ಉಡುಪಿಯಲ್ಲಿ ಮತ್ತೆ ಕೈ ಹಿಡಿಯುತ್ತಾರ ಮಾಜಿ ಸಚಿವ ಪ್ರಮೋದ್ ಮಧ್ವರಾಜ್..!!?
ಉಡುಪಿ : ಮಾಜಿ ಸಚಿವ , ರಾಜಕೀಯ ನೇತಾರ ಪ್ರಮೋದ್ ಮಧ್ವರಾಜ್ ಅವರು ಮರಳಿ ಕಾಂಗ್ರೆಸ್ ಪಕ್ಷ ಸೇರುವುದು ಖಚಿತವಾಗಿದೆ. ಬಲ್ಲ ಮೂಲಗಳ ಪ್ರಕಾರ ಶೀಘ್ರದಲ್ಲೇ ಅವರು ಮರಳಿ ಕಾಂಗ್ರೆಸ್ ಪಕ್ಷ ಸೇರ್ಪಡೆಗೊಳ್ಳಲಿದ್ದಾರೆ ಎಂದು ತಿಳಿದು ಬಂದಿದೆ.
ಈ ಬಗ್ಗೆ ಈಗಾಗಲೇ ಕೆಪಿಸಿಸಿ ಅಧ್ಯಕ್ಷರಾದ ಡಿ.ಕೆ. ಶಿವಕುಮಾರ್ ಅವರನ್ನು ಬೆಂಗಳೂರಿನಲ್ಲಿ ಭೇಟಿ ಮಾಡಿ ಚರ್ಚಿಸಿದ್ದಾರೆ ಎನ್ನಲಾಗಿದೆ.
ಕಳೆದ ಲೋಕ ಸಭಾ ಚುನಾವಣೆಯ ಸಂದರ್ಭ ಪ್ರಮೋದ್ ಮಧ್ವರಾಜ್ ಅವರು ಕಾಂಗ್ರೆಸ್ ತೊರೆದು ಜೆ ಡಿಎಸ್ ಪಕ್ಷ ಸೇರಿ ಜೆಡಿಎಸ್- ಕಾಂಗ್ರೆಸ್ ಮೈತ್ರಿ ಅಭ್ಯರ್ಥಿಯಾಗಿ ಲೋಕಸಭಾ ಚುನಾವಣೆಗೆ ಉಡುಪಿಯಿಂದ ಬಿಜೆಪಿ ಅಭ್ಯರ್ಥಿ ಶೋಭಾ ಕರಂದ್ಲಾಜೆ ವಿರುದ್ದ ಸ್ಪರ್ಧಿಸಿ ಸೋತಿದ್ದರು.
ಆ ಬಳಿಕ ಅವರು ಸಕ್ರೀಯ ರಾಜಕೀಯದಿಂದ ದೂರ ಉಳಿದು ತಟಸ್ಥರಾಗಿದ್ದರು.
ಆದರೆ ಇತ್ತೀಚಿನ ದಿನಗಳಲ್ಲಿ ಉಡುಪಿ ಜಿಲ್ಲೆಯಲ್ಲಿ ಮುಖಂಡರುಗಳ ಅಂತರಿಕ ಕಲಹದಿಂದ ಮತ್ತು ಸಮರ್ಥ ನಾಯಕರ ಕೊರತೆಯಿಂದ ಕಾಂಗ್ರೆಸ್ ಪಕ್ಷ ತೀವ್ರ ಹಿನ್ನಡೆ ಅನುಭವಿಸಿದ್ದು, ಕಾಂಗ್ರೆಸ್ ನ ನೈಜ ಕಾರ್ಯಕರ್ತರಿಗೆ ಭಾರಿ ಬೇಸರ ಉಂಟುಮಾಡಿತ್ತು.
ಈ ಬಗ್ಗೆ ಆಡಿಯೋ ಒಂದು ಕೂಡ ವೈರಲ್ ಆಗಿತ್ತು. ಈ ಹಿನ್ನೆಲೆಯಲ್ಲಿ ಮತ್ತೆ ಕಾಂಗ್ರೆಸ್ ಪಕ್ಷ ಸೇರಿ ಪಕ್ಷವನ್ನು ಪುನರ್ ಸಂಘಟಿಸಿ ಕಟ್ಟ ಬೇಕೆಂದು ಪ್ರಮೋದ್ ಮಧ್ವರಾಜ್ ಅಭಿಮಾನಗಳ ಮಳದಾಳ ಮಾತಾಗಿದ್ದು ಈ ಹಿನ್ನೆಲೆಯಲ್ಲಿ ಮತ್ತೆ ಪಕ್ಷಕ್ಕೆ ಬಂದು ಕೈ ಬಲಪಡಿಸಬೇಕೆಂದು ಕಾರ್ಯಕರ್ತರ ಆಗ್ರಹವಾಗಿದೆ.
ಮೊನ್ನೆ ಅಕ್ಟೋಬರ್ 17 ರಂದು ಪ್ರಮೋದ್ ಮಧ್ವರಾಜ್ ಅವರ ಹುಟ್ಟು ಹಬ್ಬದ ಆಚರಣೆಯನ್ನು ಪ್ರಮೋದ್ ಮಧ್ವರಾಜ್ ಅಭಿಮಾನಿ ಬಳಗವು ಮಣಿಪಾಲದ ಕೆ.ಎಮ್.ಸಿ ಆಸ್ಪತ್ರೆಯ ಬ್ಲಡ್ ಬ್ಯಾಂಕಿನಲ್ಲಿ ಅಭಿಮಾನಿಗಳು ರಕ್ತದಾನವನ್ನು ಮಾಡುವುದರ ಮೂಲಕ ನೆರವೇರಿಸಿದ್ದಾರೆ.
ಈ ಹಿನ್ನೆಲೆಯಲ್ಲಿ ಪ್ರಮೋದ್ ಮಧ್ವರಾಜ್ ಅವರು ಮತ್ತೆ ಕೈ ಹಿಡಿಯುವ ಸ್ಪಷ್ಟ ಲಕ್ಷಣಗಳು ಗೋಚರಿಸುತ್ತಿದ್ದು ಮುಂದಿನ ದಿನಗಳಲ್ಲಿ ಕೃಷ್ಣ ನಗರಿಯಲ್ಲಿ ಕಾಂಗ್ರೆಸ್ ಯಾವ ರೀತಿ ಸಂಘಟಿತವಾಗಿ ಮುಂದಡಿ ಇಡುತ್ತೆ ಕಾದು ನೋಡಬೇಕಿದೆ…