Tuesday, January 19, 2021

ಶ್ರೀ ಮೂಕಾಂಬಿಕಾ ಸನ್ನಿಧಿಯಲ್ಲಿ ದಾಂಪತ್ಯ ಜೀವನಕ್ಕೆ ಪದಾರ್ಪಣೆ ಮಾಡಿದ ನಾಲ್ಕು ಜೋಡಿ..!

ಶ್ರೀ ಮೂಕಾಂಬಿಕಾ ಸನ್ನಿಧಿಯಲ್ಲಿ ದಾಂಪತ್ಯ ಜೀವನಕ್ಕೆ ಪದಾರ್ಪಣೆ ಮಾಡಿದ ನಾಲ್ಕು ಜೋಡಿ..!

ಉಡುಪಿ: ಉಡುಪಿಯ ಬೈಂದೂರು ತಾಲೂಕಿನಲ್ಲಿರುವ ಪುರಾಣ ಪ್ರಸಿದ್ಧ ದೇವಸ್ಥಾನ ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಸ್ಥಾನದಲ್ಲಿ ‘ಸಪ್ತಪದಿ’   ಉಚಿತ ಸಾಮೂಹಿಕ ವಿವಾಹ ನಡೆಯಿತು. ಕರ್ನಾಟಕ ಸರ್ಕಾರ ಧಾರ್ಮಿಕ ದತ್ತಿ ಇಲಾಖೆ ಹಾಗೂ  ಕೊಲ್ಲೂರು ಶ್ರೀ ಮೂಕಾಂಬಿಕೆ ದೇವಸ್ಥಾನ  ವತಿಯಿಂದ ಸರಳವಾಗಿ ವಿವಾಹ ನಡೆಯಿತು.

ಒಟ್ಟು ನಾಲ್ಕು ಜೋಡಿ  ನವ ದಂಪತಿ ಸಪ್ತಪದಿ ತುಳಿದು ಹೊಸ ಜೀವನಕ್ಕೆ  ಪದಾರ್ಪಣೆ ಮಾಡಿದರು. ದೇವಸ್ಥಾನದ ವತಿಯಿಂದ ವರನಿಗೆ ಐದು ಸಾವಿರ ರೂ. ಮತ್ತು ವಧುವಿಗೆ 10 ಸಾವಿರ ರೂ. ನೀಡಿ ಗೌರವಿಸಲಾಯಿತು. ಶ್ರೀ ಮೂಕಾಂಬಿಕೆಗೆ ಪೂಜೆ ಮಾಡಿ ನವ ದಂಪತಿಗಳಿಗೆ ಮಂಗಲಸೂತ್ರ ನೀಡಲಾಯಿತು. ಬೈಂದೂರು ಶಾಸಕ ಸುಕುಮಾರ ಶೆಟ್ಟಿ ಕಾರ್ಯಕ್ರಮ ಉದ್ಘಾಟಿಸಿ  ವಧು-ವರರನ್ನು ಹರಸಿದರು.

ಬಳಿಕ ಮಾತನಾಡಿದ  ಶಾಸಕರು,  ತಾಯಿ ಶ್ರೀ ಮೂಕಾಂಬಿಕೆಯ ಸನ್ನಿಧಿಯಲ್ಲಿ ಮದುವೆ ಯಾಗುವುದೇ ಒಂದು ಪುಣ್ಯ. ದುಂದು ವೆಚ್ಚ ಕಡಿಮೆಯಾಗಬೇಕು, ಸರಳ ರೀತಿಯಲ್ಲಿ ಮದುವೆಯಾಗಿ ಸಮಾಜಕ್ಕೆ ಮಾದರಿಯಾಗಬೇಕು ಎಂದು ಹೇಳಿದರು

Hot Topics

ಕಾಪುವಿನಲ್ಲಿ ಕಾರು ಅಪಘಾತ ಗಂಭೀರವಾಗಿ ಗಾಯಗೊಂಡಿದ್ದ ಯುವತಿ ಸಾವು..!

ಕಾಪುವಿನಲ್ಲಿ ಕಾರು ಅಪಘಾತ ಗಂಭೀರವಾಗಿ ಗಾಯಗೊಂಡಿದ್ದ ಯುವತಿ ಸಾವು..! ಉಡುಪಿ : ಉಡುಪಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಭಾರಿ ಮಳೆಯ ನಡುವೆ ಭೀಕರ ರಸ್ತೆ ಅಪಘಾತ ಸಂಭವಿಸಿದೆ. ಚಾಲಕನ ನಿಯಂತ್ರಣ ತಪ್ಪಿದ ಕಾರೊಂದು ಕಾಪು ಬಳಿ...

ಮಗು ಸೇರಿದಂತೆ ದಂಪತಿ ಸಾಮೂಹಿಕ ಆತ್ಮಹತ್ಯೆ ಹಳೆಯಂಗಡಿಯಲ್ಲಿ ಹೃದಯ ವಿದ್ರಾವಕ ಘಟನೆ..!

ಮಗು ಸೇರಿದಂತೆ ದಂಪತಿ ಸಾಮೂಹಿಕ ಆತ್ಮಹತ್ಯೆ ಹಳೆಯಂಗಡಿಯಲ್ಲಿ ಹೃದಯ ವಿದ್ರಾವಕ ಘಟನೆ..! ಮಂಗಳೂರು:  ಎಂಟು ವರ್ಷದ ಮಗು ಸೇರಿದಂತೆ ದಂಪತಿ ಸಾಮೂಹಿಕ ಆತ್ಮಹತ್ಯೆ ಮಾಡಿರುವ ದಾರುಣ ಘಟನೆ ಹಳೆಯಂಗಡಿ ಬಳಿಯ ಕಲ್ಲಾಪು ರೈಲ್ವೇ ಗೇಟ್...

ಫೋನಿನಲ್ಲಿ ಮಾತಾಡುತ್ತಿದ್ದ ಯುವಕ ಮೃತ್ಯು ಕೂಪಕ್ಕೆ: ವಿಟ್ಲದಲ್ಲಿ ಹೃದಯ ವಿದ್ರಾವಕ ಘಟನೆ..! 

ಫೋನಿನಲ್ಲಿ ಮಾತಾಡುತ್ತಿದ್ದ ಯುವಕ ಮೃತ್ಯು ಕೂಪಕ್ಕೆ ವಿಟ್ಲದಲ್ಲಿ ಹೃದಯ ವಿದ್ರಾವಕ ಘಟನೆ..!  ಮಂಗಳೂರು: ಟೆರೇಸ್ ನಲ್ಲಿ ಫೋನ್ ನಲ್ಲಿ ಮಾತನಾಡುತ್ತಿದ್ದ ವೇಳೆ ಆಯತಪ್ಪಿ ಕೆಳಗೆ ಬಿದ್ದು ಯುವಕ ಸಾವನ್ನಪ್ಪಿರುವ ಘಟನೆ ವಿಟ್ಲದ ಕೇಪು ಎಂಬಲ್ಲಿ...
Copy Protected by Chetans WP-Copyprotect.