೆ ಮಂಗಳೂರು ಇವರ ಸಹಯೋಗದೊಂದಿಗೆ ರಕ್ತದಾನ ಶಿಬಿರ ನಡೆಯಿತು.ರಕ್ತದಾನ ಶಿಬಿರದಲ್ಲಿ 180 ಯೂನಿಟ್ ರಕ್ತ ಸಂಗ್ರಹ...

ಮಂಗಳೂರು ಬಂದರಿಗೆ ಶ್ರೀಲಂಕಾದ MSC ಅರ್ಮೀನಿಯಾ ಹಡಗು ಆಗಮನ

ಮಂಗಳೂರು: ನವಮಂಗಳೂರು ಬಂದರಿನ 14ನೇ ಬರ್ತ್‌ಗೆ ನಿನ್ನೆ ಸಾಯಂಕಾಲ ಮುಖ್ಯ ಕಂಟೇನರ್ ಹಡಗು ಶ್ರೀಲಂಕಾದಿಂದ ಎಂಎಸ್‌ಸಿ ಅರ್ಮೀನಿಯಾ ಆಗಮಿಸಿದ್ದು, ಜಲಫಿರಂಗಿಯ ಮೂಲಕ ಸ್ವಾಗತಿಸಲಾಯಿತು.ಇದರೊಂದಿಗೆ ಎನ್‌ಎಂಪಿಎ ಹೊಸದೊಂದು ಮೈಲಿಗಲ್ಲು ಸಾಧಿಸಿದೆ. 276.5 ಮೀಟರ್ ಉದ್ದ...