DAKSHINA KANNADA
ಸೆಕ್ಷನ್ ಬಗ್ಗೆ ಜನರಿಗೆ ಸರಿಯಾದ ಮಾಹಿತಿ ನೀಡಲು ಜಿಲ್ಲಾಧಿಕಾರಿಯವರಿಗೆ ಮಾಜಿ ಶಾಸಕ ಲೋಬೊ ಮನವಿ..!
Published
4 years agoon
By
Adminಮಂಗಳೂರು: ದ.ಕ. ಜಿಲ್ಲೆಯಾದ್ಯಂತ ಸೆಕ್ಷನ್ 144(3) ಜಾರಿ ಮಾಡಿದ ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ. ವಿ. ಯವರನ್ನು ಮಂಗಳೂರು ಧರ್ಮಪ್ರಾಂತ್ಯದ ಬಿಷಪ್ ರವರ ಪ್ರತಿನಿಧಿಗಳ ಜೊತೆಗೆ ಭೇಟಿ ಮಾಡಿದ ಮಂಗಳೂರು ದಕ್ಷಿಣ ಕ್ಷೇತ್ರದ ಮಾಜಿ ಶಾಸಕ ಜೆ. ಆರ್. ಲೋಬೊ ರವರು ಜನತೆ ಸೆಕ್ಷನ್ ಜಾರಿ ಕುರಿತಂತೆ ಗೊಂದಲಕ್ಕೀಡಾಗಿದ್ದಾರೆ ಈ ಕುರಿತ ಸರಿಯಾದ ಮಾಹಿತಿ ನೀಡುವಂತೆ ಮನವಿ ಮಾಡಿದ್ದಾರೆ. ಮುಂಬರುವ ಏಪ್ರಿಲ್ ತಿಂಗಳಲ್ಲಿ ಗುಡ್ ಫ್ರೈಡೆ, ಈಸ್ಟರ್ ಸಹಿತ ಅನೇಕ ಹಬ್ಬಗಳು ಮತ್ತು ಧಾರ್ಮಿಕ ಕಾರ್ಯಕ್ರಮಗಳು ಇರುವುದರಿಂದ ಸರಕಾರದ ಕೋವಿಡ್ ನಿಯಮಗಳನ್ನು ಪಾಲಿಸಿ, ಧಾರ್ಮಿಕ ಕೇಂದ್ರದ ಒಳಗೆ ಹಬ್ಬ, ಸಭೆಗಳನ್ನು ಆಚರಿಸಲು ಅನುಮತಿ ನೀಡಲು ಮನವಿ ಮಾಡಿರುತ್ತಾರೆ. 144(3)ಸೆಕ್ಷನ್ ಹಾಕಿರುವುದರಿಂದ ಜನರಲ್ಲಿ ತೀವ್ರ ಆತಂಕ ಶುರುವಾಗಿದೆ. ಜನರು ಗೊಂದಲಕ್ಕೀಡಾಗಿದ್ದಾರೆ. ಆದ್ದರಿಂದ ಜಿಲ್ಲಾಧಿಕಾರಿಯವರು ಜನರಿಗೆ ಸರಿಯಾದ ಮಾಹಿತಿ ನೀಡಿ, ಧಾರ್ಮಿಕ ಹಾಗೂ ಇನ್ನಿತರ ಕಾರ್ಯಕ್ರಮಗಳಿಗೆ ತೊಂದರೆ ಆಗದಂತೆ, ಅದರೊಂದಿಗೆ ಸರಕಾರದ ಕೋವಿಡ್ ನಿಯಮಗಳನ್ನು ಪಾಲಿಸುವಂತೆ ಅನುಮತಿ ನೀಡುವಂತೆ ಮನವಿಯನ್ನು ಮಾಡಿರುತ್ತಾರೆ.
ಅದಕ್ಕೆ ಜಿಲ್ಲಾಧಿಕಾರಿಯವರು ಸಕಾರಾತ್ಮಕವಾಗಿ ಸ್ಪಂದಿಸಿ, ಜನರಿಗೆ ಸೆಕ್ಷನ್ ಬಗ್ಗೆ ಮತ್ತು ಹಬ್ಬಗಳನ್ನು ಆಚರಿಸಲು ಕೋವಿಡ್ ನಿಯಮಗಳನ್ನು ಪಾಲಿಸುವ ಜತೆಗೆ ಸರಿಯಾದ ಮಾಹಿತಿ ನೀಡಲು ಬಯಸುವುದಾಗಿ ತಿಳಿಸಿದ್ದಾರೆ..
DAKSHINA KANNADA
ಮಂಗಳೂರು : ಮತ್ತೆ ಡ್ರಗ್ ಸೀಜ್; ಎಂಡಿಎಂಎ ಮಾರಾಟ ಮಾಡುತ್ತಿದ್ದ ಮೂವರ ಬಂಧನ
Published
6 minutes agoon
27/11/2024ಮಂಗಳೂರು: ನಗರವನ್ನು ಡ್ರಗ್ ಮುಕ್ತ ನಗರ ಮಾಡುವ ನಿಟ್ಟಿನಲ್ಲಿ ಪೊಲೀಸ್ ಕಾರ್ಯಾಚರಣೆ ಆರಂಭವಾಗಿ ವರ್ಷಗಳ ಕಳೆದಿದೆ. ಮಾದಕ ವ್ಯಸನ ಹಾಗೂ ಮಾರಾಟದ ವಿಚಾರವಾಗಿ ಹಲವಾರು ಜನಜಾಗೃತಿ ಕಾರ್ಯಕ್ರಮಗಳನ್ನು ಇಲಾಖೆಯಿಂದ ಮಾಡಲಾಗಿದೆ. ಆದ್ರೆ ಈ ಡ್ರಗ್ ಜಾಲವನ್ನು ಬುಡ ಸಮೇತ ಕಿತ್ತು ಹಾಕಲು ಪೊಲೀಸ್ ಇಲಾಖೆಯಿಂದ ಸಾದ್ಯವಾಗುತ್ತಿಲ್ಲ.
ಮಂಗಳೂರಿನಲ್ಲಿ ಮಾದಕ ವಸ್ತುವಿಗೆ ಡಿಮ್ಯಾಂಡ್ ಇರುವ ಹಿನ್ನೆಲೆಯಲ್ಲಿ ಡ್ರಗ್ ಮಾಫಿಯಾ ದಿನಕ್ಕೊಂದು ಹೊಸ ತಂತ್ರದ ಮೂಲಕ ಡ್ರಗ್ಸ್ ಮಂಗಳೂರಿಗೆ ತಲುಪಿಸುತ್ತಿದೆ. ಹಾಗಂತ ಪೊಲೀಸರು ಇಂತಹ ಆಸಾಮಿಗಳನ್ನು ಹಿಡಿದು ಜೈಲಿಗಟ್ಟುವುದು ಕೂಡಾ ನಿಂತಿಲ್ಲ. ಇದೀಗ ಪಜೀರು ಗ್ರಾಮದ ಕಂಬಳ ಪದವು ಎಂಬಲ್ಲಿ ಮತ್ತೆ ಮೂವರು ಡ್ರಗ್ ಸೆಲ್ಲರ್‌ಗಳನ್ನು ಪೊಲೀಸರು ಬಂಧಿಸಿದ್ದಾರೆ. ಆರೋಪಿಗಳಿಂದ ಸುಮಾರು ಒಂದುವರೆ ಲಕ್ಷ ಮೌಲ್ಯದ ಎಂಡಿಎಂಎ ಡ್ರಗ್ ವಶಕ್ಕೆ ಪಡೆದುಕೊಂಡಿದ್ದಾರೆ. ಆರೋಪಿಗಳು ತಲಪಾಡಿಯ ಗೌತಮ್, ಕುಂಪಲದ ಕಾರ್ತಿಕ್ ಹಾಗೂ ತೊಕ್ಕೊಟ್ಟಿನ ನಿಖಿಲ್ ಎಂದು ಗುರುತಿಸಲಾಗಿದೆ.
DAKSHINA KANNADA
ಲೇಡಿಗೋಶನ್ ಆಸ್ಪತ್ರೆಯಲ್ಲಿ ಮಗು ಮಾರಾಟವಾಗಿಲ್ಲ; ಅಧೀಕ್ಷಕರಿಂದ ಸ್ಪಷ್ಟನೆ
Published
45 minutes agoon
27/11/2024ಮಂಗಳೂರು: ಮಂಗಳೂರಿನ ಸರಕಾರಿ ಲೇಡಿಗೋಶನ್ ಆಸ್ಪತ್ರೆಯಲ್ಲಿ ತನ್ನ ಮಗು ಮಾರಾಟವಾಗಿದೆ ಎಂದು ಭವ್ಯಾ ಎಂಬಾಕೆ ಸಾಮಾಜಿಕ ಜಾಲತಾಣದಲ್ಲಿ ಹರಡುತ್ತಿರುವ ಸುದ್ದಿ ಸತ್ಯಕ್ಕೆ ದೂರವಾಗಿರುವುದು. ಆಕೆಯ ಈ ಆರೋಪವು ಸಂಪೂರ್ಣ ನಿರಾಧಾರವಾಗಿದೆ ಎಂದು ಸರಕಾರಿ ಲೇಡಿಗೋಷನ್ ಆಸ್ಪತ್ರೆಯ ವೈದ್ಯಕೀಯ ಅಧೀಕ್ಷಕರು ಸ್ಪಷ್ಟಪಡಿಸಿದ್ದಾರೆ.
ಆಗಸ್ಟ್ 18ರಂದು ಬೆಳಗ್ಗೆ 9.58ಕ್ಕೆ ಸರಕಾರಿ ಲೇಡಿಗೋಷನ್ ಆಸ್ಪತ್ರೆಯಲ್ಲಿ ಭವ್ಯಾ ಹೆಣ್ಣು ಮಗುವಿಗೆ ಜನ್ಮ ನೀಡಿದ್ದರು. ಬಳಿಕ ಮಗುವಿಗೆ ಒಂದು ಕಣ್ಣು ಗುಡ್ಡೆ ಇಲ್ಲದಿರುವುದನ್ನು ತಜ್ಞರು ಆಕೆಗೆ ತಿಳಿಸಿದ ಸಂದರ್ಭ ಆ ಶಿಶು ತನ್ನದಲ್ಲವೆಂದು ಆಕೆ ನಿರಾಕರಿಸಿದ್ದರು. ತನ್ನ ಮಗುವನ್ನು ಆಸ್ಪತ್ರೆಯ ಸಿಬ್ಬಂದಿ ಅದಲು ಬದಲು ಮಾಡಿದ್ದಾರೆ ಎಂದು ಸುಳ್ಳು ಆರೋಪವನ್ನು ಹೊರಿಸಿದ್ದರು. ಈ ವಿಚಾರದಲ್ಲಿ ಪೊಲೀಸ್ ತನಿಖೆ ನಡೆದು ನ್ಯಾಯಾಧೀಶರ ಉಪಸ್ಥಿತಿಯಲ್ಲಿ ಡಿಎನ್‌ಎ ಪರೀಕ್ಷೆ ಮಾಡುವ ಸಲುವಾಗಿ ಪ್ರಕ್ರಿಯೆಯನ್ನು ನಡೆಸಲಾಗಿದೆ.
ಡಿಎನ್‌ಎ ಪರೀಕ್ಷೆಯ ವರದಿಯನ್ನು ನೇರವಾಗಿ ತನಿಖಾಧಿಕಾರಿಗಳ ಮೂಲಕ ನ್ಯಾಯಾಲಯಕ್ಕೆ ಸಂಬಂಧಿತರು ನೀಡಿದ್ದರು. ಈ ಮಧ್ಯೆ ಭವ್ಯಾ ಅವರ ಮಗು ದ.ಕ.ಜಿಲ್ಲಾ ಮಕ್ಕಳ ರಕ್ಷಣಾ ಘಟಕದ ಸುಪರ್ದಿಯಲ್ಲಿದೆ. ಇತ್ತೀಚಿನ ಎರಡು ದಿನಗಳಲ್ಲಿ ಭವ್ಯಾ ತನ್ನ ಶಿಶುವನ್ನು ಸರಕಾರಿ ಲೇಡಿಗೋಶನ್ ಆಸ್ಪತ್ರೆಯ ಸಿಬ್ಬಂದಿ ಮಾರಾಟ ಮಾಡಿರುತ್ತಾರೆ ಎಂದು ಮಾನಹಾನಿಕರ ಹೇಳಿಕೆಯನ್ನು ಸಾಮಾಜಿಕ ಮಾಧ್ಯಮದಲ್ಲಿ ಬಿತ್ತರಿಸುತ್ತಾ, ಸಮಾಜದಲ್ಲಿ ಗೊಂದಲದ ವಾತಾವರಣವನ್ನು ಸೃಷ್ಟಿ ಮಾಡುತ್ತಿದ್ದಾರೆ. ಅಲ್ಲದೆ ಹೆರಿಗೆ ಮತ್ತು ಸ್ತ್ರೀರೋಗ ಸಂಬಂಧ ವಿಚಾರದಲ್ಲಿ ಅತ್ಯುತ್ತಮ ಸೇವೆಯನ್ನು ಸಲ್ಲಿಸುತ್ತಾ ಬಂದಿರುವ ಸರಕಾರಿ ಸ್ವಾಮ್ಯದ ಸರಕಾರಿ ಲೇಡಿಗೋಶನ್ ಆಸ್ಪತ್ರೆಗೆ ಕಳಂಕವನ್ನು ತರುವ ವಿಚಾರಗಳು ಖೇದಕರ. ಈ ಪ್ರಕರಣವು ನ್ಯಾಯಾಲಯದ ಪರಾಮರ್ಶೆಯ ಹಂತದಲ್ಲಿರುವ ಕಾರಣ ನ್ಯಾಯಾಲಯದ ತೀರ್ಪನ್ನು ನಿರೀಕ್ಷಿಸುತ್ತಿದ್ದೇವೆ ಎಂದು ಅಧೀಕ್ಷಕರು ಪ್ರಕಟನೆಯಲ್ಲಿ ತಿಳಿಸಿದ್ದಾರೆ.
ದಿಡುಪೆ: ಮಿತ್ತಬಾಗಿಲು ನೆಲ್ಲಿಗುಡ್ಡೆ ನಿವಾಸಿ ರಿಶಿ (17) ಸಾ*ವನ್ನಪ್ಪಿರುವ ಘಟನೆ 26 ರಂದು ಮಂಗಳವಾರ (ನ.26) ನಡೆದಿದೆ.
ರಾಜೇಶ್ ಅರುಣಾ ದಂಪತಿ ಮಗಳಾದ ರಿಶಿ ಕಳೆದ ವಾರ 20 ರಂದು ಮನೆಯಲ್ಲಿ ಆ*ತ್ಮಹತ್ಯೆಗೆ ಯತ್ನಿಸಿದ್ದು ಬಳಿಕ ಮಂಗಳೂರು ಖಾಸಗಿ ಆಸ್ಪತ್ರೆಗೆ ದಾಖಲಾಗಿಸಲಾಗಿತ್ತು.
ಇದನ್ನೂ ಓದಿ : ರಜೆಗೆ ಎಂದು ಊರಿಗೆ ಬಂದಿದ್ದ ಯೋಧ ಕೆರೆಗೆ ಹಾರಿ ಆತ್ಮಹತ್ಯೆ!
ಚಿಕಿತ್ಸೆ ಫಲಕಾರಿಯಾಗದೆ ನ. 26 ರಂದು ನಿ*ಧನ ಹೊಂದಿದ್ದಾರೆ. ಆ*ತ್ಮಹತ್ಯೆಗೆ ಸೂಕ್ತ ಕಾರಣವೇನೆಂದು ತಿಳಿದು ಬಾರದ ಹಿನ್ನಲೆ, ಬೆಳ್ತಂಗಡಿ ಪೊಲೀಸರು ಪ್ರಕರಣ ದಾಖಲಿಸಿ ತನಿಖೆ ನಡೆಸುತ್ತಿದ್ದಾರೆ.
LATEST NEWS
ಮೂರು ಪೂರಿಗಳನ್ನು ಒಟ್ಟಿಗೆ ತಿಂದು 6ನೇ ತರಗತಿ ವಿದ್ಯಾರ್ಥಿ ಸಾವು !
ಮದುವೆ ಮಂಟಪದಿಂದ ಫೋಟೊಗ್ರಾಫರ್ ಕಿಡ್ನ್ಯಾಪ್ ಪ್ರಕರಣ – 8 ಜನರ ಬಂಧನ
ಉಡುಪಿ: ಕಾಲಿವುಡ್ ಸ್ಟಾರ್ ನಟ ಸೂರ್ಯ ದಂಪತಿ ಕೊಲ್ಲೂರಿನ ಮೂಕಾಂಬಿಕಾ ದೇವಾಲಯಕ್ಕೆ ಭೇಟಿ
ಇಂದಿನಿಂದ ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ಲಕ್ಷದೀಪೋತ್ಸವ ಸಂಭ್ರಮ
ಏಲಿಯನ್ಗಳು ನಿಜಕ್ಕೂ ಇದೆಯಾ? ಡಾ.ಸೋಮನಾಥ್ರಿಂದ ಅಚ್ಚರಿಯ ಮಾಹಿತಿ !!
ಆರ್ಬಿಐ ಗವರ್ನರ್ ಶಕ್ತಿಕಾಂತ್ ದಾಸ್ ಆರೋಗ್ಯದಲ್ಲಿ ಏರುಪೇರು- ಆಸ್ಪತ್ರೆಗೆ ದಾಖಲು
Trending
- LATEST NEWS7 days ago
ಪ್ರತಿದಿನ ಈ ಹಣ್ಣನ್ನು ತಿಂದರೆ ತೂಕ ಕಡಿಮೆಯಾಗುತ್ತೆ!
- Baindooru5 days ago
ಯಾವುದೇ ಕಾರಣಕ್ಕೂ ಕೂಡ ಇಂತಹ ಹಣ್ಣುಗಳನ್ನು ಫ್ರಿಡ್ಜ್ ನಲ್ಲಿ ಮಾತ್ರ ಇಡಬೇಡಿ!
- LIFE STYLE AND FASHION6 days ago
ಚಿಕನ್ ಪ್ರಿಯರೇ ಗಮನಿಸಿ; ಕೋಳಿ ಮಾಂಸದ ಈ ಭಾಗವನ್ನು ತಿನ್ನಲೇಬೇಡಿ
- BIG BOSS4 days ago
BBK11: ಕಿಚ್ಚನ ಪಂಚಾಯ್ತಿಯಲ್ಲಿ ರಜತ್ಗೆ ಫುಲ್ ಕ್ಲಾಸ್; ಹೊರ ಹೋಗೋಕೆ ಬಾಗಿಲು ಓಪನ್ ಇದೆ ಎಂದ ಬಾದ್ ಷಾ!