Connect with us

DAKSHINA KANNADA

ಮಂಗಳೂರು ಉದ್ಯಮಿ ಕೊಲೆಗೆ ಯತ್ನ: ಸಿಸಿ ಫೂಟೇಜ್  ಆಧರಿಸಿ ಆರೋಪಿಗಳ ಬಂಧನಕ್ಕೆ ಬಲೆ

Published

on

ಮಂಗಳೂರು ಉದ್ಯಮಿ ಕೊಲೆಗೆ ಯತ್ನ: ಸಿಸಿ ಫೂಟೇಜ್  ಆಧರಿಸಿ ಆರೋಪಿಗಳ ಬಂಧನಕ್ಕೆ ಬಲೆ

ಮಂಗಳೂರು : ಕೊರೊನಾ ಲಾಕ್‌ ಡೌನ್‌ ಸಂದರ್ಭದಲ್ಲಿ ಕ್ರಿಮಿನಲ್‌ ಕೃತ್ಯಗಳಿಗೆ ಬಿದ್ದಿದ್ದ ಕಡಿವಾಣ ಇದೀಗ ಲಾಕ್‌ ಡೌನ್‌ ತೆರವುಗೊಳ್ಳುತ್ತಿರುವಂತೆ ಹೆಚ್ಚಾಗುತ್ತಿರುವುದು ಜನತೆಯ ನಿದ್ದೆಗೆಡಿಸಿದೆ. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಇದೀಗ ಮತ್ತೆ ಕ್ರಿಮಿನಲ್‌ ಚಟುವಟಿಕೆಗಳು ಹೆಚ್ಚಾಗತೊಡಗಿದ್ದು, ಪೊಲೀಸರ ವೈಫಲ್ಯ ಇದಕ್ಕೆ ಕಾರಣವೇ ಎಂದು ಜನರಾಡಿಕೊಳ್ಳುವಂತಾಗಿದೆ, ಜೊತೆಗೆ ಸ್ಥಳೀಯರಲ್ಲಿ ಆತಂಕದ ಛಾಯೆ ಹೆಚ್ಚಿದೆ.

ಮಂಗಳೂರು ನಗರದ ಹೊರವಲಯ ಗುರುಪುರದ ಕಂದಾವರದಲ್ಲಿ ಜಮಾಅತಿನ ಮಾಜಿ ಅಧ್ಯಕ್ಷರ ಕೊಲೆ ಯತ್ನ ನಡೆದಿದೆ.ಅವರು ರಾತ್ರಿ ಸುಮಾರು 10:30ಕ್ಕೆ ಮಸೀದಿಯಲ್ಲಿ ನಮಾಝ್ ಮಾಡಿ ಮನೆಗೆ ತೆರಳಲು ತನ್ನ ಕಾರಿನತ್ತ ನಡೆದುಕೊಂಡು ಬರುತ್ತಿದ್ದಾಗ ಇಬ್ಬರು ಯುವಕರು ತಲವಾರಿನಿಂದ ಅಝೀಝ್ ಅವರ ತಲೆ, ಕೈ, ಕಾಲಿಗೆ ಕಡಿದು, ಗಂಭೀರ ಗಾಯಗೊಳಿಸಿ, ಪರಾರಿಯಾಗಿದ್ದಾರೆ ಎಂದು ತಿಳಿದುಬಂದಿದೆ.

ಗುರುಪುರ ಕೈಕಂಬ ಸುನ್ನೀ ಸಂಘ ಕುಟುಂಬದ ಪ್ರಮುಖ ಉಮರಾ ನಾಯಕರು,ಹಾಗೂ ಅಲ್ ಮಸ್ಜಿದುಲ್ ಬದ್ರಿಯಾ ಕಂದಾವರ ಜಮಾಅತಿನ  ಮಾಜಿ ಅಧ್ಯಕ್ಷರೂ ಆದ (56) ಜನಾಬ್ ಅಬ್ದುಲ್ ಅಝೀಝ್  ಇವರನ್ನು ದುಷ್ಕರ್ಮಿಗಳು ತಲವಾರು ದಾಳಿ ನಡೆಸಿ ಮಾರಣಾಂತಿಕ ಹಲ್ಲೆ ನಡೆಸಿರುವ ಕುರಿತು ವರದಿಯಾಗಿದೆ.

ಅಝೀಝ್ ಅವರನ್ನು ನಗರದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.ಈ ದೃಶ್ಯಗಳು ಅಲ್ಲಿ ಅಳವಡಿಸಿದ್ದ ಸಿಸಿ ಟಿವಿಯಲ್ಲಿ ದಾಖಲಾಗಿದ್ದು, ಬಜಪೆ ಠಾಣಾ ಪೊಲೀಸರು ಸಿಸಿಟಿವಿ ಫೂಟೇಜ್‌ ಆಧರಿಸಿ ಆರೋಪಿಗಳ ಬಂಧನಕ್ಕೆ ಬಲೆ ಬೀಸಿದ್ದಾರೆ.ವೈಯಕ್ತಿಕ ದ್ವೇಷವೇ ಕೃತ್ಯಕ್ಕೆ ಕಾರಣವೆಂದು ಮೇಲ್ನೋಟಕ್ಕೆ ತಿಳಿದುಬಂದಿದೆ.

ಮಂಗಳೂರಿನಲ್ಲಿ ವೆನ್ಝ್   ಬಟ್ಟೆಬರೆ ಅಂಗಡಿ ಹೊಂದಿರುವ ಅಝೀಝ್ ಕಂದಾವರ, ಮಸೀದಿಯ ಆಡಳಿತ ಕಮಿಟಿಯಲ್ಲೂ ಸಕ್ರಿಯರಾಗಿದ್ದರು.

ಪ್ರಸ್ತುತ ಘಟನೆಯನ್ನು ಸರ್ವ ಮುಸ್ಲಿಂ ಸಂಘಟನೆಗಳ ಒಕ್ಕೂಟ ಗುರುಪುರ ಕೈಕಂಬ ಖಂಡಿಸುವುದರೊಂದಿಗೆ ಘಟನೆಯ ಬಗ್ಗೆ ಕೂಲಂಕುಷವಾಗಿ ತನಿಖೆ ನಡೆಸಿ ನೈಜ ಆರೋಪಿಗಳನ್ನು ಬಂಧಿಸಬೇಕೆಂದು  ಸಂಘಟನೆಯ ಪ್ರಧಾನ ಕಾರ್ಯದರ್ಶಿ ಅಬೂಝೈದ್ ಶಾಫಿ ಮದನಿ  ಪೊಲೀಸ್ ಇಲಾಖೆಯನ್ನು ಆಗ್ರಹಿಸಿದ್ದಾರೆ.

Click to comment

Leave a Reply

Your email address will not be published. Required fields are marked *

BANTWAL

ಮತ ಚಲಾಯಿಸಿದ ನವ ದಂಪತಿ…! ಶುಭ ಹಾರೈಸಿದ ಸ್ನೇಹಿತರು..!

Published

on

ಮಂಗಳೂರು : ಇಂದು ಹೊಸ ಬಾಳಿಗೆ ಕಾಲಿಡುತ್ತಿದ್ದ ಆ ಜೋಡಿಗಳು ಹೊಸ ಬಾಳಿನ ಚಿಂತನೆಯ ಜೊತೆಗೆ ದೇಶದ ಚಿಂತನೆಯನ್ನೂ ಮಾಡಿದ್ದಾರೆ. ಮದುವೆಯ ಸಮಾರಂಭದಲ್ಲಿ ಹಸಮಣೆ ಏರಿ ಪತಿ ಪತ್ನಿಯರಾಗಿ ಒಂದಾದ ಜೋಡಿ ಎಲ್ಲಾ ಸಂಪ್ರದಾಯಗಳು ಪೂರ್ಣಗೊಂಡ ತಕ್ಷಣ ಮದುವೆ ಮನೆಯಿಂದ ಹೊರ ನಡೆದಿದ್ದಾರೆ. ಮದುವೆ ಮನೆಯಿಂದ ಬಂದವರೇ ನೇರವಾಗಿ ಮತಗಟ್ಟೆಗೆ ಹೋಗಿ ತಮ್ಮ ಹಕ್ಕನ್ನು ಚಲಾಯಿಸಿದ್ದಾರೆ.

ಹೌದು ಇದು ನಡೆದಿರುವುದು ಬಂಟ್ವಾಳ ತಾಲೂಕಿನ ಅಜ್ಜಿಬೆಟ್ಟು ಗ್ರಾಮದ ಬೂತ್ ಸಂಖ್ಯೆ 16 ರಲ್ಲಿ . ಇವರ ಮದುವೆ ನಿಗದಿಯಾದ ದಿನಂದಂತೆ ಪ್ರಜಾಪ್ರಭುತ್ವದ ಹಬ್ಬವಾಗಿರೋ ಚುನಾವಣೆ ದಿನಾಂಕ ಕೂಡಾ ಘೋಷಣೆ ಆಗಿದೆ. ಒಂದು ಕಡೆ ಹಸೆಮಣೆ ಏರಿ ತಮ್ಮ ಸ್ವಂತ ಭವಿಷ್ಯ ಕಟ್ಟಿಕೊಳ್ಳುವ ಜೊತೆಗೆ ದೇಶದ ಭವಿಷ್ಯವನ್ನೂ ಕಟ್ಟಲು ತಮ್ಮ ಅಮೂಲ್ಯ ಮತವನ್ನು ಚಲಾಯಿಸಿ ಮಾದರಿಯಾಗಿದ್ದಾರೆ. ಬಂಟ್ವಾಳ ತಾಲೂಕಿನ ಮಲ್ಲೆರ್ಮಳಕೋಡಿ ಜಯರಾಮ ಕುಲಾಲ್ ಎಂಬ ವರ ವದುವಿವೊಂದಿಗೆ ಬಂದು ತನ್ನ ಮತ ಚಲಾಯಿಸಿದ್ದಾರೆ. ಇವರಿಬ್ಬರ ಈ ಕಾಳಜಿಗೆ ಜನರು ಹಾಗೂ ಮತಗಟ್ಟೆ ಅಧಿಕಾರಿಗಳು ಶುಭ ಹಾರೈಸಿದ್ದಾರೆ. ಇದೇ ವೇಳೆ ಜಯರಾಮ್ ಕುಲಾಲ್ ಅವರ ಸ್ನೇಹಿತರು ಹಿತೈಷಿಗಳು ಕೂಡಾ ಶುಭ ಹಾರೈಸಿದ್ದಾರೆ.

Continue Reading

DAKSHINA KANNADA

ಮತದಾನ ಮಾಡುವ ಫೋಟೊ ಕ್ಲಿಕ್ಕಿಸಿ ಶೇರ್ ಮಾಡಿದ ಯುವಕ; ಎಫ್ ಐ ಆರ್ ದಾಖಲಿಸಿದ ಚುನಾವಣಾ ಆಯೋಗ

Published

on

ಪುತ್ತೂರು : ಮತಗಟ್ಟೆಯೊಳಗೆ ಮೊಬೈಲ್ ಗೆ ನಿರ್ಬಂಧ ವಿಧಿಸಿದರೂ ಕಾನೂನು ಉಲ್ಲಂಘನೆಯಾಗಿರುವ ಘಟನೆ ಪುತ್ತೂರಿನ ಮತಗಟ್ಟೆಯೊಂದರಲ್ಲಿ ನಡೆದಿದೆ. ಮತದಾನ ಮಾಡುವ ಫೋಟೊ ಕ್ಲಿಕ್ಕಿಸಿ ಗ್ರೂಪ್ ಗೆ ಶೇರ್ ಮಾಡಿದ ಯುವಕನ ವಿರುದ್ಧ ಆಕ್ರೋಶ ಕೇಳಿ ಬಂದಿತ್ತು.

ಪುತ್ತೂರಿನ ಕೋಟಿ-ಚೆನ್ನಯ ಕಂಬಳ ಗ್ರೂಪ್ ಗೆ ಮತದಾನ ಮಾಡುವ ಫೋಟೊವನ್ನು ರಂಜಿತ್ ಬಂಗೇರ ಎಂಬ ಯುವಕ ಶೇರ್ ಮಾಡಿರುವ ಬಗ್ಗೆ ತಿಳಿದು ಬಂದಿದೆ.

ಇದನ್ನೂ ಓದಿ : ಚುನಾವಣಾ ಕರ್ತವ್ಯದಲ್ಲಿದ್ದ ಶಿಕ್ಷಕಿ ಕುಸಿದು ಬಿದ್ದು ಸಾ*ವು

ಕಾಂಗ್ರೆಸ್ ಅಭ್ಯರ್ಥಿಗೆ ಮತ ಹಾಕುವ ಫೋಟೊವನ್ನು ರಂಜಿತ್ ಬಂಗೇರ ಎಂಬ ಯುವಕ ತೆಗೆದಿದ್ದಾನೆ.  ಇದೀಗ ಈ ಘಟನೆಗೆ ಸಂಬಂಧಿಸಿದಂತೆ ಚುನಾವಣಾ ಆಯೋಗದಿಂದ ಎಫ್ ಐ ಆರ್ ದಾಖಲಾಗಿದೆ ಎಂದು ದಕ್ಷಿಣ ಕನ್ನಡ ಜಿಲ್ಲಾಧಿಕಾರಿ / ಜಿಲ್ಲಾ ಚುನಾವಣಾಧಿಕಾರಿ ಮುಲೈ ಮುಗಿಲನ್ ಮಾಹಿತಿ ನೀಡಿದ್ದಾರೆ.

Continue Reading

DAKSHINA KANNADA

ಬೈಕ್-ಕಾರು ನಡುವೆ ಅಪ*ಘಾತ; ಓರ್ವ ಮೃ*ತ್ಯು

Published

on

ಅರಂತೋಡು: ಬೈಕ್ ಹಾಗೂ ಕಾರಿನ ನಡುವೆ ಸಂಭವಿಸಿದ ಭೀಕರ ರಸ್ತೆ ಅಪ*ಘಾತದಲ್ಲಿ ಬೈಕ್‌ನ ಹಿಂಬದಿ ಸವಾರ ಮೃ*ತಪಟ್ಟ ಘಟನೆ ಸಂಪಾಜೆ ಕಲ್ಲುಗುಂಡಿ ಸಮೀಪ ದೊಡ್ಡಡ್ಕ ಎಂಬಲ್ಲಿ ಗುರುವಾರ ತಡರಾತ್ರಿ ಸಂಭವಿಸಿದೆ.


ಮತದಾನ ಮಾಡಲು ಊರಿಗೆ ಬರುತ್ತಿದ್ದರು ಎಂದು ಹೇಳಲಾಗುತ್ತಿದ್ದು ಡಿ*ಕ್ಕಿಯ ರಭಸಕ್ಕೆ ಬೈಕ್‌ನ ಹಿಂಬದಿ ಸವಾರನಿಗೆ ಗಂಭೀರ ಗಾಯಗೊಂಡು ಮೃ*ತಪಟ್ಟರೆ ಇನ್ನೋರ್ವನಿಗೆ ಗಾಯವಾಗಿದ್ದು ಆತನನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.

ಮೃ*ತರ ವಿವರ ಇನ್ನಷ್ಟೇ ತಿಳಿದುಬರಬೇಕಾಗಿದೆ.

Continue Reading

LATEST NEWS

Trending