Connect with us

    LATEST NEWS

    ನಿಲ್ಲಿಸಿದ್ದ 17 ಬೈಕ್‌ಗಳಿಗೆ ಡಿಕ್ಕಿ ಹೊಡೆದ ಫಾರ್ಚುನರ್ ಕಾರು..!

    Published

    on

    ಹಾಸನ/ಮಂಗಳೂರು:  ಕಾರೊಂದು ಚಾಲಕನ ನಿಯಂತ್ರಣ ತಪ್ಪಿ  ಪಾರ್ಕ್‌ ಮಾಡಲಾಗಿದ್ದ 17 ಬೈಕ್‌ಗಳಿಗೆ ಗುದ್ದಿರುವ ಘಟನೆ ಅರಸೀಕೆರೆ ತಾಲೂಕಿನ ಬಾಣಾವರ ಹೋಬಳಿ, ಕೆಂಕೆರೆಹಳ್ಳಿ ಗೇಟ್ ಬಳಿ ನಡೆದಿದೆ.

    ಜೋರಾಗಿ ಮಳೆ ಸುರಿಯುತ್ತಿದ್ದರಿಂದ ಬಸ್ ನಿಲ್ದಾಣದ ಬಳಿ ಬೈಕ್‌ಗಳನ್ನು ಸಾಲಾಗಿ ನಿಲ್ಲಿಸಲಾಗಿತ್ತು. ವೇಗವಾಗಿ ಬಂದ ಫಾರ್ಚುನರ್ ಕಾರು ಚಾಲಕನ ನಿಯಂತ್ರಣ ತಪ್ಪಿ ಬಸ್‌ ನಿಲ್ದಾಣದ ಗೋಡೆಗೆ ಬಡಿದು, ಬಳಿಕ ಸಾಲಾಗಿ ನಿಲ್ಲಿಸಿದ್ದ ಬೈಕ್‌ಗಳಿಗೆ ಗುದ್ದಿದೆ. ಘಟನೆಯಿಂದ ಓರ್ವನಿಗೆ ಗಾಯಗಳುಂಟಾಗಿದ್ದು, ಬಸ್‌ ನಿಲ್ದಾಣದ ಬಳಿ ನಿಂತಿದ್ದವರು ಅದೃಷ್ಟವಶಾತ್ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಬೈಕ್‌ಗಳು ರಸ್ತೆಗೆಸಯಲ್ಪಟ್ಟಿದ್ದು ಹಲವು ಬೈಕ್‌ಗಳು ನಜ್ಜುಗುಜ್ಜಾಗಿದೆ.

    ವೈದ್ಯ ವಿದ್ಯಾರ್ಥಿನಿ ಹತ್ಯೆ ಪ್ರಕರಣ..! ಮಂಗಳವಾರ ಸುಪ್ರೀಂ ಕೋರ್ಟ್‌ ವಿಚಾರಣೆ..!

    ಧಾರಾಕಾರ ಸುರಿಯುತ್ತಿದ್ದ ಮಳೆಯಿಂದಾಗಿ ರಸ್ತೆ ಕಾಣದೆ ಫಾರ್ಚುನರ್ ಕಾರು ಬಸ್ ನಿಲ್ದಾಣದ ಗೋಡೆಗೆ ಡಿಕ್ಕಿ ಹೊಡೆದಿದೆ. ಈ ಘಟನೆ ಕುರಿತು ಬಾಣಾವರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

    LATEST NEWS

    ಸಾಹಿತಿ ಹಂಪ ನಾಗರಾಜಯ್ಯ ಅವರಿಂದ ದಸರಾ ಉದ್ಘಾಟನೆ : ಸಿಎಂ ಸಿದ್ಧರಾಮಯ್ಯ

    Published

    on

    ಮೈಸೂರು : ಈ ಬಾರಿಯ ಮೈಸೂರು ದಸರಾವನ್ನು ಹಿರಿಯ ಸಾಹಿತಿ ಹಂಪ ನಾಗರಾಜಯ್ಯ  ಅವರು ಉದ್ಘಾಟಿಸಲಿದ್ದಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ  ಘೋಷಿಸಿದ್ದಾರೆ.

    ವಿಶ್ವ ವಿಖ್ಯಾತ ಮೈಸೂರು ದಸರಾ ಆರಂಭಕ್ಕೆ ದಿನಗಣನೆ ಆರಂಭವಾಗಿದೆ. ಮೈಸೂರು ಅರಮನೆಯಲ್ಲಿ ಭರದ ಸಿದ್ಧತೆ ನಡೆಯುತ್ತಿದೆ. ಈಗಾಗಲೇ ಗಜಪಡೆ ತಾಲೀಮು ಆರಂಭವಾಗಿದೆ. ಅಕ್ಟೋಬರ್​ 3 ರಂದು ಮೈಸೂರು ದಸರಾಕ್ಕೆ ಚಾಲನೆ ಸಿಗಲಿದೆ.

    ಇದನ್ನೂ ಓದಿ : ಮೈಸೂರು ದಸರಾಗೆ ಒಂದು ಲಕ್ಷ ವಿದ್ಯುತ್ ದೀಪಗಳಿಂದ ಅರಮನೆ ಅಲಂಕಾರ

    2024ರ ದಸರಾ ಮಹೋತ್ಸವ ಅಕ್ಟೋಬರ್ 3ರಂದು ಆರಂಭಗೊಂಡು ಅದೇ ತಿಂಗಳ 12 ರಂದು ಸಮಾರೋಪಗೊಳ್ಳಲಿದೆ ಎಂದು ಸರ್ಕಾರ ಈಗಾಗಲೇ ಘೋಷಣೆ ಮಾಡಿದೆ. ಅಕ್ಟೋಬರ್ 3ರಂದು ಚಾಮುಂಡಿ ಬೆಟ್ಟದಲ್ಲಿರುವ ಚಾಮುಂಡೇಶ್ವರಿ ದೇವಸ್ಥಾನದಲ್ಲಿ ಬೆಳಗ್ಗೆ 9.15 ರಿಂದ 9.45ರ ಮುಹೂರ್ತದಲ್ಲಿ ದಸರಾ ಉದ್ಘಾಟನೆಗೊಳ್ಳಲಿದೆ.

    Continue Reading

    LATEST NEWS

    ಮೈಸೂರು ದಸರಾಗೆ ಒಂದು ಲಕ್ಷ ವಿದ್ಯುತ್ ದೀಪಗಳಿಂದ ಅರಮನೆ ಅಲಂಕಾರ

    Published

    on

    ಮೈಸೂರು ಅರಮನೆಯಲ್ಲಿ ದಸರಾ ಸಿದ್ಧತೆಗಳು ಭರದಿಂದ ಸಾಗಿದೆ. ಈ ನಡುವೆ ಅರಮನೆಗೆ ಅಳವಡಿಸಿರುವ 20 ಸಾವಿರ ಬಲ್ಸ್ ಬದಲಾಯಿಸುತ್ತಿದ್ದಾರೆ. ಒಂದು ಲಕ್ಷ ವಿದ್ಯುತ್ ದೀಪಗಳಿಂದ ಅಲಂಕಾರಿಸಲಾಗಿದೆ.

    ಪ್ರತಿ ವರ್ಷ ದಸರಾ ಸಂದರ್ಭದಲ್ಲಿ ಇಲ್ಲಿಗೆ ಅಳವಡಿಸಿರುವ ದೀಪಗಳನ್ನು ಸರಿಪಡಿಸುವ ಕೆಲಸ ಮಾಡಲಾಗುತ್ತೆ. ಅದೇ ರೀತಿ ಈ ಬಾರಿಯು ವಿದ್ಯುತ್ ದೀಪಗಳನ್ನು ಸರಿಪಡಿಸುವ ಕಾರ್ಯವನ್ನು ಮಾಡಲಾಗುತ್ತಿದೆ. ಈ ವರ್ಷ ಸುಮಾರು 15-20 ಸಾವಿರದಷ್ಟು ವಿದ್ಯುತ್ ದೀಪಗಳು ಕೆಟ್ಟು ಹೋಗಿದೆ. ಇಡೀ ಅರಮನೆಯ ಪ್ರಾಂಗಣದಲ್ಲಿ ಬಣ್ಣ ಬಳಿಯಲಾಗುತ್ತಿದೆ.

    ಅದೇ ರೀತಿ ಅರಮನೆ ಆವರಣವನ್ನು ವಿವಿಧ ಹೂಗಳಿಂದ ಅಲಂಕರಿಸಲಾಗುತ್ತಿದೆ. ಸುಮಾರು 15ಕ್ಕೂ ಹೆಚ್ಚು ಜಾತಿಯ 10 ಸಾವಿರಕ್ಕೂ ಹೆಚ್ಚು ಹೂಕುಂಡಗಳಿಂದ ಅಲಂಕರಿಸಲಾಗುತ್ತಿದೆ ಎಂದಿದ್ದಾರೆ.

    Continue Reading

    LATEST NEWS

    ಅಮಾ*ನವೀಯ ಕೃ*ತ್ಯ; ಲೈಂ*ಗಿಕ ಕಿರು*ಕುಳ ನೀಡಿ ಬಾಲಕಿಯ ಹ*ತ್ಯೆ

    Published

    on

    ಮಂಗಳೂರು/ಚಿಕ್ಕಮಗಳೂರು: 5 ವರ್ಷದ ಬಾಲಕಿಯ ಮೇಲೆ ಅತ್ಯಾ*ಚಾರಕ್ಕೆ ಪ್ರಯತ್ನಿಸಿ ಕೊ*ಲೆ ಮಾಡಿರುವ ಘಟನೆ ಚಿಕ್ಕಮಗಳೂರಿನಲ್ಲಿ ನಡೆದಿದೆ. ಜಿಲ್ಲೆಯ ಅಜ್ಜಂಪುರ ಪೊಲೀಸ್ ಠಾಣ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.


    ಜ್ವರವಿದ್ದ ಕಾರಣ ಅಂಗನವಾಡಿಗೆ ಹೋಗದೆ ಮನೆಯಲ್ಲಿ ಬಾಲಕಿಯೊಬ್ಬಳೆ ಇದ್ದ ವಿಚಾರ ತಿಳಿದುಕೊಂಡು ಮನೆಗೆ ನುಗ್ಗಿದ ದುರುಳರು ಅತ್ಯಾ*ಚಾರಕ್ಕೆ ಯತ್ನಿಸಿ ಕೊಲೆ*ಗೈದಿದ್ದಾರೆ. ನಂತರ ಬಾಲಕಿಯ ಮೃತದೇಹವನ್ನು ಬೆಡ್‌ಶೀಟ್‌ನಲ್ಲಿ ಸುತ್ತಿಟ್ಟು ಪರಾರಿಯಾಗಿದ್ದಾರೆ.
    ತಾಯಿ ಜಮೀನು ಕೆಲಸಕ್ಕೆ ಹೋಗಿದ್ದು ಮಗುವೊಂದೇ ಮನೆಯಲ್ಲಿದ್ದ ವೇಳೆ ಮನೆಗೆ ನುಗ್ಗಿದ ಕಾಮುಕ*ರು ಏಕಾಏಕಿ ಮಗು ಮೇಲೆ ಅಮಾ*ನುಷವಾಗಿ ಹಿಂಸೆನೀಡಿ ಕೊ*ಲೆ ಮಾಡಿರುವುದಾಗಿ ವರದಿಯಾಗಿದೆ. ತಾಯಿ ಕೆಲಸ ಮುಗಿಸಿ ಮನೆಗೆ ಬಂದಾಗ ಪ್ರಕರಣ ಬೆಳಕಿಗೆ ಬಂದಿದೆ. ಘಟನಾ ಸ್ಥಳಕ್ಕೆ ಅಜ್ಜಂಪುರ ಠಾಣೆಯ ಪೊಲೀಸರು ಭೇಟಿ ನೀಡಿ ಪರಿಶಿಲನೆ ನಡೆಸಿದ್ದಾರೆ.

    Continue Reading

    LATEST NEWS

    Trending