Connect with us

LATEST NEWS

ಮಟನ್ ಊಟ ಮಾಡಿ ಒಂದೇ ಕುಟುಂಬದ ನಾಲ್ವರು ಸಾ*ವು

Published

on

ಮಂಗಳೂರು/ರಾಯಚೂರು : ಮಟನ್ ಊಟ ಮಾಡಿದ್ದ ಒಂದೇ ಕುಟುಂಬದ ನಾಲ್ವರು ಇಹಲೋಕ ತ್ಯಜಿಸಿರುವ ಘಟನೆ ಸಿರವಾರ ತಾಲೂಕಿನ ಕಲ್ಲೂರು ಗ್ರಾಮದಲ್ಲಿ ನಡೆದಿದೆ.

ಭೀಮಣ್ಣ(60), ಈರಮ್ಮ(54), ಮಲ್ಲೇಶ(19), ಪಾರ್ವತಿ(17) ಮೃ*ತಪಟ್ಟವರು. ಮಲ್ಲಮ್ಮ ಎಂಬವರ ಸ್ಥಿತಿ ಗಂಭೀ*ರವಾಗಿದೆ. ಊಟ ಮಾಡಿ ಅಸ್ವಸ್ಥರಾದ ಮೂವರನ್ನು ರಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಮೂವರು ರಿಮ್ಸ್ ಆಸ್ಪತ್ರೆಯಲ್ಲಿ ಮೃ*ತಪಟ್ಟಿದ್ದರೆ, ಒಬ್ಬರು ಖಾಸಗಿ ಆಸ್ಪತ್ರೆಯಲ್ಲಿ ಮೃ*ತಪಟ್ಟಿದ್ದಾರೆ.

ಕಲ್ಲೂರು ಗ್ರಾಮದ ಭೀಮಣ್ಣ ಕುಟುಂಬ ನಿನ್ನೆ(ಅ.1) ರಾತ್ರಿ ಮನೆಗೆ ಮಟನ್ ತಂದು ಅಡುಗೆ ಮಾಡಿದ್ದಾರೆ. ಮಟನ್‌ ಊಟ ಮಾಡಿದ ಮೇಲೆ ಮನೆಯವರಿಗೆ ವಾಂತಿ ಭೇದಿ ಆರಂಭವಾಗಿದ್ದು, ನಿಶ್ಯಕ್ತಿ, ಅಸ್ವಸ್ಥತೆ ಉಂಟಾಗಿದೆ.  ಬಳಿಕ ಆಸ್ಪತ್ರೆಗೆ ದಾಖಲಿಸಲಾಯಿತು. ವಿಷಪೂರಿತ ಆಹಾರ ಸೇವಿಸಿ ಮೃ*ತಪಟ್ಟಿರುವ ಬಗ್ಗೆ ಶಂಕೆ ವ್ಯಕ್ತವಾಗಿದೆ. ಪೊಲೀಸರು ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ. ತನಿಖೆ ನಡೆದ ಮೇಲೆ ಸಾ*ವಿಗೆ ನಿಜವಾದ ಕಾರಣ ತಿಳಿದು ಬರಲಿದೆ.

ಇದನ್ನೂ ಓದಿ : ರೈಲಿಗೆ ತಲೆ ಕೊಟ್ಟು ಅಣ್ಣ – ತಂಗಿ ಆತ್ಮಹ*ತ್ಯೆ

ಸೇವಿಸಿದ ಆಹಾರ ಪದಾರ್ಥಗಳ ಸ್ಯಾಂಪಲ್ ಟೆಸ್ಟ್ :

ಭೀಮಣ್ಣ ಮನೆಯವರು ಚಪಾತಿ, ಮಟನ್ ಮತ್ತು ತರಕಾರಿ ಊಟ ಮಾಡಿದ್ದರು. ಬಳಿಕ ಅಸ್ವಸ್ಥರಾಗಿದ್ದರು. ಭೀಮಣ್ಣ ಹೃದಯಾ*ಘಾತದಿಂದ ಮೃ*ತಪಟ್ಟಿದ್ದರೆ. ಉಳಿದ 4 ಕುಟುಂಬಸ್ಥರನ್ನು ರಿಮ್ಸ್‌ ಆಸ್ಪತ್ರೆಗೆ ತರಲಾಗಿದೆ. ಗಂಭೀ*ರ ಸ್ಥಿತಿಯಲ್ಲಿದ್ದ ಮೂವರು ಚಿಕಿತ್ಸೆ ನೀಡಿದರೂ ಬದುಕುಳಿದಿಲ್ಲ. ಆಸ್ಪತ್ರೆಗೆ ತರುವಾಗ ಬಹುಅಂಗಾಗ ವೈಫಲ್ಯದಿಂದ ಬಳಲುತ್ತಿದ್ದರು. ಅದರಲ್ಲಿ ಮಲ್ಲಮ್ಮ ಎಂಬುವವರು ಕೋಮಾದಲ್ಲಿದ್ದಾರೆ. ಅವರನ್ನು ಉಳಿಸಿಕೊಳ್ಳುವ ಪ್ರಯತ್ನ ನಡೆದಿದೆ. ಈಗಾಗಲೇ ಭೀಮಣ್ಣ ಅವರ ಮನೆಯಲ್ಲಿ ಸೇವಿಸಿದ ಆಹಾರ ಪದಾರ್ಥಗಳ ಸ್ಯಾಂಪಲ್ ಪಡೆದು ಟೆಸ್ಟ್‌ಗೆ ಕಳುಹಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

LATEST NEWS

Viral Video: ಮಿಂಚಿನ ವೇಗದಲ್ಲಿ ಊಟ ಬಡಿಸಿದ ನಾಲ್ವರು ಯುವಕರು

Published

on

ಭಂಡಾರ ಔತಣದಲ್ಲಿ ನಾಲ್ವರು ಯುವಕರ ಗುಂಪು ಮಿಂಚಿನ ವೇಗದಲ್ಲಿ ಆಹಾರ ಬಡಿಸುತ್ತಿರುವುದನ್ನು ತೋರಿಸುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ವ್ಯಾಪಕ ಗಮನ ಸಳೆದಿದೆ.

X ನಲ್ಲಿ ಹಂಚಿಕೊಳ್ಳಲಾದ ಕ್ಲಿಪ್ ನಲ್ಲಿ, ಕೆಂಪು ಶರ್ಟ್ ಮತ್ತು ಕಪ್ಪು ಪ್ಯಾಂಟ್‌ ಧರಿಸಿರುವ ನಾಲ್ವರು ಯುವಕರು ಜನರ ಸಾಲಿನಲ್ಲಿ ವೇಗವಾಗಿ ಚಲಿಸುತ್ತ ಪೇಪರ್ ಪ್ಲೇಟ್, ಕಪ್ ಮತ್ತು ಬೌಲ್‌ಗಳನ್ನು ಹಾಕುವುದನ್ನು ನೋಡಬಹುದಾಗಿದೆ.

ನಿಖರತೆಯೊಂದಿಗೆ ಏಕಕಾಲದಲ್ಲಿ ಇವರುಗಳು ಆಹಾರ ಬಡಿಸುವುದನ್ನು ವಿಡಿಯೋ ಒಳಗೊಂಡಿದೆ. ಮೊದಲ ಗುಂಪು ಕಾರ್ಯನಿರ್ವಹಿಸುತ್ತಿದ್ದಂತೆ, ಎರಡನೇ ಗುಂಪು ಅದೇ ವೇಗದ ಚಲನೆಯನ್ನು ಕಾಯ್ದುಕೊಳ್ಳುವ ಮೂಲಕ ಗಮನ ಸೆಳೆಯುತ್ತದೆ. “MBBS (ಮಾಸ್ಟರ್ ಇನ್ ಭಂಡಾರ ಮತ್ತು ಬ್ಯಾಚುಲರ್ ಆಫ್ ಸರ್ವಿಂಗ್)” ಎಂಬ ಶೀರ್ಷಿಕೆಯ ಈ ವೀಡಿಯೋ ಬಳಕೆದಾರರು ಬಡಿಸುವ ಅವರ ವೇಗ ಮತ್ತು ಕೌಶಲ್ಯದ ಬಗ್ಗೆ ವಿಸ್ಮಯ ವ್ಯಕ್ತಪಡಿಸಿದ್ದಾರೆ.

Watch Video:

Continue Reading

LATEST NEWS

ವಿದ್ಯಾಸಿರಿ ವಿದ್ಯಾರ್ಥಿ ವೇತನ 2 ಸಾವಿರಕ್ಕೆ ಏರಿಕೆ: ಸಿಎಂ ಸಿದ್ದರಾಮಯ್ಯ

Published

on

ಮೈಸೂರು: ಕರ್ನಾಟಕದ ವಿದ್ಯಾರ್ಥಿಗಳಿಗೆ ರಾಜ್ಯ ಸರ್ಕಾರ ಸಿಹಿ ಸುದ್ದಿ ನೀಡಿದೆ. ವಿದ್ಯಾಸಿರಿ ಯೋಜನೆಯಡಿ ಒದಗಿಸುವ 1500 ರೂ. ವಿದ್ಯಾರ್ಥಿ ವೇತನವನ್ನು ಮುಂದಿನ ವರ್ಷದಿಂದ 2000ಕ್ಕೆ ಏರಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಭರವಸೆ ನೀಡಿದ್ದಾರೆ.

ಮೈಸೂರಿನ ಸಿದ್ದಾರ್ಥನಗರದ ಕನಕಭವನದಲ್ಲಿ ಆಯೋಜಿಸಿದ್ದ ‘ಶ್ರೀ ಭಕ್ತ ಕನಕದಾಸರ 537ನೇ ಜಯಂತ್ಯುತ್ಸವ ಹಾಗೂ ವಿದ್ಯಾರ್ಥಿಗಳ ಪ್ರತಿಭಾ ಪುರಸ್ಕಾರ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ಸಿಎಂ, ಜೀವನದ ಅನುಭವದಿಂದ ಮೂಡಿಬಂದ ಯೋಜನೆಗಳು ಇವು ಎಂದು ತಿಳಿಸಿದರು.

ಪ್ರೌಢಶಾಲೆಗೆ ಬರುವವರೆಗೂ ತಾವು ಚಪ್ಪಲಿಯನ್ನು ಹಾಕಿಕೊಳ್ಳುತ್ತಿರಲಿಲ್ಲ ಎಂದು ತಿಳಿಸಿದ ಮುಖ್ಯಮಂತ್ರಿಗಳು ಎಲ್ಲಾ ಶಾಲಾ ಮಕ್ಕಳು ಶೂ ಹಾಕಬೇಕೆಂದು ಶೂಭಾಗ್ಯ ಯೋಜನೆಯನ್ನು ಜಾರಿಗೆ ತರಲಾಯಿತು. ರಾಜ್ಯದಲ್ಲಿ ಹೆಚ್ಚುವರಿ ಹಾಲು ಉತ್ಪಾದನೆಯಾದ ಸಂದರ್ಭದಲ್ಲಿ ಶಾಲಾ ಮಕ್ಕಳಿಗೆ ಹಾಲು ಕೊಡಲಾಯಿತು. ಪ್ರಸ್ತುತ ವಾರದಲ್ಲಿ ಆರು ದಿನಗಳು ಶಾಲಾ ಮಕ್ಕಳಿಗೆ ಮೊಟ್ಟೆ ಕೊಡಲಾಗುತ್ತಿದೆ ಎಂದರು. ಸಮಾಜದಲ್ಲಿ ಕಟ್ಟಕಡೆಯ ವ್ಯಕ್ತಿಗೂ ಅನ್ನಭಾಗ್ಯ ಸಿಗಲಿ ಎನ್ನುವ ಉದ್ದೇಶದಿಂದಲೇ ಆ ಯೋಜನೆ ಶುರು ಮಾಡಿದ್ದಾಗಿ ಹೇಳಿದರು.

ಶಿಕ್ಷಣ ಹಾಗೂ ಪ್ರತಿಭೆ ಯಾರ ಅಥವಾ ಯಾವ ಜಾತಿಯ ಸ್ವತ್ತು ಕೂಡಾ ಅಲ್ಲ. ಶೇಕಡ 90 ಅಂಕಗಳನ್ನು ಪಡೆಯುವುದು ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಮಾತ್ರ ಸಾಧ್ಯ. ಅದಕ್ಕಾಗಿ ಅವರು ಸಾಕಷ್ಟು ಶ್ರಮವಹಿಸಿರುತ್ತಾರೆ. ನಾನು ಕೂಡಾ ಹತ್ತನೇ ತರಗತಿವರೆಗೆ ವಿದ್ಯಾವರ್ಧಕ ಶಾಲೆಯಲ್ಲಿ ಮೊದಲಿಗನಾಗಿದ್ದೆ. ನಂತರ ಪಿಯುಸಿ ತರಗತಿಗಳಲ್ಲಿ ಇಂಗ್ಲಿಷ್ ಮಾಧ್ಯಮವನ್ನು ಆಯ್ದುಕೊಂಡಿದ್ದರಿಂದ ಸ್ವಲ್ಪ ಶ್ರಮ ವಹಿಸಬೇಕಾಯಿತು. ಪಿಯುಸಿ ಹಾಗೂ ಬಿಎಸ್‌ಸಿ ಮತ್ತು ಲಾ ವ್ಯಾಸಂಗವನ್ನು ಸೆಕೆಂಡ್ ಕ್ಲಾಸಿನಲ್ಲಿ ಪಾಸ್ ಮಾಡಿದೆ. ಆದರೆ ವಿದ್ಯಾರ್ಥಿ ಜೀವನದಲ್ಲಿ ಒಮ್ಮೆಯೂ ಫೇಲ್ ಆಗಲಿಲ್ಲ ಎಂದು ಮುಖ್ಯಮಂತ್ರಿಗಳು ಸ್ಮರಿಸಿದರು.

Continue Reading

Baindooru

ಜಾರ್ಖಂಡ್‌ನಲ್ಲಿ ಬಿಗ್‌ ಟ್ವಿಸ್ಟ್‌; ಜೆಎಂಎಂ ಮುನ್ನಡೆ – ಎನ್‌ಡಿಎ ಹಿಂದಿಕ್ಕಿದ ಇಂಡಿಯಾ ಒಕ್ಕೂಟ

Published

on

ರಾಂಚಿ: ಜಾರ್ಖಂಡ್‌ನಲ್ಲಿ ಆಡಳಿತಾರೂಢ ಜೆಎಂಎಂ, ಕಾಂಗ್ರೆಸ್‌ ಮತ್ತು ಆರ್‌ಜೆಡಿ ಒಳಗೊಂಡ ‘ಇಂಡಿಯಾ’ ಮೈತ್ರಿಕೂಟ ವಿಧಾನಸಭಾ ಚುನಾವಣೆಯಲ್ಲಿ ಬಹುಮತದ ಗಡಿ ದಾಟಿದೆ.

ಬೆಳಗ್ಗೆ 8 ಗಂಟೆಗೆ ಮತ ಎಣಿಕೆ ಪ್ರಾರಂಭವಾದ ನಂತರ ಬಿಜೆಪಿ ಆರಂಭಿಕ ಮುನ್ನಡೆ ಸಾಧಿಸಿತು. ಆದರೆ, ಮುಖ್ಯಮಂತ್ರಿ ಹೇಮಂತ್ ಸೊರೆನ್ ಅವರ ಜೆಎಂಎಂ ಮತ್ತೆ ಸರ್ಕಾರ ರಚಿಸುವ ವಿಶ್ವಾಸದಲ್ಲಿದೆ. ಬೆಳಗ್ಗೆ 10.30ಕ್ಕೆ ರಾಜ್ಯದ 81 ಸ್ಥಾನಗಳ ಪೈಕಿ 51ರಲ್ಲಿ ಇಂಡಿಯಾ ಮೈತ್ರಿಕೂಟ ಮುಂದಿದೆ. 28 ಕ್ಷೇತ್ರಗಳಲ್ಲಿ ಎನ್‌ಡಿಎ ಮುನ್ನಡೆ ಸಾಧಿಸಿದೆ.

ಜಾರ್ಖಂಡ್ ವಿಧಾನಸಭೆಗೆ ಬಹುಮತಕ್ಕೆ 41 ಸ್ಥಾನಗಳು ಅಗತ್ಯವಿದೆ. ರಾಜ್ಯಕ್ಕೆ ನ.13 ರಂದು ಮೊದಲ ಹಂತದ ಮತದಾನವು 43 ಕ್ಷೇತ್ರಗಳಿಗೆ ಹಾಗೂ ಎರಡನೇ ಹಂತದಲ್ಲಿ 38 ಸ್ಥಾನಗಳಿಗೆ ಮತದಾನ ನಡೆದಿತ್ತು.

ಮ್ಯಾಟ್ರಿಜ್ ಪ್ರಕಾರ, ಎನ್‌ಡಿಎ 42-47 ಸ್ಥಾನಗಳನ್ನು ಗೆಲ್ಲುವ ನಿರೀಕ್ಷೆಯಿತ್ತು. ಜೆಎಂಎಂ ನೇತೃತ್ವದ ಮೈತ್ರಿಕೂಟವು 25-30 ಸ್ಥಾನಗಳಲ್ಲಿ ಮುನ್ನಡೆ ಕಾಯ್ದುಕೊಳ್ಳಬಹುದು ಎಂದು ಸಮೀಕ್ಷೆಗಳು ಹೇಳಿತ್ತು. ಆದರೆ, ಬಹುಪಾಲು ಸಮೀಕ್ಷೆಗಳು ಉಲ್ಟ ಆದಂತಿದೆ. ಆದಾಗ್ಯೂ, ಆಕ್ಸಿಸ್ ಮೈ ಇಂಡಿಯಾ ಮತ್ತು ಪಿ ಮಾರ್ಕ್ ಸಮೀಕ್ಷೆ ಭಿನ್ನವಾಗಿತ್ತು. ಜೆಎಂಎಂ ನೇತೃತ್ವದ ಇಂಡಿಯಾ ಬ್ಲಾಕ್‌ 49-59 ಮತ್ತು ಎನ್‌ಡಿಎ ಮೈತ್ರಿಕೂಟ 37-47 ಸ್ಥಾನ ಪಡೆಯಬಹುದು ಎಂದು ಅಂದಾಜಿಸಿದ್ದವು. ಬಹುಪಾಲು ಇದು ನಿಜವಾದಂತೆ ಕಾಣುತ್ತಿದೆ.

Continue Reading

LATEST NEWS

Trending

Exit mobile version