Connect with us

    DAKSHINA KANNADA

    ಕುಡ್ಲ ತುಳುಕೂಟದ ಅಧ್ಯಕ್ಷ ದಾಮೋದರ ನಿಸರ್ಗ ವಿಧಿವಶ

    Published

    on

    ಮಂಗಳೂರು: ಕುಡ್ಲ ತುಳುಕೂಟದ ಅಧ್ಯಕ್ಷರಾಗಿದ್ದ ದಾಮೋದರ ನಿಸರ್ಗ ಅವರು ಇಂದು(ಆ.31) ವಿಧಿವಶರಾದರು. ಕುಡ್ಲ ತುಳುಕೂಟದ ಹಿರಿಯ ಸದಸ್ಯರಾಗಿದ್ದ ಅವರು ಮರೋಳಿಯ ದಾಮೋದರ ನಿಸರ್ಗ ದಾಮೋದರ ಆರ್ ಸುವರ್ಣ ತುಳು ಕೂಟದಲ್ಲಿ ಆರಂಭಿಸಿದ್ದ ಬಿಸು ಪರ್ಬ ಆಚರಣೆಯನ್ನು 2024ರವರೆಗೆ ನಡೆಸಿಕೊಂಡು ಬಂದಿದ್ದಾರೆ. ಅವರ ಸಾರಥ್ಯದಲ್ಲಿ ತುಳುಕೂಟ ಸುವರ್ಣ ಮಹೋತ್ಸವ ಆಚರಣೆ ಮಾಡಲಾಗಿದ್ದು ಈ  ಕಾರ್ಯಕ್ರಮ ವರ್ಷ ಪೂರ್ತಿ ನಡೆದಿತ್ತು.

    ತುಳು ಭಾಷೆಯನ್ನು ಸಂವಿಧಾನದ 8ನೇ ಪರಿಚ್ಚೇದಕ್ಕೆ ಸೇರ್ಪಡೆಗೊಳಿಸಬೇಕೆಂದು ಅವರು ಕುಡ್ಲ ತುಳುಕೂಟದ ವತಿಯಿಂದ ಭಾರೀ ಪ್ರಯತ್ನ ಮಾಡಿದ್ದರು. ಅಖಿಲ ಭಾರತ ತುಳು ಒಕ್ಕೂಟದ ಪದಾಧಿಕಾರಿ ಆಗಿದ್ದ ದಾಮೋದರ ನಿಸರ್ಗ ಇತ್ತೀಚೆಗೆ ಮಂಗಳೂರಿನ ಪುರಭವನದಲ್ಲಿ ಒಕ್ಕೂಟದ ನಡೆಸಿದ ತುಳು ಜನಪದ ಉತ್ಸವದಲ್ಲಿ ಭಾಗವಹಿಸಿದ್ದು ಇದು ಅವರ ಕೊನೆಯ ಕಾರ್ಯಕ್ರಮವಾಗಿತ್ತು.

    ಸದನದಲ್ಲಿ ಮಾತಿನ ಚಕಮಕಿ..!ಕಲಾಪ ನುಂಗಿ ಹಾಕಿದ ಬಸ್ಸಿಗೆ ಕಲ್ಲೆಸತ ಪ್ರಕರಣ

    ಯಕ್ಷಗಾನ ರಂಗದ ಸಾಧಕರಿಗೆ ದಾಮೋದರ ನಿಸರ್ಗ ಅವರ ಪಿತೃಶ್ರೀ ಬೋಳೂರು ದೋಗ್ರ ಪೂಜಾರಿ ಅವರ ಹೆಸರಿನಲ್ಲಿ ಪ್ರತಿ ವರ್ಷ ಪ್ರಶಸ್ತಿ ಪ್ರದಾನ ಮಾಡಿಕೊಂಡು ಬಂದಿದ್ದಾರೆ. ಭಾಗವತ ಪ್ರಸಂಗ ಕರ್ತ ಮಧುಕುಮಾರ್ ನಿಸರ್ಗ ಮತ್ತು ದಿ. ಸಾಹಿತಿ, ಸಿನೆಮಾ ನಿರ್ದೇಶಕ ವಿಶು ಕುಮಾರ್ ಅವರ ಸಹೋದರರಾಗಿದ್ದರು. ಮಂಗಳೂರಿನ ಸಹಕಾರಿ ಬ್ಯಾಂಕುಗಳಲ್ಲಿ ಹೆಸರುವಾಸಿಯಾಗಿರುವ ಗೋಕರ್ಣನಾಥ ಕೋ ಆಪರೇಟಿವ್ ಬ್ಯಾಂಕಿನ ಅಧ್ಯಕ್ಷರಾಗಿ ಸೇವೆ ಸಲ್ಲಿಸಿದ್ದರು. ತುಳು ಭಾಷೆಯ ದೊಡ್ಡ ಅಭಿಮಾನಿ, ಪಡ್ಡಾಯಿಲಚ್ಚಿಲ್ ಕುಟುಂಬದ ಹಿರಿಯರಾಗಿದ್ದರು. ತುಳು ಸಾಹಿತ್ಯ, ಸಂಸ್ಕೃತಿಗೆ ಇವರು ನೀಡಿದ ಕೊಡುಗೆಯನ್ನು ಪರಿಗಣಿಸಿ 2020ರಲ್ಲಿ ನಮ್ಮ ಕುಡ್ಲ ಸುದ್ದಿ ವಾಹಿನಿ ನೀಡುವ ನಮ್ಮ ತುಳುವೆರ್ ಪ್ರಶಸ್ತಿ ದಾಮೋದರ ನಿಸರ್ಗ ಅವರಿಗೆ ಪ್ರದಾನ ಮಾಡಲಾಗಿತ್ತು.

    DAKSHINA KANNADA

    ಬ್ರೇಕ್ ಫೇಲ್ ಆಗಿ ದ್ವಿಚಕ್ರ ವಾಹನಕ್ಕೆ ಲಾರಿ ಡಿ*ಕ್ಕಿ; ಓರ್ವ ಸಾ*ವು

    Published

    on

    ಮಂಗಳೂರು/ಆನೇಕಲ್ ದ್ವಿಚಕ್ರ ವಾಹನಕ್ಕೆ ಲಾರಿ ಡಿ*ಕ್ಕಿ ಹೊಡೆದು, ಸವಾರ ಸ್ಥಳದಲ್ಲಿಯೇ ಮೃ*ತಪಟ್ಟಿರುವ ಘಟನೆ ತಮಿಳುನಾಡು ಗಡಿ ಪ್ರದೇಶವಾದ ಹೊಸೂರು ಸಮೀಪದ ಸೂಳಗಿರಿ ಬಳಿ ನಡೆದಿದೆ. ಆನೇಕಲ್ ತಾಲೂಕಿನ ರಾಚಮಾನಹಳ್ಳಿಯ ನಿವಾಸಿ ಅರ್ಚಕ ಶ್ರೀನಿವಾಸ್ ಮೃ*ತ‌ ದುರ್ದೈವಿ.

    ದೇವಾಲಯದ ಅರ್ಚಕರಾಗಿದ್ದ ಶ್ರೀನಿವಾಸ್, ಪೂಜೆಯ ನಿಮಿತ್ತ ಬೈಕ್‌ ಮೂಲಕ ಆನೇಕಲ್‌ನಿಂದ ಹೋಗುತ್ತಿದ್ದರು. ಈ ವೇಳೆ ತಮಿಳುನಾಡಿನ ಲಾರಿಯೊಂದರ ಬ್ರೇಕ್ ಫೇಲ್ ಆಗಿ ಹೆದ್ದಾರಿಯಿಂದ ಡಿವೈಡರ್ ದಾಟಿಕೊಂಡು ಬಂದು ಸರ್ವಿಸ್ ರಸ್ತೆಯಲ್ಲಿ ಹೋಗುತ್ತಿದ್ದ ಶ್ರೀನಿವಾಸ್ ಅವರ ವಾಹನಕ್ಕೆ ಡಿ*ಕ್ಕಿ ಹೊಡೆದಿದೆ. ಪರಿಣಾಮ ಶ್ರೀನಿವಾಸ್ ಸ್ಥಳದಲ್ಲಿಯೇ ಮೃ*ತಪಟ್ಟರೆ, ರಾಘವೇಂದ್ರ ಎಂಬುವವರಿಗೆ ಗಂಭೀರ ಗಾ*ಯವಾಗಿದೆ.

    ಇದನ್ನೂ ಓದಿ : ಖಾಸಗಿ ಬಾಹ್ಯಾಕಾಶ ನಡಿಗೆ ಯಶಸ್ವಿ; ಸುರಕ್ಷಿತವಾಗಿ ಭೂಮಿಗೆ ಮರಳಿದ ಗಗನಯಾತ್ರಿಗಳು

    ಅಪಘಾ*ತದ ರಭಸಕ್ಕೆ ಬೈಕ್‌ ನಜ್ಜುಗುಜ್ಜಾಗಿದೆ. ಸ್ಥಳಕ್ಕೆ ಸೂಳಗಿರಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮ*ರಣೋತ್ತರ ಪರೀಕ್ಷೆಗಾಗಿ ಮೃ*ತದೇಹವನ್ನು ಸ್ಥಳೀಯ ಆಸ್ಪತ್ರೆಗೆ ರವಾನಿಸಲಾಗಿದೆ.

    Continue Reading

    DAKSHINA KANNADA

    ಬಿಜೆಪಿ ಹೈಕಮಾಂಡಿಂದ ಭರ್ಜರಿ ಗಿಫ್ಟ್ ; ನಳೀನ್ ಕುಮಾರ್ ಕಟೀಲ್ ಸುತ್ತಾಟ ಮತ್ತೆ ಆರಂಭ !

    Published

    on

    ಮಂಗಳೂರು: ಬಿಜೆಪಿ ಮಾಜಿ ರಾಜ್ಯಾಧ್ಯಕ್ಷ, ದ.ಕ ಮಾಜಿ ಸಂಸದ ನಳೀನ್ ಕುಮಾರ್ ಕಟೀಲ್ ಅವರು ಎಂಪಿ ಚುನಾವಣೆಯಲ್ಲಿ ಟಿಕೆಟ್ ಸಿಗದೆ ವಂಚಿತರಾದ ಬಳಿಕ ಅಷ್ಟಾಗಿ ರಾಜಕೀಯ ವಿಚಾರದಲ್ಲಿ ಪ್ರಚಲಿತದಲ್ಲಿರಲಿಲ್ಲ. ಆದರೆ ಇದಿಗ ಕಟೀಲ್ ಮತ್ತೆ ಸುದ್ದಿಯಲ್ಲಿದ್ದಾರೆ.


    ನಳೀನ್ ಕುಮಾರ್‌ಗೆ ಗುಡ್ ನ್ಯೂಸ್;
    ಬಿಜೆಪಿಯು ನಳೀನ್ ಕುಮಾರ್ ಕಟೀಲ್ ಅವರನ್ನು ಒಡಿಶಾ ರಾಜ್ಯದ ಬಿಜೆಪಿ ಸದಸ್ಯತ್ವ ಅಭಿಯಾನದ ಉಸ್ತುವಾರಿಯಾಗಿ ನಿಯೋಜನೆ ಮಾಡಿ ಆದೇಶ ಹೊರಡಿಸಿದೆ. ಅಂದಹಾಗೆ ಒಡಿಶಾದಲ್ಲಿ ಗರಿಷ್ಠ ಸಂಖ್ಯೆಯಲ್ಲಿ ಸದಸ್ಯತ್ವದ ಗುರಿಯನ್ನು ನೀಡಿದ್ದು, ಕೇಂದ್ರ ನಾಯಕತ್ವ ನಳಿನ್ ಕುಮಾ‌ರ್ ಕಟೀಲ್‌ಗೆ ಈ ಜವಾಬ್ದಾರಿ ನೀಡಿದೆ ಎಂದು ಮೂಲಗಳು ತಿಳಿಸಿವೆ.
    ಈ ಹಿನ್ನೆಲೆಯಲ್ಲಿ ನಳಿನ್ ಕುಮಾರ್ ಕಟೀಲ್ ಅವರು ಸೆ.17ರಂದು ಒಡಿಶಾಗೆ ತೆರಳಲಿದ್ದು, ಅಲ್ಲಿ ಒಂದು ವಾರ ಕಾಲ ಸದಸ್ಯತ್ವ ಅಭಿಯಾನದಲ್ಲಿ ತೊಡಗಿಸಿಕೊಳ್ಳಲಿದ್ದಾರೆ ಎಂದು ವರದಿಯಾಗಿದೆ.

     

    Continue Reading

    DAKSHINA KANNADA

    ಮಂಗಳೂರಿನ ಕಾಟಿಪಳ್ಳದಲ್ಲಿ ಮಸೀದಿ ಮೇಲೆ ಕಲ್ಲು ತೂರಾಟ

    Published

    on

    ಸುರತ್ಕಲ್ : ಮಂಗಳೂರು ಹೊರವಲಯದ ಸುರತ್ಕಲ್ ಕಾಟಿಪಳ್ಳ 3ನೆ ಬ್ಲಾಕ್‌ ನಲ್ಲಿರುವ ಬದ್ರಿಯಾ ಜುಮಾ ಮಸೀದಿಗೆ ದು*ಷ್ಕರ್ಮಿಗಳು ಕಲ್ಲು ತೂರಾಟ ನಡೆಸಿದ್ದಾರೆ. ಭಾನುವಾರ(ಸೆ.15) ರಾತ್ರಿ 11ರ ಸುಮಾರಿಗೆ ಈ ಘಟನೆ ನಡೆದಿದೆ.

    ಎರಡು ಬೈಕ್‌ ಗಳಲ್ಲಿ ಬಂದ ನಾಲ್ಕು ಮಂದಿ ದು*ಷ್ಕರ್ಮಿಗಳು ಮಸೀದಿಗೆ ಕಲ್ಲು ತೂರಾಟ ನಡೆಸಿ ಪರಾರಿಯಾಗಿದ್ದಾರೆ. ಮಸೀದಿಯ ಕಿಟಕಿಗಳಿಗೆ ಹಾನಿಯಾಗಿದೆ.

    ಸುರತ್ಕಲ್‌ ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿದ್ದು, ಮಸೀದಿಯ ಸಿಸಿಟಿವಿ ಸೇರಿದಂತೆ ಸಮೀಪದ ಸಿಸಿಟಿವಿ ಫೂಟೇಜ್‌ ವಶಕ್ಕೆ ಪಡೆದುಕೊಂಡು ತನಿಖೆ ನಡೆಸುತ್ತಿದ್ದಾರೆ.

    ಇಂದು(ಸೆ.16) ಈದ್ ಮಿಲಾದ್  ಹಬ್ಬ. ಹಾಗಾಗಿ ಸುರತ್ಕಲ್ ಸೇರಿದಂತೆ ಮಂಗಳೂರು ನಗರದಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ ಮಾಡಲಾಗಿದೆ.

    Continue Reading

    LATEST NEWS

    Trending