Home ಮಂಗಳೂರು ಕದ್ರಿ ಉತ್ತರ ವಾರ್ಡಿನಲ್ಲಿ 50 ಲಕ್ಷ ರೂಪಾಯಿ ವೆಚ್ಚದ ತಡೆಗೋಡೆ ನಿರ್ಮಾಣ ಕಾಮಗಾರಿಗೆ ಶಾಸಕ ಕಾಮತ್...

ಕದ್ರಿ ಉತ್ತರ ವಾರ್ಡಿನಲ್ಲಿ 50 ಲಕ್ಷ ರೂಪಾಯಿ ವೆಚ್ಚದ ತಡೆಗೋಡೆ ನಿರ್ಮಾಣ ಕಾಮಗಾರಿಗೆ ಶಾಸಕ ಕಾಮತ್ ಗುದ್ದಲಿಪೂಜೆ

ಕದ್ರಿ ಉತ್ತರ ವಾರ್ಡಿನಲ್ಲಿ 50 ಲಕ್ಷ ರೂಪಾಯಿ ವೆಚ್ಚದ ತಡೆಗೋಡೆ ನಿರ್ಮಾಣ ಕಾಮಗಾರಿಗೆ ಶಾಸಕ ಕಾಮತ್ ಗುದ್ದಲಿಪೂಜೆ

ಮಂಗಳೂರು : ಮಹಾನಗರ ಪಾಲಿಕೆಯ ಕದ್ರಿ ಉತ್ತರ ವಾರ್ಡಿನ ಕದ್ರಿ ಪಾದೆಯ ಬಳಿ 50 ಲಕ್ಷದ ಬೃಹತ್ ಚರಂಡಿ ತಡೆಗೋಡೆ ಕಾಮಗಾರಿಗೆ ಶಾಸಕರಾದ ಡಿ.ವೇದವ್ಯಾಸ್ ಕಾಮತ್ ಅವರು ಗುದ್ದಲಿಪೂಜೆ ನೆರವೇರಿಸಿದರು.

ಗುದ್ದಲಿಪೂಜೆ ನೆರವೇರಿಸಿ ಮಾತನಾಡಿದ ಶಾಸಕರು, ಕದ್ರಿ ಉತ್ತರ ವಾರ್ಡಿನ ಕದ್ರಿ ಪಾದೆಯ ಪರಿಸರದ ನಿವಾಸಿಗಳ ಬಹು ದಿನದ ಬೇಡಿಕೆಯಾಗಿದ್ದ ತಡೆಗೋಡೆ ರಚನೆ ಕಾಮಗಾರಿಗೆ ಸಾರ್ವಜನಿಕರ‌ ಸಮ್ಮುಖದಲ್ಲಿ ಗುದ್ದಲಿಪೂಜೆ ನೆರವೇರಿಸಲಾಗಿದೆ.

ಈ ಪರಿಸರದ ಜನರ ಬಹು ದಿನದ ಬೇಡಿಕೆಯ ತೋಡಿನ ತಡೆಗೋಡೆ ನಿರ್ಮಾಣ ಕಾಮಗಾರಿಗೆ 50 ಲಕ್ಷ ರೂಪಾಯಿ ಅನುದಾನ ಒದಗಿಸಲಾಗಿದೆ ಎಂದು ತಿಳಿಸಿದ್ದಾರೆ.

ಮಳೆಗಾಲದ ಸಂಧರ್ಭದಲ್ಲಿ ಈ ತೋಡಿನ ಮೂಲಕ ಹರಿದು ಹೋಗುವ ಮಳೆನೀರು ಉಕ್ಕಿ ಹರಿದು ಮನೆಗಳಿಗೆ ನುಗ್ಗುತ್ತಿತ್ತು.

ಇಲ್ಲಿನ ಸಾರ್ವಜನಿಕರು ಮಳೆಗಾಲದ ಸಂಧರ್ಭದಲ್ಲಿ ಸಂಕಷ್ಟಪಡುತ್ತಿರುವುದು ನನ್ನ ಗಮನಕ್ಕೆ ಬಂದಿತ್ತು.

ಈ ತೋಡಿನ ಒಂದು ಭಾಗದಲ್ಲಿ ಈಗಾಗಲೇ ತಡೆಗೋಡೆಯಿದೆ. ಇನ್ನೊಂದು ಭಾಗದಲ್ಲಿ ಸ್ವಲ್ಪ ಎತ್ತರವಾಗಿ ಈ ತಡೆಗೋಡೆ ನಿರ್ಮಾಣಗೊಳ್ಳುತ್ತದೆ.

ತೋಡಿನಿಂದ ಉಕ್ಕಿ ಹರಿಯುವ ನೀರು ಮನೆಗಳಿಗೆ ನುಗ್ಗದಂತೆ ತಡೆಯಲು ಇದು ಸಹಕಾರಿಯಾಗಲಿದೆ ಎಂದು ತಿಳಿಸಿದ್ದಾರೆ.

ಜನರ ಬೇಡಿಕೆಗಳನ್ನು ವಿಶೇಷವಾಗಿ ಪರಿಗಣಿಸಿ ಕಾಮಗಾರಿಗಳಿಗೆ ಅನುದಾನ ಬಿಡುಗಡೆಗೊಳಿಸಲಾಗುತ್ತದೆ.

ಹಾಗೂ ಮಂಗಳೂರಿನ ಕುರಿತು ವಿಶೇಷ ಪ್ರೀತಿ ಹೊಂದಿರುವ ಸನ್ಮಾನ್ಯ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಅವರು ಬಿಜೆಪಿ ಸರಕಾರ ರಚನೆಯಾದ ಬಳಿಕ ನೂರಾರು ಕೋಟಿ ಅನುದಾನಗಳನ್ನು ನೀಡಿದ್ದಾರೆ.

ಜನರ ಬೇಡಿಕೆಗಳನ್ನು ಪೂರೈಸಲು ಸರಕಾರವು ಬದ್ಧವಾಗಿದೆ ಎಂದು ಶಾಸಕ ಕಾಮತ್ ತಿಳಿಸಿದ್ದಾರೆ.

ಸ್ಥಳೀಯ ಪಾಲಿಕೆ ಸದಸ್ಯೆ ಶಕಿಲಾ ಕಾವ ಅವರು ಮಾತನಾಡಿ, ಈ ಪರಿಸರದ ಬಹುದಿನದ ಬೇಡಿಕೆಯಾಗಿದ್ದ ತಡೆಗೋಡೆ ನಿರ್ಮಾಣಕ್ಕೆ ದೊಡ್ಡ ಮೊತ್ತದ ಅನುದಾನ ಬಿಡುಗಡೆಗೊಳಿಸಿದ ಶಾಸಕ ವೇದವ್ಯಾಸ್ ಕಾಮತ್ ಅವರಿಗೆ ವಾರ್ಡಿನ ಜನರ ಪರವಾಗಿ ಧನ್ಯವಾದಗಳನ್ನು ಅರ್ಪಿಸುವುದಾಗಿ ಹೇಳಿದರು..

ಮಂಡಲ‌ ಪ್ರಧಾನ ಕಾರ್ಯದರ್ಶಿ ರೂಪಾ.ಡಿ ಬಂಗೇರಾ, ಜಿಲ್ಲಾ ಕಾರ್ಯದರ್ಶಿ ಮಂಗಳ ಆಚಾರ್ಯ, ಪ್ರಮುಖರಾದ ರಾಮಕೃಷ್ಣ, ವೆಂಕಟೇಶ್, ಸಂಜೀವ ಅಡ್ಯಾರ್, ವಸಂತ್ ರಾವ್, ಚರಿತ್ ಪೂಜಾರಿ, ನೈನಾ ವಿಶ್ವನಾಥ್,ಸುಂದರ್ ಶೆಟ್ಟಿ ಮತ್ತಿತರ ಮುಖಂಡರು ಉಪಸ್ಥಿತರಿದ್ದರು.

- Advertisment -

RECENT NEWS

ವಿಟ್ಲ ಪೆರುವಾಯಿಯಲ್ಲಿ ಲಾಕ್‌ ಡೌನ್ ಉಲ್ಲಂಘಿಸಿ ವ್ಯವಹಾರ : ಡಿಢೀರ್‌ ದಾಳಿ ನಡೆಸಿದ ಪಿಡಿಒ

ವಿಟ್ಲ ಪೆರುವಾಯಿಯಲ್ಲಿ ಲಾಕ್‌ ಡೌನ್ ಉಲ್ಲಂಘಿಸಿ ವ್ಯವಹಾರ : ಡಿಢೀರ್‌ ದಾಳಿ ನಡೆಸಿದ ಪಿಡಿಒ ಬಂಟ್ವಾಳ : ಲಾಕ್ ಡೌನ್ ಹೆಸರಿನಲ್ಲಿ ಪೆರುವಾಯಿ ವ್ಯವಸಾಯ ಸಹಕಾರಿ ಸಂಘದ ಕಟ್ಟಡದಲ್ಲಿ ಗ್ರಾಮ ಪಂಚಾಯಿತಿ ಅನುಮತಿ ಪಡೆಯದೇ...

ಕೇರಳ ಗಡಿ ದಾಟಿ ಬಂದ ಮಹಿಳೆಯಲ್ಲಿ ಕೊರೋನಾ ಸೋಂಕು : ಆತಂಂಕದಲ್ಲಿ ಮಂಗಳೂರು ಜನತೆ..!!?

ಕೇರಳ ಗಡಿ ದಾಟಿ ಬಂದ ಮಹಿಳೆಯಲ್ಲಿ ಕೊರೋನಾ ಸೋಂಕು : ಆತಂಂಕದಲ್ಲಿ ಮಂಗಳೂರು ಜನತೆ..!!? ಮಂಗಳೂರು : ಕೇರಳ ಗಡಿ ತೆರವಿನಿಂದ ಮಂಗಳೂರಿಗರಿಗೆ ಮತ್ತೆ ಆತಂಕ ಶುರುವಾಗಿದೆ. ಕಾಸರಗೋಡಿನಿಂದ ಚಿಕಿತ್ಸೆಗಾಗಿ ಬಂದಿದ್ದ ಮಹಿಳೆಯಲ್ಲಿ...

ಖಾಸಾಗಿ ಆಸ್ಪತ್ರೆ- ಲ್ಯಾಬ್‌ಗಳಲ್ಲಿ ಕೊರೊನಾ ವೈರಸ್‌ ಪರೀಕ್ಷೆಗಳಿಗೆ ಹಣ ಪಡೆಯುವಂತಿಲ್ಲ : ಸುಪ್ರೀಂ ಕೋರ್ಟ್

ಖಾಸಾಗಿ ಆಸ್ಪತ್ರೆ- ಲ್ಯಾಬ್‌ಗಳಲ್ಲಿ ಕೊರೊನಾ ವೈರಸ್‌ ಪರೀಕ್ಷೆಗಳಿಗೆ ಹಣ ಪಡೆಯುವಂತಿಲ್ಲ : ಸುಪ್ರೀಂ ಕೋರ್ಟ್ ನವದೆಹಲಿ : ಇನ್ನು ಮುಂದೆ ಕೊರೋನಾ ಸೋಂಕಿಗೆ ಸಂಬಂಧಿಸಿದ ಪರೀಕ್ಷೆಗಳು ಸಂಪೂರ್ಣ ಉಚಿತ. ಹೀಗೆಂತಾ ಸರ್ವೋಚ್ಚಾ ನ್ಯಾಯಾಲಯದ ಮಹತ್ವದ...

ಲಾಕ್ ಡೌನ್ ನಡುವೆ ಬಂಟ್ವಾಳ ಚರ್ಚಿನಲ್ಲಿ ಕಳ್ಳರ ಕೈಚಳಕ : ಮೂರು ಹುಂಡಿಗಳಿಗೆ ಕನ್ನ..!

ಲಾಕ್ ಡೌನ್ ನಡುವೆ ಬಂಟ್ವಾಳ ಚರ್ಚಿನಲ್ಲಿ ಕಳ್ಳರ ಕೈಚಳಕ : ಮೂರು ಹುಂಡಿಗಳಿಗೆ ಕನ್ನ..! ಬಂಟ್ವಾಳ : ಲಾಕ್ ಡೌನ್ ನಡುವೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಳ್ಳರ ಕೈಚಳ ಮುಂದುವರೆದಿದೆ.ಬಂಟ್ವಾಳದ ಚರ್ಚ್ ಒಂದಕ್ಕೆ ನುಗ್ಗಿದ...