MANGALORE
ತಣ್ಣೀರುಬಾವಿ ಮುಖ್ಯರಸ್ತೆ ಅಭಿವೃದ್ಧಿ ಕಾಮಗಾರಿಗೆ ಶಾಸಕ ಕಾಮತ್ ಗುದ್ದಲಿಪೂಜೆ
ತಣ್ಣೀರುಬಾವಿ ಮುಖ್ಯರಸ್ತೆ ಅಭಿವೃದ್ಧಿ ಕಾಮಗಾರಿಗೆ ಶಾಸಕ ಕಾಮತ್ ಗುದ್ದಲಿಪೂಜೆ
ಮಂಗಳೂರು : ಮಹಾನಗರ ಪಾಲಿಕೆಯ ಪಣಂಬೂರು ವಾರ್ಡಿನಲ್ಲಿ 23 ಲಕ್ಷ ರೂಪಾಯಿ ಅನುದಾನದ ಅಭಿವೃದ್ಧಿ ಕಾಮಗಾರಿಗೆ ಶಾಸಕ ವೇದವ್ಯಾಸ್ ಕಾಮತ್ ಗುದ್ದಲಿಪೂಜೆ ನೆರವೇರಿಸಿದರು.
ಈ ವೇಳೆ ಮಾತನಾಡಿದ ಅವರು, ಮಂಗಳೂರು ಮಹಾನಗರ ಪಾಲಿಕೆ ಸಂಬಂಧಿಸಿದಂತೆ ತಣ್ಣೀರುಬಾವಿ ಚರ್ಚ್ ಬಳಿ ಮುಖ್ಯರಸ್ತೆ ಅಭಿವೃದ್ಧಿಗೆ ಮುಖ್ಯಮಂತ್ರಿ ವಿಶೇಷ ಅನುದಾನದಿಂದ ಲೋಕೋಪಯೋಗಿ ಇಲಾಖೆಯಿಂದ 23 ಲಕ್ಷ ಅನುದಾನ ಬಿಡುಗಡೆಗೊಳಿಸಲಾಗಿದೆ. ಪ್ರವಾಸೋದ್ಯಮ ಹಾಗೂ ಸ್ಥಳೀಯರ ಬೇಡಿಕೆಯನುಸಾರ ಈ ಕಾಮಗಾರಿಗೆ ಹೆಚ್ಚಿನ ಗಮನ ನೀಡಲಾಗಿದೆ.
ಕಾಮಗಾರಿ ಪೂರ್ಣಗೊಳಿಸಲು ಹೆಚ್ಚು ಸಮಯಾವಕಾಶ ತೆಗೆದುಕೊಳ್ಳದೆ ಶೀಘ್ರವೇ ಪೂರ್ಣಗೊಳಿಸಲು ಅಧಿಕಾರಿಗಳಿಗೆ ಸೂಚನೆ ನೀಡಿದ್ದೇನೆ ಎಂದರು.
ಈ ಸಂದರ್ಭದಲ್ಲಿ ಮಂಗಳೂರು ಮಹಾನಗರ ಪಾಲಿಕೆ ಮೇಯರ್ ದಿವಾಕರ್ ಪಾಂಡೇಶ್ವರ, ಸ್ಥಳೀಯ ಮನಪಾ ಸದಸ್ಯೆ ಸುನೀತ, ಪಾಲಿಕೆ ಸ್ಥಾಯಿ ಸಮಿತಿ ಅದ್ಯಕ್ಷರಾದ ಪೂರ್ಣಿಮಾ, ಜಗದೀಶ್ ಶೆಟ್ಟಿ ಬೋಳೂರು, ಬಿಜೆಪಿ ಮುಖಂಡರಾದ ಭಾಸ್ಕರ್ ಚಂದ್ರ ಶೆಟ್ಟಿ, ವಸಂತ್ ಜೆ ಪೂಜಾರಿ, ಅರವಿಂದ್ ಬೆಂಗ್ರೆ, ವರದರಾಜ್, ದಯಾನಂದ, ಪುಷ್ಪರಾಜ್, ಶೇಖರ್,ಏಕನಾಥ್, ನವೀನ್, ರವಿರಾಜ್, ಧನುಷ್, ಮಿಲನ್, ಪ್ರೀತಮ್, ಶಿವರಾಜ್ ಮತ್ತಿತರರು ಉಪಸ್ಥಿತರಿದ್ದರು
DAKSHINA KANNADA
ಮಂಗಳೂರು: 30.98% ಮತದಾರರಿಂದ ಮತ ಚಲಾವಣೆ
ಮಂಗಳೂರು: 17-ದ.ಕ ಲೋಕಸಭಾ ಕ್ಷೇತ್ರದಲ್ಲಿ ಬೆಳಿಗ್ಗೆ 9 ಗಂಟೆಯವರೆಗೆ 30.98 ಪ್ರತಿಶತ ಮತದಾರರು ಮತ ಚಲಾವಣೆ ಮಾಡಿದ್ದಾರೆ.
ಸುಳ್ಯದಲ್ಲಿ ಅತಿ ಹೆಚ್ಚು ಮತ ಚಲಾವಣೆಯಾಗಿದ್ದು, 16.46 ಪ್ರತಿಶತ ಮತದಾರರು ಮತ ಚಲಾವಣೆ ಮಾಡಿದ್ದಾರೆ. ಮೂಡುಬಿದಿರೆ ಕ್ಷೇತ್ರದಲ್ಲಿ ಅತಿ ಕನಿಷ್ಠ ಮತ ಚಲಾವಣೆಯಾಗಿದ್ದು, 12.2 ಪ್ರತಿಶತ ಮತದಾರರು ಮತ ಚಲಾಯಿಸಿದ್ದಾರೆ.
ಇನ್ನು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಬಿಸಿಲಿನ ಬೇಗೆಗೆ ಕಾರ್ ಸ್ಟ್ರೀಟ್ ಸರ್ಕಾರಿ ಬಾಲಕಿಯರ ಎಪಿಯು ಕಾಲೇಜಿನಲ್ಲಿ ಮತದಾರರು ಬಿಸಿಲಿನಿಂದ ತಪ್ಪಿಸಿಕೊಳ್ಳಲು ಛತ್ರಿ ಹಿಡಿದು ಮತದಾನ ಮಾಡಲು ಸರತಿ ಸಾಲಿನಲ್ಲಿ ನಿಂತ ದೃಶ್ಯ ಕಂಡುಬಂತು.
DAKSHINA KANNADA
ಮಂಗಳೂರು: ಮತಗಟ್ಟೆಯಲ್ಲಿ ಬಿಜೆಪಿ ಕಾರ್ಯಕರ್ತರ ಗೂಂಡಾಗಿರಿ; ಪೊಲೀಸ್ ಅಧಿಕಾರಿಗಳ ಜೊತೆಯಲ್ಲೇ ಅನುಚಿತ ವರ್ತನೆ
ಮಂಗಳೂರು: ನಗರದ ಕಪಿತಾನಿಯೋ ಮತಗಟ್ಟೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಮತ ಚಲಾಯಿಸಿದ ಬಳಿಕ ಮಾಧ್ಯಮ ಪ್ರತಿನಿಧಿ ಜೊತೆ ಪ್ರತಿಕ್ರಿಯೆ ನೀಡುತ್ತಿದ್ದ ವೇಳೆ ಬಿಜೆಪಿ ಕಾರ್ಯಕರ್ತನೊಬ್ಬ ಪೊಲೀಸ್ ಹಾಗೂ ಪತ್ರಕರ್ತರೊಂದಿಗೆ ಅನುಚಿತವಾಗಿ ವರ್ತಿಸಿ ವಾಗ್ವಾದವುಂಟಾದ ಘಟನೆ ನಡೆಯಿತು.
ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್. ಆರ್ ಪೂಜಾರಿಯವರು ಮತದಾನ ಮಾಡಿ ಹೊರಬಂದಾಗ ಮಾಧ್ಯಮದವರು ಗೇಟಿನ ಹೊರಭಾಗದಲ್ಲಿ ಅವರ ಹೇಳಿಕೆ ತೆಗೆದುಕೊಳ್ಳುತ್ತಿದ್ದರು. ಆಗ “ಎಷ್ಟು ಹೊತ್ತು ಪ್ರತಿಕ್ರಿಯೆ ಪಡೆಯುವುದು”ಎಂದು ಸಂದೀಪ್ ಎಕ್ಕೂರು ಎಂಬಾತ ಕ್ಯಾತೆ ತೆಗೆದಿದ್ದಾನೆ. ಈ ವೇಳೆ ಅಲ್ಲಿಯೇ ಇದ್ದ ಪೊಲೀಸ್ ಇನ್ಸ್ ಪೆಕ್ಟರ್ ಟಿ.ಡಿ.ನಾಗರಾಜ್ ಸೇರಿದಂತೆ ಇತರ ಪೊಲೀಸರು ಆತನನ್ನು ತಳ್ಳಿಕೊಂಡು ಒಂದಷ್ಟು ದೂರ ಹೋಗಿದ್ದಾರೆ. ಈ ವೇಳೆ ಆತನೊಂದಿಗೆ ಇದ್ದವರು ಸಮಾಧಾನ ಮಾಡಲು ಯತ್ನಿಸಿದರೂ, ಆತ ಪೊಲೀಸರೊಂದಿಗೆ ಅನುಚಿತವಾಗಿ ವರ್ತಿಸಿ, ವಾಗ್ವಾದ ನಡೆಸಿದ್ದಾನೆ. ಆಗ ಪೊಲೀಸ್ ಇನ್ಸ್ ಪೆಕ್ಟರ್ ಟಿ.ಡಿ.ನಾಗರಾಜ್ ಎಚ್ಚರಿಕೆ ನೀಡಿ ಕಳಿಸಿದ್ದಾರೆ.
ಪೊಲೀಸರು ಅಲ್ಲಿಂದ ಹಿಂದಿರುಗಿದ ಬಳಿಕ ತಂಡದಲ್ಲಿದ್ದ ಮತ್ತೊಬ್ಬ ಘಟನೆಯ ದೃಶ್ಯ ಚಿತ್ರೀಕರಿಸುತ್ತಿದ್ದ ಮಾಧ್ಯಮ ವರದಿಗಾರರ ಮೇಲೆ ಹರಿಹಾಯ್ದಿದ್ದಾನೆ. ಈ ವೇಳೆ ಪತ್ರಕರ್ತರೊಂದಿಗೂ ತಂಡದಿಂದ ವಾಗ್ವಾದ ನಡೆದಿದೆ. ಈ ವೇಳೆ ಸ್ಥಳದಲ್ಲಿ ಸ್ವಲ್ಪ ಗೊಂದಲದ ವಾತಾವರಣ ಸೃಷ್ಟಿಯಾಗಿತ್ತು. ಸಂಜೆ ವೇಳೆ ಆತನ ಮೇಲೆ ಪ್ರಕರಣ ದಾಖಲಿಸಿ ಅರೆಸ್ಟ್ ಮಾಡುತ್ತೇನೆ ಎಂದು ಪೊಲೀಸ್ ಇನ್ಸ್ ಪೆಕ್ಟರ್ ಟಿ.ಡಿ.ನಾಗರಾಜ್ ಎಚ್ಚರಿಕೆ ನೀಡಿದ ಬಳಿಕ ಪರಿಸ್ಥಿತಿ ಶಾಂತವಾಯಿತು.
DAKSHINA KANNADA
ಪತ್ನಿ ಮಗಳೊಂದಿಗೆ ಸರತಿ ಸಾಲಿನಲ್ಲಿ ನಿಂತು ಮತ ಚಲಾಯಿಸಿದ ಪದ್ಮರಾಜ್ ಪೂಜಾರಿ
ಮಂಗಳೂರು: ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಪೂಜಾರಿ ಮಂಗಳೂರಿನಲ್ಲಿ ತಮ್ಮ ಮತ ಚಲಾಯಿಸಿದ್ದಾರೆ. ಮಂಗಳೂರಿನ ಕಪಿತಾನಿಯೋ ಶಾಲೆಯ ಮತಗಟ್ಟೆಗೆ ತನ್ನ ಪತ್ನಿ ಹಾಗೂ ಮಗಳ ಜೊತೆ ಆಗಮಿಸಿ ಮತ ಚಲಾಯಿಸಿದ್ದಾರೆ.
ಮುಂಜಾನೆ ಏಳುಗಂಟೆಗೆ ಮತಗಟ್ಟೆಗೆ ಆಗಮಿಸಿದ ಪದ್ಮರಾಜ್ ಅವರು ಬರುವ ವೇಳೆಗೆ ಜನರು ಮತದಾನಕ್ಕೆ ಸರತಿ ಸಾಲಿನಲ್ಲಿ ನಿಂತಿದ್ದರು. ಹೀಗಾಗಿ ಪದ್ಮರಾಜ್ ಹಾಗೂ ಅವರ ಪತ್ನಿ ಮತ್ತು ಮಗಳು ಸರತಿ ಸಾಲಿನಲ್ಲಿ ನಿಂತೇ ಮತ ಚಲಾಯಿಸಿದ್ದಾರೆ. ಪದ್ಮರಾಜ್ ಆಗಮಿಸುವ ವೇಳೆ ಅವರ ಸಾಕಷ್ಟು ಅಭಿಮಾನಿಗಳು ಮತಗಟ್ಟೆಯ ಹೊರಗೆ ನಿಂತು ಅವರಿಗೆ ಶುಭ ಕೋರಿದ್ದಾರೆ.
ಮತದಾನ ಮಾಡಿದ ಪದ್ಮರಾಜ್ ಬಳಿಕ ಕ್ಷೇತ್ರದಲ್ಲಿ ಮತದಾನ ಪ್ರಕ್ರಿಯೆ ವೀಕ್ಷಣೆಗೆ ತೆರಳಿದ್ದಾರೆ.
- FILM4 days ago
ಸುದೀಪ್ ಮಗಳು ನಾಯಕಿಯಾಗಿ ಎಂಟ್ರಿ… ಸ್ಮೈಲ್ ಗುರು ರಕ್ಷಿತ್ಗೆ ಜೋಡಿಯಾದ ಜೆರುಶಾ
- FILM4 days ago
‘ಬಘೀರ’ ಸಿನೆಮಾ ಶೂಟಿಂಗ್ ವೇಳೆ ಅವಘಡ.. ರೋರಿಂಗ್ ಸ್ಟಾರ್ ಆಸ್ಪತ್ರೆ ದಾಖಲು
- FILM5 days ago
ವಿಚ್ಛೇದನದ ಸುದ್ದಿಗೆ ಉತ್ತರ ಕೊಟ್ಟ ಐಶ್ – ಅಭಿ ಆ್ಯನಿವರ್ಸರಿ ಫೋಟೋ!
- chikkamagaluru4 days ago
ಎಟಿಎಂ ಮೆಷಿನ್ಗೆ ಬೆಂಕಿ ಅವಘಡ..! ಸುಟ್ಟು ಕರಕಲಾದ ಲಕ್ಷಾಂತರ ರೂಪಾಯಿ..!!