Connect with us

DAKSHINA KANNADA

‘ಉದಯವಾಣಿ’ ಸಂಸ್ಥಾಪಕ, ಮಣಿಪಾಲದ ಟಿ ಮೋಹನ್ ದಾಸ್ ಎಂ ಪೈ (89)ನಿಧನ..!

Published

on

ಉಡುಪಿ : ಮಣಿಪಾಲದ ಪೈ ಕುಟುಂಬದ ಹಿರಿಯ, ‘ಉದಯವಾಣಿ’ ಸಂಸ್ಥಾಪಕ, ಟಿ. ಮೋಹನದಾಸ್ ಪೈ (89) ಅಸೌಖ್ಯದಿಂದ ಇಂದು ಜು. 31ರಂದು ಮಣಿಪಾಲದ ಆಸ್ಪತ್ರೆಯಲ್ಲಿ ನಿಧನ ಹೊಂದಿದರು.

ಮೃತರು ತಮ್ಮಂದಿರಾದ ಡಾ.ಟಿ.ರಾಮದಾಸ್ ಪೈ, ಟಿ.ನಾರಾಯಣ ಪೈ, ಟಿ.ಅಶೋಕ್ ಪೈ, ತಂಗಿಯರಾದ ವಸಂತಿ ಆರ್. ಶೆಣೈ, ಜಯಂತಿ ಪೈ, ಇಂದುಮತಿ ಪೈ, ಆಶಾ ಪೈ, ಸಹೋದರ ಟಿ.ಸತೀಶ್ ಯು. ಪೈ ಅವರನ್ನು ಅಗಲಿದ್ದಾರೆ.

ಅವರು ಆಸ್ಪತ್ರೆಯಲ್ಲಿ ಇತ್ತೀಚಿಗೆ ಅನಾರೋಗ್ಯದಿಂದ ಚಿಕಿತ್ಸೆ ಪಡೆಯುತ್ತಿದ್ದರು. ಪೈ ಕುಟುಂಬದ ಎಲ್ಲ ಸದಸ್ಯರು, ಭಾವ ಡಾ. ಬಾಲಕೃಷ್ಣ ಪೈ ಮೊದಲಾದವರು ಜತೆಯಲ್ಲಿದ್ದು ಆರೈಕೆಯಲ್ಲಿ ತೊಡಗಿದ್ದರು.

ಆಧುನಿಕ ಮಣಿಪಾಲದ ಶಿಲ್ಪಿ ಡಾಟಿ.ಎಂ.ಎ.ಪೈಯವರ ಹೆಸರು ಹೊತ್ತ ಡಾಟಿಎಂಎ ಪೈ ಪ್ರತಿಷ್ಠಾನ, ಡಾ. ಟಿಎಂಎ ಪೈಯವರು ಸ್ಥಾಪಿಸಿದ ಮೊದಲ ಕಾಲೇಜು ಶಿಕ್ಷಣ ಸಂಸ್ಥೆ ಎಂಜಿಎಂ ಕಾಲೇಜಿನ ಟ್ರಸ್ಟ್‌, ಸಿಂಡಿಕೇಟ್ ಬ್ಯಾಂಕ್ ನ ಪೂರ್ವ ರೂಪ ಐಸಿಡಿಎಸ್ ಲಿ., ‘ಉದಯವಾಣಿ’ಯನ್ನು ನಡೆಸುತ್ತಿರುವ ಮಣಿಪಾಲ್ ಮೀಡಿಯ ನೆಟ್‌ವರ್ಕ್ ಲಿ. ಮೊದಲಾದ ಸಂಸ್ಥೆಗಳ ಅಧ್ಯಕ್ಷರಾಗಿ ಹೀಗೆ ಹಲವು ಸಂಸ್ಥೆಗಳ ಬೆಳವಣಿಗೆಗೆ ಕಾರಣರಾದವರು.

ರ್ನಾಟಕ ಪತ್ರಿಕಾ ಅಕಾಡೆಮಿಯು ಪತ್ರಿಕಾ ರಂಗದ ಕ್ಷೇತ್ರಕ್ಕಾಗಿ ಸಲ್ಲಿಸಿದ ಕೊಡುಗೆಗಾಗಿ ಮಣಿಪಾಲ್ ಪ್ರಿಂಟರ್ಸ್ ಆ್ಯಂಡ್ ಪಬ್ಲಿಷರ್ಸ್‌ ಲಿ.ಗೆ ಕೊಡಮಾಡಿದ ಪ್ರಶಸ್ತಿಯನ್ನು ಮೋಹನದಾಸ್ ಪೈಯವರು ಸ್ವೀಕರಿಸಿದ್ದರು. ಪೈಯವರು ಇಂಡಿಯನ್ ನ್ಯೂಸ್‌ಪೇಪರ್ ಸೊಸೈಟಿಯ (ಐಎನ್‌ಎಸ್) ಕಾರ್ಯನಿರ್ವಾಹಕ ಸಮಿತಿಯ ಸದಸ್ಯರಾಗಿ ಎರಡು ಅವಧಿ ಸೇವೆ ಸಲ್ಲಿಸಿದ್ದರು.

ಐಸಿಡಿಎಸ್‌ನ ಜಂಟಿ ಆಡಳಿತ ನಿರ್ದೇಶಕರಾಗಿ 1989ರಲ್ಲಿ ನೇಮಕಗೊಂಡ ಪೈಯವರು 1995ರಲ್ಲಿ ಆಡಳಿತ ನಿರ್ದೇಶಕರಾದರು. ಬಳಿಕ ಚೆಯರ್‌ಮ್ಯಾನ್ ಮತ್ತು ಆಜೀವ ನಿರ್ದೇಶಕರಾಗಿ ಸೇವೆ ಸಲ್ಲಿಸಿದರು.

ಎಂಜಿಎಂ ಕಾಲೇಜು ಟ್ರಸ್ಟ್‌ ಅಧ್ಯಕ್ಷರಾಗಿ ಇದೇ ವೇಳೆ ರಾಷ್ಟ್ರಕವಿ ಗೋವಿಂದ ಪೈ ಸಂಶೋಧನ ಕೇಂದ್ರ, ಪ್ರಾದೇಶಿಕ ಜಾನಪದ ರಂಗಕಲೆಗಳ ಸಂಶೋಧನ ಕೇಂದ್ರ, ಎಂಜಿಎಂ ಯಕ್ಷಗಾನ ಕೇಂದ್ರದ ಅಧ್ಯಕ್ಷರಾಗಿಯೂ ಈ ಸಂಸ್ಥೆೆಗಳ ಅಭಿವೃದ್ಧಿಗೆ ಅಪಾರ ಕೊಡುಗೆ ಸಲ್ಲಿಸಿದ್ದಾರೆ.

ಸಾರ್ವಜನಿಕರ ಅಂತಿಮ ದರ್ಶನ
ಆ. 1ರ ಬೆಳಗ್ಗೆ 9ರಿಂದ 11 ಗಂಟೆವರೆಗೆ ಉಡುಪಿ ಎಂಜಿಎಂ ಕಾಲೇಜಿನ ನೂತನ ರವೀಂದ್ರ ಮಂಟಪದಲ್ಲಿ ಸಾರ್ವಜನಿಕರ ಅಂತಿಮ ದರ್ಶನಕ್ಕೆ ಅವಕಾಶ ಕಲ್ಪಿಸಲಾಗಿದೆ.

Click to comment

Leave a Reply

Your email address will not be published. Required fields are marked *

BANTWAL

ಮತ ಚಲಾಯಿಸಿದ ನವ ದಂಪತಿ…! ಶುಭ ಹಾರೈಸಿದ ಸ್ನೇಹಿತರು..!

Published

on

ಮಂಗಳೂರು : ಇಂದು ಹೊಸ ಬಾಳಿಗೆ ಕಾಲಿಡುತ್ತಿದ್ದ ಆ ಜೋಡಿಗಳು ಹೊಸ ಬಾಳಿನ ಚಿಂತನೆಯ ಜೊತೆಗೆ ದೇಶದ ಚಿಂತನೆಯನ್ನೂ ಮಾಡಿದ್ದಾರೆ. ಮದುವೆಯ ಸಮಾರಂಭದಲ್ಲಿ ಹಸಮಣೆ ಏರಿ ಪತಿ ಪತ್ನಿಯರಾಗಿ ಒಂದಾದ ಜೋಡಿ ಎಲ್ಲಾ ಸಂಪ್ರದಾಯಗಳು ಪೂರ್ಣಗೊಂಡ ತಕ್ಷಣ ಮದುವೆ ಮನೆಯಿಂದ ಹೊರ ನಡೆದಿದ್ದಾರೆ. ಮದುವೆ ಮನೆಯಿಂದ ಬಂದವರೇ ನೇರವಾಗಿ ಮತಗಟ್ಟೆಗೆ ಹೋಗಿ ತಮ್ಮ ಹಕ್ಕನ್ನು ಚಲಾಯಿಸಿದ್ದಾರೆ.

ಹೌದು ಇದು ನಡೆದಿರುವುದು ಬಂಟ್ವಾಳ ತಾಲೂಕಿನ ಅಜ್ಜಿಬೆಟ್ಟು ಗ್ರಾಮದ ಬೂತ್ ಸಂಖ್ಯೆ 16 ರಲ್ಲಿ . ಇವರ ಮದುವೆ ನಿಗದಿಯಾದ ದಿನಂದಂತೆ ಪ್ರಜಾಪ್ರಭುತ್ವದ ಹಬ್ಬವಾಗಿರೋ ಚುನಾವಣೆ ದಿನಾಂಕ ಕೂಡಾ ಘೋಷಣೆ ಆಗಿದೆ. ಒಂದು ಕಡೆ ಹಸೆಮಣೆ ಏರಿ ತಮ್ಮ ಸ್ವಂತ ಭವಿಷ್ಯ ಕಟ್ಟಿಕೊಳ್ಳುವ ಜೊತೆಗೆ ದೇಶದ ಭವಿಷ್ಯವನ್ನೂ ಕಟ್ಟಲು ತಮ್ಮ ಅಮೂಲ್ಯ ಮತವನ್ನು ಚಲಾಯಿಸಿ ಮಾದರಿಯಾಗಿದ್ದಾರೆ. ಬಂಟ್ವಾಳ ತಾಲೂಕಿನ ಮಲ್ಲೆರ್ಮಳಕೋಡಿ ಜಯರಾಮ ಕುಲಾಲ್ ಎಂಬ ವರ ವದುವಿವೊಂದಿಗೆ ಬಂದು ತನ್ನ ಮತ ಚಲಾಯಿಸಿದ್ದಾರೆ. ಇವರಿಬ್ಬರ ಈ ಕಾಳಜಿಗೆ ಜನರು ಹಾಗೂ ಮತಗಟ್ಟೆ ಅಧಿಕಾರಿಗಳು ಶುಭ ಹಾರೈಸಿದ್ದಾರೆ. ಇದೇ ವೇಳೆ ಜಯರಾಮ್ ಕುಲಾಲ್ ಅವರ ಸ್ನೇಹಿತರು ಹಿತೈಷಿಗಳು ಕೂಡಾ ಶುಭ ಹಾರೈಸಿದ್ದಾರೆ.

Continue Reading

DAKSHINA KANNADA

ಮತದಾನ ಮಾಡುವ ಫೋಟೊ ಕ್ಲಿಕ್ಕಿಸಿ ಶೇರ್ ಮಾಡಿದ ಯುವಕ; ಎಫ್ ಐ ಆರ್ ದಾಖಲಿಸಿದ ಚುನಾವಣಾ ಆಯೋಗ

Published

on

ಪುತ್ತೂರು : ಮತಗಟ್ಟೆಯೊಳಗೆ ಮೊಬೈಲ್ ಗೆ ನಿರ್ಬಂಧ ವಿಧಿಸಿದರೂ ಕಾನೂನು ಉಲ್ಲಂಘನೆಯಾಗಿರುವ ಘಟನೆ ಪುತ್ತೂರಿನ ಮತಗಟ್ಟೆಯೊಂದರಲ್ಲಿ ನಡೆದಿದೆ. ಮತದಾನ ಮಾಡುವ ಫೋಟೊ ಕ್ಲಿಕ್ಕಿಸಿ ಗ್ರೂಪ್ ಗೆ ಶೇರ್ ಮಾಡಿದ ಯುವಕನ ವಿರುದ್ಧ ಆಕ್ರೋಶ ಕೇಳಿ ಬಂದಿತ್ತು.

ಪುತ್ತೂರಿನ ಕೋಟಿ-ಚೆನ್ನಯ ಕಂಬಳ ಗ್ರೂಪ್ ಗೆ ಮತದಾನ ಮಾಡುವ ಫೋಟೊವನ್ನು ರಂಜಿತ್ ಬಂಗೇರ ಎಂಬ ಯುವಕ ಶೇರ್ ಮಾಡಿರುವ ಬಗ್ಗೆ ತಿಳಿದು ಬಂದಿದೆ.

ಇದನ್ನೂ ಓದಿ : ಚುನಾವಣಾ ಕರ್ತವ್ಯದಲ್ಲಿದ್ದ ಶಿಕ್ಷಕಿ ಕುಸಿದು ಬಿದ್ದು ಸಾ*ವು

ಕಾಂಗ್ರೆಸ್ ಅಭ್ಯರ್ಥಿಗೆ ಮತ ಹಾಕುವ ಫೋಟೊವನ್ನು ರಂಜಿತ್ ಬಂಗೇರ ಎಂಬ ಯುವಕ ತೆಗೆದಿದ್ದಾನೆ.  ಇದೀಗ ಈ ಘಟನೆಗೆ ಸಂಬಂಧಿಸಿದಂತೆ ಚುನಾವಣಾ ಆಯೋಗದಿಂದ ಎಫ್ ಐ ಆರ್ ದಾಖಲಾಗಿದೆ ಎಂದು ದಕ್ಷಿಣ ಕನ್ನಡ ಜಿಲ್ಲಾಧಿಕಾರಿ / ಜಿಲ್ಲಾ ಚುನಾವಣಾಧಿಕಾರಿ ಮುಲೈ ಮುಗಿಲನ್ ಮಾಹಿತಿ ನೀಡಿದ್ದಾರೆ.

Continue Reading

DAKSHINA KANNADA

ಬೈಕ್-ಕಾರು ನಡುವೆ ಅಪ*ಘಾತ; ಓರ್ವ ಮೃ*ತ್ಯು

Published

on

ಅರಂತೋಡು: ಬೈಕ್ ಹಾಗೂ ಕಾರಿನ ನಡುವೆ ಸಂಭವಿಸಿದ ಭೀಕರ ರಸ್ತೆ ಅಪ*ಘಾತದಲ್ಲಿ ಬೈಕ್‌ನ ಹಿಂಬದಿ ಸವಾರ ಮೃ*ತಪಟ್ಟ ಘಟನೆ ಸಂಪಾಜೆ ಕಲ್ಲುಗುಂಡಿ ಸಮೀಪ ದೊಡ್ಡಡ್ಕ ಎಂಬಲ್ಲಿ ಗುರುವಾರ ತಡರಾತ್ರಿ ಸಂಭವಿಸಿದೆ.


ಮತದಾನ ಮಾಡಲು ಊರಿಗೆ ಬರುತ್ತಿದ್ದರು ಎಂದು ಹೇಳಲಾಗುತ್ತಿದ್ದು ಡಿ*ಕ್ಕಿಯ ರಭಸಕ್ಕೆ ಬೈಕ್‌ನ ಹಿಂಬದಿ ಸವಾರನಿಗೆ ಗಂಭೀರ ಗಾಯಗೊಂಡು ಮೃ*ತಪಟ್ಟರೆ ಇನ್ನೋರ್ವನಿಗೆ ಗಾಯವಾಗಿದ್ದು ಆತನನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.

ಮೃ*ತರ ವಿವರ ಇನ್ನಷ್ಟೇ ತಿಳಿದುಬರಬೇಕಾಗಿದೆ.

Continue Reading

LATEST NEWS

Trending