Friday, August 19, 2022

ದೆಹಲಿ ಗಲಭೆ ಪ್ರಕರಣದ ಆರೋಪಿ ಉಮರ್​ ಖಾಲಿದ್​ ಜಾಮೀನು ಅರ್ಜಿ ವಜಾ

ನವದೆಹಲಿ: 2020ರ ದೆಹಲಿ ಗಲಭೆಯ ಪಿತೂರಿ ಆರೋಪಿ ಹಾಗೂ ಜೆಎನ್‌ಯುನ ಮಾಜಿ ವಿದ್ಯಾರ್ಥಿ ಉಮರ್ ಖಾಲಿದ್ ಜಾಮೀನು ಅರ್ಜಿಯನ್ನು ದೆಹಲಿ ನ್ಯಾಯಾಲಯ ಇಂದು ವಜಾಗೊಳಿಸಿದೆ.


ಫೆಬ್ರವರಿ 2020ರ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಪ್ರಕರಣದಲ್ಲಿ ಉಮರ್​​ ಖಾಲಿದ್​ರನ್ನು 2020ರ ಸೆಪ್ಟೆಂಬರ್ 14ರಂದು ಬಂಧಿಸಲಾಗಿತ್ತು.

ಸದ್ಯ ಆರೋಪಿ ದೆಹಲಿಯ ತಿಹಾರ್ ಜೈಲಿನಲ್ಲಿದ್ದಾರೆ. ಹೆಚ್ಚುವರಿ ಸೆಷನ್ಸ್ ನ್ಯಾಯಾಧೀಶ ಅಮಿತಾಭ್ ರಾವತ್ ಅವರು ಪ್ರಕರಣದ ವಾದವನ್ನು ಆಲಿಸಿದ ನಂತರ ಮಾರ್ಚ್ 3 ರಂದು ಆದೇಶವನ್ನು ಕಾಯ್ದಿರಿಸಿದ್ದರು.

ವಿಚಾರಣೆಯ ವೇಳೆ ಆರೋಪಿಯು ತಮ್ಮ ವಿರುದ್ಧದ ಪ್ರಕರಣವನ್ನು ಸಾಬೀತುಪಡಿಸಲು ಪ್ರಾಸಿಕ್ಯೂಷನ್‌ಗೆ ಸಾಕ್ಷ್ಯಾಧಾರಗಳ ಕೊರತೆಯಿದೆ ಎಂದು ನ್ಯಾಯಾಲಯಕ್ಕೆ ತಿಳಿಸಿದ್ದರು. ಆದರೆ ಇದೀಗ ನ್ಯಾಯಾಲಯ ಖಾಲಿದ್​ಗೆ ಜಾಮೀನು ನಿರಾಕರಿಸಿದೆ.

LEAVE A REPLY

Please enter your comment!
Please enter your name here

Hot Topics

ಬಿಸಿಯೂಟ ಅಡುಗೆ ತಯಾರಕರು ಕನಿಷ್ಠ ವೇತನ ಕಾಯ್ದೆಯಡಿ ವೇತನ ಪಡೆಯಲು ಅರ್ಹರಲ್ಲ: ಹೈಕೋರ್ಟ್

ಬೆಂಗಳೂರು: ರಾಜ್ಯ ಸರ್ಕಾರ ನಡೆಸುತ್ತಿರುವ ಮಧ್ಯಾಹ್ನ ಬಿಸಿಯೂಟ ಯೋಜನೆಯಡಿ ಗುತ್ತಿಗೆ ಆಧಾರದ ಮೇಲೆ ಕೆಲಸ ಮಾಡುತ್ತಿರುವ ಮುಖ್ಯ ಅಡುಗೆ ತಯಾರಕರು ಮತ್ತು ಅಡುಗೆ ತಯಾರಕರು ಕನಿಷ್ಠ ವೇತನ ಕಾಯಿದೆಯಡಿ ವೇತನ ಪಡೆಯಲು ಅರ್ಹರಾಗಿಲ್ಲ...

ಸುರತ್ಕಲ್‌ನಲ್ಲಿ ಕತ್ತಿ ಬೀಸಿ ಹುಚ್ಚಾಟ: ಓರ್ವನ ಬಂಧನ

ಮಂಗಳೂರು: ದಾರಿ ಮಧ್ಯೆ ಕತ್ತಿ ಬೀಸಿ ಹುಚ್ಚಾಟ ನಡೆಸಿದ ಜಾರ್ಖಾಂಡ್‌ ಮೂಲದ ವ್ಯಕ್ತಿಯೊಬ್ಬನನ್ನು ಪೊಲೀಸರು ವಶಕ್ಕೆ ಪಡೆದುಕೊಂಡ ಘಟನೆ ಮಂಗಳೂರು ಹೊರ ವಲಯದ ಸುರತ್ಕಲ್ ಸಮೀಪದ ಕಾನದಲ್ಲಿ ನಡೆದಿದೆ.ಅತಲ್ ಕುಲ್ಲು (30) ಬಂಧಿತ...

E-Court ಸೇವೆಯಲ್ಲಿ ತಾಂತ್ರಿಕ ವ್ಯತ್ಯಯ: ಲೋಪ ಸರಿಪಡಿಸಲು ಮಂಗಳೂರು ವಕೀಲರ ಸಂಘ ಮನವಿ

ಮಂಗಳೂರು: ಕಳೆದ ಸುಮಾರು 3-4 ವಾರಗಳಿಂದ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಇ-ಕೋರ್ಟ್ ಸೇವೆ ವ್ಯತ್ಯಯ ಉಂಟಾಗಿದೆ. ಈ ಸಮಸ್ಯೆಯಿಂದ ಸಾವಿರಾರು ವಕೀಲರಿಗೆ ಹಾಗೂ ಕಕ್ಷಿದಾರರಿಗೆ ಅಗತ್ಯ ಮಾಹಿತಿಯನ್ನು ಪಡೆದುಕೊಳ್ಳಲು ಅಡ್ಡಿಯಾಗಿದೆ. ಆದ್ದರಿಂದ ಕೇಂದ್ರ...