Connect with us

    LATEST NEWS

    ಮಾಜಿ ಸಿಎಂ ಎಸ್.ಎಂ.ಕೃಷ್ಣ ವಿಧಿವಶ

    Published

    on

    ಬೆಂಗಳೂರು : ಮಾಜಿ ಸಿಎಂ ಎಸ್‌ಎಂ ಕೃಷ್ಣ ವಿಧಿವಶರಾಗಿದ್ದಾರೆ. ಅವರಿಗೆ 92 ವರ್ಷ ವಯಸ್ಸಾಗಿತ್ತು.
    ಮಾಜಿ ಕೇಂದ್ರ ಸಚಿವರೂ ಆಗಿದ್ದ ಅವರು ಬೆಂಗಳೂರಿನ ಸದಾಶಿವನಗರದಲ್ಲಿನ ತಮ್ಮ ನಿವಾಸದಲ್ಲಿ ಮಂಗಳವಾರ ನಸುಕಿನ ಜಾವ 2.45ರ ಸುಮಾರಿಗೆ ಇಹಲೋಹ ತ್ಯಜಿಸಿದ್ದಾರೆ.
    ವಯೋಸಹಜ ಸಮಸ್ಯೆಗಳಿಂದ ಬಳಲುತ್ತಿದ್ದ ಅವರು, ಹಲವು ಬಾರಿ ಆಸ್ಪತ್ರೆಗೆ ದಾಖಲಾಗಿ ಬಳಿಕ ಡಿಸ್ಚಾರ್ಜ್ ಆಗಿದ್ದರು. ಇದೀಗ ಕೊನೆಯುಸಿರೆಳೆದಿದ್ದಾರೆ.

    1999 ರಿಂದ 2004ರವರೆಗೆ ಕರ್ನಾಟಕದ ಮುಖ್ಯಮಂತ್ರಿಯಾಗಿ ಸೇವೆ ಸಲ್ಲಿಸಿದ್ದಾರೆ‌. 2004- 2008ರಲ್ಲಿ ಯುಪಿಎ ಸರಕಾರದ ಮೊದಲ ಅವಧಿಯಲ್ಲಿ ಮಹಾರಾಷ್ಟ್ರ ರಾಜ್ಯಪಾಲರಾಗಿ, ನಂತರ ವಿದೇಶಾಂಗ ಸಚಿವರಾಗಿ ಕಾರ್ಯ ನಿರ್ವಹಿಸಿದ್ದರು.
    ಡಿಸೆಂಬರ್ 1989ರಿಂದ ಜನವರಿ 1993ರವರೆಗೆ ಕರ್ನಾಟಕ ವಿಧಾನಸಭೆಯ ಸ್ಪೀಕರ್ ಆಗಿಯೂ ಸೇವೆ ಸಲ್ಲಿಸಿದ್ದಾರೆ. 1971 ರಿಂದ 2014ರವರೆಗೆ ವಿವಿಧ ಕಾಲಘಟ್ಟದಲ್ಲಿ ಲೋಕಸಭೆ ಮತ್ತು ರಾಜ್ಯಸಭೆಯ ಸದಸ್ಯರಾಗಿದ್ದರು.
    ಮಾರ್ಚ್ 2017ರಲ್ಲಿ ಬಿಜೆಪಿ ಸೇರ್ಪಡೆಯಾಗಿದ್ದ ಅವರು 2018ರ ವಿಧಾನಸಭಾ ಚುನಾವಣೆಯಲ್ಲಿ ಕೊನೆಯದಾಗಿ ಬಹಿರಂಗವಾಗಿ ಪ್ರಚಾರ ನಡೆಸಿದ್ದರು. ಬಳಿಕ ಸಕ್ರಿಯ ರಾಜಕಾರಣದಿಂದ ದೂರ ಉಳಿದಿದ್ದರು.

    LATEST NEWS

    ಎಸ್ಎಂ ಕೃಷ್ಣಗೆ ‘ಕರ್ನಾಟಕ ರತ್ನ’ ನೀಡುವಂತೆ ಮನವಿ ಮಾಡಿದ ವಿಪಕ್ಷ ನಾಯಕ

    Published

    on

    ಮಂಗಳೂರು/ಬೆಂಗಳೂರು: ಮಾಜಿ ಮುಖ್ಯಮಂತ್ರಿ, ಅಜಾತ ಶತ್ರು, ಸರಳ ಸಜ್ಜನಿಕೆಯ ರಾಜಕಾರಣಿ ಎಸ್.ಎಂ.ಕೃಷ್ಣ ವಿಧಿವಶರಾಗಿದ್ದಾರೆ. ತಮ್ಮ 92 ವಯಸ್ಸಿಗೆ ತಮ್ಮ ಸುದೀರ್ಘ ಬಾಳಪಯಣವನ್ನು ಕೊನೆಗೊಳಿಸಿದ್ದಾರೆ.
    ರಾಷ್ಟ್ರ ಹಾಗೂ ರಾಜ್ಯ ರಾಜಕಾರಣದ ಧೀಮಂತ ನಾಯಕರೆನಿಸಿಕೊಂಡಿದ್ದ ಎಸ್ಎಂ ಕೃಷ್ಣ ಅವರಿಗೆ ಮರಣೋತ್ತರ ‘ಕರ್ನಾಟಕ ರತ್ನ’ ಪ್ರಶಸ್ತಿ ನೀಡುವಂತೆ ಸಿಎಂ ಸಿದ್ದರಾಮಯ್ಯ ಅವರಿಗೆ ವಿಪಕ್ಷ ನಾಯಕ ಆರ್. ಅಶೋಕ್ ಮನವಿ ಮಾಡಿದ್ದಾರೆ.

    ಆರ್. ಅಶೋಕ್ ಟ್ವೀಟ್

    ಈ ಬಗ್ಗೆ ಟ್ವೀಟ್ ಮಾಡಿರುವ ವಿಪಕ್ಷ ನಾಯಕ ಆರ್. ಅಶೋಕ್ “ಕರ್ನಾಟಕ ರತ್ನ “ಎಸ್.ಎಂ.ಕೃಷ್ಣ”

    ರಾಷ್ಟ್ರ ಹಾಗೂ ರಾಜ್ಯ ರಾಜಕಾರಣದ ಧೀಮಂತ ನಾಯಕರು, ಮಾಜಿ ಮುಖ್ಯಮಂತ್ರಿ ಶ್ರೀ ಎಸ್‌.ಎಂ.ಕೃಷ್ಣ ಅವರ ನಿಧನದಿಂದ ಇಡೀ ಕರ್ನಾಟಕ ಶೋಕತಪ್ತವಾಗಿದ್ದು, ನಾಡಿನುದ್ದಕ್ಕೂ ಜನಸಾಮಾನ್ಯರು ಕಂಬನಿ ಮಿಡಿಯುತ್ತಿದ್ದಾರೆ.
    ಶಾಸಕ, ಸಚಿವ, ಸ್ಪೀಕರ್‌, ಉಪಮುಖ್ಯಮಂತ್ರಿ, ಮುಖ್ಯಮಂತ್ರಿ, ಹೀಗೆ ನಾನಾ ಹುದ್ದೆಗಳಲ್ಲಿ ಸೇವೆ ಸಲ್ಲಿಸುವ ಜೊತೆಗೆ, ಜನರ ಬದುಕಿನ ಸುಧಾರಣೆಗಾಗಿ, ರಾಜ್ಯದ ಸಮಗ್ರ ಅಭಿವೃದ್ಧಿಗಾಗಿ ಅವರು ಅಪಾರವಾಗಿ ಶ್ರಮಿಸಿದ್ದರು. ರಾಜಧಾನಿ ಬೆಂಗಳೂರಿಗೆ ಸಿಲಿಕಾನ್‌ ವ್ಯಾಲಿ ಹಾಗೂ ಐಟಿ ಕೇಂದ್ರದ ಸ್ಥಾನಮಾನ ನೀಡುವಲ್ಲಿ ಅವರ ಪಾತ್ರ ಗಣನೀಯ. ವಿದೇಶಾಂಗ ಸಚಿವರಾಗಿ ರಾಷ್ಟ್ರ, ಅಂತರರಾಷ್ಟ್ರೀಯ ಮಟ್ಟದಲ್ಲೂ ಸೇವೆ ಸಲ್ಲಿಸಿ ಕರ್ನಾಟಕದ ಕೀರ್ತಿ ಪತಾಕೆಯನ್ನು ಹಾರಿಸಿದ್ದಾರೆ.

    ಇದನ್ನೂ ಓದಿ: ಎಸ್.ಎಂ.ಕೃಷ್ಣ ಅಂತಿಮ ಯಾತ್ರೆ: ಸೋಮನಹಳ್ಳಿಯಲ್ಲಿ ಅಂತ್ಯಕ್ರಿಯೆ, ಸಿಎಂ ಸಿದ್ದರಾಮಯ್ಯ ಭಾಗಿ

    ಶ್ರೀ ಎಸ್‌.ಎಂ.ಕೃಷ್ಣ ಅವರು ನಾಡಿನ ಪ್ರಗತಿಗೆ ನೀಡಿದ ಕೊಡುಗೆಯನ್ನು ಗುರುತಿಸಿ, ಕರ್ನಾಟಕ ಸರ್ಕಾರದ ವತಿಯಿಂದ ರಾಜ್ಯದ ಅತ್ಯುನ್ನತ ನಾಗರಿಕ ಪ್ರಶಸ್ತಿಯಾದ ʼಕರ್ನಾಟಕ ರತ್ನʼ (ಮರಣೋತ್ತರ) ನೀಡುವುದು ಸೂಕ್ತ ಎಂಬುದು ನನ್ನ ಅಭಿಪ್ರಾಯ. ಆದ್ದರಿಂದ ತಾವು ಈ ಸಲಹೆಯನ್ನು ಪರಿಗಣಿಸಿ ಶ್ರೀಯುತರಿಗೆ ʼಕರ್ನಾಟಕ ರತ್ನʼ ನೀಡಿ ಗೌರವ ಸಲ್ಲಿಸಬೇಕೆಂದು ಮುಖ್ಯಮಂತ್ರಿ ಶ್ರೀ ಸಿದ್ದರಾಮಯ್ಯ ಅವರಲ್ಲಿ ಮನವಿ ಮಾಡುತ್ತಿದ್ದೇನೆ ಎಂದಿದ್ದಾರೆ.

    ಹುಟ್ಟೂರಾದ ಮಂಡ್ಯ ಜಿಲ್ಲೆಯ ಮದ್ದೂರು ತಾಲೂಕಿನ ಸೋಮನಹಳ್ಳಿ ಗ್ರಾಮದಲ್ಲಿ ಎಸ್.ಎಂ.ಕೃಷ್ಣ ಅವರ ಅಂತ್ಯಕ್ರಿಯೆ ನೆರವೆರಿದೆ.

     

    Continue Reading

    International news

    ಭ್ರಷ್ಟಾಚಾರ ಪ್ರಕರಣ: ವಿಚಾರಣೆಗೆ ಹಾಜರಾದ ಇಸ್ರೇಲ್ ಪ್ರಧಾನಿ

    Published

    on

    ಮಂಗಳೂರು/ಟೆಲ್ ಅವೀವ್: ಭ್ರಷ್ಟಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಅವರು ಮೊದಲ ಬಾರಿಗೆ ಟೆಲ್ ಅವೀವ್ ನ ನ್ಯಾಯಾಲಯವೊಂದರಲ್ಲಿ ಮಂಗಳವಾರ ವಿಚಾರಣೆಗೆ ಹಾಜರಾದರು.

    ಈ ಮೂಲಕ ಅಧಿಕಾರದಲ್ಲಿರುವಾಗಲೇ ಅಪರಾಧ ಪ್ರಕರಣ ಎದುರಿಸುತ್ತಿರುವ ಮೊದಲ ಪ್ರಧಾನಿ ಎಂದೆನಿಸಿದ್ದಾರೆ.ನ್ಯಾಯಧೀಶರಲ್ಲೊಬ್ಬರು ನೆತನ್ಯಾಹು ಅವರಿಗೆ ಕಟಕಟೆಯೊಳಗೆ ಕುಳಿತುಕೊಳ್ಳುವ ಇಲ್ಲವೇ ನಿಲ್ಲಲು ಅವಕಾಶವಿರುವುದಾಗಿ ತಿಳಿಸಿದರು. ನೆತನ್ಯಾಹು ಪದೇಪದೇ ವಿಚಾರಣೆಯಿಂದ ತಪ್ಪಿಸಿಕೊಳ್ಳುತ್ತಿದ್ದರು. ವಂಚನೆ, ಭ್ರಷ್ಟಾಚಾರ ಮತ್ತು ನಂಬಿಕೆ ದ್ರೋಹ ಆರೋಪಗಳಿಗೆ ಸಂಬಂಧಿಸಿದಂತೆ ಅವರ ವಿರುದ್ದ ಮೂರು ಪ್ರತ್ಯೇಕ ಪ್ರಕರಣಗಳು ದಾಖಲಾಗಿದೆ.

    ಇದನ್ನೂ ಓದಿ:ದಂಡ ತಪ್ಪಿಸಿಕೊಳ್ಳಲು ವಾಹನ ಸವಾರರ ಹೊಸ ಪ್ಲಾನ್: ಸ್ಪೂನ್ ಅಸ್ತ್ರ ! 

    ಇದು ಅಲ್ಲದೆ ತನ್ನ ಹಾಗೂ ಕುಟುಂಬವನ್ನು ಓಲೈಸುವಂತೆ ವರದಿಗಳನ್ನು ಪ್ರಕಟಿಸುವುದಕ್ಕೆ ಪ್ರತಿಫಲವಾಗಿ ಮಾಧ್ಯಮ ಮಾಲಕರಿಗೆ ಅನುಕೂಲಕರವಾಗುವಂತಹ ಕಾನೂನು, ನಿಯಮಗಳನ್ನು ಜಾರಿಗೊಳಿಸಿದ ಆರೋಪವನ್ನು ಕೂಡಾ ಅವರು ಎದುರಿಸುತ್ತಿದ್ದಾರೆ.

    ರಾಜಕೀಯ ಲಾಭ ಮಾಡಿಕೊಟ್ಟಿರುವುದಕ್ಕೆ ಪ್ರತಿಯಾಗಿ ಶ್ರೀಮಂತರಿಂದ ಬೆಲೆಬಾಳುವ ವಸ್ತುಗಳನ್ನು ಪಡೆದಿರುವ ಪ್ರಕರಣದಲ್ಲಿ ನೆತನ್ಯಾಹು ಮತ್ತು ಅವರ ಪತ್ನಿ ಸಾರಾ ಆರೋಪಿಗಳಾಗಿದ್ದಾರೆ.

    2020 ಮೇ ನಲ್ಲಿ ಆರಂಭವಾಗಿದ್ದ ವಿಚಾರಣೆಯು ಪದೇ ಪದೇ ಮುಂದೂಡಲ್ಪಟ್ಟಿತ್ತು. ಮೇಲ್ಮನವಿ ಪ್ರಕ್ರಿಯೆಯ ಕಾರಣದಿಂದ ವಿಚಾರಣೆ ವಿಳಂಬವಾಗಿತ್ತು. ಗಾಜಾ ಮತ್ತು ಲೆಬೆನಾನ್ ಜೊತೆಗಿನ ಯುದ್ದದ ಕಾರಣಕ್ಕೆ ವಿಚಾರಣೆ ಎದುರಿಸಲು ಸಾಧ್ಯವಾಗುತ್ತಿಲ್ಲ ಎಂದು ನೆತಾನ್ಯಾಹು ಹಲವಾರು ಬಾರಿ ಮನವಿ ಮಾಡಿದ್ದರು.

    ಈ ಬಗ್ಗೆ ಮಾತನಾಡಿರುವ ನೆತನ್ಯಾಹು ‘ಈ ದಿನಕ್ಕಾಗಿ ನಾನು ಎಂಟು ವರ್ಷಗಳಿಂದ ಕಾಯುತ್ತಿದ್ದೆ. ನನ್ನ ವಿರುದ್ದದ ಆಧಾರರಹಿತ ಮತ್ತು ಸುಳ್ಳು ಆರೋಪಗಳಿಗೆ ಉತ್ತರ ನೀಡಲು ಮತ್ತು ಸತ್ಯವನ್ನು ಹೇಳಲು ಕಾತರನಾಗಿದ್ದೆ’ ಎಂದು ಹೇಳಿದ್ದಾರೆ.

    Continue Reading

    DAKSHINA KANNADA

    ತುಳುವರ ಬದುಕು, ಸಂಸ್ಕೃತಿ, ಸಂಘರ್ಷದ ಕಥಾನಕದ ದಸ್ಕತ್‌ ಚಲನಚಿತ್ರ ತೆರೆಗೆ !!

    Published

    on

    ಉಡುಪಿ: ಮಾಜಿ ಸಚಿವ ಕೃಷ್ಣ ಜೆ ಪಾಲೇಮಾರ್ ಅರ್ಪಿಸುವ ತುಳು ಚಲನಚಿತ್ರ ‘ದಸ್ಕತ್’ ಡಿಸೆಂಬರ್ 13ರಂದು ಉಡುಪಿ ಮತ್ತು ದಕ್ಷಿಣ ಕನ್ನಡ ಜಿಲ್ಲೆಗಳ ಚಿತ್ರಮಂದಿರಗಳಲ್ಲಿ ಬಿಡುಗಡೆಗೊಳ್ಳಲಿದೆ ಎಂದು ಚಿತ್ರದ ನಿರ್ದೇಶಕ ಕಾಮಿಡಿ ಕಿಲಾಡಿಗಳು ಖ್ಯಾತಿಯ ಅನೀಶ್ ಪೂಜಾರಿ ವೇಣೂರು ತಿಳಿಸಿದ್ದಾರೆ.

    ಉಡುಪಿ ನಗರದಲ್ಲಿ ಸುದ್ದಿಗಾರರ ಜೊತೆ ಮಾತನಾಡಿದ ಅವರು ತುಳುವರ ಬದುಕು, ಸಂಸ್ಕೃತಿ, ಸಂಘರ್ಷದ ಕಥಾನಕವನ್ನು ಚಿತ್ರಿಸುವ ‘ದಸ್ಕತ್’ ನೈಜ ಘಟನೆಯನ್ನಾಧರಿಸಿದ ಚಿತ್ರವಾಗಿದ್ದು, ಬೆಳ್ತಂಗಡಿ ತಾಲೂಕಿನ ವೇಣೂರು, ನಾರಾವಿ, ಅಂಡಿಂಜೆ, ಕೊಕ್ರಾಡಿ ಮುಂತಾದ ಪ್ರದೇಶಗಳಲ್ಲಿ ಚಿತ್ರಿತವಾಗಿದೆ ಎಂದು ಚಿತ್ರಕಥೆಯನ್ನು ಬರೆದಿರುವ ಅನೀಶ್ ಪೂಜಾರಿ ತಿಳಿಸಿದರು. ರಾಘವೇಂದ್ರ ಕುಡ್ವ ಚಿತ್ರದ ನಿರ್ಮಾಪಕರಾಗಿದ್ದು, ಸಂತೋಷ್ ಆಚಾರ್ಯ ಗುಂಪಲಾಜಿ ಅವರ ಛಾಯಾಗ್ರಹಣವಿದೆ. ಸಮರ್ಥನ ಎಸ್.ರಾವ್ ಚಿತ್ರದ ಸಂಗೀತ ನಿರ್ದೇಶಕರಾಗಿದ್ದಾರೆ.

    ಚಿತ್ರದ ತಾರಾಗಣದಲ್ಲಿ ದೀಕ್ಷಿತ್ ಕೆ.ಅಂಡಿಂಜೆ, ನೀರಜ್ ಕುಂಜರ್ಪ, ಮೋಹನ್ ಶೇಣಿ, ಮಿಥುನ್ ರಾಜ್, ಭವ್ಯ ಪೂಜಾರಿ, ಚಂದ್ರಹಾಸ ಉಲ್ಲಾಳ್, ನವೀನ್ ಬೋಂದೇಲ್, ಯೋಗೀಶ್ ಶೆಟ್ಟಿ ಚೇತನ್ ಪೀಲಾರ್, ತಿಮ್ಮಪ್ಪ ಕುಲಾಲ್ ಮುಂತಾದವರು ನಟಿಸಿದ್ದಾರೆ ಎಂದರು. ಡಿ.13ರಂದು ಉಡುಪಿ, ಮಂಗಳೂರು, ಪುತ್ತೂರು, ಕಾರ್ಕಳ, ಬೆಳ್ತಂಗಡಿಗಳ ಸುಮಾರು 15 ಸಿಂಗಲ್ ಥಿಯೇಟರ್ ಹಾಗೂ ಮಲ್ಟಿಫ್ಲೆಕ್ಸ್ ಗಳಲ್ಲಿ ಚಿತ್ರ ಬಿಡುಗಡೆಯಾಗಲಿದೆ ಎಂದರು. ಪತ್ರಿಕಾಗೋಷ್ಠಿಯಲ್ಲಿ ನಟ ಅರ್ಜುನ್ ಕಾಪಿಕಾಡ್, ಚಿತ್ರ ವಿತರಕ ಸಚಿನ್ ಉಪ್ಪಿನಂಗಡಿ, ನಿರ್ಮಾಫಕ ರಾಘವೇಂದ್ರ ಪುತ್ರ ರಾಹುಲ್ ಕುಡ್ವ, ನಟ ದೀಕ್ಷಿತ್‌ , ನಟಿ ಭವ್ಯಾ ಪೂಜಾರಿ, ಕಾರ್ಯಕಾರಿ ನಿರ್ಮಾಪಕ ಪ್ರಜ್ಞೇಶ್‌ ಶೆಟ್ಟಿ ಮೊದಲಾದವರಿದ್ದರು.

    Continue Reading

    LATEST NEWS

    Trending