DAKSHINA KANNADA
ವಿದ್ಯುತ್ ಚಿತಾಗಾರಕ್ಕೆ ನೀಲಿನಕ್ಷೆ ಸಿದ್ಧ: ಮಾಜಿ ಸಚಿವ ಯು.ಟಿ ಖಾದರ್ ಸ್ಥಳ ಪರಿಶೀಲನೆ..!
ಮಂಗಳೂರು: ಮಂಗಳೂರು ಹೊರವಲಯದ ಉಳ್ಳಾಲ ಚೆಂಬುಗುಡ್ಡೆ ಹಿಂದೂ ರುದ್ರಭೂಮಿಯಲ್ಲಿ ಇನ್ಫೋಸಿಸ್ ಸಂಸ್ಥೆ ಸಹಕಾರದೊಂದಿಗೆ ನಿರ್ಮಾಣವಾಗಲಿರುವ ವಿದ್ಯುತ್ ಚಿತಾಗಾರದ ನೀಲಿನಕ್ಷೆ ತಯಾರಾಗಿದೆ.
ಸ್ಥಳೀಯರ ಆದ್ಯತೆ ಮೇರೆಗೆ ಅವರಿಗೆ ಸಹಕಾರ ಆಗುವಂಥ ಸ್ಥಳದಲ್ಲಿ ಚಿತಾಗಾರ ನಿರ್ಮಾಣವಾಗಲಿದೆ ಎಂದು ಶಾಸಕ ಯು.ಟಿ ಖಾದರ್ ಹೇಳಿದ್ದಾರೆ.
ಚೆಂಬುಗುಡ್ಡೆ ಹಿಂದೂ ರುದ್ರಭೂಮಿಗೆ ಜಿಲ್ಲಾಡಳಿತ ಅನುಮತಿ ನೀಡಿರುವ ವಿದ್ಯುತ್ ಚಿತಾಗಾರ ನಿರ್ಮಿಸುವ ಸ್ಥಳದ ಪರಿಶೀಲನೆ ನಡೆಸಿ ಅವರು ಮಾತನಾಡಿದರು.
ಚೆಂಬುಗುಡ್ಡೆಯ ಹಿಂದೂ ರುದ್ರಭೂಮಿ ಸಮಿತಿ ಕುಡಿಯುವ ನೀರಿನ ಯೋಜನೆಯ ಟ್ಯಾಂಕ್ ನಿರ್ಮಾಣಕ್ಕಾಗಿ ಹೆಚ್ಚಿನ ಸಹಕಾರ ನೀಡಿದೆ.
ಅಲ್ಲಿನ ಅಧ್ಯಕ್ಷರು ಹಾಗೂ ಸರ್ವಸದಸ್ಯರು ವಿದ್ಯುತ್ ಚಿತಾಗಾರ ನಿರ್ಮಾಣಕ್ಕೆ ಸಲ್ಲಿಸಿದ್ದ ಮನವಿಯಂತೆ ಸ್ಥಳಕ್ಕೆ ಜಿಲ್ಲಾಧಿಕಾರಿಯನ್ನು ಕರೆಸಿ ಮಾತುಕತೆ ನಡೆಸಲಾಗಿತ್ತು.
ಇದೀಗ ಕೋವಿಡ್ ಸ್ಥಿತಿ ಉಲ್ಬಣಗೊಳ್ಳುತ್ತಿದ್ದಂತೆ ಜಿಲ್ಲಾಧಿಕಾರಿ ಇನ್ಫೋಸಿಸ್ ಸಂಸ್ಥೆಯವರ ಸಹಕಾರದ ಜೊತೆಗೆ ವಿದ್ಯುತ್ ಚಿತಾಗಾರ ನಿರ್ಮಿಸಲು ಅನುಮತಿ ನೀಡಿದ್ದಾರೆ.
ಸ್ಥಳೀಯರ ಬೇಕಾದ ಸ್ಥಳದಲ್ಲಿ ಚಿತಾಗಾರ ನಿರ್ಮಿಸಲು ಅಧಿಕಾರಿಯೊಂದಿಗೆ ಮಾತುಕತೆ ನಡೆಸುವುದಾಗಿ ತಿಳಿಸಿದರು. ಚಿತಾಗಾರ ನಿರ್ಮಿಸುವ ನಿಗದಿತ ಸ್ಥಳದಲ್ಲಿ ದೈವಸ್ಥಾನ, ನಾಗಬನ ಹಾಗೂ ಶಾಲೆ ಇರುವುದರಿಂದ ಸ್ಮಶಾನದ ಸಮೀಪದ ಸ್ಥಳದಲ್ಲೇ ಚಿತಾಗಾರ ನಿರ್ಮಿಸುವಂತೆ ಸಮಿತಿಯವರು ಮನವಿ ಮಾಡಿದರು.
ಅಲ್ಲದೆ ಅಧಿಕಾರಿಗಳು ಬೇರೆ ಸ್ಥಳದಲ್ಲಿ ನಿರ್ಮಿಸಲು ಅನುದಾನದ ಕೊರತೆ ಎದುರಾಗುವ ಸಾಧ್ಯತೆ ಇರುವುದನ್ನು ತಿಳಿಸಿರುವುದಾಗಿ ಶಾಸಕರಲ್ಲಿ ಹೇಳಿದರು.
ಇದಕ್ಕೆ ಪ್ರತಿಕ್ರಿಯಿಸಿ ಗ್ರಾಮಸ್ಥರನ್ನು ಒಟ್ಟು ಸೇರಿಸಿ, ಪ್ಲ್ಯಾನ್ ರಚಿಸುವ ಕುರಿತು ಸೂಚಿಸಿದ ಶಾಸಕರು ಗ್ರಾಮಸ್ಥರು ತೋರಿಸುವ ಸ್ಥಳದಲ್ಲಿ ಚಿತಾಗಾರ ನಿರ್ಮಿಸುವ ಕುರಿತು ಪ್ಲ್ಯಾನ್ ರಚಿಸುವಂತೆ ದೂರವಾಣಿ ಮೂಲಕ ತಿಳಿಸಿದರು.
ಈ ಸಂದರ್ಭ ತಾ.ಪಂ ಅಧ್ಯಕ್ಷ ಮಹಮ್ಮದ್ ಮೋನು ಮಲಾರ್, ಉಳ್ಳಾಲ ಪುರಸಭೆ ಮಾಜಿ ಅಧ್ಯಕ್ಷ ಬಾಝಿಲ್ ಡಿಸೋಜ, ನಗರಸಭೆ ಸದಸ್ಯ ಶಶಿಕಲಾ, ಗುತ್ತಿಗೆದಾರ ಸುರೇಶ್ ಭಟ್ನಗರ ಸ್ಥಳೀಯರಾದ ಶೇಖರ್, ರೋಷನ್ ಹಾಗೂ ಪ್ರವೀಣ್ ಉಪಸ್ಥಿತರಿದ್ದರು.
BANTWAL
ಮತ ಚಲಾಯಿಸಿದ ನವ ದಂಪತಿ…! ಶುಭ ಹಾರೈಸಿದ ಸ್ನೇಹಿತರು..!
ಮಂಗಳೂರು : ಇಂದು ಹೊಸ ಬಾಳಿಗೆ ಕಾಲಿಡುತ್ತಿದ್ದ ಆ ಜೋಡಿಗಳು ಹೊಸ ಬಾಳಿನ ಚಿಂತನೆಯ ಜೊತೆಗೆ ದೇಶದ ಚಿಂತನೆಯನ್ನೂ ಮಾಡಿದ್ದಾರೆ. ಮದುವೆಯ ಸಮಾರಂಭದಲ್ಲಿ ಹಸಮಣೆ ಏರಿ ಪತಿ ಪತ್ನಿಯರಾಗಿ ಒಂದಾದ ಜೋಡಿ ಎಲ್ಲಾ ಸಂಪ್ರದಾಯಗಳು ಪೂರ್ಣಗೊಂಡ ತಕ್ಷಣ ಮದುವೆ ಮನೆಯಿಂದ ಹೊರ ನಡೆದಿದ್ದಾರೆ. ಮದುವೆ ಮನೆಯಿಂದ ಬಂದವರೇ ನೇರವಾಗಿ ಮತಗಟ್ಟೆಗೆ ಹೋಗಿ ತಮ್ಮ ಹಕ್ಕನ್ನು ಚಲಾಯಿಸಿದ್ದಾರೆ.
ಹೌದು ಇದು ನಡೆದಿರುವುದು ಬಂಟ್ವಾಳ ತಾಲೂಕಿನ ಅಜ್ಜಿಬೆಟ್ಟು ಗ್ರಾಮದ ಬೂತ್ ಸಂಖ್ಯೆ 16 ರಲ್ಲಿ . ಇವರ ಮದುವೆ ನಿಗದಿಯಾದ ದಿನಂದಂತೆ ಪ್ರಜಾಪ್ರಭುತ್ವದ ಹಬ್ಬವಾಗಿರೋ ಚುನಾವಣೆ ದಿನಾಂಕ ಕೂಡಾ ಘೋಷಣೆ ಆಗಿದೆ. ಒಂದು ಕಡೆ ಹಸೆಮಣೆ ಏರಿ ತಮ್ಮ ಸ್ವಂತ ಭವಿಷ್ಯ ಕಟ್ಟಿಕೊಳ್ಳುವ ಜೊತೆಗೆ ದೇಶದ ಭವಿಷ್ಯವನ್ನೂ ಕಟ್ಟಲು ತಮ್ಮ ಅಮೂಲ್ಯ ಮತವನ್ನು ಚಲಾಯಿಸಿ ಮಾದರಿಯಾಗಿದ್ದಾರೆ. ಬಂಟ್ವಾಳ ತಾಲೂಕಿನ ಮಲ್ಲೆರ್ಮಳಕೋಡಿ ಜಯರಾಮ ಕುಲಾಲ್ ಎಂಬ ವರ ವದುವಿವೊಂದಿಗೆ ಬಂದು ತನ್ನ ಮತ ಚಲಾಯಿಸಿದ್ದಾರೆ. ಇವರಿಬ್ಬರ ಈ ಕಾಳಜಿಗೆ ಜನರು ಹಾಗೂ ಮತಗಟ್ಟೆ ಅಧಿಕಾರಿಗಳು ಶುಭ ಹಾರೈಸಿದ್ದಾರೆ. ಇದೇ ವೇಳೆ ಜಯರಾಮ್ ಕುಲಾಲ್ ಅವರ ಸ್ನೇಹಿತರು ಹಿತೈಷಿಗಳು ಕೂಡಾ ಶುಭ ಹಾರೈಸಿದ್ದಾರೆ.
DAKSHINA KANNADA
ಮತದಾನ ಮಾಡುವ ಫೋಟೊ ಕ್ಲಿಕ್ಕಿಸಿ ಶೇರ್ ಮಾಡಿದ ಯುವಕ; ಎಫ್ ಐ ಆರ್ ದಾಖಲಿಸಿದ ಚುನಾವಣಾ ಆಯೋಗ
ಪುತ್ತೂರು : ಮತಗಟ್ಟೆಯೊಳಗೆ ಮೊಬೈಲ್ ಗೆ ನಿರ್ಬಂಧ ವಿಧಿಸಿದರೂ ಕಾನೂನು ಉಲ್ಲಂಘನೆಯಾಗಿರುವ ಘಟನೆ ಪುತ್ತೂರಿನ ಮತಗಟ್ಟೆಯೊಂದರಲ್ಲಿ ನಡೆದಿದೆ. ಮತದಾನ ಮಾಡುವ ಫೋಟೊ ಕ್ಲಿಕ್ಕಿಸಿ ಗ್ರೂಪ್ ಗೆ ಶೇರ್ ಮಾಡಿದ ಯುವಕನ ವಿರುದ್ಧ ಆಕ್ರೋಶ ಕೇಳಿ ಬಂದಿತ್ತು.
ಪುತ್ತೂರಿನ ಕೋಟಿ-ಚೆನ್ನಯ ಕಂಬಳ ಗ್ರೂಪ್ ಗೆ ಮತದಾನ ಮಾಡುವ ಫೋಟೊವನ್ನು ರಂಜಿತ್ ಬಂಗೇರ ಎಂಬ ಯುವಕ ಶೇರ್ ಮಾಡಿರುವ ಬಗ್ಗೆ ತಿಳಿದು ಬಂದಿದೆ.
ಇದನ್ನೂ ಓದಿ : ಚುನಾವಣಾ ಕರ್ತವ್ಯದಲ್ಲಿದ್ದ ಶಿಕ್ಷಕಿ ಕುಸಿದು ಬಿದ್ದು ಸಾ*ವು
ಕಾಂಗ್ರೆಸ್ ಅಭ್ಯರ್ಥಿಗೆ ಮತ ಹಾಕುವ ಫೋಟೊವನ್ನು ರಂಜಿತ್ ಬಂಗೇರ ಎಂಬ ಯುವಕ ತೆಗೆದಿದ್ದಾನೆ. ಇದೀಗ ಈ ಘಟನೆಗೆ ಸಂಬಂಧಿಸಿದಂತೆ ಚುನಾವಣಾ ಆಯೋಗದಿಂದ ಎಫ್ ಐ ಆರ್ ದಾಖಲಾಗಿದೆ ಎಂದು ದಕ್ಷಿಣ ಕನ್ನಡ ಜಿಲ್ಲಾಧಿಕಾರಿ / ಜಿಲ್ಲಾ ಚುನಾವಣಾಧಿಕಾರಿ ಮುಲೈ ಮುಗಿಲನ್ ಮಾಹಿತಿ ನೀಡಿದ್ದಾರೆ.
DAKSHINA KANNADA
ಬೈಕ್-ಕಾರು ನಡುವೆ ಅಪ*ಘಾತ; ಓರ್ವ ಮೃ*ತ್ಯು
ಅರಂತೋಡು: ಬೈಕ್ ಹಾಗೂ ಕಾರಿನ ನಡುವೆ ಸಂಭವಿಸಿದ ಭೀಕರ ರಸ್ತೆ ಅಪ*ಘಾತದಲ್ಲಿ ಬೈಕ್ನ ಹಿಂಬದಿ ಸವಾರ ಮೃ*ತಪಟ್ಟ ಘಟನೆ ಸಂಪಾಜೆ ಕಲ್ಲುಗುಂಡಿ ಸಮೀಪ ದೊಡ್ಡಡ್ಕ ಎಂಬಲ್ಲಿ ಗುರುವಾರ ತಡರಾತ್ರಿ ಸಂಭವಿಸಿದೆ.
ಮತದಾನ ಮಾಡಲು ಊರಿಗೆ ಬರುತ್ತಿದ್ದರು ಎಂದು ಹೇಳಲಾಗುತ್ತಿದ್ದು ಡಿ*ಕ್ಕಿಯ ರಭಸಕ್ಕೆ ಬೈಕ್ನ ಹಿಂಬದಿ ಸವಾರನಿಗೆ ಗಂಭೀರ ಗಾಯಗೊಂಡು ಮೃ*ತಪಟ್ಟರೆ ಇನ್ನೋರ್ವನಿಗೆ ಗಾಯವಾಗಿದ್ದು ಆತನನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.
ಮೃ*ತರ ವಿವರ ಇನ್ನಷ್ಟೇ ತಿಳಿದುಬರಬೇಕಾಗಿದೆ.
- FILM5 days ago
ಸುದೀಪ್ ಮಗಳು ನಾಯಕಿಯಾಗಿ ಎಂಟ್ರಿ… ಸ್ಮೈಲ್ ಗುರು ರಕ್ಷಿತ್ಗೆ ಜೋಡಿಯಾದ ಜೆರುಶಾ
- FILM5 days ago
‘ಬಘೀರ’ ಸಿನೆಮಾ ಶೂಟಿಂಗ್ ವೇಳೆ ಅವಘಡ.. ರೋರಿಂಗ್ ಸ್ಟಾರ್ ಆಸ್ಪತ್ರೆ ದಾಖಲು
- FILM6 days ago
ವಿಚ್ಛೇದನದ ಸುದ್ದಿಗೆ ಉತ್ತರ ಕೊಟ್ಟ ಐಶ್ – ಅಭಿ ಆ್ಯನಿವರ್ಸರಿ ಫೋಟೋ!
- chikkamagaluru5 days ago
ಎಟಿಎಂ ಮೆಷಿನ್ಗೆ ಬೆಂಕಿ ಅವಘಡ..! ಸುಟ್ಟು ಕರಕಲಾದ ಲಕ್ಷಾಂತರ ರೂಪಾಯಿ..!!