Connect with us

    BANTWAL

    ಬಂಟ್ವಾಳದ ವಾಮದಪದವಿನಲ್ಲಿ 2 ಕೋಟಿ ರೂ. ವೆಚ್ಚದಲ್ಲಿ ನಿರ್ಮಾಣವಾಗುತ್ತಿರುವ ಬಂಟರ ವಲಯದ ಶಿಲಾನ್ಯಾಸ-ಒಡಿಯೂರು,ಕೊಂಡೆವೂರು ಶ್ರೀಗಳಿಂದ ಆಶೀರ್ವಚನ

    Published

    on

    ಬಂಟ್ವಾಳ: ದ.ಕ.ಜಿಲ್ಲೆಯ ಬಂಟ್ವಾಳ ತಾಲೂಕಿನ ವಾಮದಪದವು ವಲಯ ಬಂಟರ ಸಂಘದ ವತಿಯಿಂದ ಆಲದಪದವಿನ ನಿವೇಶನದಲ್ಲಿ 2 ಕೋಟಿ ರೂಪಾಯಿ ವೆಚ್ಚದಲ್ಲಿ ನಿರ್ಮಿಸಲು ಉದ್ದೇಶಿಸಿರುವ ಪದವು ಬಂಟರ ವಲಯದ ಶಿಲಾನ್ಯಾಸ ಸಮಾರಂಭ ಜನವರಿ 5, ಗುರುವಾರ ಧಾರ್ಮಿಕ ವಿಧಿವಿಧಾನಗಳೊಂದಿಗೆ ನಡೆಯಿತು.


    ವಲಯ ಅಧ್ಯಕ್ಷ ವಸಂತ ಶೆಟ್ಟಿ ಕೇದಗೆ ಇವರ,ಗಣ್ಯಾತಿ ಗಣ್ಯರ ಉಪಸ್ಥಿತಿಯಲ್ಲಿ ಒಡಿಯೂರು ಶ್ರೀ ಹಾಗೂ ಕೊಂಡೆವೂರು ಶ್ರೀಗಳ ಆಶೀರ್ವಾದದೊಂದಿಗೆ ಮುಂಬಯಿ ಹೇರಂಬ ಇಂಡಸ್ಟ್ರೀಸ್ ಆಡಳಿತ ನಿರ್ದೇಶಕ ಕೂಳೂರು ಕನ್ಯಾನ ಸದಾಶಿವ ಶೆಟ್ಟಿ ಶಿಲಾನ್ಯಾಸ ನೆರವೇರಿಸಿದರು. ಎಂ ಆರ್ ಜಿ ಗ್ರೂಪ್ ಅಧ್ಯಕ್ಷ ಪ್ರಕಾಶ್ ಶೆಟ್ಟಿ ಬಂಜಾರ ದೀಪ ಪ್ರಜ್ವಲನೆಗೊಳಿಸುವುದರ ಮೂಲಕ ಉದ್ಘಾಟಿಸಿದ್ರು.


    ಒಡಿಯೂರು ಶ್ರೀ ಗುರುದೇವಾನಂದ ಸ್ವಾಮೀಜಿ ಆಶೀರ್ವಚನ ನೀಡಿ, ಸೇವೆಯ ಮೂಲಕ ಬದುಕಿನ ಸಾರ್ಥಕತೆಯನ್ನು ಕಾಣುವಲ್ಲಿ ಬಂಟ ಸಮುದಾಯವು ಮುಂಚೂಣಿಯಲ್ಲಿದೆ. ನಾಯಕತ್ವ, ಕ್ರೀಯಾಶೀಲತೆ, ಸಂಘಟನೆ, ದಾನಶೀಲತೆಗೆ ಮತ್ತೊಂದು ಹೆಸರೇ ಬಂಟರು ಎಂದರು.

    ಕೊಂಡೆವೂರು ಯೋಗಾನಂದ ಸರಸ್ವತೀ ಸ್ವಾಮೀಜಿ ಆಶೀರ್ವಚನ ನೀಡಿ, ಬಂಟ ಸಮುದಾಯದವರು ಸಮಾಜದ ಅಭಿವೃದ್ದಿಗೆ ಶ್ರಮಿಸುವ ದೊಡ್ಡ ಶಕ್ತಿ ಮತ್ತು ಆಸ್ತಿಯಾಗಿದ್ದಾರೆ. ನಾವು ಸಮಾಜಕ್ಕೆ ದೊಡ್ಡ ಕೊಡುಗೆಯನ್ನು ನೀಡುವುದು ಮೂಲಕ ದೊಡ್ಡವರಾಗಬೇಕು. ಬಂಟ ಸಮಾಜ ಎಲ್ಲಾ ಕ್ಷೇತ್ರಗಳಿಗೂ ದೊಡ್ಡದಾದ ಕೊಡುಗೆ ನೀಡಿದೆ ಎಂದರು.


    ಶಿಲಾನ್ಯಾಸಗೈದ ಕನ್ಯಾನ ಸದಾಶಿವ ಶೆಟ್ಟಿ ಮಾತನಾಡಿ, ಒಂದು ಸುಸಜ್ಜಿತ ಬಂಟರ ಭವನ ನಿರ್ಮಾಣದೊಂದಿಗೆ, ಮುಂದಿನ ದಿನಗಳಲ್ಲಿ ಇನ್ನೂ ಸಾಮಾಜಿಕ ಹಿತದೃಷ್ಟಿಯಿಂದ ಹಲವಾರು ಕಾರ್ಯಕ್ಷೇತ್ರಗಳನ್ನು ಸ್ಥಾಪಿಸುವಲ್ಲಿಯೂ ಯಶಸ್ವಿಯಾಗಬೇಕು ಎಂದು ಹಾರೈಸಿದ್ರು.

    ದೀಪ ಪ್ರಜ್ವಲನೆಗೈದ ಪ್ರಕಾಶ್ ಶೆಟ್ಟಿ ಮಾತನಾಡಿ, ಯಾವುದೇ ಒಬ್ಬ ವ್ಯಕ್ತಿ ತಾನು ದುಡಿದು ಸಂಪಾದಿಸಿದರಲ್ಲಿ ಒಂದಷ್ಟನ್ನು ಸಮಾಜದ ಏಳಿಗೆಗಾಗಿ ಮೀಸಲಿಡಬೇಕು. ಆಗ ಮಾತ್ರ ಸಂಪೂರ್ಣವಾಗಿ ಮನುಷ್ಯತ್ವವನ್ನು ಹೊಂದಬಹುದು. ನಾವು ಬಂಟರೆನ್ನಲು ನಮಗೆ ಹೆಮ್ಮೆಯಾಗಬೇಕು ಎಂದರು.

    ವಾಮದಪದವು ವಲಯ ಬಂಟರ ಸಂಘದ ಅಧ್ಯಕ್ಷ ಕೇದಗೆ ವಸಂತ ಶೆಟ್ಟಿ ಅಧ್ಯಕ್ಷತೆ ವಹಿಸಿದ್ದರು. ಉದ್ಯಮಿ ಶಶಿಧರ ಶೆಟ್ಟಿ ಬರೋಡಾ, ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿಗುತ್ತು, ಮಾಜಿ ಸಚಿವ ಬಿ ರಮಾನಾಥ ರೈ, ಬಂಟರ ಸಂಘ ಬಂಟ್ವಾಳದ ಅಧ್ಯಕ್ಷ ಚಂದ್ರಹಾಸ ಡಿ ಶೆಟ್ಟಿ ರಂಗೋಲಿ, ಪದವು ವಲಯ ಬಂಟರ ಸಂಘದ ಗೌರವಾಧ್ಯಕ್ಷ ಅಮ್ಮು ರೈ ಹರ್ಕಾಡಿ, ಉದ್ಯಮಿಗಳಾದ ರಾಜೇಂದ್ರ ಶೆಟ್ಟಿ ಹುಬ್ಬಳ್ಳಿ, ಉಪೇಂದ್ರ ಶೆಟ್ಟಿ ಬೆಂಗಳೂರು, ವಿಶ್ವನಾಥ ಶೆಟ್ಟಿ ಕರ್ನಿರೆ, ಶಶಿಧರ ನಾಯ್ಕ ಗೋವಾ, ರಮೇಶ್ ಶೆಟ್ಟಿ ಗೋವಾ, ಕೆ ಪಿ ಸುಚರಿತ ಶೆಟ್ಟಿ,

    ಜಗನ್ನಾಥ ಚೌಟ ಬದಿಗುಡ್ಡೆ, ಜಯರಾಮ ಶೆಟ್ಟಿ ಬೆಳ್ತಂಗಡಿ,ಶ್ರೀಧರ ಶೆಟ್ಟಿ ಮೇಗಿನಗುತ್ತು, ಸುಧಾಕರ ಪೂಂಜ ಸುರತ್ಕಲ್,ಪ್ರವೀಣ್ ಶೆಟ್ಟಿ ಮುಂಬಯಿ, ಜಗನ್ನಾಥ ಶೆಟ್ಟಿ ಮುಂಬಯಿ, ಭಾರತೀ ರಾಜೇಂದ್ರ, ರಮಾ ಎಸ್ ಭಂಡಾರಿ, ಶಾಲಿನಿ ಶ್ರೀಧರ್ ಶೆಟ್ಟಿ, ಜಗದೀಶ್ ಶೆಟ್ಟಿ ನೆಲ್ಲಿಕಟ್ಟೆ, ನಿಶಾಂತ್ ಆಳ್ವ, ಜಯಪ್ರಕಾಶ್ ಶೆಟ್ಟಿ ಬುಳೇರಿ, ವಕೀಲರಾದ ಚೇತನಾ ರಾಮಚಂದ್ರ,ಪ್ರಜ್ವಲ್ ಶೆಟ್ಟಿ , ವಲಯ ಬಂಟರ ಸಂಘದ ಪದಾಧಿಕಾರಿಗಳು, ಸರ್ವ ಸದಸ್ಯರು ಮೊದಲಾದವರು ಉಪಸ್ಥಿತರಿದ್ದರು.

    ವಾಮದಪದವು ವಲಯ ಬಂಟರ ಸಂಘದ ಗೌರವ ಸಲಹೆಗಾರ ಅಶೋಕ ಪಕ್ಕಳ ಶ್ರೀ ಸನ್ನಿಧಿಗುತ್ತು ಸ್ವಾಗತಿಸಿದರು. ಕಿಶೋರ್ ಕುಮಾರ್ ಭಂಡಾರಿ ಬೆಳ್ಳೂರು ಕಾರ್ಯಕ್ರಮ ನಿರೂಪಿಸಿದರು. ರಮೇಶ್ ಶೆಟ್ಟಿ ವಾಮದಪದವು ವಂದಿಸಿದರು.


    ಶಿಲಾನ್ಯಾಸಕ್ಕೆ ಮುನ್ನ ಭರತನಾಟ್ಯ ಕಾರ್ಯಕ್ರಮ, ಸಭಾ ಕಾರ್ಯಕ್ರಮದ ಬಳಿಕ ಯಕ್ಷಧ್ರುವ ಸತೀಶ್ ಶೆಟ್ಟಿ ಪಟ್ಲ ಮತ್ತಿತರ ಪ್ರಸಿದ್ದ ಕಲಾವಿದರ ಕೂಡುವಿಕೆಯಲ್ಲಿ ಯಕ್ಷಗಾನ ತಾಳಮದ್ದಳೆ ನಡೆಯಿತು.

     

    BANTWAL

    ಕಲ್ಲಡ್ಕದಲ್ಲಿ ಸರ್ವೀಸ್ ರಸ್ತೆಗೆ ಡಾಮರು

    Published

    on

    ಬಂಟ್ವಾಳ: ಹೆದ್ದಾರಿ ಕಾಮಗಾರಿ ಅವ್ಯವಸ್ಥೆಯಿಂದ ಟೀಕೆಗೆ ಗುರಿಯಾಗಿದ್ದ ಕಲ್ಲಡ್ಕದಲ್ಲಿ ಇದೀಗ ಸರ್ವೀಸ್ ರಸ್ತೆಗೆ ಡಾಮರು ಹಾಕುವ ಕಾರ್ಯ ಆರಂಭಗೊಂಡಿದೆ.

    ಮಳೆ ದೂರವಾದ ಹಿನ್ನೆಲೆಯಲ್ಲಿ ಕಲ್ಲಡ್ಕದ ಪೂರ್ಲಿಪ್ಪಾಡಿ ಭಾಗದಿಂದ ಒಂದು ಬದಿಯಲ್ಲಿ ಡಾಮರು ಹಾಕಲಾಗುತ್ತಿದೆ.

    ಕಳೆದ 2-3 ವರ್ಷಗಳಿಂದ ಹೆದ್ದಾರಿ ಪ್ರಯಾಣಿಕರು ಸಾಕಷ್ಟು ತೊಂದರೆ ಅನುಭವಿಸಿದ್ದು, ಈ ಬಾರಿಯ ಮಳೆಗಾಲದಲ್ಲಿ ಕಲ್ಲಡ್ಕ ಪೇಟೆಯನ್ನು ಎಲ್ಲ ರೀತಿಯಿಂದಲೂ ಹಿಂಡಿ ಹಿಪ್ಪೆ ಮಾಡಲಾಗಿತ್ತು. ಮಳೆ ಬಂದರೆ ಕೆಸರು, ಬಿಸಿಲಾದರೆ ಧೂಳು ಎಂಬ ಸ್ಥಿತಿ ಇತ್ತು. ಹೆದ್ದಾರಿ ತುಂಬಾ ಕೆಸರು ತುಂಬಿ ನಡೆದಾಡುವುದು ಕಷ್ಟವಾಗಿರುವ ಜತೆಗೆ ಹೊಂಡಗಳು ಸೃಷ್ಟಿಯಾಗಿ ವಾಹನ ಸಾಗುವುದು ತೀರಾ ತ್ರಾಸದಾಯಕವಾಗಿತ್ತು. ಇದೀಗ ಸರ್ವೀಸ್ ರಸ್ತೆಗೆ ಡಾಮರು ಹಾಕುವ ಕಾರ್ಯ ಆರಂಭಗೊಂಡಿದೆ.

    Continue Reading

    BANTWAL

    ಮಂಗಳೂರು: ಯುವತಿ ವಿಚಾರದಲ್ಲಿ ಯುವಕನಿಗೆ ಥಳಿತ; ಆರೋಪಿಗಳು ಅರೆಸ್ಟ್

    Published

    on

    ಮಂಗಳೂರು: ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿ ಉಳ್ಳಾಲ ತಾಲೂಕಿನ ಸಜೀಪನಡು ಗ್ರಾಮದ ಕಂಚಿನಡ್ಕಪದವು ಎಂಬಲ್ಲಿ ಮಹಮ್ಮದ್ ಮುಸ್ತಾಫ(21) ಎಂಬಾತನನ್ನು ಕಂಬಕ್ಕೆ ಕಟ್ಟಿ ಹಾಕಿದ ಥಳಿಸಿದ ಆರು ಮಂದಿ ಆರೋಪಿಗಳನ್ನು ಬಂಟ್ವಾಳ ಠಾಣಾ ಪೊಲೀಸರು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ.

    ಹಲ್ಲೆ ಮಾಡಿ, ಕೊಲೆ ಬೆದರಿಕೆಯೊಡ್ಡಿದ ಆರೋಪಿಗಳಾದ ಕಂಚಿನಡ್ಕದ ನಿವಾಸಿಗಳಾಗಿರುವ ಮಹಮ್ಮದ್‌ ಸಪ್ವಾನ್( 25), ಮಹಮ್ಮದ್‌ ರಿಜ್ವಾನ್‌ (25), ಇರ್ಪಾನ್‍(27), ಅನೀಸ್‍ ಅಹಮ್ಮದ್‍ (19), ನಾಸೀರ್‍ (27), ಇಬ್ರಾಹಿಂ, ಶಾಕೀರ್‍ (18)ನನ್ನು ಬಂಧಿಸಲಾಗಿದೆ.

    ಎಲ್ಲರನ್ನೂ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು ನ್ಯಾಯಾಂಗ ಬಂಧನ ವಿಧಿಸಲಾಗಿದೆ. ನವೆಂಬರ್ 7ರಂದು ರಾತ್ರಿ 10 ಗಂಟೆ ಸುಮಾರಿಗೆ ಕಂಚಿನಡ್ಕ ಪದವು ನಿವಾಸಿಯಾಗಿರುವ ಯುವತಿಯೊಬ್ಬಳು ಮಹಮ್ಮದ್ ಮುಸ್ತಾಫಾನನ್ನು ಮನೆಗೆ ಬರಲು ಹೇಳಿದ್ದು, ಆಕೆ ಸೂಚನೆಯಂತೆ ಮಹಮ್ಮದ್ ಮುಸ್ತಾಫಾ ಅಲ್ಲಿಗೆ ಹೋಗಿದ್ದ. ಈ ವೇಳೆ ಅಲ್ಲಿದ್ದ ಆರೋಪಿಗಳು ಮಹಮ್ಮದ್‍ ಮುಸ್ತಾಫ್‍ ನ ಬಗ್ಗೆ ಸಂಶಯ ವ್ಯಕ್ತಪಡಿಸಿ ಗುಂಪು ಸೇರಿಕೊಂಡು ಆತನನ್ನು ಹಿಡಿದು ರಕ್ತ ಒಸರುವಂತೆ ಥಳಿಸಿದ್ದಲ್ಲದೇ ಕಂಬಕ್ಕೆ ಕಟ್ಟಿ ಹಾಕಿ ಹೊಡೆದಿದ್ದಾರೆ. ಕೊಲೆ ಬೆದರಿಕೆಯನ್ನೂ ಹಾಕಿದ್ದಾರೆ.

     

    ಇದನ್ನೂ ಓದಿ : ಬಂಟ್ವಾಳ : ಮನೆಗೆ ಬಂದಿದ್ದ ಪ್ರಿಯಕರನ್ನು ಅ*ರೆಬೆತ್ತಲು ಮಾಡಿ ಹ*ಲ್ಲೆ

     

    ಮಹಮ್ಮದ್‍ ಮುಸ್ತಾಫ್‍ ನೀಡಿದ ದೂರಿನಂತೆ ಬಂಟ್ವಾಳ ಗ್ರಾಮಾಂತರ ಪೊಲೀಸ್‍ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಹಲ್ಲೆಗೊಳಗಾದ ಬಳಿಕ ಹೈಲ್ಯಾಂಡ್ ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ಒಳಗಾಗಿದ್ದ ಸಂದರ್ಭದಲ್ಲಿ ಪೊಲೀಸರು ವಿಚಾರಣೆ ಮಾಡಲು ತೆರಳಿದಾದ ಮಹಮ್ಮದ್‍ ಮುಸ್ತಾಫ್‍ ಆರೋಪಿಗಳು ತನ್ನನ್ನು ಕೊಲೆ ನಡೆಸುವ ಉದ್ದೇಶದಿಂದ ಗುಂಪು ಸೇರಿ ಕಂಬಕ್ಕೆ ಕಟ್ಟಿ ಹಾಕಿ ಕೊಲೆಯತ್ನ ನಡೆಸಿದ್ದಾನೆ ಎಂದು ದೂರು ನೀಡಿದ ಹಿನ್ನೆಲೆಯಲ್ಲಿ ಕೊಲೆ ಯತ್ನ ಪ್ರಕರಣವನ್ನು ದಾಖಲಿಸಲಾಗಿದೆ.

    Continue Reading

    BANTWAL

    ಬಂಟ್ವಾಳ: ವಿಷಪದಾರ್ಥ ಸೇವಿಸಿ ಯುವಕ ಆತ್ಮಹ*ತ್ಯೆ

    Published

    on

    ಬಂಟ್ವಾಳ: ವಿಷಪದಾರ್ಥ ಸೇವಿಸಿ ಯುವಕನೋರ್ವ ಆತ್ಮಹ*ತ್ಯೆ ಮಾಡಿಕೊಂಡ ಘಟನೆ ಕಡೇಶಿವಾಲಯದಲ್ಲಿ ನಡೆದಿದೆ.

    ಬಂಟ್ವಾಳ ತಾಲೂಕಿನ ಕಡೇಶಿವಾಲಯದ ಕಂಡಿಗ ನಿವಾಸಿ ಗಣೇಶ್(25) ಆತ್ಮಹ*ತ್ಯೆ ಮಾಡಿಕೊಂಡ ಯುವಕ. ಗಣೇಶ್ ಅವರು ಸೋಮವಾರ ಮನೆಯಲ್ಲಿಯೇ ಸಂಜೆ ಹುಲ್ಲಿಗೆ ಬಿಡುವ ವಿಷವನ್ನು ಸೇವಿಸಿದ್ದರು.

    ತಕ್ಷಣ ಅವರನ್ನು ಚಿಕಿತ್ಸೆಗಾಗಿ ಮಂಗಳೂರಿನ ಫಾದರ್ ಮುಲ್ಲರ್ ಆಸ್ಪತ್ರೆಗೆ ದಾಖಲಿಸಲಾಯಿತಾದರೂ ಚಿಕಿತ್ಸೆ ಫಲಕಾರಿಯಾಗದೆ ಮೃ*ತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ.

    Continue Reading

    LATEST NEWS

    Trending