Home ಪ್ರಮುಖ ಸುದ್ದಿ ಭವಿಷ್ಯದ ಬಗ್ಗೆ ತುಟಿ ಬಿಚ್ಚಿದ ‘ಕರ್ನಾಟಕದ ಸಿಂಗಂ’ ಅಣ್ಣಾಮಲೈ: ತಮಿಳುನಾಡು ರಾಜಕೀಯಕ್ಕೆ ಎಂಟ್ರಿ..??

ಭವಿಷ್ಯದ ಬಗ್ಗೆ ತುಟಿ ಬಿಚ್ಚಿದ ‘ಕರ್ನಾಟಕದ ಸಿಂಗಂ’ ಅಣ್ಣಾಮಲೈ: ತಮಿಳುನಾಡು ರಾಜಕೀಯಕ್ಕೆ ಎಂಟ್ರಿ..??

ಭವಿಷ್ಯದ ಬಗ್ಗೆ ತುಟಿ ಬಿಚ್ಚಿದ ‘ಕರ್ನಾಟಕದ ಸಿಂಗಂ’ ಅಣ್ಣಾಮಲೈ: ತಮಿಳುನಾಡು ರಾಜಕೀಯಕ್ಕೆ ಎಂಟ್ರಿ..??

ತಮಿಳುನಾಡು: ರಾಜ್ಯ ಪೊಲೀಸ್ ಇಲಾಖೆಯಲ್ಲಿ ಐಪಿಎಸ್ ಅಧಿಕಾರಿಯಾಗಿ ಸೇವೆ ಸಲ್ಲಿಸುತ್ತಿದ್ದಾಗ ಅಪರಾಧಿಗಳಿಗೆ ನಡುಕ ಹುಟ್ಟಿಸಿದ್ದ ಮತ್ತು ‘ಕರ್ನಾಟಕದ ಸಿಂಗಂ’ ಎಂದೇ ಖ್ಯಾತಿವೆತ್ತ ಅಣ್ಣಾಮಲೈ ಮುಂದಿನ ಭವಿಷ್ಯದ ಬಗ್ಗೆ ತುಟಿ ಬಿಚ್ಚಿದ್ದಾರೆ.

ವರ್ಷದ ಹಿಂದೆ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡುವ ಮೂಲಕ ಪೊಲೀಸ್ ಸೇವೆಯಿಂದ ಮುಕ್ತಗೊಂಡಿದ್ದ ಸಿಂಗಂ ಖ್ಯಾತಿಯ ಅಣ್ಣಾಮಲೈ, ಇದೀಗ ತಮಿಳುನಾಡು ರಾಜಕೀಯಕ್ಕೆ ಪ್ರವೇಶ ಮಾಡುತ್ತಿದ್ದಾರೆ.

ಮುಂಬರುವ 2021ರ ತಮಿಳುನಾಡು ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧಿಸುವುದಾಗಿ ಘೋಷಣೆ ಕೂಡ ಮಾಡಿದ್ದಾರೆ.

ತಮ್ಮ ಚುನಾವಣೆ ಸ್ಪರ್ಧೆ ಬಗ್ಗೆ ಅಣ್ಣಾಮಲೈ ನಿನ್ನೆ (ಮೇ 17) ಅಧಿಕೃತವಾಗಿ ಘೋಷಿಸಿದರು. ತಮಿಳುನಾಡಿನ ತನ್ನ ಹುಟ್ಟೂರಿನಲ್ಲೇ ವಾಸ್ಯವ್ಯ ಹೂಡಿ ಮುಂದಿನ ಚುನಾವಣೆಗೆ ಬೇಕಾದ ಅಗತ್ಯ ಕೆಲಸಗಳನ್ನು ಆರಂಭಿಸುವುದಾಗಿ ತಿಳಿಸಿದ್ದಾರೆ.

‘ಮಿಸ್ ಯೂ ಕರ್ನಾಟಕ’ ಎಂದು ಮಾತು ಆರಂಭಿಸಿದ ಅಣ್ಣಾಮಲೈ, ನಾನು ಪೊಲೀಸ್ ಸೇವೆಯಲ್ಲಿದ್ದಾಗ ಕನ್ನಡಿಗರು ಬೆಟ್ಟದಷ್ಟು ಪ್ರೀತಿ ಕೊಟ್ಟರು.

ನಿಮ್ಮ ಪ್ರೀತಿಗೆ ನಾನು ಅಭಾರಿ. ನನಗೆ ಜನರೊಂದಿಗೆ ಇದ್ದು ರಾಜಕೀಯ ಸುಧಾರಣೆ ಮಾಡುವ ಆಲೋಚನೆ ಇದೆ.

ಆದ್ದರಿಂದ ಕರ್ನಾಟಕ ಪೊಲೀಸ್ ಇಲಾಖೆಗೆ ರಾಜೀನಾಮೆ ನೀಡಿ ನನ್ನೂರಿಗೆ ಬಂದಿದ್ದೇನೆ. ಜನರ ಸೇವೆ ಮಾಡಲಿದ್ದೇನೆ ಎಂದು ಹೇಳಿದ್ದಾರೆ.

ಕರ್ನಾಟಕದಲ್ಲಿ 10 ವರ್ಷ ಪೊಲೀಸ್ ಇಲಾಖೆಯಲ್ಲಿ ಸೇವೆ ಸಲ್ಲಿಸಿದ್ದೇನೆ. ಈಗ ಮುಂದಿನ ಆಲೋಚನೆ ಬೇರೆ ಇದೆ.

ಕುಟುಂಬದ ಜೊತೆ ಸಮಯ ಕಳೆಯುವುದು, ತಮಿಳುನಾಡು ರಾಜಕೀಯಕ್ಕೆ ಪ್ರವೇಶ ಮಾಡಬೇಕು, ಜನರ ಸೇವೆ ಮಾಡಬೇಕು, ರಾಜಕೀಯ ವ್ಯವಸ್ಥೆ ಬದಲಾಯಿಸಬೇಕು, ಪೊಲೀಸ್ ಅಧಿಕಾರಿಗಳಿ ಉತ್ತಮ ವಾತಾವರಣ ಕಲ್ಪಿಸಬೇಕು ಎಂದು ಹೇಳಿಕೊಂಡರು.

ಕಳೆದ ವರ್ಷ ಮೇ 28ಕ್ಕೆ ಭಾರತೀಯ ಪೊಲೀಸ್ ಸೇವೆಗೆ ಅಣ್ಣಾಮಲೈ ರಾಜೀನಾಮೆ ನೀಡಿದ್ದರು.

ಪತ್ರ ವ್ಯವಹಾರ ಎಲ್ಲಾ ಪ್ರಕ್ರಿಯೆಗಳಿಗೂ ಕೆಲಕಾಲ ಸಮಯ ತೆಗೆದುಕೊಂಡಿದ್ದ ಸರ್ಕಾರ ಬಳಿಕ ರಾಜೀನಾಮೆ ಅಂಗೀಕಾರ ಮಾಡಿತ್ತು.

- Advertisment -

RECENT NEWS

ಕುಂದಾಪುರದಲ್ಲೇ ಅತಿ ಹೆಚ್ಚು ಕೊರೊನಾ ಸೊಂಕು 

ಕುಂದಾಪುರದಲ್ಲೇ ಅತಿ ಹೆಚ್ಚು ಕೊರೊನಾ ಸೊಂಕು  ಉಡುಪಿ : ಉಡುಪಿ ಜಿಲ್ಲೆಯಲ್ಲಿ ಕೊರೊನಾ ಪೀಡಿತರ ಸಂಖ್ಯೆ ಹೆಚ್ಚುತ್ತಿದ್ದು, ಈ ಹಿನ್ನೆಲೆಯಲ್ಲಿ ಕುಂದಾಪುರದ ತಾಲೂಕು ಆಸ್ಪತ್ರೆಯನ್ನು ಸಂಪೂರ್ಣ ಕೋವಿಡ್ ಆಸ್ಪತ್ರೆಯನ್ನಾಗಿ ಹಾಗೂ ಕೋಟ ಸಮುದಾಯ ಆಸ್ಪತ್ರೆಯನ್ನು ತಾಲೂಕು...

ಮೊದಲ ಮಳೆಗೆ ಪ್ರಾರಂಭವಾದ ಕಡಲಕೊರೆತ

ಮೊದಲ ಮಳೆಗೆ ಪ್ರಾರಂಭವಾದ ಕಡಲಕೊರೆತ ಉಳ್ಳಾಲ: ಕಳೆದೆರಡು ದಿನಗಳಿಂದ ಮುಂಗಾರು ಮಳೆ ತೀವ್ರವಾಗಿ ಕರಾವಳಿ ತೀರದಲ್ಲಿ ಸುರಿಯತೊಡಗಿದ್ದು, ಕಡಲ ತೀರದಲ್ಲೂ ಕಡಲ ಅಬ್ಬರ ಜೋರಾಗಿದೆ. ಪ್ರತೀ ವರ್ಷ ಕಡಲಕೊರೆತ ತೀವ್ರವಾಗಿರುವ ಮಂಗಳೂರು ಕ್ಷೇತ್ರದ ಉಳ್ಳಾಲ...

ದಕ್ಷಿಣ ಅಸ್ಸಾಂನ ಬರಾಕ್ ಕಣಿವೆಯಲ್ಲಿ ಭೂಕುಸಿತ: 20ಕ್ಕೂ ಅಧಿಕ ಮಂದಿ ಜೀವಂತ ಸಮಾಧಿ..

ದಕ್ಷಿಣ ಅಸ್ಸಾಂನ ಬರಾಕ್ ಕಣಿವೆಯಲ್ಲಿ ಭೂಕುಸಿತ: 20ಕ್ಕೂ ಅಧಿಕ ಮಂದಿ ಜೀವಂತ ಸಮಾಧಿ.. ಗುವಾಹಟಿ: ದಕ್ಷಿಣ ಅಸ್ಸಾಂನ ಬರಾಕ್​ ಕಣಿವೆಯಲ್ಲಿ ನಿರಂತರವಾಗಿ ಸುರಿಯುತ್ತಿರುವ ಮಳೆಯಿಂದಾಗಿ ಭೂಕುಸಿತ ಉಂಟಾಗಿದ್ದು, ಮಹಿಳೆಯರು, ಮಕ್ಕಳು ಸೇರಿ 20ಕ್ಕೂ ಹೆಚ್ಚು ಜನ...

ಲಾಕ್ ಡೌನ್ ನಿಯಮ ಗಾಳಿಗೆ ತೂರಿ ಸೈಂಟ್ ಮೇರಿಸ್ ದ್ವೀಪದಲ್ಲಿ ಪಾರ್ಟಿ ಮಾಡಿದವರ ವಿರುದ್ಧ ತನಿಖೆ..

ಲಾಕ್ ಡೌನ್ ನಿಯಮ ಗಾಳಿಗೆ ತೂರಿ ಸೈಂಟ್ ಮೇರಿಸ್ ದ್ವೀಪದಲ್ಲಿ ಪಾರ್ಟಿ ಮಾಡಿದವರ ವಿರುದ್ಧ ತನಿಖೆ.. ಉಡುಪಿ: ಕೋವಿಡ್- 19 ಲಾಕ್ ಡೌನ್ ನಿಯಮ ಉಲ್ಲಂಘಿಸಿ, ಮಲ್ಪೆ ಸೈಂಟ್ ಮೇರಿಸ್ ದ್ವೀಪದಲ್ಲಿ ಮೇ 9ರಂದು...