ಕೊರೊನಾ ಮುಕ್ತರಾಗಿ ಆಸ್ಪತ್ರೆಯಿಂದ ಬಿಡುಗಡೆಯಾದ ಮಾಜಿ ಸಿಎಂ ಸಿದ್ದರಾಮಯ್ಯ..!
ಬೆಂಗಳೂರು : ಮಾಜಿ ಸಿಎಂ ಹಾಗೂ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಕೊರೋನಾದಿಂದ ಗುಣಮುಖರಾಗಿದ್ದು ಇಂದು ಸಂಜೆ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಆಸ್ಪತ್ರೆಯಿಂದ ಹೊರಡುವಾಗ ತನ್ನ ಆರೈಕೆ ಮಾಡಿದ ವೈದ್ಯರು, ದಾದಿಯರು ಹಾಗೂ ಇತರ ಸಿಬಂದಿಗಳಿಗೆ ಹೂಗುಚ್ಚ ನೀಡಿ ಅವರ ಸೇವೆಯನ್ನು ಸ್ಮರಿಸಿ ಧನ್ಯವಾದ ಹೇಳಿದರು.
ಕೊರೊನಾ ಸೋಂಕಿನ ಚಿಕಿತ್ಸೆಗಾಗಿ ಆಸ್ಪತ್ರೆ ಸೇರಿದ ದಿನದಿಂದ ಕಾಂಗ್ರೆಸ್ ಮತ್ತು ಬೇರೆ ರಾಜಕೀಯ ಪಕ್ಷಗಳ ನಾಯಕರು, ಕಾರ್ಯಕರ್ತರು, ಬೇರೆ ರಾಜ್ಯಗಳ ಮುಖ್ಯಮಂತ್ರಿಗಳು ಮತ್ತು ಎಲ್ಲಕ್ಕಿಂತ ಮಿಗಿಲಾಗಿ ರಾಜ್ಯದ ಜನತೆ ಕಾಳಜಿಯಿಂದ ನನ್ನ ಆರೋಗ್ಯಕ್ಕಾಗಿ ಹಾರೈಸಿದ್ದಾರೆ.
ಅವರೆಲ್ಲರಿಗೂ ಆಭಾರಿಯಾಗಿದ್ದೇನೆ, ಧನ್ಯವಾದಗಳು. ಎಂದು ಸಿದ್ದ ರಾಮಯ್ಯ ಅವರು ಧನ್ಯವಾದ ಹೇಳಿದ್ದಾರೆ. ಎರಡನೇ ಬಾರಿಗೆ ಅವರ ಗಂಟಲು ದ್ರವ ಹಾಗೂ ರಕ್ತ ಪರೀಕ್ಷೆಯನ್ನು ವೈದ್ಯರು ನಡೆಸಿದ್ದು ರಿಪೋರ್ಟ್ ನೆಗಿಟಿವ್ ಬಂದಿದೆ.
ಹೀಗಾಗಿ ಸಿದ್ದರಾಮಯ್ಯ ಮನೆಗೆ ಹೋಗಬಹುದು ಎಂದು ಆಸ್ಪತ್ರೆಯ ವೈದ್ಯರು ತಿಳಿಸಿದ್ದರು.
. ಸಿದ್ದರಾಮಯ್ಯಗೆ ಕೊರೋನಾ ಜತೆಗೆ ಇತರ ಆರೋಗ್ಯ ಸಮಸ್ಯೆಗಳಿರುವುದರಿಂದ ಎಲ್ಲದಕ್ಕೂ ವೈದ್ಯರು ಚಿಕಿತ್ಸೆ ನೀಡುತ್ತಿದ್ದರು.
ಆರಂಭದ ಎರಡು ದಿನ ಮಾತ್ರ ಜ್ವರ ಇತ್ತು. ಉಳಿದಂತೆ ಯಾವುದೇ ಕೊರೋನಾ ಸೋಂಕಿನ ಲಕ್ಷಣ ಕಾಣಿಸಿಕೊಂಡಿರಲಿಲ್ಲ.
ಸದ್ಯ ಸಿದ್ದರಾಮಯ್ಯ ಕೊರೋನಾದಿಂದ ಗುಣಮುಖರಾಗಿ ಮನೆಗೆ ತೆರಳಿದ್ದು, ಕೋವಿಡ್ ಮಾರ್ಗ ಸೂಚಿ ಮತ್ತು ವೈದ್ಯರ ಸಲಹೆ ಮೇರೆಗೆ ಕ್ವಾರಂಟೈನ್ ನಲ್ಲಿರುತ್ತಾರೆ.
ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಬೆನ್ನಲ್ಲೇ ಮಾಜಿ ಸಿಎಂ ಸಿದ್ದರಾಮಯ್ಯಗೂ ಕೊರೋನಾ ಪಾಸಿಟಿವ್ ಕಾಣಿಸಿಕೊಂಡಿತ್ತು.ಒಂದು ವಾರದ ಹಿಂದೆ ಸಿದ್ದರಾಮಯ್ಯ ಮಣಿಪಾಲ್ ಆಸ್ಪತ್ರೆಗೆ ದಾಖಲಾಗಿದ್ದರು.