Connect with us

    International news

    ಯುಎಸ್ ಮಾಜಿ ಅಧ್ಯಕ್ಷ ಜಿಮ್ಮಿ ಕಾರ್ಟರ್ ನಿಧನ

    Published

    on

    ಮಂಗಳೂರು/ವಾಷಿಂಗ್ಟನ್: ಅಮೆರಿಕಾದ 39ನೇ ಅಧ್ಯಕ್ಷರಾಗಿದ್ದ ಜಿಮ್ಮಿ ಕಾರ್ಟರ್ ನಿಧನರಾಗಿದ್ದಾರೆ. ಅವರಿಗೆ 100 ವರ್ಷ ವಯಸ್ಸಾಗಿತ್ತು.

    ಯುಎಸ್ ಮಾಜಿ ಅಧ್ಯಕ್ಷ ಜಿಮ್ಮಿ ಕಾರ್ಟರ್ ಬ್ರೇನ್ ಕ್ಯಾನ್ಸರ್ ವಿರುದ್ದ ಹೋರಾಡುತ್ತಲೇ ಅಸುನೀಗಿದ್ದಾರೆ. ಜಿಮ್ಮಿ ಕಾರ್ಟರ್ 1977 ರಿಂದ 1985ರವರೆಗೆ ಯುಎಸ್ ನ ಅಧ್ಯಕ್ಷರಾಗಿ ಸೇವೆ ಸಲ್ಲಿಸಿದ್ದರು.

    ಇವರಿಗೆ ನೊಬೆಲ್ ಶಾಂತಿ ಪ್ರಶಸ್ತಿಯೂ ಕೂಡ ಒಲಿದು ಬಂದಿತ್ತು. 2023ರಿಂದಲೂ ಬ್ರೆನ್ ಕ್ಯಾನ್ಸರ್ ನೋವು ತೀವ್ರಗೊಂಡು ಸಾವು ಬದುಕಿನ ನಡುವೆ ಹೋರಾಡುತ್ತಿದ್ದ ಜಿಮ್ಮಿ ಕಾರ್ಟರ್ ತಮ್ಮ ನೂರನೇ ವಯಸ್ಸಿನಲ್ಲಿ ಅಸುನೀಗಿದ್ದಾರೆ.

    ಪೀಚ್ ರಾಜ್ಯದ ಗವರ್ನರ್ ಆಗುವ ಮೂಲಕ ಆರಂಭಗೊಂಡ ಇವರ ರಾಜಕೀಯ ಜೀವನ ಅವರನ್ನು ಯುಎಸ್ ನ ಅಧ್ಯಕ್ಷ ಗಾದಿಗೆ ತಂದು ಕೂರಿಸುವವರೆಗೂ ತಲುಪಿತ್ತು. ರಾಜಕೀಯಕ್ಕೂ ಬರುವ ಮುನ್ನ ಜಿಮ್ಮಿ ಕಾರ್ಟರ್ ಕಡಲೆಕಾಯಿ ಫಾರ್ಮ್ ನಡೆಸುತ್ತಿದ್ದರು.

    ಇದನ್ನೂ ಓದಿ: ಸಹೋದರನ ಮಗಳನ್ನು ರಕ್ಷಿಸಲು ಹೋಗಿ ದುರಂ*ತ; ಸಮುದ್ರದಲ್ಲಿ ಮುಳುಗಿ ವ್ಯಕ್ತಿ ಸಾ*ವು 

    ‘ಇಂದು, ಅಮೆರಿಕಾ ಮತ್ತು ಜಗತ್ತು ಅಸಾಧಾರಣ ನಾಯಕ, ರಾಜಕಾರಣಿ ಮತ್ತು ಮಾನವತಾವಾದಿಯನ್ನು ಕಳೆದುಕೊಂಡಿದೆ’ ಎಂದು ಅಮೆರಿಕಾ ಅಧ್ಯಕ್ಷ ಜೋ ಬೈಡನ್ ಹೇಳಿಕೆಯಲ್ಲಿ ತಿಳಿಸಿದ್ದಾರೆ.
    ಜಾಕ್, ಚಿಪ್, ಜೆಫ್, ಆ್ಯಮಿ ಎಂಬ ನಾಲ್ವರು ಮಕ್ಕಳನ್ನು ಅಗಲಿರುವ ಜಿಮ್ಮಿ ಅವರಿಗೆ 11 ಮಂದಿ ಮೊಮ್ಮಕ್ಕಳು, 14 ಮಂದಿ ಮರಿಮೊಮ್ಮಕ್ಕಳಿದ್ದಾರೆ.

    ಅಧ್ಯಕ್ಷ ಸ್ಥಾನವನ್ನು ತೊರೆದ ಒಂದು ವರ್ಷದ ನಂತರ ಅವರು ‘ಕಾರ್ಟರ್ ಸೆಂಟರ್’ ಎಂಬ ಹೆಸರಿನ ದತ್ತಿಯನ್ನು ಸ್ಥಾಪಿಸಿದರು. ಚುನಾವಣೆಗಳಲ್ಲಿ ಪಾರದರ್ಶಕತೆ ತರುವಲ್ಲಿ ಮಾನವ ಹಕ್ಕುಗಳನ್ನು ಬೆಂಬಲಿಸುವಲ್ಲಿ ಮತ್ತು ಸಾರ್ವಜನಿಕ ಆರೋಗ್ಯ ಸೇವೆಗಳನ್ನು ಬಲಪಡಿಸುವಲ್ಲಿ ಚಾರಿಟಿ ಪ್ರಮುಖ ಪಾತ್ರ ವಹಿಸಿದೆ.

    ಅವರಿಗೆ 2022ರಲ್ಲಿ ನೊಬೆಲ್ ಪ್ರಶಸ್ತಿ ನೀಡಿ ಗೌರವಿಸಲಾಯಿತು. 1982 ರಲ್ಲಿ ಕಾರ್ಟರ್ ಅಟ್ಲಾಂಟಾ, ಜಾರ್ಜಿಯಾದ ಎಮೋರಿ ವಿಶ್ವವಿದ್ಯಾಲಯದಲ್ಲಿ ಕಾರ್ಟರ್ ಸೆಂಟರ್ ಸ್ಥಾಪಿಸಿದರು. ಇದು ಪ್ರಜಾಪ್ರಭುತ್ವ ಮತ್ತು ಮಾನವ ಹಕ್ಕುಗಳ ಮೇಲೆ ಕಾರ್ಯನಿರ್ವಹಿಸುತ್ತದೆ.

    ಭಾರತಕ್ಕೆ ಭೇಟಿ ನೀಡಿದ್ದ ಅಮೆರಿಕಾದ ಮೂರನೇ ಅಧ್ಯಕ್ಷ ಜಿಮ್ಮಿ ಕಾರ್ಟರ್. ಅವರ ಗೌರವಾರ್ಥವಾಗಿ ಹರಿಯಾಣದ ಗ್ರಾಮಕ್ಕೆ ಕಾರ್ಟರ್ ಪುರಿ ಎಂದು ಹೆಸರಿಡಲಾಗಿತ್ತು.

    International news

    ಆಕಾಶದಿಂದ ಬಿತ್ತು 500 ಕೆಜಿ ತೂಕದ ಹೊಳೆಯುವ ರಿಂಗ್..! ಏನಿದು ವಿಚಿತ್ರ..?

    Published

    on

    ಮಂಗಳೂರು/ಕೀನ್ಯಾ :  2025ರಲ್ಲಿ ಭೂಮಿಯ ಮೇಲೆ ಭಾಹ್ಯಾಶದಿಂದ ಉಲ್ಕೆಗಳು ಅಥವಾ ಏಲಿಯನ್ ದಾಳಿ ಆಗಬಹುದು ಅಂತ ಕಾಲಜ್ಞಾನಿ ನಾಸ್ಟ್ರಾಡಾಮಸ್ ಭವಿಷ್ಯ ನುಡಿದಿದ್ದಾನೆ. ಇದಕ್ಕೆ ಪೂರಕ ಎಂಬಂತೆ ಒಂದು ಘಟನೆ ನಡೆದಿದ್ದು, ಆಕಾಶದಿಂದ 500 ಕೆಜಿ ತೂಕದ ಉಂಗುರವೊಂದು ಭೂಮಿಗೆ ಅಪ್ಪಳಿಸಿದೆ. ಹಾಗಂತ ಇದು ಏಲಿಯನ್ ಅಥವಾ ಕ್ಷುದ್ರಗ್ರಹಗಳಿಂದ ಸಿಡಿದ ಉಂಗುರ ಅಲ್ಲ ಅಂತ ವಿಜ್ಞಾನಿಗಳು ಸ್ಪಷ್ಟ ಪಡಿಸಿದ್ದಾರೆ.

    ಈ ಬೃಹದಾಕಾರದ ಉಂಗುರ ಕೀನ್ಯಾ ದೇಶದ ಉತ್ತರದಲ್ಲಿರುವ ಮುಕುನಿ ಕೌಂಟಿಯ ಮುಕುಕು ಗ್ರಾಮದ ಮೇಲೆ ಬಂದು ಬಿದ್ದಿದೆ. ಇದು ಅಂದಾಜು 500 ಕೆ.ಜಿ ಭಾರ ಇರಬಹುದು ಅಂತ ಊಹಿಸಲಾಗಿದ್ದು, ಸದ್ಯಕ್ಕೆ ಈ ಉಂಗುರ ಬಿದ್ದ ಜಾಗವನ್ನು ಕೀನ್ಯಾ ಬಾಹ್ಯಾಕಾಶ ಸಂಸ್ಥೆ(KSA) ತಮ್ಮ ಸ್ವಾಧೀನಕ್ಕೆ ಪಡೆದುಕೊಂಡಿದೆ. ಸುಮಾರು ಎಂಟು ಅಡಿ ವ್ಯಾಸದ ಬೃಹತ್ ಲೋಹದ ಉಂಗುರ ಇದಾಗಿದ್ದು, ಪ್ರಾಥಮಿಕ ಪರೀಕ್ಷೆಯಲ್ಲಿ ಇದು ಭೂಮಿಯಿಂದ ಅಂತರಿಕ್ಷಕ್ಕೆ ಉಡಾವಣೆಯಾದ ಉಡಾವಣಾ ವಾಹನದ ಭಾಗ ಎಂದು ಅಂದಾಜಿಸಲಾಗಿದೆ. ಆಕಾಶಕ್ಕೆ ನೆಗೆಯುವ ಉಡಾವಣಾ ವಾಹನಗಳು ಹಂತ ಹಂತವಾಗಿ ಕಳಚುವ ಸಮಯದಲ್ಲಿ ಬೇರ್ಪಟ್ಟ ಭಾಗ ಎಂದು ವಿಜ್ಞಾನಿಗಳು ಅಂದಾಜಿಸಿದ್ದಾರೆ.

    ಕೀನ್ಯಾದಲ್ಲಿ ಈ ಘಟನೆ ಮೊದಲ ಬಾರಿಗೆ ನಡೆದಿದೆಯಾದ್ರೂ ಕಳೆದ ಕೆಲವು ವರ್ಷಗಳಲ್ಲಿ ಇಂತಹ ಘಟನೆಗಳು ಭೂಮಿಯ ಅಲ್ಲಲ್ಲಿ ನಡಿತಾ ಇದೆ. ಬಾಹ್ಯಾಕಾಶದಲ್ಲಿ ಅಸಂಖ್ಯಾತ ಪ್ರಮಾಣದಲ್ಲಿ ರಾಕೇಟ್‌ ಲಾಂಚರ್ಗಳ ಅವಶೇಷಗಳು ಭೂಮಿಗೆ ಅ*ಪಾಯ ತಂದೊಡ್ಡುತ್ತಿದೆ. ಕಳೆದ ವರ್ಷ ಇಂತಹದೇ ಒಂದು ಘಟನೆ ಫ್ಲೋರಿಡಾದಲ್ಲಿ ನಡೆದಿದ್ದು, ಆಕಾಶದಿಂದ ಬಿದ್ದ ಲೋಹದ ತುಂಡು ಮನೆಯೊಂದಕ್ಕೆ ಹಾನಿ ಮಾಡಿತ್ತು. ಇದಕ್ಕೆ ಮನೆಯವರು ನಾಸಾದ ವಿರುದ್ಧ ಕೇಸು ದಾಖಲಿಸಿದ್ದರು. ಇದಲ್ಲದೆ, 2024 ರ ಫೆಬ್ರವರಿಯಲ್ಲಿ ಯೂರೋಪಿಯನ್ ಬಾಹ್ಯಾಕಾಶ ಸಂಸ್ಥೆಯು ಇಂತಹ ಒಂದು ಬೃಹತ್ ವಸ್ತು ಉತ್ತರ ಪೆಸಿಫಿಕ್ ಮಹಾಸಾಗರದ ಮೇಲೆ ಬಿದ್ದಿರುವುದಾಗಿ ಹೇಳಿತ್ತು.

    ಇದನ್ನೂ ಓದಿ : ಚೀನಾದ ನಿಗೂಢ ವೈರಸ್ ಕುರಿತು ಆರೋಗ್ಯ ಸಂಸ್ಥೆ ಮಾಹಿತಿ !

    ಬಾಹ್ಯಾಕಾಶದಲ್ಲಿ ಲೋ ಅರ್ಥ್ ಆರ್ಬಿಟ್ ( LEO ) ವಿಶ್ವದ ಅತೀ ದೊಡ್ಡ ಕಸದ ಡಂಪ್ ಎಂದು ಪರಿಗಣಿಸಲಾಗಿದೆ. ನಾಸಾ ಪ್ರಕಾರ, ಭೂಮಿಯ ಕಕ್ಷೆಯಲ್ಲಿ ಸುಮಾರು ಆರು ಸಾವಿರ ಟನ್‌ ಇಂತಹ ತ್ಯಾಜ್ಯಗಳು ಸುತ್ತುತ್ತಿವೆ. ಇದು ಸಾಮಾನ್ಯವಾಗಿ ಉಂಟಾಗುವ ಘರ್ಷಣೆಯಿಂದ ಭೂಮಿಗೆ ಅಪ್ಪಳಿಸುತ್ತಿವೆ ಎಂದು ಹೇಳಿದೆ.

    Continue Reading

    International news

    ಚೀನಾದ ನಿಗೂಢ ವೈರಸ್ ಕುರಿತು ಆರೋಗ್ಯ ಸಂಸ್ಥೆ ಮಾಹಿತಿ !

    Published

    on

    ಮಂಗಳೂರು/ಬೀಜಿಂಗ್ : ಚೀನಾದಲ್ಲಿ ಕೊರೊನಾ ವೈರಸ್ ಮಾದರಿಯ ಹೂಮನ್ ಮೆಟಾಪ್ ನ್ಯುಮೋ (HMPV) ಸೋಂಕು ಹರಡಿ ಭಾರೀ ಆತಂಕ ಸೃಷ್ಟಿಸಿದೆ.

    ಈ ಹಿಂದೆ ಚೀನಾದಲ್ಲಿ ಜನ್ಮ ತಾಳಿದ್ದ ಕೊರೊನಾ ವೈರಸ್ ಮಹಾಮಾರಿ ಇಡೀ ಜಗತ್ತನ್ನು ಆವರಿಸಿ, ಲಾಕ್ ಡೌನ್ ಪರಿಸ್ಥಿತಿಗೆ ದೂಡಿತ್ತು. ವೈರಲ್ ಸೋಂಕಿಗೆ ಲೆಕ್ಕವಿಲ್ಲದಷ್ಟು ಜನ ಜೀವವನ್ನು ಕಳೆದುಕೊಂಡರು. ಅಂದು ಜನರನ್ನು ಕಾಡಿದ್ದ ಕೋವಿಡ್ ಈಗ ಐದು ವರ್ಷಗಳ ನಂತರ ಮತ್ತೊಂದು ರೂಪದಲ್ಲಿ ಚೀನಾದಲ್ಲಿ ಪತ್ತೆಯಾಗಿರುವುದು ಸದ್ಯ ಜಗತ್ತನ್ನು ಭಾರೀ ಆತಂಕಕ್ಕೆ ದೂಡಿದೆ.

    ಭಾರತೀಯ ಆರೋಗ್ಯ ಸಂಸ್ಥೆ ಮಾಹಿತಿ
    ಕೋವಿಡ್ ನ ರೀತಿಯಲ್ಲಿ ಪತ್ತೆಯಾಗಿರುವ ಈ ವೈರಸ್ ನ ಹೆಸರು ಹ್ಯೂಮನ್ ಮೆಟಾಪ್ ನ್ಯುಮೋ ವೈರಸ್ (HMPV) ಎಂದು ಹೇಳಲಾಗಿದೆ. ಈ ಖಾಯಿಲೆ ಕೋವಿಡ್ ನಷ್ಟೇ ಮಾರಕ ಎನ್ನಲಾಗಿದ್ದು, ಈಗಾಗಲೇ ಹಲವರು ಜೀವವನ್ನು ಕಳೆದುಕೊಳ್ಳುತ್ತಿದ್ದಾರೆ ಹಾಗೂ ಚೀನಾದ ಆಸ್ಪತ್ರೆಗಳಲ್ಲಿ ಹಾಸಿಗೆಯು ಸಿಗದಷ್ಟು ರೋಗಿಗಳು ಆವರಿಸಿಕೊಂಡಿದ್ದಾರೆ ಎಂದು ಸುದ್ದಿ ಸಂಸ್ಥೆಗಳು ವರದಿ ಮಾಡಿವೆ. ಈ ಕುರಿತು ಭಾರತೀಯ ಆರೋಗ್ಯ ಸಂಸ್ಥೆ ಮಾಹಿತಿ ಹಂಚಿಕೊಂಡಿದ್ದು, ಯಾರೂ ಸಹ ಆತಂಕ, ಭಯ ಪಡುವ ಅಗತ್ಯವಿಲ್ಲ ಎಂದು ತಿಳಿಸಿದೆ.

    ಇದನ್ನೂ ಓದಿ: ಚೀನಾದಲ್ಲಿ ಮತ್ತೆ ವೈರಸ್‌ ಸ್ಫೋಟ; ರೋಗಿಗಳಿಂದ ತುಂಬಿ ತುಳುಕುತ್ತಿವೆ ಆಸ್ಪತ್ರೆಗಳು

    ಈ ಬಗ್ಗೆ ಮಾತನಾಡಿದ ಆರೋಗ್ಯ ಸೇವೆಗಳ ಮಹಾನಿರ್ದೇಶನಾಲಯದ (DGHS) ಡಾ. ಅತುಲ್ ಗೋಯೆಲ್, ‘ಎಚ್ಚರಿಕೆಯ ಅಗತ್ಯವಿಲ್ಲ, ಅಲಾರಂ ಬೇಕಿಲ್ಲ. ಚೀನಾದಲ್ಲಿ HMPV ನಿಗೂಢ ವೈರಸ್ ಶೀತವನ್ನು ಉಂಟುಮಾಡುವ ಇತರೆ ಉಸಿರಾಟದ ವೈರಸ್ ನಂತೆ. ಇದು ಶೀತ-ಕೆಮ್ಮು ರೋಗ ಲಕ್ಷಣಗಳನ್ನು ತೋರಿಸುತ್ತದೆ. ಇದಕ್ಕೆ ತೀರ ಭಯ ಪಡುವ ಅಗತ್ಯವಿಲ್ಲ’ ಎಂದು ತಿಳಿಸಿದ್ದಾರೆ.

    ಕೇಂದ್ರ ಆರೋಗ್ಯ ಸಚಿವಾಲಯದ ಅಡಿಯಲ್ಲಿ ರಾಷ್ಟ್ರೀಯ ರೋಗ ನಿಯಂತ್ರಣ ಕೇಂದ್ರ (NCDC), ಅಂತರಾಷ್ಟ್ರೀಯ ಏಜೆನ್ಸಿಗಳೊಂದಿಗೆ ಸಂಪರ್ಕದಲ್ಲಿದೆ. ನಾವು ಇಲ್ಲಿನ ಪರಿಸ್ಥಿಯನ್ನು ನಿಕಟವಾಗಿ ಮೇಲ್ವಿಚಾರಣೆ ಮಾಡುವುದನ್ನು ಮುಂದುವರಿಸುತ್ತೇವೆ. ಮಾಹಿತಿಯನ್ನು ಆಗಾಗ್ಗೆ ಅಪ್ಡೇಟ್ ಮಾಡುತ್ತಿರುತ್ತೇವೆ ಮತ್ತು ಅದಕ್ಕೆ ಅನುಗುಣವಾಗಿ ನವೀಕರಿಸುತ್ತೇವೆ ಎಂದು ಮಾಹಿತಿ ನೀಡಿದ್ದಾರೆ.

    HMPV ವೈರಸ್ ಲಕ್ಷಣಗಳು ಏನು ?
    ಕೆಮ್ಮು, ಜ್ವರ, ಮೂಗು ಕಟ್ಟುವುದು, ಶೀತ ಈ ವೈರಸ್ ನ ಸಾಮಾನ್ಯ ಲಕ್ಷಣಗಳಾಗಿವೆ. HMPV ವೈರಸ್ ತಡೆಗಟ್ಟಲು ಯಾವುದೇ ಲಸಿಕೆ ಲಭ್ಯವಿಲ್ಲ. ಜನದಟ್ಟಣೆ ಇರುವ ಸ್ಥಳಗಳಲ್ಲಿ ಮಾಸ್ಕ್ ಧರಿಸುವುದು, ಸಾಮಾಜಿಕ ಅಂತರ, ಆಗಾಗ್ಗೆ ಕೈ ತೊಳೆಯುವುದಾಗಿದೆ. ಜೊತೆಗೆ ಸ್ವಚ್ಚತೆಯನ್ನು ಕಾಪಾಡಿಕೊಳ್ಳಬೇಕು. ಆರೋಗ್ಯಕರ ಜೀವನಶೈಲಿಯನ್ನು ಅಳವಡಿಸಿಕೊಳ್ಳುವುದಾಗಿದೆ.

    Continue Reading

    International news

    ಕ್ಯಾಲಿಫೋರ್ನಿಯಾದಲ್ಲಿ ವಿಮಾನ ದುರಂತ !

    Published

    on

    ಮಂಗಳೂರು/ಕ್ಯಾಲಿಫೋರ್ನಿಯಾ : ದಕ್ಷಿಣ ಕ್ಯಾಲಿಫೋರ್ನಿಯಾದಲ್ಲಿನ ವಾಣಿಜ್ಯ ಕಟ್ಟಡವೊಂದಕ್ಕೆ ಲಘು ವಿಮಾನ ಡಿಕ್ಕಿಯಾಗಿದೆ. ಈ ದುರಂತದಲ್ಲಿ ಇಬ್ಬರು ಮೃ*ತಪಟ್ಟು, 18 ಮಂದಿ ಗಾಯಗೊಂಡಿದ್ದಾರೆ.

    ಲಾಸ್ ಏಂಜಲೀಸ್ ನಿಂದ ಆಗ್ನೇಯಕ್ಕೆ ಸುಮಾರು 40 ಕಿ.ಮೀ ದೂರದಲ್ಲಿರುವ ಪುಲ್ಲೆರ್ಟನ್ ಮುನಿಸಿಪಲ್ ವಿಮಾನ ನಿಲ್ದಾಣದ ಸಮೀಪ ಗುರುವಾರ ಮಧ್ಯಾಹ್ನ 2ರ ಸುಮಾರಿಗೆ ವಿಮಾನವು ಕಟ್ಟಡಕ್ಕೆ ಡಿಕ್ಕಿಯಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

    ಇದನ್ನೂ ಓದಿ: ಸೈಬರ್ ಕ್ರೈಮ್ ಅಪರಾಧ; ವಾಟ್ಸಪ್ ಗೆ ಅಗ್ರಸ್ಥಾನ !

    ಪೀಠೋಪಕರಣ ತಯಾರಿಕಾ ಕಂಪನಿಯ ಕಟ್ಟಡಕ್ಕೆ ಭಾರಿ ಹಾನಿಯಾಗಿದೆ. ಕಟ್ಟಡದಲ್ಲಿದ್ದ ಜನರನ್ನು ಸ್ಥಳಾಂತರಿಸಲಾಗಿದೆ ಎಂದು ಪೊಲೀಸರು ಹೇಳಿದ್ದಾರೆ.

    ಅಪಘಾತಕ್ಕೀಡಾದ ವಿಮಾನ ‘Van’s RV-10’ ಎಂದು ತಿಳಿಸಿರುವ ಫೆಡರಲ್ ವಿಮಾನಯಾನ ಅಧಿಕಾರಿಗಳು, ಘಟನೆ ಕುರಿತು ರಾಷ್ಟ್ರೀಯ ಸಾರಿಗೆ ಸುರಕ್ಷತಾ ಮಂಡಳಿಯೊಂದಿಗೆ ತನಿಖೆ ನಡೆಸುವುದಾಗಿ ಹೇಳಿದೆ. ಹತ್ತು ಮಂದಿ ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಎಂಟು ಮಂದಿಗೆ ಸ್ಥಳದಲ್ಲೇ ಚಿಕಿತ್ಸೆ ನೀಡಲಾಗಿದೆ ಎಂದು ಪುಲ್ಲರ್ಟನ್ ಪೊಲೀಸ್ ಇಲಾಖೆ ಮೂಲಗಳು ಮಾಹಿತಿ ನೀಡಿವೆ.

    ವಿಮಾನದಲ್ಲಿ ಎಷ್ಟು ಮಂದಿ ಇದ್ದರು, ಮೃ*ತಪಟ್ಟಿರುವವರು ವಿಮಾನದಲ್ಲಿದ್ದವರೇ ಅಥವಾ ಘಟನಾ ಸ್ಥಳದಲ್ಲಿ ಇದ್ದವರೇ ಎಂಬುದು ಇನ್ನೂ ಸ್ಪಷ್ಟವಾಗಿಲ್ಲ.

    ಕಳೆದ ಭಾನುವಾರ, ದಕ್ಷಿಣ ಕೊರಿಯಾದ ಮುವಾನ್ ಅಂತರಾಷ್ಟ್ರೀಯ ವಿಮಾನದಲ್ಲಿ ಭಾರಿ ದುರಂತ ಸಂಭವಿಸಿತ್ತು. ಥಾಯ್ಲೆಂಡ್ ನ ರಾಜಧಾನಿ ಬ್ಯಾಂಕಾಕ್ ನಿಂದ ಬಂದಿದ್ದ ವಿಮಾನ, ಲ್ಯಾಂಡಿಂಗ್ ವೇಳೆ ರನ್ ವೇನಿಂದ ಜಾರಿ ಕಾಂಕ್ರಿಟ್ ಗೋಡೆಗೆ ಡಿಕ್ಕಿಯಾಗಿತ್ತು. ವಿಮಾನದಲ್ಲಿದ್ದ 181 ಮಂದಿಯ ಪೈಕಿ, 179 ಜನರು ಮೃತಪಟ್ಟಿದ್ದರು.

    Continue Reading

    LATEST NEWS

    Trending