Connect with us

BANTWAL

5 ಗ್ಯಾರಂಟಿ ಜಾರಿಗೊಳಿಸಿ ನುಡಿದಂತೆ ನಡೆದ ರಾಜ್ಯ ಸರ್ಕಾರವನ್ನು ಅಭಿನಂದಿಸಿದ ಮಾಜಿ ವಿತ್ತ ಸಚಿವ ಜನಾರ್ದನ ಪೂಜಾರಿ..!

Published

on

ನೂತನ ಸರಕಾರ ಅಸ್ತಿತ್ವಕ್ಕೆ ಬಂದ ಬಳಿಕ ಚುನಾವಣಾ ಪೂರ್ವದಲ್ಲಿ ನೀಡಿದ ಭರವಸೆಯನ್ನು ನೀಡಿ ನುಡಿದಂತೆ ನಡೆದಿದ್ದು, ಮುಖ್ಯ ಮಂತ್ರಿ ಹಾಗೂ ಉಪಮುಖ್ಯಮಂತ್ರಿ ಜೊತೆಗೆ ಸರಕಾರದ ಎಲ್ಲಾ ಸಚಿವರಿಗೂ ವಿಶೇಷವಾಗಿ ಕೇಂದ್ರ ಮಾಜಿ ಸಚಿವ ಹಿರಿಯ ಕಾಂಗ್ರೆಸ್ ನಾಯಕ ಬಿ.ಜನಾರ್ದನ ಪೂಜಾರಿ ಅವರು ಅಭಿನಂದನೆ ಸಲ್ಲಿಸಿದರು.

ಬಂಟ್ವಾಳ: ನೂತನ ಸರಕಾರ ಅಸ್ತಿತ್ವಕ್ಕೆ ಬಂದ ಬಳಿಕ ಚುನಾವಣಾ ಪೂರ್ವದಲ್ಲಿ ನೀಡಿದ ಭರವಸೆಯನ್ನು ನೀಡಿ ನುಡಿದಂತೆ ನಡೆದಿದ್ದು, ಮುಖ್ಯ ಮಂತ್ರಿ ಹಾಗೂ ಉಪಮುಖ್ಯಮಂತ್ರಿ ಜೊತೆಗೆ ಸರಕಾರದ ಎಲ್ಲಾ ಸಚಿವರಿಗೂ ವಿಶೇಷವಾಗಿ ಕೇಂದ್ರ ಮಾಜಿ ಸಚಿವ ಹಿರಿಯ ಕಾಂಗ್ರೆಸ್ ನಾಯಕ ಬಿ.ಜನಾರ್ದನ ಪೂಜಾರಿ ಅವರು ಅಭಿನಂದನೆ ಸಲ್ಲಿಸಿದರು.

ಜನಪರವಾದ ಸರಕಾರದ ಚಿಂತನೆ ಹಾಗೂ ಪ್ರತಿಯೊಂದು ಭರವಸೆಗಳನ್ನು ನೀಡಿರುವ ಮುಖ್ಯ ಮಂತ್ರಿ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರಿಗೆ ಅಭಿನಂದನೆ ಸಲ್ಲಿಸುತ್ತೇನೆ ಎಂದರು.

ಜೊತೆಗೆ ಭ್ರಷ್ಟಾಚಾರ ರಹಿತವಾಗಿ ಉತ್ತಮ‌ವಾದ ಆಡಳಿತವನ್ನು ಕಾಂಗ್ರೆಸ್ ಪಕ್ಷ ರಾಜ್ಯದಲ್ಲಿ ನೀಡಲಿ ಎಂದು ಶುಭಹಾರೈಸಿದರು.

ಕೇಂದ್ರದ ಮಾಜಿ ಸಚಿವ ಬಿ.ಜನಾರ್ದನ ಪೂಜಾರಿ ಅವರು ತಮ್ಮ ನಿವಾಸದಿಂದ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರನ್ನು ಪೋನ್ ಮೂಲಕ ಸಂಪರ್ಕ ಮಾಡಲು ಪ್ರಯತ್ನಿಸಿದರು.

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಅಧಿಕಾರಿಗಳ ಸಭೆಯೊಂದರಲ್ಲಿ ಭಾಗವಹಿಸಿದ್ದ ಕಾರಣ ಅವರ ಆಪ್ತಸಹಾಯಕರು ಪೋನ್ ರಿಸೀವ್ ಮಾಡಿ ಹತ್ತು ನಿಮಿಷದ ಬಳಿಕ ನಿಮನ್ನು ಸಂಪರ್ಕ ಮಾಡುತ್ತೇವೆ ಎಂದು ಭರವಸೆ ನೀಡಿದ್ದಾರೆ.

ಬಳಿಕ ಉಪಮುಖ್ಯಮಂತ್ರಿ ಡಿ.ಕೆ.ಶಿ ಅವರ ಜೊತೆ ಪೋನ್ ಮೂಲಕ ಮಾತನಾಡಿದರು. ನಮಸ್ಕಾರದಿಂದ ಆರಂಭವಾದ ಇವರಿಬ್ಬರ ಮಾತು ಬಳಿಕ ಪೂಜಾರಿ ಅವರ ಆರೋಗ್ಯವನ್ನು ಡಿ.ಕೆ.ಶಿ ವಿಚಾರಿಸಿದರು.

ಬಳಿಕ ಪೂಜಾರಿ ಅವರು ಡಿ.ಕೆ.ಶಿ.ಅವರಿಗೆ ಅಭಿನಂದನೆ ಸಲ್ಲಿಸಿದರು. ನೀಡಿದ ಮಾತಿಗೆ ಬದ್ದವಾಗಿ ನಡೆದಿದ್ದೀರಿ.

ನೀಡಿದ ಎಲ್ಲಾ ಭರವಸೆಯನ್ನು ರಾಜ್ಯದ ಜನತೆಗೆ ಒದಗಿಸುವ ಕಾರ್ಯಮಾಡಿದ್ದೀರಿ, ನಿಜಕ್ಕೂ ಶ್ಲಾಘನೀಯ ಕಾರ್ಯ ಎಂದು ಅಭಿನಂದನೆ ಸಲ್ಲಿಸಿದರು.

ಗೋರ್ಕಣಾಥೇಶ್ವರ ದೇವರು ನಿಮ್ಮನ್ನು ಚೆನ್ನಾಗಿಟ್ಟಿರಲಿ, ಸರಕಾರವನ್ನು ಉತ್ತಮವಾಗಿ ನಡೆಸಲು ದೇವರ ಆಶೀರ್ವಾದವಿರಲಿ ಎಂದು ಹಾರೈಸಿದರು.

Click to comment

Leave a Reply

Your email address will not be published. Required fields are marked *

BANTWAL

ವಿಟ್ಲ: ವಿದ್ಯಾರ್ಥಿನಿಗೆ ಕಿರುಕುಳ-ಯುವಕನ ವಿರುದ್ಧ ಪೋಕ್ಸೊ ಪ್ರಕರಣ ದಾಖಲು

Published

on

ಬಂಟ್ವಾಳ: ವಿದ್ಯಾರ್ಥಿನಿಗೆ ಕಿರುಕುಳ ನೀಡಿದ ವಿಚಾರದಲ್ಲಿ ಪೆರುವಾಯಿ ಮೂಲದ ಯುವಕನ ವಿರುದ್ಧ ವಿಟ್ಲ ಠಾಣೆಯಲ್ಲಿ ಪೋಕ್ಸೊ ಪ್ರಕರಣ ದಾಖಲಾಗಿದೆ.

ಕೇಪು ಗ್ರಾಮದ 9ನೇ ತರಗತಿ ವಿದ್ಯಾರ್ಥಿಯೊಬ್ಬಳನ್ನು ಯುವಕ ಕೆಲವು ದಿನಗಳಿಂದ ಹಿಂಬಾಲಿಸುತ್ತಿದ್ದು, ಮೊಬೈಲ್ ನಂಬರ್ ನೀಡುವಂತೆ ಕಿರುಕುಳ ನೀಡಿದ್ದಾನೆ. ಶಾಲೆ ಸಮೀಪ ಬಂದು ಬೈಕ್ ನಲ್ಲಿ ಕೂರುವಂತೆ ಹೇಳಿದ್ದಾನೆ.

ಈ ಎಲ್ಲಾ ವಿಚಾರವನ್ನು ಬೇರೆ ಕಡೆ ಹೇಳಬಾರದೆಂದು ಬೆದರಿಸುವ ಕಾರ್ಯ ಮಾಡಿದ್ದಾನೆ. ಇದರಿಂದ ಭಯಗೊಂಡ ಬಾಲಕಿ ಶಾಲೆಯ ಶಿಕ್ಷಕರಲ್ಲಿ ತಿಳಿಸಿದ್ದು, ಅವರು ಪೋಷಕರಿಗೆ ಮಾಹಿತಿ ನೀಡಿ, ನಂತರ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.

Continue Reading

BANTWAL

Bantwala: ಹೃದಯ ಸಂಬಂಧಿ ಖಾಯಿಲೆಯಿಂದ 4 ವರ್ಷದ ಬಾಲಕಿ ನಿಧನ..!

Published

on

ಹೃದಯ ಸಂಬಂಧಿ ಖಾಯಿಲೆಯಿಂದ ಬಳಲುತ್ತಿದ್ದ 4 ವರ್ಷದ ಪುಟ್ಟ ಬಾಲಕಿಯೋರ್ವಳು ಮೃತಪಟ್ಟ ಘಟನೆ ಸೆ.24ರಂದು ಬಂಟ್ವಾಳದ ಮಿತ್ತೂರಿನಲ್ಲಿ ನಡೆದಿದೆ.

ಬಂಟ್ವಾಳ: ಹೃದಯ ಸಂಬಂಧಿ ಖಾಯಿಲೆಯಿಂದ ಬಳಲುತ್ತಿದ್ದ 4 ವರ್ಷದ ಪುಟ್ಟ ಬಾಲಕಿಯೋರ್ವಳು ಮೃತಪಟ್ಟ ಘಟನೆ ಸೆ.24ರಂದು ನಡೆದಿದೆ.

ಮೃತ ಬಾಲಕಿಯನ್ನು ಬಂಟ್ವಾಳ ಮಿತ್ತೂರು ಸಮೀಪದ ಪಾಟ್ರಕೋಡಿ ನಿವಾಸಿ ಇಬ್ರಾಹಿಂ ಬಾತಿಷಾ ರವರ ಪುತ್ರಿ ಜಮೀಲಾ ಸನಿಕ (4) ಎಂದು ತಿಳಿದು ಬಂದಿದೆ.

ಜಮೀಲಾ  ಬಾಲಕಿ ಪುತ್ತೂರಿನ ಮುರದಲ್ಲಿರುವ ಅಲ್ ಬಿರ್ರ್ ಸ್ಕೂಲ್ ನ ಎಲ್.ಕೆ.ಜಿ. ಯಲ್ಲಿ ಕಲಿಯುತ್ತಿದ್ದಳು.

ಈಕೆ ಅನಾರೋಗ್ಯದಿಂದ ಇದ್ದು, ಬೆಂಗಳೂರಿನ ಹೃದಯಾಲಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಳು.

ಆದರೆ ಚಿಕಿತ್ಸೆ ಫಲಕಾರಿಯಾಗದೆ ಇಂದು ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾಳೆ.

Continue Reading

BANTWAL

Bantwala: ಓವರ್ ಟೇಕ್ ಮಾಡಲು ಹೋದ ಟೆಂಪೋ ರಿಕ್ಷಾ – ಕರೆಂಟ್ ಕಂಬಕ್ಕೆ ಗುದ್ದಿದ ಬಸ್..!

Published

on

ಬಂಟ್ವಾಳ: ಸರಕಾರಿ ಬಸ್ ಒಂದು ಓವರ್ ಟೇಕ್ ಮಾಡುತ್ತಿದ್ದ ಟೆಂಪೋ ರಿಕ್ಷಾವನ್ನು ತಪ್ಪಿಸಲು ಹೋಗಿ ಕರೆಂಟ್ ಕಂಬಕ್ಕೆ ಗುದ್ದಿದ ಘಟನೆ ಬಂಟ್ವಾಳದ ಸಜಿಪಮೂಡ ಗ್ರಾಮದ ಕಂದೂರು ಎಂಬಲ್ಲಿ ನಡೆದಿದೆ.

ಮೆಲ್ಕಾರಿನಿಂದ ಬರುತ್ತಿದ್ದ ಇಲ್ಯಾಸ್ ಟೆಂಪೋ ರಿಕ್ಷಾ ಚಾಲಕನು ಕಂದೂರಿನ ಬಜಾರ್ ಅಡಿಟೋರಿಯಮ್ ಬಳಿ ಬರುತ್ತಿದ್ದ ಆಕ್ಟಿವಾ ಗಾಡಿಯೊಂದನ್ನು ಓವರ್ ಟೇಕ್ ಮಾಡುತ್ತಿದ್ದ.

ಈ ವೇಳೆ ಮುಡಿಪು ಮಾರ್ಗವಾಗಿ ಬರುತ್ತಿದ್ದ ಕಾಸರಗೋಡು ಬಿ.ಸಿ.ರೋಡ್ ಬಸ್ ಡಿಕ್ಕಿ ಹೊಡೆಯುವುದನ್ನು ತಪ್ಪಿಸಲು ಹೋಗಿ ಕರೆಂಟ್ ಕಂಬಕ್ಕೆ ಡಿಕ್ಕಿ ಹೊಡೆದಿದೆ.

ಬಸ್ ಗುದ್ದಿದ್ದ ರಭಸಕ್ಕೆ ಕರೆಂಟ್ ಕಂಬ ತುಂಡಾಗಿದೆ.

ಬಸ್ಸಿನಲ್ಲಿದ ಪ್ರಯಾಣಿಕರು ಪ್ರಾಣಾಪಾಯದಿಂದ ಪಾರಾಗಿದ್ದಾರೆ.

ಸ್ಥಳಕ್ಕೆ ಬಂಟ್ವಾಳ ಸಂಚಾರಿ ಠಾಣಾ ಪೋಲಿಸರು ಆಗಮಿಸಿ, ಪರಿಶೀಲನೆ ನಡೆಸಿದರು.

Continue Reading

LATEST NEWS

Trending