ಮಂಗಳೂರು: ನಗರದ ಲೇಡಿಹಿಲ್‌ನಲ್ಲಿ ನಿರ್ಮಾಣವಾಗಲಿರುವ ಬ್ರಹ್ಮಶ್ರೀ ನಾರಾಯಣ ಗುರು ವೃತ್ತಕ್ಕೆ ದ.ಕ ಜಿಲ್ಲಾ ಉಸ್ತುವಾರಿ ಸಚಿವ ವಿ. ಸುನಿಲ್ ಕುಮಾರ್ ಅವರು ಇಂದು ಬೆಳಿಗ್ಗೆ ಶಿಲಾನ್ಯಾಸ ನೆರವೇರಿಸಿದರು.
ಬಳಿಕ ಮಾತನಾಡಿದ ಅವರು ‘ಮಂಗಳೂರು ನಗರ ಪಾಲಿಕೆ ಮತ್ತು ಮೂಡಾದ ವತಿಯಿಂದ ವೃತ್ತ ನಿರ್ಮಾಣ ಮಾಡಲಾಗುತ್ತಿದ್ದು, ಬ್ರಹ್ಮಶ್ರೀ ನಾರಾಯಣ ಗುರುಗಳನ್ನು ವಿಶಿಷ್ಟವಾಗಿ ಕಣ್ಮುಂದೆ ಇಟ್ಟುಕೊಂಡು ಅವರ ಆದರ್ಶ, ಅವರ ಮಾರ್ಗದರ್ಶನದಲ್ಲಿ ನಾವು ಮುನ್ನಡೆಯಬೇಕಾಗಿದೆ.
ಇಲ್ಲಿ ಸುಂದರವಾದ ಪುತ್ಥಳಿ ನಿರ್ಮಾಣವಾಗಲಿದೆ. ನವರಾತ್ರಿ ಸಂದರ್ಭದಲ್ಲಿ ಉದ್ಘಾಟನೆ ಮಾಡಬೇಕೆನ್ನುವ ಇರಾದೆ ಇಟ್ಟುಕೊಂಡು ಈಗಾಗಲೇ ವೃತ್ತಕ್ಕೆ ಬೇಕಾದ ಅನುದಾನವನ್ನು ಬಿಡುಗಡೆ ಮಾಡಲಾಗಿದೆ’ ಎಂದರು.
ಇನ್ನು ಕಾರ್ಯಕ್ರಮದಲ್ಲಿ ಶಾಸಕ ವೇದವ್ಯಾಸ ಕಾಮತ್, ವೈ ಭರತ್ ಶೆಟ್ಟಿ, ಮೇಯರ್ ಪ್ರೇಮಾನಂದ ಶೆಟ್ಟಿ, ಪಾಲಿಕೆ ಕಾರ್ಪೋರೇಟರ್‌ಗಳು, ಮೂಡಾ ಮಾಜಿ ಅಧ್ಯಕ್ಷ ರವಿಶಂಕರ ಮಿಜಾರ್ ಸಹಿತ ಹಲವು ಮಂದಿ ಉಪಸ್ಥಿತರಿದ್ದರು.
ಈ ವೃತ್ತವು 48 ಲಕ್ಷ ರೂಪಾಯಿ ವೆಚ್ಚದಲ್ಲಿ ನವೀಕರಣಗೊಳ್ಳಲಿದೆ.