Connect with us

LATEST NEWS

ನಮಗೆ ಅಧಿಕಾರಕ್ಕಿಂತ ಹಿಂದುತ್ವ ಮುಖ್ಯ-ಸಚಿವ ಸುನಿಲ್‌

Published

on

ಉಡುಪಿ: ‘ಸರ್ಕಾರ ಬೇಕೋ ಹಿಂದುತ್ವ ಬೇಕೋ ಅಂದಾಗ ನಾವು ಸರ್ಕಾರವನ್ನು ಬದಿಗಿಟ್ಟು ಹಿಂದುತ್ವವನ್ನು ಆಯ್ಕೆ ಮಾಡಿಕೊಳ್ಳುತ್ತೇವೆ. ಬಿಜೆಪಿ ಪ್ರಾರಂಭ ಆದದ್ದೇ ಶ್ಯಾಮ್‌ಪ್ರಸಾದ್ ಮುಖರ್ಜಿ ಅವರು ಅಧಿಕಾರವನ್ನು ತ್ಯಜಿಸಿ ಜನಸಂಘವನ್ನು ಆರಂಭ ಮಾಡಿದ್ದು.

ಜನ ಸಂಘ ಮತ್ತು ಬಿಜೆಪಿಯ ಹುಟ್ಟು ಆರಂಭ ಆದದ್ದು ಬಲಿದಾನಗಳ ಮುಖಾಂತರ’ ಎಂದು ಉಸ್ತುವಾರಿ ಸಚಿವ ಸುನಿಲ್ ಕುಮಾರ್ ಹೇಳಿದರು.


ಉಡುಪಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ‘ ಒಂದು ಮನೆಯಲ್ಲಿ ಯಾವುದಾದ್ರೂ ಅಪಸ್ವರ ಇದ್ದದ್ದೇ. ತಂದೆ ಮಗನಿಗೆ ಬುದ್ಧಿ ಹೇಳ್ಬೇಕು, ಮಗ ತಂದೆಗೆ ಬುದ್ಧಿ ಹೇಳ್ಬೇಕು. ಸಾಮಾಜಿಕ ಜಾಲತಾಣಗಳಲ್ಲಿ ಆಕ್ರೋಶ ವ್ಯಕ್ತಪಡಿಸುತ್ತಿರುವ ಕಾರ್ಯಕರ್ತರ ಭಾವನೆಯನ್ನು ನಾನು ಒಬ್ಬ ಶಾಸಕನಾಗಿ ಮಾತ್ರವಲ್ಲದೆ ಒಬ್ಬ ಕಾರ್ಯಕರ್ತನಾಗಿ ಗೌರವಿಸುತ್ತೇನೆ.

ಇವತ್ತು ನಮಗೆ ಅನಿವಾರ್ಯತೆ ಇಲ್ಲ. ನಾವು ಇವತ್ತು ಹಿಂದುತ್ವದ ಆಧಾರದಲ್ಲಿಯೇ ಸರ್ಕಾರವನ್ನು ನಡೆಸುತ್ತಿರೋದು. ಅದಕ್ಕಾಗಿಯೇ ನಾವು ಗೋಹತ್ಯೆ ನಿಷೇಧವನ್ನು ತಂದಿದ್ದು, ಮತಾಂತರ ನಿಷೇಧ ಕಾಯ್ದೆ ನಿಯಮವನ್ನು ತಂದಿದ್ದು. ಸರ್ಕಾರ ಉತ್ತಮ ಯೋಜನೆಗಳನ್ನು ಮಾಡುತ್ತಲೇ ಇರುತ್ತದೆ. ಪ್ರಧಾನಿಯ ನವಭಾರತ ಕನಸನ್ನು ನನಸು ಮಾಡಲು ನಾವು ನವಕರ್ನಾಟಕದ ಮುಖೇನ ಕೊಟ್ಟೆ ಕೊಡ್ತೇವೆ.


ಬೆಳ್ಳಾರೆ ಹತ್ಯೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ಇದರ ಹಿಂದಿರುವ ಎಲ್ಲರ ಕೈವಾಡದ ಬಗ್ಗೆ ಸುಳಿವು ಸಿಕ್ಕಿದೆ ಎನ್ನುವದನ್ನು ಪೊಲೀಸ್ ಅಧಿಕಾರಿಗಳು ಹೇಳಿದ್ದಾರೆ.

ಎಲ್ಲಾ ರೀತಿಯ ತನಿಖೆಗೆ ನಾವು ಮುಕ್ತವಾಗಿ ಅವಕಾಶವನ್ನು ಕೊಟ್ಟಿದ್ದೇವೆ. ನನಗೆ ಪೊಲೀಸ್ ಇಲಾಖೆಯ ಮೇಲೆ ವಿಶ್ವಾಸ ಇದೆ . ಪ್ರಕರಣದ ನಿಜವಾದ ಹಂತಕರನ್ನು ಪತ್ತೆ ಹಚ್ಚಿ ಶಿಕ್ಷೆ ನೀಡುತ್ತಾರೆ.
ಇಡೀ ದೇಶದಲ್ಲಿ ಜಿಹಾದಿಗಳ ಹಿಂಸಾಚಾರ ಕೇವಲ ದ.ಕ ಜಿಲ್ಲೆಗೆ ಮಾತ್ರ ಸೀಮಿತವಾಗಿದೆ.

ರಾಜ್ಯದ ಹತ್ತು ಜಿಲ್ಲೆಗಳ ಮೇಲೆ ಇದು ವಿಸ್ತರಿಸುವುದನ್ನು ನಾವು ಕಂಡಿದ್ದೇವೆ. ಮೊದಲಿಗೆ ಕೇವಲ ಕಾಶ್ಮೀರದಲ್ಲಿ ಮಾತ್ರ ಸೀಮಿತವಾಗಿದ್ದ ಈ ಹಿಂಸಾಚಾರ ಇಂದು ಪಶ್ಚಿಮ ಬಂಗಾಳ, ಕೇರಳ, ಕರ್ನಾಟಕ ಅದರಲ್ಲೂ ಕರಾವಳಿಗೆ ಕೂಡಾ ವ್ಯಾಪಿಸಿದೆ.

ಅಹಿತಕರ ಘಟನೆಗೆ ಕಾರಣವಾಗುವ ಎಲ್ಲರನ್ನು ಸರ್ಕಾರ ಮಟ್ಟ ಹಾಕುತ್ತೆ. ಮತ್ತು ಇಂತಹ ಜಿಹಾದಿ ಶಕ್ತಿಗಳ ವಿರುದ್ಧ ಸಮಾಜ ಒಂದಾಗಬೇಕಿದೆ. ಬಿಜೆಪಿ ಇವತ್ತು ಸಬ್‌ಕಾ ಸಾಥ್ ಸಬ್‌ ಕಾ ವಿಕಾಸ್ ಸಿದ್ಧಾಂತದಲ್ಲಿ ನಡೀತ್ತಿದೆ.

ಈ ರಾಷ್ಟ್ರೀಯತೆಯ ವಿಷಯವನ್ನು ಕೇವಲ ಹಿಂದೂಗಳು ಮಾತ್ರ ಅಲ್ಲ. ಎಲ್ಲ ವರ್ಗದವರು ಕೂಡಾ ಒಪ್ಕೊಂಡಿದ್ದಾರೆ. ಅಂದ್ರೆ ಬಿಜೆಪಿ ಕೇವಲ ಹಿಂದೂಗಳಿಗೆ ಮಾತ್ರ ಅಂದ್ರೆ ಕಾಂಗ್ರೆಸ್ಸಿಗರಿಗೆ ಕೇವಲ ಮುಸಲ್ಮಾನರು ಮಾತ್ರ ಇದ್ದ ಹಾಗೆ.

ಕಾಂಗ್ರೆಸ್ ಅದನ್ನೂ ಒಪ್ಪಿಕೊಳ್ಳಬೇಕು ಹಾಗಾದ್ರೆ ನಮಗೆ ಮುಸಲ್ಮಾನರು ಮಾತ್ರ ಅಂತ. ಹಾಗೇನು ಅನ್ಸಲ್ಲ. ಯಾವುದೋ ಟೀಕೆಗಳು ಬಂದಿದೆ, ಆಕ್ರೋಶಗಳು ಬಂದಿದೆ ಅಂತ ರಾಷ್ಟ್ರೀಯತರಯಲ್ಲಿ ವಿಮುಖರಾಗುವ ಪ್ರಶ್ನೆಯೇ ಇಲ್ಲ. ಜಿಹಾದಿಗಳ ಕುತ್ತಂತ್ರವನ್ನು ನಾವು ಸಮಾಜದ ಮುಂದೆ ಇಡುತ್ತೇವೆ. ಸಮಾಜ ಜಾಗೃತರಾಗಬೇಕು. ಅದು ಆಗಿಲ್ಲ ಅಂದ್ರೆ ಸರ್ಕಾರ ಏನೂ ಮಾಡ್ಲಿಕ್ಕೆ ಆಗಲ್ಲ’ ಎಂದು ಹೇಳಿದರು.

DAKSHINA KANNADA

ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ

Published

on

ಬೆಂಗಳೂರು: ರಾಜ್ಯದ 14 ಲೋಕಸಭಾ ಕ್ಷೇತ್ರಗಳ ಮೊದಲನೇ ಹಂತದ ಮತದಾನ ಇಂದು ಬೆಳಗ್ಗೆ 7 ಗಂಟೆಯಿಂದಲೇ ಆರಂಭಗೊಂಡಿದೆ.

ಲೋಕಸಭಾ ಚುನಾವಣೆಯ ಎರಡನೇ ಹಂತದ ಮತದಾನ ಇದಾಗಿದ್ದು, ಕರ್ನಾಟಕದಲ್ಲಿ ಇಂದು ಮೊದಲ ಹಂತದ ಮತದಾನವಾಗಿದೆ. ಮತದಾರರು ತಮ್ಮ ತಮ್ಮ ಮತ ಕ್ಷೇತ್ರಗಳಲ್ಲಿ ಬೆಳಿಗ್ಗೆಯಿಂದಲೇ ಸರತಿ ಸಾಲಿನಲ್ಲಿ ನಿಂತು ಶಾಂತಿಯುತವಾಗಿ ಮತದಾನ ಮಾಡುತ್ತಿದ್ದಾರೆ.

ಅದರಂತೆ ಬೆಂಗಳೂರು ಉತ್ತರ, ಬೆಂಗಳೂರು ದಕ್ಷಿಣ, ಬೆಂಗಳೂರು ಸೆಂಟ್ರಲ್, ಬೆಂಗಳೂರು ಗ್ರಾಮಾಂತರ, ಮೈಸೂರು-ಕೊಡಗು, ಚಾಮರಾಜನಗರ, ಮಂಡ್ಯ, ತುಮಕೂರು, ಕೋಲಾರ, ಹಾಸನ, ಉಡುಪಿ-ಚಿಕ್ಕಮಗಳೂರು, ಚಿಕ್ಕಬಳ್ಳಾಪುರ, ದಕ್ಷಿಣ ಕನ್ನಡ, ಚಿತ್ರದುರ್ಗ ಕ್ಷೇತ್ರಗಳಲ್ಲಿ ಬೆಳಿಗ್ಗೆಯಿಂದಲೇ ಮತದಾನ ಆರಂಭವಾಗಿದ್ದು ಸಂಜೆ 6 ಗಂಟೆಯವರೆಗೆ ಮತದಾನ ಪ್ರಕ್ರಿಯೆ ನಡೆಯಲಿದೆ.

Continue Reading

DAKSHINA KANNADA

ನರ್ಸ್‌ಗೆ ಶಾಕ್ ನೀಡಿದ ಅಂಬ್ಯುಲೆನ್ಸ್‌..! ಇದು ಮನಕಲಕುವ ಘಟನೆ..!

Published

on

ನಿರಂಜಿನಿ… ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ತಾಲೂಕಿನ ಕೆವಿಜಿ ಮೆಡಿಕಲ್ ಕಾಲೇಜಿನಲ್ಲಿರೋ ಆಸ್ಪತ್ರೆಯ ತುರ್ತು ಸೇವಾ ವಿಭಾಗದಲ್ಲಿ ಕೆಲಸ ಮಾಡುತ್ತಿರುವ ಯುವತಿ. ಮುಂಜಾನೆ ಆಸ್ಪತ್ರೆಗೆ ಬಂದ್ರೆ ಡ್ಯೂಟಿ ಮುಗಿಸಿ ಮತ್ತೆ ಮನೆಗೆ ವಾಪಾಸಾಗೋದು ಸಂಜೆಯ ವೇಳೆಗೆ. ಆಸ್ಪತ್ರೆಯಲ್ಲಿರೋ ಆಕೆಗೆ ಸಾವು ನೋವು ಎಲ್ಲವನ್ನೂ ನೋಡಿ ಅಭ್ಯಾಸ ಆಗಿದೆ. ಆದ್ರೆ ಇಂದು ಮಾತ್ರ ಅಂಬ್ಯುಲೆನ್ಸ್‌ನಲ್ಲಿ ಬಂದಿರೋ ಮೃತ ದೇಹ ನೋಡಿ ಆಕೆಯ ಆಕ್ರಂದನ ಮುಗಿಲು ಮುಟ್ಟಿದೆ. ಆಕೆಯ ಆಕ್ರಂದನ ನೋಡಿ ಶಾಕ್ ಆದ ಇತರ ಸಿಬ್ಬಂದಿ ವಿಚಾರ ತಿಳಿದ ಬಳಿಕ ತಾವೂ ಕಂಬನಿ ಮಿಡಿದಿದ್ದಾರೆ.

ಇಂದು ನಿರಂಜಿನಿ ಆಸ್ಪತ್ರೆಗೆ ಬಂದು ತುರ್ತು ಚಿಕಿತ್ಸಾ ವಿಭಾಗದಲ್ಲಿ ಡ್ಯೂಟಿಯಲ್ಲಿದ್ದ ವೇಳೆ ಅಂಬ್ಯುಲೆನ್ಸ್ ಒಂದು ವೇಗವಾಗಿ ಬಂದು ಗಂಭೀರವಾಗಿದ್ದ ಇಬ್ಬರನ್ನು ತುರ್ತು ಚಿಕಿತ್ಸಾ ವಿಭಾಗಕ್ಕೆ ಶಿಫ್ಟ್‌ ಮಾಡಿದೆ. ದೇಹ ಜರ್ಜರಿತವಾಗಿದ್ದ ಒಂದು ದೇಹವನ್ನು ಅಂಬ್ಯುಲೆನ್ಸ್‌ನಿಂದ ಇಳಿಸಿದಾಗ ಅದಾಗಲೇ ಆ ವ್ಯಕ್ತಿಯ ಪ್ರಾಣ ಪಕ್ಷಿ ಹಾರಿ ಹೋಗಿತ್ತು. ಮತ್ತೊಂದು ಮಹಿಳೆಯೂ ಗಂಭೀರವಾಗಿದ್ದು ತಕ್ಷಣ ಅವರನ್ನು ತುರ್ತು ಚಿಕಿತ್ಸೆಗೆ ದಾಖಲಿಸಲಾಗಿತ್ತು. ಈ ವೇಳೆ ಮೃತ ದೇಹವನ್ನು ನೋಡಿದ ನಿರಂಜನಿ ಇದ್ದಕ್ಕಿದ್ದಂತೆ ಜೋರಾಗಿ ಅಳಲು ಆರಂಭಿಸಿದ್ದಾಳೆ. ಆಕೆಯ ಅಳುವಿಗೆ ಕಾರಣವಾಗಿದ್ದು ಅಲ್ಲಿದ್ದ ಮೃತ ದೇಹ ಆಕೆಯ ತಂದೆಯದೇ ಆಗಿದ್ದು.

ಮುಂಜಾನೆ ತಂದೆ ತಾಯಿ ಇಬ್ಬರೂ ಅಜ್ಜಾವರ ಗ್ರಾಮದಲ್ಲಿನ ಕೆಎಫ್‌ಡಿಸಿಗೆ ಕೆಲಸಕ್ಕೆ ಹೋಗಿ ವಾಪಾಸಾಗುವಾಗ ಜೀಪ್ ಒಂದು ಇವರ ಬೈಕ್‌ಗೆ ಡಿಕ್ಕಿ ಹೊಡೆದಿದೆ.  ಜೀಪ್ ಅಡಿಗೆ ಬಿದ್ದಿದ್ದ ತಂದೆ ವಿನಾಯಕ ಮೂರ್ತಿ ಮೃ*ತ ಪಟ್ಟಿದ್ದರೆ, ತಾಯಿ ಮಂಜುಳ ಕೂಡಾ ಗಂಭೀರವಾಗಿ ಗಾಯಗೊಂಡಿದ್ದಾರೆ. ಆದ್ರೆ ಇದ್ಯಾವುದು ವಿಚಾರ ಗೊತ್ತಿಲ್ಲದ ನಿರಂಜಿನಿ ಎಂದಿನಂತೆ ಇದೂ ಒಂದು ಅಕ್ಸಿಡೆಂಟ್ ಕೇಸ್ ಅಂತ ಅಟೆಂಡ್ ಮಾಡಲು ಹೋಗಿದ್ದಾಳೆ. ಅಂಬ್ಯುಲೆನ್ಸ್‌ನಲ್ಲಿ ತಂದೆಯ ಮೃತ ದೇಹ ಹಾಗೂ ಪ್ರಜ್ಞಾ ಹೀನ ಸ್ಥಿತಿಯಲ್ಲಿ ತಾಯಿಯನ್ನ ನೋಡಿದ್ರೆ ಮಗಳ ಪರಿಸ್ಥಿತಿ ಹೇಗಿರಬಹುದು ಅನ್ನೋದು ಊಹಿಸಲೂ ಅಸಾದ್ಯ. ತಾಯಿ ಮಂಜುಳ ಪರಿಸ್ಥಿತಿ ಕೂಡಾ ಗಂಭೀರವಾಗಿದ್ದು, ಬೆನ್ನು ಮೂಳೆಗೆ ಗಾಯವಾದ ಮಾಹಿತಿ ಇದೆ. ಹೀಗಾಗಿ ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರು ಆಸ್ಪತ್ರೆಗೆ ದಾಖಲಿಸಲಾಗಿದೆ.

Continue Reading

LATEST NEWS

ಹೋಟೆಲ್​ನಲ್ಲಿ ಅ*ಗ್ನಿ ದುರಂತ; 6 ಮಂದಿ ಸಜೀವ ದ*ಹನ

Published

on

ಪಾಟ್ನಾ: ಹೋಟೆಲ್​ವೊಂದರಲ್ಲಿ ಆಕಸ್ಮಿಕವಾಗಿ ಬೆಂ*ಕಿ ಕಾಣಿಸಿಕೊಂಡ ಹಿನ್ನೆಲೆಯಲ್ಲಿ 6 ಜನರು ಸಜೀವವಾಗಿ ದಹನಗೊಂಡು ಸಾ*ವನ್ನಪ್ಪಿದ್ದು ಹಲವು ಮಂದಿ ಗಂಭೀರವಾಗಿ ಗಾಯಗೊಂಡ ಘಟನೆ ಬಿಹಾರದ ಪಾಟ್ನಾದ ರೈಲ್ವೆ ನಿಲ್ದಾಣದ ಬಳಿ ನಡೆದಿದೆ.

ರೈಲು ನಿಲ್ದಾಣದ ಸಮೀಪದ ಹೋಟೆಲ್​ನಲ್ಲಿ ಬೆಂ*ಕಿ ಹೊತ್ತಿಕೊಂಡ ಪರಿಣಾಮ ಸ್ಥಳದಲ್ಲೇ 6 ಜನರು ಮೃ*ತಪಟ್ಟಿದ್ದಾರೆ. ಅಗ್ನಿಶಾಮಕ ದಳದ ಅಧಿಕಾರಿಗಳು ಮತ್ತು ಪೊಲೀಸರು ತಕ್ಷಣ ಸ್ಥಳಕ್ಕೆ ಆಗಮಿಸಿ ಹೋಟೆಲ್‌ ಒಳಗಿದ್ದ ಹಲವರನ್ನು ರಕ್ಷಣೆ ಮಾಡಿದ್ದಾರೆ. ಇದರಲ್ಲಿ ಗಂಭೀರವಾಗಿ ಗಾಯಗೊಂಡ ಕೆಲವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲು ಮಾಡಿಸಿದ್ದಾರೆ. ಬೆಂ*ಕಿಯಿಂದಾಗಿ ಹೋಟೆಲ್​​ನಲ್ಲಿನ ಎಲ್ಲ ವಸ್ತುಗಳೆಲ್ಲ ಸಂಪೂರ್ಣವಾಗಿ ಸುಟ್ಟು ಹೋಗಿವೆ ಎಂದು ತಿಳಿದು ಬಂದಿದೆ.

ಇನ್ನು ಮಾಹಿತಿ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಧಾವಿಸಿದ ಪೊಲೀಸರು ಹಾಗೂ ಅ*ಗ್ನಿ ಶಾಮಕ ಸಿಬ್ಬಂದಿ ರಕ್ಷಣಾ ಕಾರ್ಯದಲ್ಲಿ ತೊಡಗಿದ್ದಾರೆ. ಮಾಹಿತಿ ಪ್ರಕಾರ ಹೋಟೆಲ್​ನಲ್ಲಿನ ಸುಮಾರು 45 ಜನರನ್ನು ಪೊಲೀಸರು ಹಾಗೂ ಅಗ್ನಿ ಶಾಮಕ ಸಿಬ್ಬಂದಿ ರಕ್ಷಣೆ ಮಾಡಿದ್ದಾರೆ. ಬೆಂಕಿಯಿಂದಾಗಿ ಸುಟ್ಟಗಾಯಗಳಿಂದ ನಾಲ್ವರ ಸ್ಥಿತಿ ಗಂಭೀರವಾಗಿದೆ ಎಂದು ವೈದ್ಯರು ಹೇಳಿದ್ದಾರೆ ಎನ್ನಲಾಗಿದೆ.

ಹೋಟೆಲ್‌ನಲ್ಲಿ ಗ್ಯಾಸ್ ಸಿಲಿಂಡರ್ ಸ್ಫೋಟದಿಂದ ಬೆಂ*ಕಿ ಅವಘಡ ಸಂಭವಿಸಿದೆ ಎಂದು ಹೇಳಲಾಗುತ್ತಿದೆ. ಆದ್ರೆ ಈ ಬಗ್ಗೆ ನಿಖರವಾದ ಕಾರಣ ತಿಳಿದು ಬಂದಿಲ್ಲ. ಅಲ್ಲದೇ ಹೋಟೆಲ್​ನಲ್ಲಿ ಸುರಕ್ಷತಾ ಮಾನದಂಡಗಳನ್ನು ಸರಿಯಾಗಿ ಅನುಸರಿಸದ ಕಾರಣ 6 ಜನರ ಸಾ*ವಿಗೆ ಕಾರಣವಾಗಿದೆ. ಸದ್ಯ ಈ ಘಟನೆ ಬಗ್ಗೆ ಪೊಲೀಸರು ತನಿಖೆ ಕೈಗೊಂಡಿದ್ದಾರೆ.

Continue Reading

LATEST NEWS

Trending