Connect with us

    ಭೂಗತ ಜಗತ್ತಿನ ಮಾಜಿ ಡಾನ್ ಮುತ್ತಪ್ಪ ರೈ ಸ್ಥಿತಿ ಗಂಭೀರ: ಪುತ್ತೂರಿನಿಂದ ತೆರಳಿದ ಸಂಬಂಧಿಕರು

    Published

    on

    ಭೂಗತ ಜಗತ್ತಿನ ಮಾಜಿ ಡಾನ್ ಮುತ್ತಪ್ಪ ರೈ ಸ್ಥಿತಿ ಗಂಭೀರ: ಪುತ್ತೂರಿನಿಂದ ತೆರಳಿದ ಸಂಬಂಧಿಕರು

    ಬೆಂಗಳೂರು: ಭೂಗತ ಜಗತ್ತಿನ ಮಾಜಿ ಡಾನ್, ಜಯ ಕರ್ನಾಟಕ ಸಂಘಟನೆಯ ಸ್ಥಾಪಕ ಎನ್. ಮುತ್ತಪ್ಪ ರೈ ಅವರ ಆರೋಗ್ಯ ಸ್ಥಿತಿ ಗಂಭೀರವಾಗಿದೆ.

    ಕ್ಯಾನ್ಸರ್ ನಿಂದ ಬಳಲುತ್ತಿರುವ ಮುತ್ತಪ್ಪ ರೈ ಅವರು ಕಳೆದ ತಿಂಗಳು ಬೆಂಗಳೂರಿನ ಮಣಿಪಾಲ ಆಸ್ಪತ್ರೆಗೆ ದಾಖಲಿಸಿ, ಐಸಿಯುವಿನಲ್ಲಿ ಚಿಕಿತ್ಸೆ ಕೊಡಿಸಲಾಗುತ್ತಿತ್ತು.

    ಆರೋಗ್ಯ ಸ್ಥಿತಿ ಗಂಭೀರವಾದ ಹಿನ್ನಲೆ ವೆಂಟಿಲೇಟರ್ ಅಳವಡಿಸಲಾಗಿದೆ. ಇನ್ನು ರೈ ಆರೋಗ್ಯ ಸ್ಥಿತಿ ಗಂಭೀರವಾದ ಹಿನ್ನಲೆ ಪುತ್ತೂರಿನಲ್ಲಿರುವ ಮುತ್ತಪ್ಪ ರೈ ಕುಟುಂಬಸ್ಥರು ಬೆಂಗಳೂರಿಗೆ ತೆರಳಿದ್ದಾರೆ.

    ರೈಯವರು ಕೋಮಾ ಸ್ಥಿತಿಗೆ ಜಾರಿದ್ದಾರೆ ಎಂದು ಆಸ್ಪತ್ರೆ ಮೂಲಗಳು ತಿಳಿಸಿವೆ.

    ಇಂದು ಮುತ್ತಪ್ಪ ರೈ ಅವರ ಆರೋಗ್ಯ ಸ್ಥಿತಿಯ ಬಗ್ಗೆ ಆಸ್ಪತ್ರೆಯಿಂದ ಹೆಲ್ತ್ ಬುಲೆಟಿನ್ ಪ್ರಕಟವಾಗಲಿದೆ ಎಂದು ಬೆಂಗಳೂರು ಪೂರ್ವ ವಲಯ ಡಿಸಿಪಿ ಶರಣಪ್ಪ ಮಾಹಿತಿ ನೀಡಿದ್ದಾರೆ.

    ಜಯಕರ್ನಾಟಕ ಸಂಘಟನೆಯ ಸಂಸ್ಥಾಪಕ ಅಧ್ಯಕ್ಷರೂ, ಕರ್ನಾಟಕ ಅಥ್ಲೆಟಿಕ್ ಅಸೋಸಿಯೇಶನ್ ನ ನಿಕಟಪೂರ್ವ ಅಧ್ಯಕ್ಷರೂ ಆಗಿರುವ ಮಾಜಿ ಭೂಗತ ದೊರೆ, ಉದ್ಯಮಿ ಮುತ್ತಪ್ಪ ರೈಯವರು ಪ್ರಸ್ತುತ ಬೆಂಗಳೂರಿನ ಬಿಡದಿಯಲ್ಲಿ ವಾಸವಿದ್ದರು.

    ಇನ್ನು ಈ ಹಿಂದೆ ಮಾಧ್ಯಮಗಳ ಜೊತೆ ಮಾತನಾಡಿದ್ದ ಮುತ್ತಪ್ಪ ರೈ, ನನಗೆ ಹುಷಾರಿಲ್ಲದಿರುವುದು ನಿಜ. ನನಗೆ ಕ್ಯಾನ್ಸರ್ ಇರುವುದು ನಿಜ. ಮಿರಾಕಲ್ ನಡೆಯುತ್ತಿರುವುದು ನಿಜವಾಗಿದ್ದು, ವಿಲ್ ಪವರ್ ನಿಂದ ಆರೋಗ್ಯವಾಗಿದ್ದೇನೆ.

    ಅಲ್ಲದೇ ಟಿಕೆಟ್ ಯಾವಾಗಲೋ ಕನ್ಫರ್ಮ್ ಆಗಿದ್ದು, ಓಕೆ ಆದ್ಮೇಲೆ ಫ್ಲೈಟ್ ಹತ್ತಬೇಕು ಅಷ್ಟೇ ಎಂದು ತಮ್ಮ ಆರೋಗ್ಯದ ಬಗ್ಗೆ ಆತ್ಮವಿಶ್ವಾಸ ವ್ಯಕ್ತಪಡಿಸಿದ್ದರು.

    ಅಂದಹಾಗೆ ರೈ ಅವರ ಪತ್ನಿ ಮೂರೂವರೆ ವರ್ಷಗಳ ಹಿಂದೆ ಅನಾರೋಗ್ಯದಿಂದ ನಿಧನರಾಗಿದ್ದಾರೆ. ಎರಡನೇ ಪತ್ನಿ ರೈ ಅವರ ಆರೋಗ್ಯದಲ್ಲಿ ಏರುಪೇರಾದ ಬಳಿಕ ಪ್ರತ್ಯೇಕಗೊಂಡಿದ್ದಾರೆ.

    ರೈ ಅವರ ಇಬ್ಬರು ಪುತ್ರರು ಮತ್ತು ಸಹೋದರಿಯರು ಸೇರಿ ಕುಟುಂಬ ವರ್ಗದವರೆಲ್ಲಾ ಸದ್ಯ ಬೆಂಗಳೂರು ಮಣಿಪಾಲ್‌ ಆಸ್ಪತ್ರೆಗೆ ತೆರಳಿದ್ದಾರೆ.

    ಮುತ್ತಪ್ಪ ರೈ ಆರೋಗ್ಯ ಸ್ಥಿತಿ ಗಂಭೀರವಾಗಿರುವ ಬೆನ್ನಲ್ಲೇ ಅವರ ನಿಧನದ ಕುರಿತು ಸುಳ್ಳು ಸುದ್ದಿ, ವದಂತಿಗಳು ಹರಿದಾಡುತ್ತಿದೆ.

    ಬ್ಯಾಂಕ್‌ ಉದ್ಯೋಗಿ ಆಗಿದ್ದ ರೈ, ಬಳಿಕ ರೌಡಿ ಜಗತ್ತಿನ ಸೆಳೆತಕ್ಕೆ ಸಿಲುಕಿ 25 ವರ್ಷಗಳ ಕಾಲ ಭೂಗತ ಜಗತ್ತಿನಲ್ಲಿ ಮುಳುಗಿ ಹೋಗಿದ್ದರು.

    ದುಬೈನಲ್ಲಿ ತಲೆಮರೆಸಿಕೊಂಡಿದ್ದ ಅವರನ್ನು 12 ವರ್ಷಗಳ ಹಿಂದೆ ಬೆಂಗಳೂರು ಪೊಲೀಸರು ಬಂಧಿಸಿ ಕರೆತಂದಿದ್ದರು.

    ಇನ್ನು ಮುತ್ತಪ್ಪ ರೈಯವರ ನಿಜ ಜೀವನ ಚರಿತ್ರೆ ಸಿನಿಮಾ ರೂಪದಲ್ಲಿ ಹೊರಬರಲಿದೆ ಎನ್ನಲಾಗಿತ್ತು. ಇದು ಅದ್ಧೂರಿಯಾಗಿ ಲಾಂಚ್ ಕೂಡ ಆಗಿತ್ತು.

    ಬಾಲಿವುಡ್ ನಟ ವಿವೇಕ್ ಒಬೆರಾಯ್ ಮುತ್ತಪ್ಪ ರೈ ಪಾತ್ರ ವಹಿಸಲಿದ್ದು, ನಿರ್ದೇಶಕ ರಾಮ್ ಗೋಪಾಲ್ ವರ್ಮ ಆಕ್ಷನ್-ಕಟ್ ಹೇಳಲಿದ್ದಾರೆ ಎನ್ನಲಾಗಿತ್ತು. ಆ ಬಳಿಕ ಆ ಸಿನಿಮಾ ಸದ್ದಿಲ್ಲದೆ ಮರೆಗೆ ಸರಿದಿತ್ತು.

    Click to comment

    Leave a Reply

    Your email address will not be published. Required fields are marked *

    LATEST NEWS

    ಅಣ್ಣನ ಪ್ರೀತಿಗೆ ತಮ್ಮ ಬ*ಲಿ; ತಾಯಿಯ ಮುಂದೆಯೇ ಮಗನ ಕೊ*ಲೆ

    Published

    on

    ಮಂಗಳೂರು/ಕಲಬುರಗಿ: ಯುವ ಸಮಾಜದ ಪ್ರೀತಿಗೆ ಮನೆಯಲ್ಲಿ ವಿರೋಧ ಬರುವುದು ಸಹಜ. ಅದರಲ್ಲೂ ಹುಡುಗಿಯ ವಿಚಾರದಲ್ಲಿ ಇದು ಹೆಚ್ಚಾಗಿಯೇ ಕಾಣಬಹುದು. ವಿಪರ್ಯಾಸವೆಂದರೆ ಅಣ್ಣನ ಪ್ರೇಮದ ವಿಚಾರದಲ್ಲಿ ತಮ್ಮ ಬಲಿ*ಯಾದ ಘಟನೆ ನಡೆದಿದೆ.


    ಕಲಬುರಗಿ ನಗರದ ಹೊರವಲಯದಲ್ಲಿರುವ ನಾಗನಹಳ್ಳಿ ಗ್ರಾಮದಲ್ಲಿ ಸುಮಿತ್‌ ಮಲ್ಲಾಬಾದ್ ಎಂಬ 19 ವರ್ಷದ ಯುವಕನನ್ನು ಭೀಕ*ರವಾಗಿ ಕೊ*ಲೆ ಮಾಡಲಾಗಿದೆ. ತಂದೆ-ತಾಯಿಯೊಂದಿಗೆ ಮುಂಬೈನಲ್ಲಿ ವಾಸವಾಗಿದ್ದ ಸುಮಿತ್‌, ಮುಂಬೈನಲ್ಲಿ ಪದವಿ ವಿದ್ಯಾಭ್ಯಾಸ ಮಾಡುತ್ತಿದ್ದ. ಕಳೆದ ವಾರವಷ್ಟೇ ತಾಯಿಯೊಂದಿಗೆ ಕಲಬುರಗಿಗೆ ಆಗಮಿಸಿದ್ದ. ಊರಲ್ಲಿ ಸುಮಿತ್ ಸಹೋದರ ಸಚಿನ್ ಮನೆಯಲ್ಲಿ ವಾಸವಾಗಿದ್ದ. ಸಚಿನ್ ನಾಗನಹಳ್ಳಿ ಗ್ರಾಮದ ತನ್ನದೆ ಏರಿಯಾದ ಯುವತಿಯನ್ನು ಪ್ರೀತಿಸುತ್ತಿದ್ದನಂತೆ. ಈ ವಿಚಾರ ಯುವತಿಯ ಮನೆಯವರಿಗೆ ಗೊತ್ತಾಗಿ ಸಾಕಷ್ಟು ಭಾರಿ ನ್ಯಾಯ ಪಂಚಾಯಿತಿ ಮಾಡಿದ್ದರಂತೆ‌. ಆದರೆ ಅದು ಬಗೆಹರೆದಿರಲಿಲ್ಲ. ನಿನ್ನೆ ಸಂಜೆ (ಸೆ.21) ಸಚಿನ್ ಮನೆಗೆ ಯುವತಿಯ ಸಹೋದರ ಮತ್ತು ಆತನ ಕೆಲ ಸ್ನೇಹಿತರು ಬಂದಿದ್ದಾಗ ಸಚಿನ್ ಮನೆಯಲ್ಲಿರದ ಕಾರಣ ಆತನ ತಾಯಿ ಮತ್ತು ಸಹೋದರನ ಜೊತೆ ಗಲಾಟೆ ತೆಗೆದಿದ್ದಾರೆ. ಬಳಿಕ ಗಲಾಟೆ ವಿಕೋಪಕ್ಕೆ ತೆರಳಿ ಸುಮಿತ್​​ನನ್ನ ಚಾ*ಕುವಿನಿಂದ ಚು*ಚ್ಚಿ ಎಸ್ಕೇಪ್ ಆಗಿದ್ದಾರೆ.
    ಇತ್ತ ಸುಮಿತ್‌ಗೆ ಚಾ*ಕು ಚುಚ್ಚಿ*ದ್ದನ್ನು ಕಂಡ ತಾಯಿ, ಮಗನನ್ನ ಉಳಿಸಿಕೊಳ್ಳಲು ಕಲಬುರಗಿ ನಗರದ ಜಿಮ್ಸ್ ಆಸ್ಪತ್ರೆಗೆ ದಾಖಲಿಸಿದ್ದಾರೆ. ಹನ್ನೆರೆಡು ಗಂಟೆಗಳ ಕಾಲ ನಡೆದ ಚಿಕಿತ್ಸೆ ಫಲಕಾರಿಯಾಗಿದೆ ಇಂದು ಬೆಳಗ್ಗೆ (ಸೆ.22) ಸಾವನ್ನ*ಪ್ಪಿದ್ದಾನೆ.
    ಈ ಸಂಬಂಧ ವಿಶ್ವವಿದ್ಯಾಲಯ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಆರೋಪಿಗಳಿಗಾಗಿ ಹುಡುಕಾಟ ನಡೆಸಿದ್ದಾರೆ. ಅದೇನೆ ಆಗಲಿ ಯುವತಿಯ ವಿಚಾರದಲ್ಲಿ ಏನು ಮಾಡದ ಅಮಾಯಕ ಯುವಕ ಬಲಿಯಾಗಿರೋದು ನಿಜಕ್ಕೂ ದುರಂತವೆ ಸರಿ.

    Continue Reading

    LATEST NEWS

    ತಿರುಪತಿಯಿಂದ ನಂದಿನಿ ತುಪ್ಪಕ್ಕೆ ಹೆಚ್ಚಿದ ಬೇಡಿಕೆ; ತುಪ್ಪ ಸಾಗಿಸುವ ಟ್ಯಾಂಕರ್‌ಗಳಿಗೆ ಜಿಪಿಎಸ್‌ ಅಳವಡಿಕೆ

    Published

    on

    ಆಂಧ್ರಪ್ರದೇಶ/ಮಂಗಳೂರು: ತಿರುಪತಿ ತಿರುಮಲದಲ್ಲಿ ಲಡ್ಡು ವಿವಾದ ಉಂಟಾದ ಬಳಿಕ ಸರಕಾರ ನಂದಿನಿ ತುಪ್ಪಕ್ಕೆ ಬೇಡಿಕೆ ಇಟ್ಟಿದೆ.  ಒಂದು ತಿಂಗಳ ಹಿಂದೆ ಟಿಟಿಡಿ ಕೆಎಂಎಫ್‌ಗೆ ಟೆಂಡರ್ ನೀಡಿದ ನಂತರ ನಂದಿನಿ ತುಪ್ಪ ಪೂರೈಕೆಯನ್ನು ಪುನಃ ಆರಂಭಿಸಲಾಗಿದೆ ಎಂದು ಕೆಎಂಎಫ್ ವ್ಯವಸ್ಥಾಪಕ ನಿರ್ದೇಶಕ ಎಂ ಕೆ ಜಗದೀಶ್ ಹೇಳಿದ್ದಾರೆ.

    ತಿರುಪತಿ ಲಡ್ಡು ವಿವಾದದ ಬಳಿಕ ಕೆಎಮ್‌ಎಫ್‌ ಹೈ ಅಲರ್ಟ್‌:
    “ನಾವು ಒಂದು ತಿಂಗಳ ಹಿಂದೆ ತುಪ್ಪವನ್ನು(ಟಿಟಿಡಿಗೆ) ಸರಬರಾಜು ಮಾಡುತ್ತಿದ್ದೇವೆ. ನಾವು ವಾಹನಗಳಿಗೆ ಜಿಪಿಎಸ್ ಸಿಸ್ಟಮ್ ಮತ್ತು ಜಿಯೋ ಲೊಕೇಶನ್ ಸಾಧನಗಳನ್ನು ಅಳವಡಿಸಿದ್ದೇವೆ. ಇದರಿಂದ ವಾಹನ ಎಲ್ಲಿ ನಿಲ್ಲುತ್ತವೆ ಎಂಬುದನ್ನು ನಾವು ಕಂಡುಹಿಡಿಯಬಹುದು. ಇದು ಎಲ್ಲಿಯೂ ಕಲಬೆರಕೆ ಮಾಡದಂತೆ ನೋಡಿಕೊಳ್ಳಲು ಸಹಾಯಕವಾಗುತ್ತದೆ” ಎಂದು ಜಗದೀಶ್ ತಿಳಿಸಿದ್ದಾರೆ.

    ಕೆಎಂಎಫ್, ಟಿಟಿಡಿಗೆ 350 ಟನ್ ತುಪ್ಪ ಪೂರೈಸುವ ಗುತ್ತಿಗೆ ಪಡೆದುಕೊಂಡಿದೆ. ಅಗತ್ಯ ಬಿದ್ದಾಗ ತುಪ್ಪ ಪೂರೈಕೆ ಮಾಡುತ್ತೇವೆ ಎಂದು ಅವರು ಹೇಳಿದ್ದಾರೆ. ವಿಶ್ವವಿಖ್ಯಾತ ತಿರುಪತಿ ಲಡ್ಡು ತಯಾರಿಕೆಯಲ್ಲಿ ಗುಣಮಟ್ಟವಿಲ್ಲದ ಪದಾರ್ಥಗಳು ಮತ್ತು ಪ್ರಾಣಿಗಳ ಕೊಬ್ಬನ್ನು ಬಳಸಲಾಗುತ್ತಿದೆ ಎಂದು ಸ್ವತಃ ಆಂಧ್ರ ಪ್ರದೇಶ ಮುಖ್ಯಮಂತ್ರಿ ಆರೋಪ ಮಾಡಿದ್ದರು. ಅಲ್ಲದೆ ತಿರುಪತಿ ಲಡ್ಡುವಿನಲ್ಲಿ ದನದ ಕೊಬ್ಬು, ಮೀನಿನ ಎಣ್ಣೆ ಬಳಸಿರುವುದು ಲ್ಯಾಬ್ ವರದಿಯಲ್ಲಿ ದೃಢಪಟ್ಟಿದೆ.

    Continue Reading

    LATEST NEWS

    ಪಂಚೆ ಉಟ್ಟು ದೇಸೀ ಸ್ಟೈಲ್ ಅಡುಗೆ ಮಾಡಿದ ಬ್ರಿಟಿಷ್ ಬಾಣಸಿಗ..! ಫಿದಾ ಆದ ನೆಟ್ಟಿಗರು

    Published

    on

    ಹೆಲ್ಸ್ ಕಿಚನ್ ಹಾಗೂ ಮಾಸ್ಟರ್ ಚೆಫ್ ನಂತಹ ಜನಪ್ರಿಯ ಕಾರ್ಯಕ್ರಮಗಳ ನಿರೂಪಕ ಗಾರ್ಡನ್ ರಾಮ್ಸೆ ಇದೀಗ ತನ್ನ ವೇಷಭೂಷಣದ ಮೂಲಕ ಗಮನ ಸೆಳೆದಿದ್ದಾರೆ. ಬ್ರಿಟಿಷ್ ಸೆಲೆಬ್ರಿಟಿ ಬಾಣಸಿಗ ಗಾರ್ಡನ್ ಜೇಮ್ಸ್ ರಾಮ್ಸೆ ಅವರು ತಮ್ಮ ಡಿಫರೆಂಟ್ ಶೈಲಿಯ ಕುಕಿಂಗ್ ಗಳಿಗೆ ಹೆಸರುವಾಸಿಯಾಗಿದ್ದಾರೆ.

    ಇತ್ತೀಚಿನ ದಿನಗಳಲ್ಲಿ ಹೊಸ ಹೊಸ ಅವತಾರದಲ್ಲಿ ಅಡುಗೆ ಮಾಡುವ ಮೂಲಕ ಸಾಮಾಜಿಕ ಜಾಲತಾಣದಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ. ಇದೀಗ ಸ್ಟೈಲ್‌ಆಗಿ ಪಂಚೆ ತೊಟ್ಟು ದಕ್ಷಿಣ ಕನ್ನಡ ಭಾರತೀಯ ಶೈಲಿಯ ಅಡುಗೆಗಳನ್ನು ಮಾಡಿದ್ದು ಈ ಕುರಿತ ವೀಡಿಯೋವೊಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದೆ.

    ಕಾಶ್ಮೀರದಿಂದ ಕರ್ನಾಟಕಕ್ಕೆ ಬರುತ್ತಿದ್ದ ಸೇನೆಯ ರೈಲನ್ನು ಸ್ಫೋಟಿಸಲು ಯತ್ನ

    ಈ ಕುರಿತ ವಿಡಿಯೋವನ್ನು historyinmemes(ಹಿಸ್ಟೋರಿ ಇನ್‌ ಮೀಮ್ಸ್) ಹೆಸರಿನ ಎಕ್ಸ್ ಖಾತೆಯಲ್ಲಿ ಹಂಚಿಕೊಳ್ಳಲಾಗಿದ್ದು, “ಸ್ಥಳೀಯ ಭಾರತೀಯ ಉಡುಗೆ ತೊಟ್ಟು ಅಡುಗೆ ಮಾಡಿದ ಗಾರ್ಡನ್ ರಾಮ್ಸೆ” ಎಂಬ ಶೀರ್ಷಿಕೆಯನ್ನು ಬರೆದುಕೊಂಡಿದ್ದಾರೆ. ಸೆ.20ರದು ಹಂಚಿಕೊಂಡಿದ್ದ ವೀಡಿಯೋ 12 ಮಿಲಿಯನ್ ವೀಕ್ಷಣೆಗಳನ್ನು ಪಡೆದುಕೊಂಡಿದೆ.

    Continue Reading

    LATEST NEWS

    Trending